ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ..! ‘ಎ’ ಗ್ರೇಡ್ ಮಾನ್ಯತೆ

ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ ‘KSLU’ ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್‌ ತಂಡ ‘ಎ’ ಗ್ರೇಡ್ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ನಿಂದ ‘ಎ’ ಗ್ರೇಡ್ ದೊರೆತಿದ್ದು, ವಿಶ್ವವಿದ್ಯಾಲಯದ ಹೆಮ್ಮೆ ಹೆಚ್ಚಿಸಿದೆ ಎಂನು ಶಿಕ್ಷಣ ತಜ್ಞರು ಸಂತಸ ಹಂಚಿಕೊಂಡಿದ್ದಾರೆ. ಕಳೆದ 15 ವರ್ಷಗಳಿಂದ ವಿವಿಯು ಕಾನೂನು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುತ್ತಿದ್ದು, 128 ಸಂಯೋಜಿತ […]

Continue Reading

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಖಿಲ ಭಾರತ ವಕೀಲರ ಸಂಘದ ಸಹಿ ಸಂಗ್ರಹ ಅಭಿಯಾನ

ತಿಂಗಳೊಳಗಾಗಿ ಬೇಡಿಕೆ ಈಡೇರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸಿ “ನಮ್ಮ ನಡೆ ವಿಧಾನಸೌಧ ಕಡೆ”; ಅಖಿಲ ಭಾರತ ವಕೀಲರ ಒಕ್ಕೂಟ, ಎಚ್ಚರಿಕೆ ಅಖಿಲ ಭಾರತ ವಕೀಲರ ಒಕ್ಕೂಟ (AILU) ರಾಜ್ಯ ಕರೆಯ ಅನ್ವಯ ಇಂದು ಅಖಿಲ ಭಾರತ ವಕೀಲರ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಅಖಿಲ ಭಾರತ ವಕೀಲರ ಒಕ್ಕೂಟದ ಜಿಲ್ಲಾ ಅಧ್ಯಕ್ಷರು ಮತ್ತು ಹಿರಿಯ ವಕೀಲರಾದ ಯಶವಂತ ಮರೋಳಿ, ಜಿಲ್ಲಾ ಉಪಾಧ್ಯಕ್ಷರಾದ […]

Continue Reading

ಕಾಂಗ್ರೆಸ್ ಹೈಕಮಾಂಡ್‌ ಸಚಿವ ಸಂಪುಟ ಪುನಾರಚನೆಗೆ ಚಿಂತನೆ

ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಅಮಾಯಕರ ಹತ್ಯೆ, ಕಾರ್ಯಕರ್ತರ ಮುನಿಸು, ಆಡಳಿತ ವೈಪಲ್ಯ ವರದಿಗಳು ಹೈಕಮಾಂಡ್‌ ಅಂಗಳಕ್ಕೆ ಕಾಂಗ್ರೆಸ್ ಹೈಕಮಾಂಡ್‌ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡುವ ದಿಸೆಯಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠ ರಾಹುಲ್‌ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹೈಕಮಾಂಡ್‌ ರಾಜ್ಯ ನಾಯಕತ್ವಕ್ಕೆ ಬುಲಾವ್‌ ನೀಡಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ದೆಹಲಿಯಲ್ಲಿದ್ದು, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ […]

Continue Reading

ಮನೆಯ ವಿದ್ಯುತ್ ಸಂಪರ್ಕಕ್ಕೆ 20 ಸಾವಿರ ಲಂಚ: ಬ್ರಹ್ಮಾವರ ಮೆಸ್ಕಾಂ ಎಇಇ ಲೋಕಾ ಬಲೆಗೆ

ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂದು ಬೇಡಿಕೆ ಇಟ್ಟ ಬ್ರಹ್ಮಾವರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಿನೇಶ್ ಪೂಜಾರಿ ಎಂಬವರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಮೆಸ್ಕಾಂ ಎಇಇ ಭೇಟಿಯಾಗಿದ್ದರು. ಸ್ಥಳ ಪರಿಶೀಲನೆ ನಡೆಸಿದ ಎಇಇ ವಿದ್ಯುತ್ ಸಂಪರ್ಕ ನೀಡಬೇಕಾದರೆ 20 ಸಾವಿರ ಲಂಚ ನೀಡಬೇಕು ಎಂಬ ಬೇಡಿಕೆಯನ್ನು ಇರಿಸಿದ್ದರು. ಈ ಬಗ್ಗೆ ದಿನೇಶ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. […]

Continue Reading

ರಾಜ್ಯ ವಿಧಾನ ಪರಿಷತ್​ನ ನಾಲ್ಕು ಸ್ಥಾನಗಳಿಗೆ ಸರ್ಕಾರ ನಾಮನಿರ್ದೇಶನ ಮಾಡುವ ಹಿನ್ನೆಲೆ, ನಾಲ್ವರು ಎಂಎಲ್​ಸಿಗಳ ಹೆಸರು ಫೈನಲ್

ರಮೇಶ್​ ಬಾಬು, ದಿನೇಶ್​ ಅಮೀನ್​ ಮಟ್ಟು, ಡಾ.ಆರತಿ ಕೃಷ್ಣ, ಡಿಜಿ ಸಾಗರ್ ನಾಲ್ವರು ಪೈನಲ್ ವಿಧಾನ ಪರಿಷತ್ತಿಗೆ ನಾಲ್ವರ ಹೆಸರುಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ಸಮಾಜಸೇವೆ, ಶಿಕ್ಷಣ, ಸಹಕಾರ ಕ್ಷೇತ್ರದ ಕೋಟಾದಡಿ ಕೆಪಿಸಿಸಿ ವಕ್ತಾರ ರಮೇಶ್​ ಬಾಬು, ಪತ್ರಕರ್ತರ ಕೋಟಾದಡಿ ದಿನೇಶ್​ ಅಮೀನ್​ ಮಟ್ಟು, ಅನಿವಾಸಿ ಭಾರತೀಯ ಸೇವೆ, ಮಹಿಳಾ, ಸಮಾಜ ಸೇವೆ ಕೋಟಾದಡಿ ಡಾ.ಆರತಿ ಕೃಷ್ಣ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಡಿಜಿ ಸಾಗರ್ ಹೆಸರುಗಳನ್ನುಕಾಂಗ್ರೆಸ್​ ಹೈಕಮಾಂಡ್​ ಅಂತಿಮಗೊಳಿಸಿದೆ. ಈ ನಾಲ್ವರನ್ನು ಪರಿಷತ್ […]

Continue Reading

ಗ್ರಾಮ ಪಂಚಾಯಿತಿಗೂ ಬಂತು ‘ರೆರಾ’. ಪಂಚಾಯತ್ ವ್ಯಾಪ್ತಿಯಲ್ಲಿ ಅನುಮೋದಿತ ಬಡಾವಣೆಗಳಿಗೆ ‘ರೆರಾ’ ನೋಂದಣಿ ಕಡ್ಡಾಯ

ಭೂ ಪರಿವರ್ತನೆಗೊಂಡ ಭೂಮಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮೋದನೆ ನೀಡುವಾಗ ರೆರಾ ನೋಂದಣಿ ಕಡ್ಡಾಯಗೊಳಿಸಿ ಆದೇಶ ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದಿತ ಬಡಾವಣೆಗಳಿಗೆ ‘ರೆರಾ’ ನೋಂದಣಿಯನ್ನು ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರಲಾಗಿದೆ. ಹೊಸ ಕಾನೂನಿನ ಪ್ರಕಾರ, ಜಿಲ್ಲಾ ಪಂಚಾಯಿತ್, ತಾಲೂಕು ಪಂಚಾಯಿತ್, ಮತ್ತು ಗ್ರಾಮ ಪಂಚಾಯಿತ್ ಗಳು ಕಟ್ಟಡ ನಿರ್ಮಾಣದ ಮೇಲೆ ನಿಯಂತ್ರಣ ಹೊಂದಿರುತ್ತವೆ. ಭೂ ಪರಿವರ್ತನೆಗೊಂಡ ಭೂಮಿಯಲ್ಲಿ […]

Continue Reading

ಕೆನರಾ ಬ್ಯಾಂಕಿನಲ್ಲಿ ಮಹಾ ದರೋಡೆ; ವಿಜಯಪುರದ ಮಂಗೋಲಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಹೊತ್ತೊಯ್ದ ಕಳ್ಳರು

ಕೆನರಾ ಬ್ಯಾಂಕಿನ ವಿಜಯಪುರದ ಮಂಗೋಲಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಕಳ್ಳರು ದೋಚಿದ್ದಾರೆಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಚಿನ್ನವನ್ನು ಠೇವಣಿ ಇಟ್ಟಿದ್ದರು. 59 ಕೆಜಿ ಚಿನ್ನ ಕಳವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಅಂದಾಜಿಸಿದ್ದು ಮೇ 26ರಂದು ಕೆನರಾ ಬ್ಯಾಂಕ್ ಮಂಗೋಲಿ ಶಾಖೆಯ ವ್ಯವಸ್ಥಾಪಕರು ದೂರು ದಾಖಲಿಸಿದರು. ಮೇ 23ರಂದು ಸಂಜೆ ಬ್ಯಾಂಕ್‌ಗೆ ಬೀಗ ಹಾಕಿ ಸಿಬ್ಬಂದಿಗಳು ತೆರಳಿದ್ದರು. ಮೇ 24 ಮತ್ತು 25 ರಂದು (ನಾಲ್ಕನೇ ಶನಿವಾರ ಮತ್ತು ಭಾನುವಾರ) ಬ್ಯಾಂಕ್ ರಜೆ ಇತ್ತು. ಮೇ 26 […]

Continue Reading

ಕೆನರಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವವರಿಗೆ ಶುಭಸುದ್ದಿ; ಬ್ಯಾಂಕ್‌ನಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳಬೇಕೆಂಬ ನಿಯಮ ಹಿಂದಕ್ಕೆ, ದಂಡ ಶುಲ್ಕ ಮನ್ನಾ

ಇನ್ಮುಂದೆ ಕೆನರಾ ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳುವುದು ಕಡ್ಡಾಯವಲ್ಲ. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಕೆನರಾ ಬ್ಯಾಂಕ್, ತನ್ನೆಲ್ಲಾ ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳದೆ ಇರುವುದಕ್ಕೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಮನ್ನಾ ಮಾಡಿದೆ. ಉಳಿತಾಯ ಖಾತೆಗಳ ಜೊತೆಗೆ ವೇತನ ಖಾತೆಗಳು, ಅನಿವಾಸಿ ಭಾರತೀಯ (ಎನ್‌ಆರ್‌ಐ) ಎಸ್‌ಬಿ ಖಾತೆಗಳನ್ನೂ ಸೇರಿದಂತೆ ಎಲ್ಲಾ ರೀತಿಯ ಎಸ್‌ಬಿ ಅಕೌಂಟ್‌ಗಳ ಮೇಲಿನ ಕನಿಷ್ಠ ತಿಂಗಳ ಮೊತ್ತ (ಎಎಂಬಿ) ಕಾಯ್ದುಕೊಳ್ಳದೆ ಇರುವುದಕ್ಕೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣವಾಗಿ […]

Continue Reading

ಪೊಲೀಸರು ಸಕಾರಣವಿಲ್ಲದೆ ವಾಹನಗಳನ್ನು ತಡೆಯಬಾರದು. ದಿಢೀರನೆ ಅಡ್ಡಬಂದು ವಾಹನಗಳ ಕೀಲಿಕೈ ತೆಗೆದುಕೊಳ್ಳಬಾರದು.

ಸಂಚಾರ ಪೊಲೀಸರ ಅಮಾನವೀಯ, ದುರ್ನಢತನೆಯ ವರ್ತನೆಯಿಂದ ಮಗು ಬಿದ್ದು ಮೃತಪಟ್ಟಿರುವ ಘಟನೆ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಪೊಲೀಸ್‌ ಇಲಾಖೆಯು ವಾಹನ ತಪಾಸಣೆ ಮಾಡುವಾಗ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಕೆಲವು ಮಾರ್ಗಸೂಚಿ ಹೊರಡಿಸಿದ್ದಾರೆ. ವಾಹನಗಳಿಗೆ ಸಂಬಂಧಪಟ್ಟ ದಾಖಲೆ ಪರೀಕ್ಷಿಸಲು ಸಕಾರಣವಿಲ್ಲದೆ ವಾಹನಗಳನ್ನು ತಡೆಯಬಾರದು. ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ಅಂತಹ ವಾಹನಗಳನ್ನು ನಿಲ್ಲಿಸಿ ಪ್ರಕರಣ ದಾಖಲಿಸುವುದು. ಹೆದ್ದಾರಿಗಳಲ್ಲಿ ಜಿಗ್‌ ಜಾಗ್‌ ಮಾದರಿಯಲ್ಲಿ ಬ್ಯಾರಿಕೇಡ್‌ ಹಾಕಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ […]

Continue Reading

ರಾಜ್ಯದಲ್ಲಿನ ಯಾವುದೇ ಭಾಗವನ್ನು ನಿರ್ಲಕ್ಷಿಸುವುದಿಲ್ಲ; ಕರಾವಳಿ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಗಮನ ಹರಿಸಬೇಕಿದೆ: ಗೃಹ ಸಚಿವರು

ಬೆಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಲ್ಲಿನ ಜನರು ಆಪೇಕ್ಷೆ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಆಪೇಕ್ಷೆ ಪಟ್ಟಿದ್ದರಿಂದ ಅಧಿಕಾರಿಗಳನ್ನು ವರ್ಗಾಯಿಸಿದ್ದೇವೆ.‌ ಕಳೆದ ಬಾರಿ ಭೇಟಿ ನೀಡಿದಾಗ ಅಧಿಕಾರಿಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು. ಕೂಡಲೇ ಬದಲಾಯಿಸುವುದು ಸರಿಯಲ್ಲ‌ ಎಂಬ ಕಾರಣಕ್ಕೆ ಮಾಡಿರಲಿಲ್ಲ. ಈ ಬಾರಿಯೂ ಧ್ವನಿ ಎತ್ತಿದ್ದರಿಂದ ಬದಲಾಯಿಸಿದ್ದೇವೆ‌ ಎಂದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಸರ್ಕಾರ […]

Continue Reading