ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ: ಕರ್ನಾಟಕ ಹೈಕೋರ್ಟ್
ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಗ್ರೇಡ್ -1 ತಹಶೀಲ್ದಾರ್ ವೆಂಕಟೇಶಪ್ಪ ಅವರು ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. […]
Continue Reading