ಅಪ್ರಾಪ್ತೆಯನ್ನು ದೇವಸ್ಥಾನಕ್ಕೆಂದು ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ, ರಾತ್ರಿಪೂರ್ತಿ ಅತ್ಯಾಚಾರ; ಮೂವರ ಬಂಧನ

ದೇವಸ್ಥಾನಕ್ಕೆಂದು ಅಪ್ರಾಪ್ತೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ , ರಾತ್ರಿ ಪೂರ್ತಿ ಇಬ್ಬರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುಲೈ 17ರ ರಾತ್ರಿ ಈ ನೀಚ ಕೃತ್ಯ ನಡೆದಿದ್ದು, ದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆ ಹೋಗೋಣಾ ಅಂತಾ ಅಪ್ರಾಪ್ತೆಯನ್ನು ಪುಸಲಾಯಿಸಿ ರೇಣುಕಾ ಕರೆ ತಂದಿದ್ದಳು. ಈ ವೇಳೆ ಆಟೋದಲ್ಲಿ ಬೇರೆಡೆಗೆ ರೇಣುಕಾ, ವೆಂಕಟರಮಣ ಮತ್ತು ನವೀನ್ […]

Continue Reading

ಮದುವೆಯಾಗುವುದಾಗಿ ನಂಬಿಸಿ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ, ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ಗ್ರಾಮದ ಉದ್ಯಮಿ ಅನನ್ಯ ಕೃಷ್ಣ ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ ಮೂಲದ ಅನಿಷಾ ಪಾಲನ್ನ ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕ ದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಆರೋಪಿ […]

Continue Reading

ಸಂಪುಟ ಸರ್ಕಸ್ಸು ಏಕೆ ಮುಗಿಯುತ್ತಿಲ್ಲ?; ಇನ್ನೆಷ್ಟು ದಿನ ಸಂಪುಟ ಸರ್ಕಸ್?

ಮೋದಿ ಸಂಪುಟಕ್ಕೆ ಯಾರು ಸೇರುತ್ತಾರೆ.?, ಬಿಜೆಪಿ-ಜೆಡಿಎಸ್ ಮೈತ್ರಿಯ ಕತೆ? ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ಶನಿವಾರ ರಾಜ್ಯ ಬಿಜೆಪಿ ಪಾಳಯದಲ್ಲಿ ಕುತೂಹಲಕಾರಿ ಸುದ್ದಿಯೊಂದು ತೇಲಿ ಬಂತು. ಕರ್ನಾಟಕದಲ್ಲಿ ಪಕ್ಷದ ವಿದ್ಯಮಾನಗಳನ್ನು ಗಮನಿಸಲು ವರಿಷ್ಟರು ವೀಕ್ಷಕರ ತಂಡವನ್ನು ಕಳಿಸಲು ನಿರ್ಧರಿಸಿದ್ದಾರೆ ಎಂಬುದು ಈ ಸುದ್ದಿ. ಜುಲೈ ಇಪ್ಪತ್ತೈದರ ಹೊತ್ತಿಗೆ ಕರ್ನಾಟಕಕ್ಕೆ ಆಗಮಿಸಲಿರುವ ಈ ವೀಕ್ಷಕರ ಪಡೆ ಇಲ್ಲಿ ವಿವಿಧ ಹಂತದ ನಾಯಕರ ಅಭಿಪ್ರಾಯ ಸಂಗ್ರಹಿಸಿ, ಆನಂತರ ದಿಲ್ಲಿಗೆ ಮರಳಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬಿನ್ ಅವರಿಗೆ ವರದಿ ಸಲ್ಲಿಸಲಿದೆ […]

Continue Reading

ರಾಹುಲ್‌ ಅನುಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ: ಸೋಮವಾರ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ; ಹೊಸ ಮುಖಗಳಿಗೆ ಅವಕಾಶ

ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬುಧವಾರ ದೆಹಲಿಗೆ ತೆರಳಿದ್ದು, ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರ ಜತೆಗೆ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್‌ ಅವರ ಸಭೆ ನಡೆಸಲಿದ್ದಾರೆ. ಈ ಸಭೆಯ ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ನಾಯಕರಿಗೆ ನೀಡುವ […]

Continue Reading

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶ ರದ್ದು

ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ […]

Continue Reading

‘ಸಿರಾ-ಶಿಕು’ ಸೇತುವೆಗೆ ‘ಡಿಕೆ’ ಸಿಮೆಂಟು; ಆಷಾಡಕ್ಕೆ ಸಂಪುಟ ವಿಸ್ತರಣೆ, ಸಿದ್ದು ಫಿಟ್ನೆಸ್ ಸೆಂಟರ್; ಬಿಕೆ ಹೆಗಲಿಗೆ ಹೊಸ ಜವಾಬ್ದಾರಿ

✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ತಮ್ಮ ಪತ್ನಿ ಹಾಗೂ ಸಹೋದರನ ಜತೆಗೂಡಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಹೋಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದು ಮಹತ್ವದ ವಿಷಯವನ್ನು ಪ್ರಸ್ತಾಪಿಸಿದರಂತೆ. ಅಂದ ಹಾಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಮಹತ್ವದ ವಿಷಯವನ್ನು ಪ್ರಸ್ತಾಪಿಸಲು ಡಿ.ಕೆ.ಶಿವಕುಮಾರ್ ಅವರಿಗಿದ್ದ ಫೀಡ್ ಬ್ಯಾಕೇ ಕಾರಣ. ಅದೆಂದರೆ, ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪಕ್ಷದ ಕೆಲ ಶಾಸಕರು: ‘ಡಿಕೆ ಫುಲ್ಲು ಚೇಂಜ್ ಆಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ತಮಗೆ ಬೇಕಾದಂತೆ […]

Continue Reading

ಅಕ್ಟೋಬರ್-ನವೆಂಬರ್‌ ನಡುವೆ ರಾಜ್ಯದಲ್ಲಿ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ

ಅಕ್ಟೋಬರ್-ನವೆಂಬರ್‌ ನಡುವೆ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ 5,927 ಗ್ರಾಮ ಪಂಚಾಯಿತಿಗಳಿದ್ದು, ಅವುಗಳಲ್ಲಿ 90% ಕ್ಕಿಂತ ಹೆಚ್ಚು ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಮುಗಿದಿದ್ದು, ಪ್ರಸ್ತುತ ಆಡಳಿತಾಧಿಕಾರಿಗಳು ಉಸ್ತುವಾರಿ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ಮತ್ತು ಮೀಸಲಾತಿ ಮ್ಯಾಟ್ರಿಕ್ಸ್ ನಿಗದಿ ಪೂರ್ಣಗೊಂಡ ತಕ್ಷಣ, ಪ್ರಸ್ತಾವನೆಯನ್ನು ರಾಜ್ಯ […]

Continue Reading

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಗೊಂದಲಗಳಿಗೆ ತೆರೆ; ಹೊಸ ಮಾರ್ಗಸೂಚಿ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಹೊಸ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ಯಾವುದೇ ಅಧಿಕಾರಿಗಳು, ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ ಸೂಚಿಸುವುದು ಕಡ್ಡಾಯವಾಗಿರುತ್ತದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರಿಗೆ ಸ್ಥಳ ನಿಯುಕ್ತಿ ಮಾಡದೆ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಕಳೆದ ಮಾರ್ಚ್ 30 ರಂದು ಸುತ್ತೋಲೆ ಹೊರಡಿಸಿತ್ತು. ಆದರೆ, ಕೆಲವು ಸಂದರ್ಭದಲ್ಲಿ […]

Continue Reading

ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಸದ್ಯಕ್ಕಿಲ್ಲ; ಆರತಿ ಮಂತ್ರ ಜಪಿಸಿದ ಸೂಟು ಬೂಟು ಕಾ..ಕಾ.. ಗಳ ಕನಸು ಭಗ್ನ

ಬೆಂಗಳೂರು: ಕರ್ನಾಟಕದಲ್ಲಿ ಅನಿವಾಸಿ ಕನ್ನಡಿಗರಿಗಾಗಿ NRI ಪ್ರತ್ಯೇಕ ಸಚಿವಾಲಯ ಅಥವಾ ಇಲಾಖೆಯನ್ನು ಸ್ಥಾಪಿಸುವ ವಿಚಾರದಲ್ಲಿ ಆಡಳಿತಾರೂಢ ಸಚಿವ ಸಂಪುಟದಲ್ಲಿ ‘ಅಪಸ್ವರ’ ಉಂಟಾಗಿದೆ. ಅಸ್ತಿತ್ವದಲ್ಲಿರುವ ಕೈಗಾರಿಕೆ ಹಾಗೂ ಐಟಿ-ಬಿಟಿ ಇಲಾಖೆಗಳ ಕೆಲಸಗಳಲ್ಲಿ ಇದು ಮರುಕಳಿಕೆ (overlap) ಆಗಬಹುದೆಂಬ ಆತಂಕದಿಂದಾಗಿ, ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಪ್ರಸ್ತಾವನೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಪ್ರತ್ಯೇಕ ಎನ್ಆರ್‌ಐ ಇಲಾಖೆಯ ಪ್ರಸ್ತಾವನೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅನಿವಾಸಿ ಕನ್ನಡಿಗರಿಗೆ ನೆರವಾಗಲು ಮತ್ತು ರಾಜ್ಯಕ್ಕೆ ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಪ್ರತ್ಯೇಕ ಸಚಿವಾಲಯವನ್ನು ರಚಿಸಲು ಮುಂದಾಗಿದ್ದರು. […]

Continue Reading

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ; ವಿದ್ಯಾರ್ಥಿಗೆ ಹೊಡೆದಿದ್ದ ಶಿಕ್ಷಕಿ ವಿರುದ್ದದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ’ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್, ‌ಯುಕೆಜಿ ವಿದ್ಯಾರ್ಥಿನಿಗೆ‌ ಕೋಲಿನಿಂದ ಹೊಡೆದ ಪ್ರಕರಣವೊಂದರಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ‌ಮಂಗಳೂರಿನ 2ನೇ ಜೆಎಂಎಫ್‌‌ಸಿ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ‌ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಿಗೆ […]

Continue Reading