ರೈಲ್ವೇ ಖಾಸಗೀಕರಣದ ವಿರುದ್ದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದೆದುರು ಪ್ರತಿಭಟನೆ
ದೇಶದ ಆರ್ಥಿಕತೆಯ ಜೀವಾಳ ಹಾಗೂ ಜನತೆಯ ಜೀವನಾಡಿ ರೈಲ್ವೇ ವಲಯದ ಖಾಸಗೀಕರಣ ಖಂಡಿಸಿ ರೈತ ಕಾರ್ಮಿಕರ ನೇತ್ರತ್ವದಲ್ಲಿ ಇಂದು(ನವೆಂಬರ್ 3) ದೇಶಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣದೆದುರು ಪ್ರತಿಭಟನೆ ನಡೆಸಬೇಕೆಂಬ ತೀರ್ಮಾನದ ಮೇರೆಗೆ ಜಿಲ್ಲೆಯ ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದೆದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಕೇಂದ್ರದ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನುದ್ದೇಶಿಸಿ […]
Continue Reading