ಹದಿನಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಾಡಸ್ವಾಮಿಯ ಬಂಧನ.

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಅ.ಕ್ರ.ಸಂ:09/2005, ಕಲಂ 457,380 r/w 34 IPC ಪ್ರಕರಣದಲ್ಲಿ ಆರೋಪಿಯಾದ ತಮಿಳುನಾಡು ಮೂಲದ ತಿರುಣವೇಲಿ ನಿವಾಸಿ ಮಾಡಸ್ವಾಮಿ ಎಂಬಾತನು ಸುಮಾರು 16 ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಪೊಲೀಸರ ಕಣ್ಣು ತಪ್ಪಿಸಿ, ತಲೆಮರೆಸಿಕೊಂಡಿದ್ದ. ಈತನನ್ನು ಉಪ್ಪಿನಂಗಡಿ ಪೊಲೀಸರು ಬೆನ್ನುಹತ್ತಿ ಕೃಷ್ಣ ನಗರ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿ ಮಾಡಸ್ವಾಮಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Continue Reading

ವೃದ್ದ ಮಹಿಳೆಯ ಚಿನ್ನದ ಸರ ಕಸಿದುಕೊಂಡ ಪ್ರಕರಣ: ಮಂಗಳೂರು ದಕ್ಷಿಣ ಪೊಲೀಸರ ಕಾರ್ಯಾಚರಣೆ; ಇಬ್ಬರು ಆರೋಪಿಗಳ ಬಂಧನ, ಓರ್ವ ಪರಾರಿ.

ಮಂಗಳೂರು ನಗರದ ಸೂಟರ್ ಪೇಟೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ ಪೇಟೆ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಇಬ್ಬರು ಅಪರಿಚಿತರು ದ್ವಿಚಕ್ರ ವಾಹನದಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಮೋಟಾರ್ ಸೈಕಲಿನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ನೊಂದ ಮಹಿಳೆ ದಿನಾಂಕ 14-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆ ನೀಡಿದ ದೂರಿನಂತೆ ಪೊಲೀಸರು […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಡ್ರಗ್ಸ್ ಸಪ್ಲೆಯರ್ ಅಣ್ಣಪ್ಪ ಸ್ವಾಮಿ @ ಮನು, ಹೊಸಮನೆ ನಿಲಯ, ಇಡ್ಯಾ, ಕುಲಾಯಿ ಹೊಸಬೆಟ್ಟು, ಸುರತ್ಕಲ್. ಹಾಲಿ ವಾಸ: ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿ ಬಾಡಿಗೆ ಮನೆ ನಿವಾಸಿ, ಈತನನ್ನು ಮಾಲು […]

Continue Reading

ಶಾಸಕರಿಂದ ಬೀದಿ ವ್ಯಾಪಾರಿಗಳ, ಅಧಿಕಾರಿಗಳ ಸಭೆ ರಾಜಕೀಯ ಪ್ರೇರಿತ: ಸಿಐಟಿಯು

ಮಂಗಳೂರು: ಮಂಗಳೂರು ನಗರದ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳು ಮತ್ತು ಬೀದಿ ವ್ಯಾಪಾರಿಗಳ ಸಭೆಯು ರಾಜಕೀಯ ಪ್ರೇರಿತ ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಆರೋಪಿಸಿದೆ. ಶಾಸಕರು ಬಹುಸಂಖ್ಯಾತ ಸದಸ್ಯರು ಇರುವ ಬೀದಿಬದಿ ವ್ಯಾಪಾರಸ್ಥರ ಸಂಘಟನೆಯ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸದೆ ಕೇವಲ ಒಂದು ವಿಭಾಗದ ಬೀದಿಬದಿ ವ್ಯಾಪಾರಿಗಳನ್ನು ಇಟ್ಟು ಸಭೆ ನಡೆಸಿರುವುದಲ್ಲದೆ ಬೀದಿ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಡೆಗಣಿಸಿ ಬೀದಿಬದಿ […]

Continue Reading

ಸರಕಾರಿ ಆಸ್ಪತ್ರೆ ಖಾಸಗೀಕರಣ ವಿರುದ್ಧದ ಹೋರಾಟಕ್ಕೆ ಬಜ್ಪೆಯಲ್ಲಿ ಸಿದ್ದತಾ ಸಭೆ. ಜುಲೈ 7 ರಂದು ಮಾನವ ಸರಪಳಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಆರೋಗ್ಯ ಇಲಾಖೆಯ ಆದೇಶವನ್ನು ರದ್ದುಗೊಳಿಸಬೇಕು, ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು ಎಂಬ ಬೇಡಿಕೆಯ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ಆಸ್ಪತ್ರೆಗಳ ಮುಂಭಾಗ ಹೋರಾಟ, ಅಭಿಯಾನ ನಡೆಯುತ್ತಿದೆ. ಅದರ ಭಾಗವಾಗಿ ಬಜ್ಪೆ ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ನಡೆಸುವ ಕುರಿತು ಇಂದು ದಲಿತ ಸಂಘರ್ಷ ಸಮಿತಿಯ ಮುಂದಾಳತ್ವದಲ್ಲಿ “ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ಯ ಸಭೆ ನಡೆಯಿತು. ಸ್ಥಳೀಯ ಸಂಘಸಂಸ್ಥೆಗಳು, ಸಮಾನ ಮನಸ್ಕರು ಸಭೆಯಲ್ಲಿ ಭಾಗವಹಿಸಿದರು. ಮೇಲ್ಕಂಡ ಬೇಡಿಕೆಯ […]

Continue Reading

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳ ನಿವಾಸಿ ಪ್ರಸಾದ್ ಬಂಧನ

ಎಲ್.ಪಿ.ಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ, ಏರ್ಲಂಪಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅ.ಕ್ರ 289/2016 ಕಲಂ 379 ಐ.ಪಿ.ಸಿ ಪ್ರಕರಣದಲ್ಲಿ ಆರೋಪಿ ಪ್ರಸಾದ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಪ್ರಕರಣವನ್ನು ಎಲ್.ಪಿ.ಸಿ ಪ್ರಕರಣವಾಗಿ ಪರಿವರ್ತಿಸಿತ್ತು. ಈತನ ವಿರುದ್ಧ ಹಿರಿಯಡ್ಕ, ಕೋಣಾಜೆ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಮಂಗಳೂರು […]

Continue Reading

ಮಂಗಳೂರು ನಗರ ಪೊಲೀಸರ ಜಂಟಿ ಕಾರ್ಯಾಚರಣೆ; ನಗರದ ವಿವಿದ ಕಡೆ ಗಾಂಜಾ, MDMA ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣದ ಆರೋಪಿ, ಅಬ್ಬಾಸ್ ಮುಳ್ಳುಗುಡ್ಡೆ, ಕೋಟೆಕಾರ್ ಎಂಬಾತನನ್ನು ವಶಕ್ಕೆ ಪಡೆದ ಪಣಂಬೂರು ACP ಪೊಲೀಸರ ತಂಡ ಹಾಗೂ ಮುಲ್ಕಿ ಪೊಲೀಸರ ತಂಡ ಜಂಟಿ ಕಾರ್ಯಚರಣೆ ನಡೆಸಿ, ಆರೋಪಿಯ ವಶವಿದ್ದ ಎರಡು ಲಕ್ಷ ರೂ ಮೌಲ್ಯದ 4 ಕೆಜಿ ಗಾಂಜಾ ಮಾದಕದ್ರವ್ಯವನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರದ ಮುಳಿಹಿತ್ಲು ಬಳಿ […]

Continue Reading

ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಆಕೆಯೊಂದಿಗೆ ದೈಹಿಕ ಸಂಪರ್ಕ, ಬಾಲಕಿ ಗರ್ಭಿಣಿ. ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಹಿಂದೂ ಸಂಘಟನೆಯಲ್ಲಿರುವ ಮನೀಶ್ ಪೂಜಾರಿಯಿಂದ ಹೇಯ ಕೃತ್ಯ.! ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಪಿಯುಸಿ ಮೊದಲ ವರ್ಷ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಸಂತೋಷ್ ಡಿಸೋಜ ಎಂಬವರ ಹದಿನೇಳು ವರ್ಷದ ಪುತ್ರಿ ಸಾವನ್ನಪ್ಪಿದ ವಿದ್ಯಾರ್ಥಿನಿ. ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದು, ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಮಯದಲ್ಲಿ ತಾಯಿ […]

Continue Reading

ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಕೋಮುವಾದವನ್ನು ಸೋಲಿಸಲು ಸಾಧ್ಯ: ಸುನಿಲ್ ಕುಮಾರ್ ಬಜಾಲ್

ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಭವ್ಯ ಭಾರತದ ಸೌಹಾರ್ದ ಪರಂಪರೆಗೆ ಕೊಳ್ಳಿ ಇಟ್ಟ ಕೋಮುವಾದ ಇಂದು ತನ್ನ ವಿರಾಟ್ ಸ್ವರೂಪವನ್ನು ತೋರಿಸುತ್ತಿದೆ.ದೇಶದ ಸಂವಿಧಾನವನ್ನೇ ಬುಡಮೇಲುಗೊಳಿಸಲು ಹವಣಿಸುತ್ತಿದೆ. ಅಂತಹ ಕೋಮುವಾದವನ್ನು ಸೋಲಿಸಿ ದೇಶದ ಜಾತ್ಯಾತೀತತೆಯನ್ನು ಹಾಗೂ ಜನತೆಯ ಬದುಕನ್ನು ರಕ್ಷಿಸಲು ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಸಾಧ್ಯ. ಇದಕ್ಕೆ ಸಾಕ್ಷಿ ಎಂಬಂತೆ ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ರಷ್ಯಾದ ಕೆಂಪು ಸೇನೆ ಫ್ಯಾಸಿಸ್ಟರ ಮೇಲೆ ವಿಜಯ ಸಾಧಿಸಿ ಜಗತ್ತನ್ನು ರಕ್ಷಿಸಿದ ಪರಿಯನ್ನು ಮತ್ತೆ ನೆನಪಿಸಬೇಕಾಗಿದೆ ಎಂದು DYFI ಮಾಜಿ ರಾಜ್ಯಾಧ್ಯಕ್ಷರಾದ ಸುನಿಲ್ […]

Continue Reading

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹಮದ್ ಮುಸ್ಲಿಯಾರ್ ವಫಾತ್

ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿಯಾಗಿದ್ದ ತ್ವಾಖಾ ಅಹಮದ್ ಮುಸ್ಲಿಯಾರ್ ಇಂದು ಬೆಳಿಗ್ಗೆ ಮಂಗಳೂರಿನ ಖಾಸಾಗಿ ಅಸ್ಪತ್ರೆಯಲ್ಲಿ ವಫಾತಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಮೊಹಲ್ಲಾಗಳ ಖಾಝಿಯಾಗಿ ದೀರ್ಘ ಕಾಲದಿಂದ ಸೇವೆ ಸಲ್ಲಿಸಿದಾದರು. ತ್ವಾಕಾ ಉಸ್ತಾದ್ ಎಂದು ಜನಾನುರಾಯಿಯಾಗಿದ್ದರು. ಜಿಲ್ಲೆಯ ಖಾಝಿಯಾದ ನಂತರ ಸಮಸ್ತ ಪರ ಸಂಘಟನೆಗೆ ಜೀವ ತುಂಬಿದ್ದರು. ಅಗಾಧ ಪಾಂಡಿತ್ಯ ಹೊಂದಿದ್ದ ಅವರು ದಾರುನ್ನೂರು ಎಜ್ಯುಕೇಶನ್ ಸೆಂಟರ್ ಸ್ಥಾಪಕರಾಗಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದರು. ತ್ವಾಖಾ […]

Continue Reading