ಎ.ಜೆ ಲೇಡಿಸ್ ಹಾಸ್ಟೇಲಿನ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜು ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಗರದ ಎ.ಜೆ. ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡುತ್ತಿರುವ ಪ್ರಕೃತಿ ಶೆಟ್ಟಿ ಇಂದು ಮುಂಜಾನೆ ಎ.ಜೆ. ಲೇಡಿಸ್ ಹಾಸ್ಟೆಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ.

Continue Reading

ದ.ಕ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಬಿಲ್ಲವ, ಬಂಟ ಸಾಕು.. ಒಮ್ಮೆ ಮುಸಲ್ಮಾನರಿಗೆ ಅವಕಾಶ ನೀಡಿ.!

ಜಾತಿವಾರು ಲೆಕ್ಕದಲ್ಲಿ ಮುಸಲ್ಮಾನರೇ ಫಸ್ಟ್.. ಇನಾಯತ್ ಅಲಿ ಪರ್ಫೆಕ್ಟ್ ಕ್ಯಾಂಡಿಡೇಟ್ ಇನ್ನೇನೂ ಐದಾರು ತಿಂಗಳಲ್ಲಿ ಲೋಕಸಭಾ ಚುನಾವಣೆಗೆ ಅಖಾಡ ತಯಾರಾಗಲಿದೆ. ಮತೀಯವಾದದ, ಕೋಮುವಾದದ ತವರುನೆಲೆ ಎಂದು ಗುರುತಿಸಿಕೊಂಡಿರುವ ಬುದ್ಧಿವಂತ, ವಿದ್ಯಾವಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೈಲೆಂಟಾಗಿಯೇ ಚುನಾವಣಾ ತಯಾರಿ ನಡೆಯುತ್ತಿದೆ. ಬಿಜೆಪಿಯಲ್ಲಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೆಟ್ ಫಿಕ್ಸ್ ಆಗುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಆದರೆ ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಿದ್ದು ಜಾತಿವಾರು ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳು ಟಿಕೆಟ್ ಗಿಟ್ಟಿಸಿಕೊಳ್ಳಲು […]

Continue Reading

ಸಾರ್ವಜನಿಕ ಹಕ್ಕೊತ್ತಾಯ ಸಭೆ, ಹೋರಾಟ ಸಮಿತಿ ರಚನೆ, ನವೆಂಬರ್ 27 ಕ್ಕೆ ಬೃಹತ್ ಪ್ರತಿಭಟನಾ ಧರಣಿಗೆ ನಿರ್ಧಾರ

ಸುರತ್ಕಲ್ : ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಾನ ಕಟ್ಲ ಜನತಾ ಕಾಲನಿ ಇಲ್ಲಿನ ಶಾಲಾ ಭೂಮಿಯ ಅತಿಕ್ರಮಣ ಪ್ರಕರಣ ತನಿಖೆಗೆ ಒತ್ತಾಯಿಸಿ, ಸರಕಾರಿ ಶಾಲೆ ಉಳಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ನೇತೃತ್ವದಲ್ಲಿ ಸಾರ್ವಜನಿಕ ಹಕ್ಕೊತ್ತಾಯ ಸಭೆ ಇಂದು ಶಾಲಾ ವಠಾರದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡುತ್ತಾ ಬಡವರು ಸರಕಾರಿ ಶಾಲೆಯ ಬಗ್ಗೆ ಸರಕಾರಕ್ಕೆ ಇರುವ ನಿಲಕ್ಷ್ಯ ಧೋರಣೆಯೇ ಭೂಗಳ್ಳರಿಗೆ ಸಹಾಯ ಆಗುತ್ತಿದೆ. ದಾಖಲೆ ಪ್ರಕಾರ ಶಾಲೆಯ ಹೆಸರಿನಲ್ಲಿ ಇರುವ […]

Continue Reading

ಸರಕಾರಿ ಶಾಲೆಯ ಭೂಮಿಯ ಕಬಳಿಕೆ ತನಿಖೆಗೆ ಡಿವೈಎಫ್ಐ ಒತ್ತಾಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾನ-ಕಟ್ಲ ಜನತಾ ಕಾಲನಿ ಶಾಲೆಗೆ ಸಂಬಂಧಿಸಿದ ಇಡ್ಯಾ ಗ್ರಾಮದ ಸರ್ವೇ ನಂಬರ್ 16ರಲ್ಲಿರುವ 1.60 ಎಕ್ರೆ ಜಾಗವನ್ನು 1996ರಲ್ಲಿ ಸದರಿ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಒಂದು ಎಕರೆ ಮತ್ತು ಆಟದ ಮೈದಾನಕ್ಕಾಗಿ 60ಸೆಂಟ್ಸ್ ಭೂಮಿಯನ್ನು ಮಂಜೂರು ಮಾಡಲಾಗಿತ್ತು ಶಾಲೆಯ ಮತ್ತು ಮೈದಾನದ ಸುತ್ತಲೂ ಆವರಣ ಗೋಡೆ ನಿರ್ಮಾಣ ಮಾಡಲಾಗಿತ್ತು ಇದೀಗ ಒಬ್ಬ ವ್ಯಕ್ತಿಯು ರಾಜಕೀಯ ಪ್ರಭಾವ ಬಳಸಿಕೊಂಡು ಶಾಲೆಯ ಭೂಮಿಯನ್ನು ಕೆಲವರಿಗೆ ಮಾರಾಟ ಮಾಡಿದ್ದು […]

Continue Reading

ಬಿಜೈ ರಾಜನ ಕೊಲೆ ಪ್ರಕರಣ; ರವಿ ಪೂಜಾರಿಯನ್ನು ಖುಲಾಸೆಗೊಳಿಸಿದ ಮಂಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ಧಾಖಲಾಗಿದ್ದಬಿಜೈ ರಾಜನ ಕೊಲೆ ಪ್ರಕರಣದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021 ರಲ್ಲಿ ನಗರದ ಫಳ್ನೀರ್ ವೆಸ್ಟ್ ಗೇಟ್ ಟವರ್ಸ್ ಕಟ್ಟಡದಲ್ಲಿರುವನ್ಯಾಷನಲ್ ಮೆಡಿಕಲ್, ಕಾಯಿನ್ ಬೂತ್ ನ ಬಳಿ ರವಿಪೂಜಾರಿಯುಒಳಸಂಚು ನಡೆಸಿ ರವಿಪೂಜಾರಿಯ ಸಹಚರರು ಶೈಲೇಶ್ ರಾಜ @ ಬಿಜೈ ರಾಜನನ್ನು ತಲವಾರಿನಿಂದ ಕಡಿದುಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ಮಂಗಳೂರು […]

Continue Reading

ಮಂಗಳೂರು: ಮಟ್ಕಾ ದಾಳಿ ಪ್ರಹಸನ.! ದೊಡ್ಡ ಕುಳಗಳನ್ನು ಬಿಟ್ಟು ಚೀಟಿ ಬರೆಯುವವರನ್ನು ಬಂಧಿಸುವ ಪೊಲೀಸರು..!

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಾಗಿಲು ಹಾಕಿಕೊಂಡಿದ್ದ ಮಟ್ಕಾ ದಂಧೆ ಇದೀಗ ಮತ್ತೆ ಮೆಲ್ಲನೆ ಚಿಗಿತುಕೊಂಡು ತನ್ನ ಆಟ ಆರಂಭಿಸುತ್ತಿದೆ. ನಗರದ ಹಲವು ಕಡೆ ಮಟ್ಕಾ ಪ್ರತ್ಯಕ್ಷವಾಗಿ ಜನರ ಜೀವ ಹಿಂಡುತ್ತಿದೆ. ಮಂಗಳೂರು ನಗರದ ಹಂಪನಕಟ್ಟೆ ಹಳೇ ಬಸ್ ನಿಲ್ದಾಣ ಸಮೀಪ ಮಟ್ಕಾ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಕೇರಳ ಮೂಲದ ಕಿಂಗ್ ಪಿನ್ ಒಬ್ಬರು ಈ ದಂಧೆಯನ್ನು ನಡೆಸುತ್ತಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ. ಇದಿಷ್ಟೇ ಅಲ್ಲ ನಗರದ ಹಲವು ಭಾಗಗಳಲ್ಲಿ, ಹಲವು ಕಟ್ಟಡಗಳಲ್ಲಿ ಪೊಲೀಸ್ ಇಲಾಖೆಯ ಕಣ್ಣು ತಪ್ಪಿಸಿ […]

Continue Reading

ಮಧ್ಯರಾತ್ರಿ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥನ ಅಟ್ಟಾಡಿಸಿಕೊಂಡು ಭೀಕರ ಹತ್ಯೆ– ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು

ಪುತ್ತೂರು ನೆಹರೂನಗರದ ಬಳಿ ಸೋಮವಾರ ಮಧ್ಯರಾತ್ರಿ ಕ್ಷುಲ್ಲಕ ವಿಷಯಕ್ಕೆ ದುಷ್ಕರ್ಮಿಗಳ ತಂಡವೊಂದು ಟೈಗರ್ಸ್‌ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್‌ ಕಲ್ಲೇಗ ಎಂಬ ಯುವಕನನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆಗೈದ ಘಟನೆ ವರದಿಯಾಗಿದೆ. ಅವರನ್ನು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸಂಭವಿಸಿದೆ. ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್‌ ಎಂಬ ಹುಲಿ ವೇಷ ತಂಡವನ್ನು ಅವರು ಮುನ್ನಡೆಸುತ್ತಿದ್ದರು. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ […]

Continue Reading

ಇಬ್ಬರು ಅಪ್ರಾಪ್ತೆಯರ ನಿರಂತರ ಲೈಂಗಿಕ ಅತ್ಯಾಚಾರ: ಕಾಮುಕ ಆರೋಪಿಯ ಬಂಧನ

ಇನ್ ಸ್ಟಾಗ್ರಾಂನಲ್ಲಿ ನಕಲಿ ಖಾತೆಯನ್ನು ಸೃಷ್ಟಿಸಿ ಇಬ್ಬರು ಅಪ್ರಾಪ್ತ ಬಾಲಕಿಯರಿಬ್ಬರೊಂದಿಗೆ ಪ್ರೀತಿಯ ನಾಟಕವಾಡಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ ಒಬ್ಬಾಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಕಾಸರಗೋಡು ಮೂಲದ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲದ ಪರಸ್ಪರ ಸಂಬಂಧಿಕರಾಗಿದ್ದ 16 ಹಾಗೂ 17ರ ಹರೆಯದ ಇಬ್ಬರು ಮುಸ್ಲಿಂ ಯುವತಿಯರಿಗೆ ಈ ಕಾಮುಕ ಹುಡುಗಿಯ ಹೆಸರಲ್ಲೇ ಇನ್ ಸ್ಟಾಗ್ರಾಂನಲ್ಲಿ ಪರಿಚಯಕ್ಕೆ ಬಂದಿದ್ದ. ಬಳಿಕ ತನ್ನ ಹೆಸರನ್ನು ತೌಫಿಲ್ ಎಂದು ಪರಿಚಯಿಸಿದ್ದಾನೆ. ಆದರೆ ಈತನ ನಿಜವಾದ ಹೆಸರು ಅಹಮದ್ ರಫೀಕ್ (23) ಎಂದಾಗಿತ್ತು. […]

Continue Reading

ದ.ಕ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಬಿಲ್ಲವರಿಗೆ ಟಿಕೆಟ್ ಗ್ಯಾರಂಟಿ.?

ಪನಾಮ ಧಣಿ ಹೆಸರು ಮುಂಚೂಣಿಯಲ್ಲಿ.! ಜೊತೆಗೆ ಇನ್ನಷ್ಟು ಹೆಸರುಗಳು.. ಇಲ್ಲಿದೆ ಡೀಟೈಲ್ಸ್ ಲೋಕಸಭಾ ಚುನಾವಣೆಗೆ ಐದಾರು ತಿಂಗಳು ಮಾತ್ರ ಉಳಿದಿದ್ದು, ಎಂ.ಪಿ ಸೀಟಿಗಾಗಿ ಹಲವು ಪಕ್ಷಗಳ ನಾಯಕರಿಂದ ಟಿಕೆಟ್ ಗಿಟ್ಟಿಸಿಕೊಳ್ಳುವ ಕಸರತ್ತು ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 15 ವರ್ಷಗಳಿಂದ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅನಾಯಾಸವಾಗಿ ಗೆಲ್ಲುತ್ತಿದ್ದಾರೆ. ಮುಂದಿನ ಬಾರಿಯೂ ಬಿಜೆಪಿಯಿಂದ ಕಟೀಲು ರಿಗೆ ಟಿಕೆಟ್ ಫಿಕ್ಸ್ ಆಗಿದ್ದು, ಕಾಂಗ್ರೆಸ್ ನಿಂದ ಯಾರು ಕಣಕ್ಕಿಳಿಯಲಿದ್ದಾರೆ ಅನ್ನುವ ಕುತೂಹಲ ಗರಿಗೆದರಿದೆ. […]

Continue Reading

ಮಂಗಳೂರು: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ; ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಜಿಲ್ಲೆಯ ಹರಡೊಳ್ಳಿ ನಿವಾಸಿ ಶ್ರೀಕಾಂತ್  ತಪ್ಪಿತಸ್ಥರೆಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪರಿಗಣಿಸಿದ್ದು, ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಸಂತ್ರಸ್ತೆ ತನ್ನ ಪೋಷಕರೊಂದಿಗೆ ಬಜ್ಪೆ ಠಾಣೆ ವ್ಯಾಪ್ತಿಯ ಕರಂಬಾರ್ ಗ್ರಾಮದ ಕಂಪನಿಯ ಶೆಡ್‌ನಲ್ಲಿ ನೆಲೆಸಿದ್ದಳು. ಆರೋಪಿ ಸಂತ್ರಸ್ತೆಯ ಪಕ್ಕದ ಶೆಡ್‌ನಲ್ಲಿ […]

Continue Reading