ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡದಿದ್ದಲ್ಲಿ ಜನಪ್ರತಿನಿಧಿಗಳಿಗೆ ತಕ್ಕಪಾಠ ಕಲಿಸುತ್ತೇವೆ: ಮುನೀರ್ ಕಾಟಿಪಳ್ಳ

ಸರಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಆಗ್ರಹಿಸಿ ಗಂಜಿಮಠದಲ್ಲಿ ಬೃಹತ್ ಮಾನವ ಸರಪಳಿ ಸರಕಾರಿ ಆಸ್ಪತ್ರೆಗಳನ್ನು ಬಲವರ್ಧನೆಗೊಳಿಸಿ ಎಂದು ಜನರು ಆಗ್ರಹಿಸುತ್ತಿದ್ದರೆ, ಆರೋಗ್ಯ ಸಚಿವ ಯು.ಟಿ ಖಾದರ್ ಖಾಸಗಿಯವರ ಮಡಿಲಿಗೆ ಹಾಕಲು ಹೊರಟಿದ್ದಾರೆ. ಕಿದ್ವಾಯಿ ಕ್ಯಾನ್ಸರ್, ಜಯದೇವ ಹೃದಯದ ಆಸ್ಪತ್ರೆಗಳ ಘಟಕವನ್ನು ಮಂಗಳೂರಿನಲ್ಲಿ ಸ್ಥಾಪಿಸಿ ಎಂದು ಬೇಡಿಕೆ ಇಟ್ಟರೆ ಮೈಸೂರು ದಸರಾದಲ್ಲಿ ಕಂಬಳ ಆಯೋಜಿಸುವ ಗಿಲೀಟಿನ ಮಾತುಗಳನ್ನು ಸರಕಾರ ಆಡುತ್ತದೆ. ವಿರೋಧ ಪಕ್ಷದ ಬಿಜೆಪಿ ಶಾಸಕರುಗಳು ಸರಕಾರದ ಇಂತಹ ಜನವಿರೋಧಿ ಧೋರಣೆಗಳ ವಿರುದ್ದ ಸೊಲ್ಲೆತ್ತುತ್ತಿಲ್ಲ. ಮಂಗಳೂರು ಉತ್ತರದ ಶಾಸಕ ಭರತ್ […]

Continue Reading

ಹದಿನಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಾಡಸ್ವಾಮಿಯ ಬಂಧನ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ.ಸಂ:09/2005, ಕಲಂ 457,380 r/w 34 IPC ಪ್ರಕರಣದಲ್ಲಿ ಆರೋಪಿಯಾದ ತಮಿಳುನಾಡು ಮೂಲದ ತಿರುಣವೇಲಿ ನಿವಾಸಿ ಮಾಡಸ್ವಾಮಿ ಎಂಬಾತನು ಸುಮಾರು 16 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಪೊಲೀಸರ ಕಣ್ಣು ತಪ್ಪಿಸಿ, ತಲೆಮರೆಸಿಕೊಂಡಿದ್ದ. ಈತನನ್ನು ಉಪ್ಪಿನಂಗಡಿ ಪೊಲೀಸರು ಬೆನ್ನುಹತ್ತಿ ಕೃಷ್ಣ ನಗರ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿ ಮಾಡಸ್ವಾಮಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Continue Reading

ರಾಜ್ಯ ವಕೀಲರ ಪರಿಷತ್ತಿಗೆ AILU ಅಭ್ಯರ್ಥಿ ಬಸವರಾಜ್ ವಿ. ಕೋರಿಮಠ ಆಯ್ಕೆ

ಬಸವರಾಜ್ ವಿ.ಕೋರಿಮಠ ರವರ ಗೆಲುವು ನ್ಯಾಯಕ್ಕೆ ಸಂದ ಗೌರವ: ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ.ಜಿಲ್ಲಾ ಘಟಕ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 2026ರ ಚುನಾವಣೆಯಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಮುಖಂಡರಾದ ಹುಬ್ಬಳ್ಳಿಯ ಬಸವರಾಜ್ ವಿ.ಕೋರಿಮಠ ಗೆಲುವು ಸಾಧಿಸಿದ್ದು, ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ ಜಿಲ್ಲಾ ಸಮಿತಿ ಅಭಿನಂದನೆಗಳನ್ನು ಸಲ್ಲಿಸಿದೆ. ಹುಬ್ಬಳ್ಳಿಯಲ್ಲಿ ವಕೀಲ ವೃತ್ತಿ ನಡೆಸುತ್ತಿರುವ ಬಸವರಾಜ್ ವಿ. ಕೋರಿಮಠರವರು AILU ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಸಿವಿಲ್ ನ್ಯಾಯಾಧೀಶರ ಹುದ್ದೆಯ ಆಕಾಂಕ್ಷಿಗಳಿಗೆ ಹಾಗೂ […]

Continue Reading

ವೃದ್ದ ಮಹಿಳೆಯ ಚಿನ್ನದ ಸರ ಕಸಿದುಕೊಂಡ ಪ್ರಕರಣ: ಮಂಗಳೂರು ದಕ್ಷಿಣ ಪೊಲೀಸರ ಕಾರ್ಯಾಚರಣೆ; ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ.

ಮಂಗಳೂರು ನಗರದ ಸೂಟರ್ ಪೇಟೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ ಪೇಟೆ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಮೋಟಾರ್ ಸೈಕಲಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ನೊಂದ ಮಹಿಳೆ ದಿನಾಂಕ 14-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆ ನೀಡಿದ ದೂರಿನಂತೆ ಪೊಲೀಸರು […]

Continue Reading

ಪ್ರೀತಿಯ ನಾಟಕವಾಡಿ, ಬಾಲಕಿಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ; ಆರೋಪ ಸಾಬೀತು, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಹೈದರಾಬಾದ್‌ಗೆ ಕರೆದೊಯ್ದು ಹಲವಾರು ದಿನಗಳ ಕಾಲ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ಸೇಡಂ ತಾಲ್ಲೂಕಿನ ನಿವಾಸಿ ನವೀನ್ ಕುಮಾರ್ ದಸ್ತಪ್ಪ ದುದ್ಯಾಲ ಎಂಬಾತನಿಗೆ ಇಲ್ಲಿನ ಪೋಕ್ಸೊ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 55 ಸಾವಿರ ರೂ. ದಂಡ ವಿಧಿಸಿದೆ. 2025ರ ಮಾರ್ಚ್ 30ರಂದು ಬಾಲಕಿಗೆ ಕರೆ ಮಾಡಿ ಮಾತನಾಡುವುದಿದೆ ಎಂದು ಕರೆಸಿಕೊಂಡು ಪ್ರೀತಿಸುವುದಾಗಿ ಹೇಳಿ ಪಾಳು ಬಿದ್ದ ಮನೆಯೊಂದಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ನಂತರ ಜುಲೈ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಸಪ್ಲೆಯರ್ ಅಣ್ಣಪ್ಪ ಸ್ವಾಮಿ @ ಮನು, ಹೊಸಮನೆ ನಿಲಯ, ಇಡ್ಯಾ, ಕುಲಾಯಿ ಹೊಸಬೆಟ್ಟು, ಸುರತ್ಕಲ್. ಹಾಲಿ ವಾಸ: ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿ ಬಾಡಿಗೆ ಮನೆ ನಿವಾಸಿ, ಈತನನ್ನು ಮಾಲು […]

Continue Reading

ಶಾಸಕರಿಂದ ಬೀದಿ ವ್ಯಾಪಾರಿಗಳ, ಅಧಿಕಾರಿಗಳ ಸಭೆ ರಾಜಕೀಯ ಪ್ರೇರಿತ: ಸಿಐಟಿಯು

ಮಂಗಳೂರು: ಮಂಗಳೂರು ನಗರದ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳು ಮತ್ತು ಬೀದಿ ವ್ಯಾಪಾರಿಗಳ ಸಭೆಯು ರಾಜಕೀಯ ಪ್ರೇರಿತ ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ಶಾಸಕರು ಬಹುಸಂಖ್ಯಾತ ಸದಸ್ಯರು ಇರುವ ಬೀದಿಬದಿ ವ್ಯಾಪಾರಸ್ಥರ ಸಂಘಟನೆಯ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸದೆ ಕೇವಲ ಒಂದು ವಿಭಾಗದ ಬೀದಿಬದಿ ವ್ಯಾಪಾರಿಗಳನ್ನು ಇಟ್ಟು ಸಭೆ ನಡೆಸಿರುವುದಲ್ಲದೆ ಬೀದಿ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಡೆಗಣಿಸಿ ಬೀದಿಬದಿ […]

Continue Reading

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ಕಳ್ಳತನ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

ರಾಮ ಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾದ ಕೆಲವೇ ಗಂಟೆಗಳಲ್ಲಿ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ ನೀಡಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿನ ಸದಸ್ಯ ಕೃಷ್ಣ ಮೋಹನ್ ಅವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಂಧಿತ ಆರೋಪಿಗಳನ್ನು ಅವಿನಾಶ್ ಶುಕ್ಲಾ, ಅನುಕಲ್ಪ್ […]

Continue Reading

ಸರಕಾರಿ ಆಸ್ಪತ್ರೆ ಖಾಸಗೀಕರಣ ವಿರುದ್ಧದ ಹೋರಾಟಕ್ಕೆ ಬಜ್ಪೆಯಲ್ಲಿ ಸಿದ್ದತಾ ಸಭೆ. ಜುಲೈ 7 ರಂದು ಮಾನವ ಸರಪಳಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ರದ್ದುಗೊಳಿಸಬೇಕು, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂಬ ಬೇಡಿಕೆಯ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ಆಸ್ಪತ್ರೆಗಳ ಮುಂಭಾಗ ಹೋರಾಟ, ಅಭಿಯಾನ ನಡೆಯುತ್ತಿದೆ. ಅದರ ಭಾಗವಾಗಿ ಬಜ್ಪೆ ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಸುವ ಕುರಿತು ಇಂದು ದಲಿತ ಸಂಘರ್ಷ ಸಮಿತಿಯ ಮುಂದಾಳತ್ವದಲ್ಲಿ “ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ಯ ಸಭೆ ನಡೆಯಿತು. ಸ್ಥಳೀಯ ಸಂಘಸಂಸ್ಥೆಗಳು, ಸಮಾನ ಮನಸ್ಕರು ಸಭೆಯಲ್ಲಿ ಭಾಗವಹಿಸಿದರು. ಮೇಲ್ಕಂಡ ಬೇಡಿಕೆಯ […]

Continue Reading

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳ ನಿವಾಸಿ ಪ್ರಸಾದ್ ಬಂಧನ

ಎಲ್.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಏರ್ಲಂಪಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅ.ಕ್ರ 289/2016 ಕಲಂ 379 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿ ಪ್ರಸಾದ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಪ್ರಕರಣವನ್ನು ಎಲ್.ಪಿ.ಸಿ ಪ್ರಕರಣವಾಗಿ ಪರಿವರ್ತಿಸಿತ್ತು. ಈತನ ವಿರುದ್ಧ ಹಿರಿಯಡ್ಕ, ಕೋಣಾಜೆ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಮಂಗಳೂರು […]

Continue Reading