ದ.ಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಮಹತ್ವದ ಪ್ರಕಟಣೆ; DK SAND BAZAAR APP ನೋಂದಾಯಿಸಿ, ಮರಳು ಪಡೆಯಿರಿ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾನ್ -ಸಿಆರ್ ಝೆಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್ ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ DK SAND BAZAAR APP ನ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದ್ದು, ಜಿಲ್ಲಾಧಿಕಾರಿಯವರು ಸೂಚಿಸಿರುವಂತೆ, ಸದರಿ ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ DK SAND BAZAAR APP ನಲ್ಲಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆ […]

Continue Reading

ದೆಹಲಿಯ ಕರ್ನಾಟಕ ಭವನದಲ್ಲಿ ಅಚ್ಚರಿಯ ಘಟನೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ ನಡುವೆ ಜಟಾಪಟಿ

ದೆಹಲಿಯ ಕರ್ನಾಟಕ ಭವನದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾ‌ರ್ ಅವರ ವಿಶೇಷ ಕರ್ತವ್ಯ ಅಧಿಕಾರಿಗಳ ನಡುವೆ ನಡೆದ ಜಟಾಪಟಿ ತಾರಕಕ್ಕೇರಿದ್ದು, ಈ ಸಂಬಂಧ ಡಿಕೆಶಿ ಅವರ ವಿಶೇಷ ಕರ್ತವ್ಯ ಅಧಿಕಾರಿ ಆಂಜನೇಯ ದೂರು ನೀಡಿದ್ದಾರೆ. ವಿಶೇಷ ಕರ್ತವ್ಯ ಅಧಿಕಾರಿ ಆಂಜನೇಯವರು ಮುಖ್ಯಮಂತ್ರಿಯವರ ಅಧಿಕಾರಿ ಮೋಹನ್ ಕುಮಾರ್ ವಿರುದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಿವಾಸಿ ಆಯುಕ್ತರಿಗೆ ದೂರು ನೀಡಿದ್ದಾರೆ. ತಮ್ಮ ದೂರಿನಲ್ಲಿ ಆಂಜನೇಯ ಅವರು, ಮೋಹನ್ ಕುಮಾರ್ ಬಂದಾಗಿನಿಂದ ನನ್ನ […]

Continue Reading

ಮಂಗಳೂರು: ಶ್ರೀಮಂತ ಉದ್ಯಮಿರ ಸುಸೈಡ್ ಹಿಂದೆ ಇದೆಯಾ ಹನಿ ಟ್ರ್ಯಾಪ್ ಕಹಾನಿ..? ಶಾಸಕರ ಆಪ್ತ ನಿತಿನ್ ಪೂಜಾರಿ ಆತ್ಮಹತ್ಯೆ ನಾನಾ ಅನುಮಾನ.!

ಮರ್ಯಾದೆಗೆ ಅಂಜಿ ಮಂಗಳೂರಿನ ಹಲವಾರು ಅಗರ್ಭ ಶ್ರೀಮಂತರು ಆತ್ಮಹತ್ಯೆ ದಾರಿ ಹಿಡಿದಿದ್ದರು.! ಮರೋಳಿ ನಿವಾಸಿಯಾಗಿರುವ ಮಣ್ಣಗುಡ್ಡೆ ಗುಂಡೂರಾವ್ ಲೇನಲ್ಲಿರುವ ವಸತಿ ಸಂಕೀರ್ಣದಲ್ಲಿ ವಾಸವಿರುವ ಉದ್ಯಮಿ ನಿತಿನ್ ಪೂಜಾರಿ ಎರಡು ದಿನಗಳ ಹಿಂದೆಯಷ್ಟೇ ಆತ್ಮಹತ್ಯೆಗೆ ಶರಣಾಗಿದ್ದರು. ನಿತಿನ್ ಪೂಜಾರಿ ಬಿಜೆಪಿ ಪಕ್ಷದ ಮುಖಂಡರಾಗಿದ್ದು, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರ ಆಪ್ತರಾಗಿ ಗುರುತಿಸಿಕೊಂಡಿದ್ದರು. ಎಂಟು ತಿಂಗಳ ಹಿಂದೆಯಷ್ಟೇ ಕದ್ರಿಕಂಬಳದಲ್ಲಿ ‘ಕೊಡೆಕ್ಕೆನ’ ಹೆಸರಿನ ಹೋಟೆಲ್ ಉದ್ಯಮ ಆರಂಭಿಸಿದ್ದರು. ಮುಡಿಪುವಿನಲ್ಲಿ ಪಾಲುದಾರಿಕೆಯ ಹೋಟೆಲ್ ಕೂಡ ಹೊಂದಿದ್ದರು. ಹೋಟೆಲ್ ಉದ್ಯಮದಲ್ಲಿ ಸಾಕಷ್ಟು ಹೆಸರು […]

Continue Reading

ಸ್ತಬ್ಧಗೊಂಡಿದ್ದ ಕೆಂಪು ಕಲ್ಲು ಗಣಿಗಾರಿಕೆ ಆರಂಭಕ್ಕೆ ಕ್ಷಣಗಣನೆ.!

ರಾಯಲ್ಟಿ ಕಡಿಮೆಗೊಳಿಸಿ, ನಿಯಮಬದ್ಧ ಕಲ್ಲು ಗಣಿಗಾರಿಕೆಗೆ ಅವಕಾಶ, ವಾರದೊಳಗೆ ಜಿಲ್ಲೆಯ ಕೆಂಪು ಕಲ್ಲು ಉತ್ಪಾದಕರೊಂದಿಗೆ ಸಭೆ ನಡೆಸಿ: ಉಸ್ತುವಾರಿ ಸಚಿವರ ಸೂಚನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ ಸ್ಥಗಿತಗೊಂಡು ಎರಡು ತಿಂಗಳೇ ಕಳೆದಿದೆ. ಮನೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ಕೆಂಪು ಕಲ್ಲು ಲಭ್ಯತೆಯ ಕೊರತೆಯಿಂದ ಅರ್ಧದಲ್ಲೇ ನಿಂತಿದೆ. ಕೆಲಸವಿಲ್ಲದೆ ಹಲವಾರು ಕಾರ್ಮಿಕರು ತೊಂದರೆಗೊಳಗಾಗಿದ್ದಾರೆ. ಈ ಬಗ್ಗೆ ಜಿಲ್ಲೆಯಲ್ಲಿ ಹಲವಾರು ಸಂಘಟನೆಗಳು ಬೃಹತ್ ಹೋರಾಟಕ್ಕೆ ತೀರ್ಮಾನಿಸಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ […]

Continue Reading

ಬಂಟ್ವಾಳ: ಸಾಲೆತ್ತೂರು ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮ ಹೋಲೋ ಬ್ಲಾಕ್ ಕಂಪನಿ, ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು ಸಹಾಯಕ ಆಯುಕ್ತರ ನಿರ್ದೇಶನದ ಮೇಲೆ ದಾಳಿ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ರಾಜಾರೋಷವಾಗಿ ನಡೆಯುತ್ತಿದ್ದ ಹೋಲೋ ಬ್ಲಾಕ್ ಕಂಪನಿ ಮೇಲೆ ಕಂದಾಯ, ಮೆಸ್ಕಾಂ ಮತ್ತು ಗ್ರಾಮ ಪಂಚಾಯಿತ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಮಂಗಳೂರು ಸಹಾಯಕ ಆಯುಕ್ತರ ನಿರ್ದೇಶನದ ಮೇಲೆ ದಾಳಿ ನಡೆದಿದೆ. ಕಳೆದ ಎಂಟು ವರ್ಷಗಳಿಂದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಸಾಲೆತ್ತೂರು ಅಗರಿ ಎಂಬಲ್ಲಿನ 512/6 ರ ಸರ್ಕಾರಿ ಜಮೀನಿನಲ್ಲಿ ಕರಾಯಿ ಅಬ್ದುಲ್ […]

Continue Reading

ಸೈಬರ್ ವಂಚನೆ ಪ್ರಕರಣಗಳಲ್ಲಿ 22,845.73 ಕೋಟಿಗೂ ಅಧಿಕ ಹಣ ಕಳಕೊಂಡ ಭಾರತೀಯರು. ಕೇಂದ್ರ ಗೃಹ ಸಚಿವಾಲಯದ ವರದಿ.

2024 ರಲ್ಲಿ ಭಾರತೀಯರು ಸೈಬರ್ ವಂಚನೆ ಪ್ರಕರಣಗಳಲ್ಲಿ 22,845.73 ಕೋಟಿ ರೂ.ಗಳಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ(MHA) ಮಂಗಳವಾರ ಲೋಕಸಭೆಗೆ ತಿಳಿಸಿದೆ. ಇದು ಹಿಂದಿನ ವರ್ಷದ ಅಂಕಿಅಂಶಕ್ಕೆ ಹೋಲಿಸಿದರೆ ಸುಮಾರು ಶೇ. 206 ರಷ್ಚು ಭಾರಿ ಏರಿಕೆಯಾಗಿದೆ. ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ MHA ಅಡಿಯಲ್ಲಿ I4C ನಿರ್ವಹಿಸುವ ರಾಷ್ಟ್ರೀಯ ಸೈಬರ್ ಅಪರಾಧ ವರದಿ ಮಾಡುವ ಪೋರ್ಟಲ್ (NCRP) ಮತ್ತು ನಾಗರಿಕ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮಂಜನಾಡಿ ಫಯಾನ್ ಅಂದರ್

ಕಳ್ಳತನ, ಕೊಲೆಯತ್ನ, ಜೈಲಿನಲ್ಲಿ ಹಲ್ಲೆ ಸೇರಿದಂತೆ 24 ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಳ್ಳತನ, ಕೊಲೆಯತ್ನ, ಜೈಲಿನಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ಬಳಿಕ ನ್ಯಾಯಾಲಯಕ್ಕೆ ಹಾಜರಾಗಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಮಂಜನಾಡಿ ಕಲ್ಕಟ್ಟ, ಬದ್ರಿಯ ನಗರ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. […]

Continue Reading

ವಿದ್ಯಾರ್ಥಿಗಳ ಕಲಿಕೆಗೆ ಬೆಸ್ಟ್ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ದಕ್ಕಿದ ಸ್ಥಾನ; ಜಾಗತಿಕ 130 ನಗರಗಳ ಪೈಕಿ ಬೆಂಗಳೂರಿಗೆ 108 ನೇ ಸ್ಥಾನ

ಲಂಡನ್ ಕ್ಯುಎಸ್ ಸಂಸ್ಥೆ ಪಟ್ಟಿ ಬಿಡುಗಡೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ 130 ಜಾಗತಿಕ ನಗರಗಳ ಪಟ್ಟಿಯಲ್ಲಿ ಭಾರತದ ನಾಲ್ಕು ನಗರಗಳು ಸ್ಥಾನಗಿಟ್ಟಿಸಿದ್ದು, ಬೆಂಗಳೂರಿಗೂ ಪಟ್ಟಿಯಲ್ಲಿ ಸ್ಥಾನ ದೊರೆತಿದೆ. ಲಂಡನ್ ನ ಕ್ಯುಎಸ್ ಸಂಸ್ಥೆ ನಡೆಸಿದ ಜಾಗತಿಕ 130 ನಗರಗಳಲ್ಲಿ ಬೆಂಗಳೂರು ಜೊತೆ ದೆಹಲಿ, ಮುಂಬೈ, ಚೆನ್ನೈ ಸೇರಿದೆ. ಮೊದಲ ನೂರು ನಗರಗಳ ಪಟ್ಟಿಯಲ್ಲಿ ದೆಹಲಿ ಸ್ಥಾನ ಗಿಟ್ಟಿಸಿಕೊಂಡಿದೆ. ಮುಂಬೈ ಕಳೆದ ಬಾರಿಗಿಂತ 15 ಸ್ಥಾನ ಮೇಲಕ್ಕೇರಿದ್ದು, 98 ಸ್ಥಾನ ಪಡೆದಿದೆ. ದೆಹಲಿ ಏಳು ಸ್ಥಾನ ಮೇಲೆ ಬಂದಿದ್ದು 104 […]

Continue Reading

ಕಾನೂನಿನ ಎಲ್ಲೆ ಮೀರಿ ವರ್ತಿಸುತ್ತಿದೆ ಇ.ಡಿ, ಕೋರ್ಟ್ ಹೊರಗಡೆ ರಾಜಕೀಯ ಮಾಡಿ, ತನಿಖಾ ಸಂಸ್ದೆಗಳು ನಿಮ್ಮ ದಾಳವಲ್ಲ: ಸುಪ್ರೀಂ ಕೋರ್ಟ್

ನ್ಯಾಯಾಂಗದ ಪ್ರಕ್ರಿಯೆಗಳನ್ನು ರಾಜಕೀಯಗೊಳಿಸಬೇಡಿ ಎಂದು ಸುಪ್ರೀಂ ಕೋರ್ಟ್‌ 4 ವಿವಿಧ ಪ್ರಕರಣಗಳಲ್ಲಿ ಒಂದೇ ದಿನ ಅಭಿಪ್ರಾಯ ವ್ಯಕ್ತಪಡಿಸಿದೆ.ಮುಡಾ ಹಗರಣ, ತೇಜಸ್ವಿ ಸೂರ್ಯ ವಿರುದ್ಧದ ಕ್ರಿಮಿನಲ್‌ ಪ್ರಕರಣ, ಮಮತಾ ಬ್ಯಾನರ್ಜಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಹಾಗೂ ವಕೀಲರಿಗೆ ಇ.ಡಿ.ನೋಟಿಸ್‌ ನೀಡಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ನಾಲ್ಕು ಪ್ರಕರಣಗಳನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾ| ಬಿ.ಆರ್‌. ಗವಾಯಿ ಹಾಗೂ ನ್ಯಾ| ಕೆ. ವಿನೋದ್‌ ಚಂದ್ರನ್‌ ಅವರಿದ್ದ ಪೀಠ, ನ್ಯಾಯಾಲಯದ ಪ್ರಕ್ರಿಯೆಗಳನ್ನು ರಾಜಕೀಯಗೊಳಿಸುವುದರ ವಿರುದ್ಧ […]

Continue Reading

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವಿನ ಹಿಂದೆ ದೊಡ್ಡ ಷಡ್ಯಂತ್ರವಿದೆ; ವಿ.ಎಸ್. ಉಗ್ರಪ್ಪ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ಬದ್ದತೆ ಪ್ರದರ್ಶಿಸಲಿ: ಶೇಖರ್ ಲಾಯಿಲ

ಹಿರಿಯ ನ್ಯಾಯವಾದಿ , ಮಾಜಿ ಸಂಸದ ವಿ.ಎಸ್ ಉಗ್ರಪ್ಪರವರ ನೇತೃತ್ವದ ಮಹಿಳಾ ಮತ್ತು ಮಕ್ಕಳ ಮೇಲಿನ ಅತ್ಯಾಚಾರ , ಕೊಲೆ , ದೌರ್ಜನ್ಯ ತಡೆ ಸಮಿತಿ ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ನೂರಾರು ಮಹಿಳೆಯರ, ಮಕ್ಕಳ ಕೊಲೆ, ಅತ್ಯಾಚಾರ, ಅಸಹಜ ಸಾವುಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ತನ್ನ ವರದಿಯಲ್ಲಿ ನೀಡಿರುವ ಎಲ್ಲಾ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸುವ ಮೂಲಕ ಬದ್ದತೆ ಮತ್ತು ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಇಡೀ ರಾಜ್ಯಾದ್ಯಂತ ಮಹಿಳೆಯರ , ಮಕ್ಕಳ ಮೇಲಿನ ಕೊಲೆ, ಅತ್ಯಾಚಾರ, […]

Continue Reading