ನೊಂದಾಯಿತ ದಾಖಲೆ ರದ್ದು ಮಾಡುವ ಅಧಿಕಾರ ಸಬ್ ರಿಜಿಸ್ಟ್ರಾರ್ ಗಿಲ್ಲ: ಹೈಕೋರ್ಟ್ ತೀರ್ಪು

ನೋಂದಾಯಿತ ಜನರಲ್ ಪವರ್ ಆಫ್ ಅಟಾರ್ನಿ(ಜಿಪಿಎ) ಕ್ಯಾನ್ಸಲೇಷನ್ ಆಫ್ ಜಿಪಿಎ ಹೆಸರಿನಲ್ಲಿ ರದ್ದುಗೊಳಿಸಿ ಮತ್ತೊಂದು ಹೆಸರಿನಲ್ಲಿ ನೋಂದಾಯಿಸುವ ಅಧಿಕಾರ ಉಪ ನೋಂದಣಾಧಿಕಾರಿಗಳಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಬಾಗಲಕೋಟೆಯ ಮಧುಮತಿ ತಮ್ಮ ಹಾಗೂ ಪತಿಯ ಹೆಸರಿನಲ್ಲಿ ಜಂಟಿಯಾಗಿ ನೋಂದಾಯಿಸಿದ್ದ ಜಿಪಿಎ ಅನ್ನು ರದ್ಜುಗೊಳಿಸಲು ಬಯಸಿದ್ದರು. ಆದರೆ ಅದನ್ನು ನಿರಾಕರಿಸಿ ಬೆಳಗಾವಿಯ ಸಬ್ ರಿಜಿಸ್ಟ್ರಾರ್ ನೀಡಿದ್ದ ಹಿಂಬರಹ ಪ್ರಶ್ನಿಸಿ ಮಧುಮತಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ರಿಜಿಸ್ಟ್ರಾರ್|ಸಬ್ […]

Continue Reading

ಬ್ರಾಹ್ಮಣರ ರಕ್ಷಣೆಗಾಗಿ ಹಿಂದೂ ಮುಸ್ಲಿಂ ದ್ವೇಷ ಮತ್ತು ಸೌಹಾರ್ದತೆಯನ್ನು ಏಕಕಾಲದಲ್ಲಿ ಬಳಸುವ ಹಿಂದುತ್ವ !

✍️. ಪತ್ರಕರ್ತ, ನವೀನ್ ಸೂರಿಂಜೆ ಹುಲಿ ಉಗುರು ಬಳಕೆ ಮತ್ತು ಮಾರಾಟ ಮಾಡುವವರನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಏಕಾಏಕಿ ಬಂಧಿಸುವುದನ್ನು ವಿರೋಧಿಸಿದ್ದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಅಲ್ಲೂ ಹಿಂದೂ ಮುಸ್ಲಿಂ ದ್ವೇಷವನ್ನು ಮುಂದೆ ತಂದಿದ್ದರು. “ಮುಸ್ಲೀಮರ ದರ್ಗಾದಲ್ಲಿ ಇಮಾಮ್ ಗಳು ಆಶೀರ್ವಾದ ಮಾಡಲು ನವಿಲು ಗರಿ ಬಳಸುತ್ತಾರೆ. ಅವರನ್ಯಾಕೆ ಬಂಧಿಸುವುದಿಲ್ಲ?” ಎಂದು ಪ್ರಶ್ನಿಸಿದ್ದರು. ಚಿಕ್ಕಮಗಳೂರಿನ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ಎಂಬವರಿಂದ ಹುಲಿ ಉಗುರಿನ ಮೂರು ಲಾಕೆಟ್ […]

Continue Reading

ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಚಿಂತನೆ: ಗುಂಡೂರಾವ್

ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋದ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು […]

Continue Reading

ನಾನೇ ಸಿಎಂ: ಸಿದ್ದರಾಮಯ್ಯ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದು ಆರು ತಿಂಗಳು ಹತ್ತಿರ ಹತ್ತಿರ ಆಗುತ್ತಿದ್ದಂತೆ ಪಕ್ಷದಲ್ಲಿ ಮುಂದಿನ ಸಿಎಂ ಬಗ್ಗೆ ಶಾಸಕ, ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಬಣ ರಾಜಕೀಯದ ಸದ್ದು ಜೋರಾಗಿ ಕೇಳಿ ಬಂದಿತ್ತು. ಸಿಎಂ ಸಿದ್ದರಾಮಯ್ಯ ಎರಡೂವರೆ ವರ್ಷಗಳವರೆಗೆ ಮಾತ್ರ ಸಿಎಂ, ನಂತರ ಡಿಕೆಶಿ ಸಿಎಂ ಆಗುತ್ತಾರೆ ಎಂದು ಸುದ್ದಿ ಹರಿದಾಡಿತ್ತು. ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡವರು ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗುತ್ತಾರೆ ಅನ್ನುವ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಜನತೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗುವುದನ್ನು ಅರಿತ ಹೈಕಮಾಂಡ್ […]

Continue Reading

ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್; ಕೋಟಾ, ಈಶ್ವರಪ್ಪ, ಪಿ.ಸಿ ಮೋಹನ್ ದೆಹಲಿಗೆ ದೌಡು

ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಅವರಿಗೆ ವರಿಷ್ಠರು ಕರೆ ಮಾಡಿ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಸೂಚನೆ ನೀಡಲಾಗಿದೆ. ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ, ದೆಹಲಿಗೆ ಹೋದರೂ ಅವರನ್ನು ಭೇಟಿ ಮಾಡದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಾಪಸ್ […]

Continue Reading

ಕೇಸ್ ಹಳ್ಳ ಹಿಡಿಯಲು ಮೊಬೈಲ್ ಸಾಕ್ಷ್ಯಗಳೇ ಪ್ರಮುಖ ಕಾರಣವಾಗುತ್ತಿದೆ.!

ರಾಜ್ಯದಲ್ಲಿ ಅಪರಾಧ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಸೈಬರ್‌ ಕ್ರೈಂ, ಅಪಹರಣ, ಪೋಕ್ಸೋ, ಸುಲಿಗೆ, ಕೊಲೆ, ಅತ್ಯಾಚಾರ, ಹಲ್ಲೆ, ಬೆದರಿಕೆ ಸಹಿತ ಇತ್ತೀಚೆಗಿನ ಪ್ರತಿ ಅಪರಾಧಗಳೂ ಮೊಬೈಲ್‌ ಸಾಕ್ಷ್ಯದ ಆಧಾರದಲ್ಲಿ ಮುಂದಿನ ಆಯಾಮ ಪಡೆದುಕೊಳ್ಳುತ್ತದೆ. ಆದರೆ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್ಎಸ್‌ಎಲ್‌)ಕ್ಕೆ ಮೊಬೈಲ್‌ ಸಾಕ್ಷ್ಯ ಪತ್ತೆ ಹಚ್ಚಿ ವರದಿ ನೀಡುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ಶೇ.90ರಷ್ಟು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಮೊಬೈಲ್‌ ಸಂದೇಶಗಳು, ಕರೆಗಳು, ಲೊಕೇಶನ್‌ಗಳೇ ಪ್ರಮುಖ ಸಾಕ್ಷ್ಯವಾಗಿದೆ. ಮೊಬೈಲ್‌ ಸಾಕ್ಷ್ಯಗಳಿಂದಲೇ ತನಿಖಾಧಿಕಾರಿಗಳು ಮುಂದಿನ […]

Continue Reading

20 ಶಾಸಕರಿಗೆ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧಾರ; ಶಾಸಕರ ಹಿಂದೇಟು.!

ಲೋಕಸಭಾ ಚುನಾವಣೆಗೂ ಮೊದಲು ಪಕ್ಷ ಸಂಘಟನೆಗೆ ಅನುಕೂಲವಾಗುವಂತೆ ಸುಮಾರು 20 ಶಾಸಕರಿಗೆ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷಸ್ಥಾನ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಒಮ್ಮತಕ್ಕೆ ಬಂದಿದ್ದಾರೆ. ಇದಕ್ಕಾಗಿ ಸುಮಾರು ನಾಲ್ಕು ತಾಸು ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನಿಗಮ, ಮಂಡಳಿಗಳ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಇಬ್ಬರೂ ಶುಕ್ರವಾರ ನಾಲ್ಕು ಗಂಟೆ ಚರ್ಚೆ ನಡೆಸಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 15 ರಿಂದ 20 ಶಾಸಕರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನಪಡಿಸಲು ನಿರ್ಧರಿಸಲಾಗಿದೆ. […]

Continue Reading

ಹುಲಿ ಉಗುರು ಪ್ರಕರಣ: ಡಿಆರ್‌ಎಫ್‌ಓ ದರ್ಶನ್ ಅಮಾನತು, ಬಂಧನ

ರಾಜ್ಯದಲ್ಲಿ ಹುಲಿ ಉಗುರು ಭಾರೀ ಸದ್ದು ಮಾಡುತ್ತಿದೆ. ಕಳಸದ ಅರಣ್ಯಾಧಿಕಾರಿಯೊಬ್ಬರು ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದರು. ಈಗ ಅವರನ್ನು ಎನ್‌ಆರ್‌ಪುರದಲ್ಲಿ ಬಂಧಿಸಲಾಗಿದೆ. ಕಳಸದ ಡಿಆರ್‌ಎಫ್‌ಓ ದರ್ಶನ್ ಅವರನ್ನು ಬೆಳಗ್ಗೆ ಅಮಾನತು ಮಾಡಲಾಗಿತ್ತು. ಇವರ ವಿರುದ್ಧ ಹುಲಿ ಉಗುರು ಧರಿಸಿದ್ದ ದೂರು ಬಂದಿತ್ತು. ಈ ಬಗ್ಗೆ ತನಿಖೆಗೆ ಹಾಜರಾಗುವಂತೆ ಇಲಾಖೆ ಸೂಚಿಸಿತ್ತು. ತನಿಖೆಗೆ ಹಾಜರಾಗದ ಹಿನ್ನೆಲೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಅಧಿಕಾರಿ ವಿರುದ್ಧ, ಹುಲಿ ಉಗುರು ಧರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ […]

Continue Reading

ಚಾಕೋಲೇಟ್ ಉತ್ಪನ್ನಗಳಲ್ಲಿ ಅಪಾಯಕಾರಿ ಸೀಸ್​ ಮತ್ತು ಕ್ಯಾಡ್ಮಿಯಂ ಅಂಶ ಇರುವುದು ಪರೀಕ್ಷೆಯಲ್ಲಿ ಪತ್ತೆ

ಚಾಕೋಲೇಟ್ ಅಂದರೆ ಎಲ್ಲರಿಗೂ ತುಂಬಾ ಇಷ್ಟ.ಮಕ್ಕಳಂತೂ ಚಾಕೋಲೇಟ್ ಕಂಡರೆ ಬೇಕೇ ಬೇಕು ಎಂದು ಹಠ ಹಿಡಿಯುತ್ತಾರೆ. ಇದೀಗ ಚಾಕೋಲೆಟ್ ಬಗ್ಗೆ ಆಘಾತಕಾರಿ ವರದಿಯೊಂದು ಹೊರಬಿದ್ದಿದೆ. ಚಾಕೋಲೇಟ್ ಉತ್ಪನ್ನಗಳಲ್ಲಿ ಮೂರನೇ ಒಂದು ಭಾಗದಷ್ಟು ಸೀಸ್​ ಮತ್ತು ಕ್ಯಾಡ್ಮಿಯಂ ಅಂಶ ಇರುವುದು ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕ ಗ್ರಾಹಕ ಪರವಾಗಿ ಕೆಲಸ ಮಾಡುವ ಸಂಸ್ಥೆಯಾದ ಕನ್ಸ್ಯೂಮರ್​ ರಿಪೋರ್ಟ್ಸ್​ ಮಾಡಿದ ಪರೀಕ್ಷೆಯಲ್ಲಿ ಈ ಭಯಾನಕ ಅಂಶ ಬೆಳಕಿಗೆ ಬಂದಿದ್ದು, ತಮ್ಮ ಉತ್ಪನ್ನಗಳಲ್ಲಿ ಈ ಭಾರೀ ಲೋಹಗಳ ಪ್ರಮಾಣವನ್ನು ಕಡಿಮೆ ಮಾಡಲು ಅಮೆರಿಕದ ಬಹುದೊಡ್ಡ […]

Continue Reading

ಮಾಜಿ ಸಿ.ಎಂ ಯಡಿಯೂರಪ್ಪಗೆ ಇನ್ಮುಂದೆ ಕೇಂದ್ರದ ಝಡ್ ಪ್ಲಸ್ ಭದ್ರತೆ; ರಾಜಾಹುಲಿಯನ್ನು ಕಟ್ಟಿಹಾಕುವ ತಂತ್ರಗಾರಿಕೆ.?

ಬಿಜೆಪಿ ಹಿರಿಯ ನಾಯಕ, ರಾಜ್ಯ ರಾಜಕೀಯದ ರಾಜಾಹುಲಿ ಬಿ. ಎಸ್ . ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ನೀಡಿದೆ. ಗುಪ್ತಚರ ವಿಭಾಗ (IB) ಬೆದರಿಕೆ ಮೌಲ್ಯಮಾಪನಕ್ಕೆ ಪ್ರತಿಕ್ರಿಯೆಯಾಗಿ ಅವರಿಗೆ ಗೃಹ ಸಚಿವಾಲಯ (MHA) ಝಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಯಡಿಯೂರಪ್ಪನವರ ಸುರಕ್ಷತೆಯ ಬಗೆಗೆ ಕಳವಳ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೇಂದ್ರ ಗೃಹ ಸಚಿವಾಲಯ ಕೈಗೊಂಡಿದೆ. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂಲಭೂತ ಗುಂಪುಗಳಿಂದ ಸಂಭಾವ್ಯ ಬೆದರಿಕೆಗಳಿವೆ ಎಂದು ತಿಳಿದುಬಂದಿದೆ. […]

Continue Reading