ಶೂನ್ಯ ದಾಖಲಾತಿ: ರಾಜ್ಯದಲ್ಲಿ 4398 ಸರಕಾರಿ ಶಾಲೆಗಳು ಮುಚ್ಚುವ ಹಂತದಲ್ಲಿ!

ಈ ವರ್ಷ ಶೂನ್ಯ ದಾಖಲಾತಿ ಹಾಗೂ ಅತಿ ಕಡಿಮೆ ವಿದ್ಯಾರ್ಥಿಗಳ ದಾಖಲಾತಿ ಯಿಂದಾಗಿ ರಾಜ್ಯದ 4398 ಸರಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಾಗಿದೆ. ರಾಜ್ಯದಲ್ಲಿನ 46 ಸಾವಿರ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪೈಕಿ ಸುಮಾರು 18 ಸಾವಿರ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ 30 ದಾಟಿಲ್ಲ. ಇನ್ನೂ ಆಶ್ಚರ್ಯವೆಂದರೆ 4300 ಕ್ಕೂ ಹೆಚ್ಚು ಶಾಲೆಗಳಲ್ಲಿ 10 ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಇದರಲ್ಲಿ ಶೂನ್ಯ ದಾಖಲಾತಿಯ ಶಾಲೆಗಳು ಇವೆ. ಈ ಹಿಂದೆ 10 ಕ್ಕಿಂತ ಕಡಿಮೆ […]

Continue Reading

ರಾಜ್ಯದ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿಯನ್ನು ಒಂದು ತಿಂಗಳಲ್ಲಿ ತೆರವುಗೊಳಿಸಲು ಖಡಕ್ ಸೂಚನೆ: ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಪಶ್ಚಿಮ ಘಟ್ಟದ 9 ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿಯನ್ನು ಒಂದು ತಿಂಗಳಲ್ಲಿ ತೆರವುಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಭಾರೀ ಮಳೆಯಿಂದಾಗಿ ಶಿರೂರು ಗುಡ್ಡ ಕುಸಿತದಲ್ಲಿ 11 ಮಂದಿ ಮೃತಪಟ್ಟಿದ್ದು ಹಾಗೂ ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ 300ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆಗಳ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಕಾರಣವಾಗುತ್ತಿರುವ ಅರಣ್ಯ ಒತ್ತುವರಿಯನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಉತ್ತರ ಕನ್ನಡ, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ ಮತ್ತು ಕೊಡಗು […]

Continue Reading

Karnataka Media Council (KMC) ಅಧ್ಯಕ್ಷ ಅಲ್ವಿನ್ ಮೆಂಡೋನ್ಸಾ ಸಹಿತ ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಜ್ಯ ಸಂವಹನ ಪ್ರಶಸ್ತಿ’

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (Public Relations Council of India- PRCI) ನೀಡುವ ‘ರಾಜ್ಯ ಸಂವಹನ ಪ್ರಶಸ್ತಿ‌’ ಪ್ರದಾನ ಸಮಾರಂಭ ಗಮನಸೆಳೆಯಿತು. ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖರನ್ನು ಗುರುತಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಬೆಂಗಳೂರಿನಲ್ಲಿ ನೆರವೇರಿತು. PRCI ಕರ್ನಾಟಕ ಚಾಪ್ಟರ್ ಆಯೋಜಿಸಿದ್ದ ಸಮಾರಂಭದಲ್ಲಿ ಈ ಬಾರಿ ಮಾಧ್ಯಮ, ಸಂವಹನ, ಸಿನಿಮಾ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ 12 ಮಂದಿಗೆ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ, ನಿವೃತ್ತ ನ್ಯಾಯಮೂರ್ತಿ ಡಾ. […]

Continue Reading

ಜೆಡಿಎಸ್ ನಾಯಕರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ; ಅವರು ಕೈಜೋಡಿಸಿಲಿ, ಬಿಡಲಿ, ಅವರ ಬೆಂಬಲ ನಿರೀಕ್ಷಿಸದೆ ಪಾದಯಾತ್ರೆ ಆಯೋಜಿಸಿ: ಅಮಿತ್ ಶಾ ಖಡಕ್ ವಾರ್ನಿಂಗ್

ಜೆಡಿಎಸ್ ನಾಯಕರ ಯಾವುದೇ ಬ್ಲಾಕ್ಮೇಲ್ ತಂತ್ರಕ್ಕೆ ಬಗ್ಗದೇ ನಿಗದಿಯಾಗಿರುವಂತೆ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಮುಂದುವರೆಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯಘಟಕಕ್ಕೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಎಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ತಲೆಕೆಡಿಸಿಕೊಳ್ಳದೆ. ಈಗಾಗಲೇ ತೀರ್ಮಾನಿಸಿರುವಂತೆ ಆ.3ರಿಂದ ಮೈಸೂರುವರೆಗೆ ಪಾದಯಾತ್ರೆಯನ್ನು ನಡೆಸಿ ಸರ್ಕಾರದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರವನ್ನು ಜನರಿಗೆ ಮನವರಿಕೆ ಮಾಡುವಂತೆ ಸೂಚನೆ ಕೊಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ […]

Continue Reading

ಆರೋಪಿಯ ಅಪರಾಧದ ಬಗ್ಗೆ ನೋಟಿಸ್ ನಲ್ಲಿ ವಿವರ ಒದಗಿಸಲು ಹೈಕೋರ್ಟ್ ಆದೇಶ

ಭಾ.ನ್ಯಾ.ಸು ಸಂಹಿತೆ-2023 ರ ಕಲಂ 35 ರ ಅನುಸಾರ ಚೆಕ್ ಲಿಸ್ಟ್ ನೀಡದಿದ್ದಲ್ಲಿ ಅಂತಹ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ. ಯಾವುದೇ ಆರೋಪ, ಸಂಬಂಧ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆಸಿಕೊಳ್ಳಲು ನೀಡುವ ನೋಟಿಸ್ ನಲ್ಲಿ ಕ್ರೈಂ ಸಂಖ್ಯೆ, ಎಫ್ ಐ ಆರ್ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ಚೆಕ್ ಲಿಸ್ಟ್ ಅನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಅಲ್ಲದೆ ಈ ಕುರಿತು […]

Continue Reading

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಭರ್ಜರಿ ಸರ್ಜರಿ ಸಾಧ್ಯತೆ..ಆರು ಸಚಿವರಿಗೆ ಕೊಕ್..

ಖಾದರ್ ‘ಮಿನಿಸ್ಟರ್’.. ‘ಸ್ಪೀಕರ್’ ಹುದ್ದೆಗೆ ಗುಂಡೂರಾವ್.! ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಸುದ್ದಿಯೊಂದು ಹೊರಬರುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಗಸ್ಟ್ ತಿಂಗಳಾಂತ್ಯಕ್ಕೆ ಭರ್ಜರಿ ಸರ್ಜರಿ ನಡೆಯುವ ಸಾಧ್ಯತೆ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವ ಬೆನ್ನಲ್ಲೇ ರಾಜ್ಯದ ಕೆಲವು ಹಿರಿಯ ನಾಯಕರಿಗೂ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಹಾಗೂ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಹಗರಣಗಳ ಸುದ್ದಿ ಹೈಕಮಾಂಡ್ ಮಟ್ಟದಲ್ಲಿ ನಡೆಯುವ […]

Continue Reading

ಸಾಫ್ಟ್ ವೇರ್ ಉದ್ಯೋಗಿಗೆ ದೋಷ ನೆಪ, ಪ್ರಸಿದ್ದ ದೇವಾಲಯದ ಪೂಜಾರಿಯಿಂದ ಅತ್ಯಾಚಾರ

ಸಾಫ್ಟ್ ವೇರ್ ಉದ್ಯೋಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಹಿನ್ನಲೆಯಲ್ಲಿ ಹಾಸನದ ಪ್ರಸಿದ್ಧ ಪುರದಮ್ಮ ದೇವಾಲಯದ ಪೂಜಾರಿಯನ್ನು ಬಾಗಲುಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದನೇ ಬಂಧಿತ ಆರೋಪಿ. ಮಹಿಳೆ ನೀಡಿದ ದೂರಿನ ಅನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದೇವಸ್ಥಾನದ ಪೂಜಾರಿ ದಯಾನಂದ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. […]

Continue Reading

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ ಎರಡು ವರ್ಷಕ್ಕೊಮ್ಮೆ: ರಾಜ್ಯ ಸರ್ಕಾರ

ರಾಜ್ಯದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಪಟ್ಟ ಆದೇಶ ಹೊರಡಿಸಿದ ದಿನದಿಂದ ಅನ್ವಯ ಆಗಲಿದೆ. ರಾಜ್ಯದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಪಟ್ಟ ಆದೇಶ ಹೊರಡಿಸಿದ ದಿನದಿಂದ ಅನ್ವಯ ಆಗಲಿದೆ. ಹಿಂದಿನ ಆದೇಶಗಳಿಗೆ ಅನ್ವಯ ಆಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಅವಧಿ ಎರಡು ವರ್ಷಕ್ಕೊಮ್ಮೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ಹಿಂದಿನ ಆದೇಶಕ್ಕೆ ಅನ್ವಯ ಆಗುತ್ತಾ ಅಥವಾ ಮುಂದಿನ ಆದೇಶಕ್ಕಾ ಎಂಬ ಅರ್ಜಿಯ ವಿಚಾರಣೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ವಿಚಾರಣೆಗೆ […]

Continue Reading

SSLC, PUCಯಲ್ಲಿ ಹೆಚ್ಚು ಅಂಕಗಳಿಸಿದರೆ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ: ಸಚಿವ ಜಮೀರ್ ಅಹ್ಮದ್ ಖಾನ್

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು SSLC, PUCಯಲ್ಲಿ ಹೆಚ್ಚು ಅಂಕಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, SSLC, PUC ಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Continue Reading

ಏಳು ಮದುವೆ, ಏಳು ಪತಿಯರ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ; ಏಳು ಜನರಿಂದಲೂ ಜೀವನಾಂಶ ಪಡೆದಿರುವ ಮಹಿಳೆ; ನ್ಯಾಯಾಧೀಶರೇ ಶಾಕ್.!

ಏಳು ಮದುವೆಯಾಗಿ ಏಳು ಮಂದಿ ಪತಿಯರ ವಿರುದ್ಧವೂ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದು ಮಾತ್ರವಲ್ಲದೆ, ಎಲ್ಲ ಏಳೂ ಮಂದಿಯಿಂದಲೂ ಜೀವನಾಂಶ ಪಡೆದಿರುವ ಮಹಿಳೆಯ ಪ್ರಕರಣ ಕರ್ನಾಟಕ ಹೈಕೋರ್ಟ್‌ನಲ್ಲಿ ಸದ್ದು ಮಾಡಿದೆ. ಏಳನೇ ಪತಿಯ ವಿರುದ್ಧದ ದಾಖಲಿಸಿದ ಕೇಸ್ ಬಗ್ಗೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಾಗ ಸ್ವತಃ ನ್ಯಾಯಾಧೀಶರೇ ಈಕೆಯ ಕೃತ್ಯಗಳ ಬಗ್ಗೆ ಬೆಚ್ಚಿ ಬಿದ್ದಿದ್ದಾರೆ. ಈಕೆಯ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಮುಂದಿನ ವಿಚಾರಣೆಗೆ ಆಗಮಿಸುವಂತೆ ಪತಿಯ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದರು.

Continue Reading