ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ ಗೆ ಆಘಾತ.!

ಏಕನಾಥ್ ಶಿಂಧೆ ಸರ್ಕಾರ ಮಹಾರಾಷ್ಟ್ರದ ಜನರ ಮನಸ್ಸು ಗೆಲ್ಲುವಲ್ಲಿ ವಿಫಲ: ಲೋಕ್ ಪೋಲ್ ಸಮೀಕ್ಷೆ ಡಿಸೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್ಲಾ ಪ್ರಮುಖ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಅಧಿಕಾರದಲ್ಲಿರುವ ಎನ್‌ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಲು ಭಗೀರಥ ಪ್ರಯತ್ನ ನಡೆಸುತ್ತಿದೆ. ಈ ಬಾರಿ ಎನ್ ಡಿ ಎ ಗೆ ಆಘಾತ ಎದುರಾಗುವ ಸೂಚನೆ ಸಿಕ್ಕಿದೆ. ಲೋಕ್‌ಪೋಲ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದ್ದು, ಎನ್‌ಡಿಎಗೆ ಹಿನ್ನಡೆಯಾಗಲಿದೆ ಎಂದು ವರದಿಯಾಗಿದೆ. ಹಲವು ರಾಜ್ಯಗಳ ವಿಧಾನಸಭಾ […]

Continue Reading

ನಾಳೆ ಸಂಜೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಆದೇಶ

ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ವೈದ್ಯರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು: ಸುಪ್ರೀಂ ಕೋರ್ಟ್ ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ. ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ ಸರ್ಕಾರ ಅವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬಹುದು […]

Continue Reading

ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಐದು ಮಂದಿ ಸಾವು; 24 ಜನರಿಗೆ ಗಾಯ

ಲಖನೌ: ನಗರದಲ್ಲಿ ಶನಿವಾರ ಸಂಜೆ ಮೂರು ಅಂತಸ್ತಿನ ಕಟ್ಟಡ ಕುಸಿದು ಐದು ಮಂದಿ ಮೃತಪಟ್ಟಿದ್ದಾರೆ. ಸುಮಾರು 24 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದು, 24 ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡವನ್ನು ಉಗ್ರಾಣವಾಗಿ ಬಳಸಲಾಗುತ್ತಿತ್ತು. ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲವು ನಿರ್ಮಾಣ ಕಾರ್ಯಗಳು ನಡೆಯುತ್ತಿದ್ದವು. […]

Continue Reading

ಒಂದು ಪಕ್ಷದಿಂದ ಗೆದ್ದು, ಮತ್ತೊಂದು ಪಕ್ಷಕ್ಕೆ ಜಿಗಿಯುವ ಶಾಸಕರು ಇನ್ನು ಮುಂದೆ ಪಿಂಚಣಿಯನ್ನು ಪಡೆಯುವುದಿಲ್ಲ.

ಹಿಮಾಚಲ ಪ್ರದೇಶದ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮಾದರಿ ಮಸೂದೆಯೊಂದನ್ನು ಅಲ್ಲಿನ ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಒಂದು ಪಕ್ಷದಿಂದ ಗೆದ್ದು ಮತ್ತೊಂದು ಪಕ್ಷಕ್ಕೆ ಜಿಗಿಯುವ ಶಾಸಕರು ಇನ್ನು ಮುಂದೆ ಪಿಂಚಣಿಯನ್ನು ಪಡೆಯುವುದಿಲ್ಲ. ಹೀಗಾಗಿ ಪಕ್ಷಗಳಿಗೆ ಪಕ್ಷಾಂತರ ಮಾಡುವ ಹಿಮಾಚಲ ಪ್ರದೇಶದ ಶಾಸಕರಿಗೆ ಪಿಂಚಣಿ ಸಿಗುವುದಿಲ್ಲ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡ ಶಾಸಕರಿಗೆ ಇದು ಅನ್ವಯಿಸುತ್ತದೆ ಎಂದು ಹೊಸ ಕಾನೂನು ಹೇಳುತ್ತದೆ. ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಹೋದವರು ಹಾಗೂ ಇನ್ನು ಮುಂದೆ ಹೋಗುವವರಿಗೆ ಪಾಠ ಕಲಿಸಲೆಂದೇ ಅಲ್ಲಿನ ಕಾಂಗ್ರೆಸ್‌ ಹೊಸ ಮಸೂದೆಯನ್ನು […]

Continue Reading

ಜಮ್ಮು ಮತ್ತು ಕಾಶ್ಮೀರದ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಲಿದೆ. ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾದಿಸಲಿದೆ. ಸಮೀಕ್ಷೆಯಲ್ಲಿ ಬಹಿರಂಗ

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18ರಂದು ಮೊದಲ ಹಂತ, 25ರಂದು ಎರಡನೇ ಹಂತ ಮತ್ತು Oct ಒಂದರಂದು ಮೂರನೇ ಹಂತದ ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಚುನಾವಣಾ ಫಲಿತಾಂಶವನ್ನು ಅಕ್ಟೋಬರ್ 4 ರ ಬದಲು ಅಕ್ಟೋಬರ್ 8 ರಂದು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ […]

Continue Reading

ಬೆಂಗಳೂರು: ಬಾಂಗ್ಲಾ ಮೂಲದ ಅಪ್ರಾಪ್ತ ಬಾಲಕಿಯರನ್ನು ಕರೆತಂದು ಹೊಂಗಸಂದ್ರದ ಮನೆಯಲ್ಲಿಟ್ಟು ವೇಶ್ಯಾವಾಟಿಕೆ ದಂಧೆ

ಸಾಫ್ಟ್‌ವೇರ್‌ ಎಂಜಿನಿಯರ್‌ ಸುಬ್ರಹ್ಮಣ್ಯ ಶಾಸ್ತ್ರಿ ಅಪ್ರಾಪ್ತ ಹುಡುಗಿಯರನ್ನೇ ಬುಕ್‌ ಮಾಡುತ್ತಿದ್ದನಂತೆ. ಬಾಂಗ್ಲಾದೇಶದಿಂದ ಹುಡುಗಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಹೊಂಗಸಂದ್ರ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದಾಗ ಬಾಂಗ್ಲಾದೇಶದ ಇಬ್ಬರು ಅಪ್ರಾಪ್ತ ಬಾಲಕಿಯರು ವೇಶ್ಯಾವಾಟಿಕೆಗೆ ಬಳಕೆಯಾಗುತ್ತಿರುವುದು ತಿಳಿದುಬಂದಿದೆ. ಕೂಡಲೇ ಸಿಸಿಬಿ ಪೊಲೀಸರು ಇಬ್ಬರೂ ಬಾಲಕಿಯರನ್ನು ರಕ್ಷಣೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮೂವರು ವ್ಯಕ್ತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಈ ದಾಳಿ ನಡೆಸಿದೆ. ಬಂಧಿತರಲ್ಲಿ […]

Continue Reading

ಬಿಜೆಪಿ ನಾಯಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸುವ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ

ಹೊಸದಿಲ್ಲಿ: ಇಲ್ಲಿನ ಮತದಾರರ ಪಟ್ಟಿಯಿಂದ ಕೆಲವು ಸಮುದಾಯಗಳಿಗೆ ಸೇರಿದ 30 ಲಕ್ಷ ಮತದಾರರ ಹೆಸರನ್ನು ಅಳಿಸಲಾಗಿದೆ ಎಂಬ ಆರೋಪದ ಕುರಿತು ಹೇಳಿಕೆ ನೀಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಎಎಪಿ ನಾಯಕರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ಮೇಲ್ನೋಟಕ್ಕೆ ಆರೋಪಗಳು ಬಿಜೆಪಿಯ ಪ್ರತಿಷ್ಠೆಯನ್ನು ತಗ್ಗಿಸಿದವು. ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ನಿಂದಿಸುವ ಮತ್ತು ಅನಗತ್ಯ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಆರೋಪಗಳು ಪ್ರಾಥಮಿಕವಾಗಿ “ಮಾನಹಾನಿಕರ” ಎಂದು ಹೈಕೋರ್ಟ್ ಹೇಳಿದೆ. […]

Continue Reading

ದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಶುಕ್ರದೆಸೆ.! ಎಎಪಿ ಮತ್ತು ಬಿಜೆಪಿಯಿಂದ ಹಲವಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರ

ವಿಧಾನಸಭಾ ಚುನಾವಣೆ ನಡೆಯಲಿರುವ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶುಕ್ರದೆಸೆ ಆರಂಭವಾಗಿದೆ. ಆಡಳಿತಾರೂಢ ಎಎಪಿ ಹಾಗೂ ಬಿಜೆಪಿಯ ಹಲವಾರು ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ನ ದೆಹಲಿ ಘಟಕದ ಪ್ರಧಾನ ಕಛೇರಿ ರಾಜೀವ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಮ್‌ ಆದಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ನಾಯಕರು ಔಪಚಾರಿಕವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಮತ್ತು ಅವರನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್‌ ಸ್ವಾಗತಿಸಿದರು. ಪಕ್ಷದ ಪ್ರಗತಿಪರ ನೀತಿಗಳು ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ […]

Continue Reading

ತನ್ನ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕೇಂದ್ರ ಲೋಕಸೇವಾ ಆಯೋಗ ಯಾವುದೇ ಅಧಿಕಾರವಿಲ್ಲ: ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​

ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಅನರ್ಹಗೊಂಡಿರುವ ವಿವಾದಿತ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಪ್ರಕರಣ ರಾಷ್ಟ್ರವ್ಯಾಪಿ ಸಖತ್​ ಸದ್ದು ಮಾಡಿತ್ತು. ಇದೀಗ ತನ್ನ ಅನರ್ಹತೆಗೆ ಸವಾಲೆಸೆದಿದ್ದು, ಕೇಂದ್ರ ಲೋಕಸೇವಾ ಆಯೋಗಕ್ಕೆ (UPSC) ತನ್ನ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಯಾವುದೇ ಅಧಿಕಾರವಿಲ್ಲವೆಂದು ಹೇಳಿದ್ದಾರೆ. ತನ್ನ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ಗೆ ಪೂಜಾ ಉತ್ತರ ನೀಡಿದ್ದು, ತನ್ನನ್ನು ಅನರ್ಹಗೊಳಿಸುವ ಯಾವುದೇ ಅಧಿಕಾರ ಯುಪಿಎಸ್​ಸಿಗೆ ಇಲ್ಲ ಎಂದು ಹೇಳಿದ್ದಾರೆ. ಒಮ್ಮೆ ಪ್ರೊಬೇಷನರ್ […]

Continue Reading

ಪತಿ ಅಂದುಕೊಂಡು ಪರ ಪುರುಷನೊಂದಿಗೆ ಸೆಕ್ಸ್‌.! ಕರೆಂಟ್‌ ಆನ್‌ ಮಾಡಿದಾಗ ಮಹಿಳೆ ಶಾಕ್.! ಪ್ರಕರಣ ದಾಖಲು

ಮಹಿಳೆಯೊಬ್ಬಳು ಮನೆಯಲ್ಲಿ ಮಲಗಿದ್ದಾಗ ವ್ಯಕ್ತಿಯೊಬ್ಬ ಎಂಟ್ರಿಯಾಗಿ ನಿದ್ದೆಯಲ್ಲಿ ಆತನೇ ಪತಿ ಎಂದುಕೊಂಡ ಮಹಿಳೆ ಆತನೊಂದಿಗೆ ಸೆಕ್ಸ್‌ ಮಾಡಿದ್ದಾಳೆ. ಪರ ಪುರುಷನೊಂದಿಗೆ ಶಾರೀರಿಕ ಸಂಬಂಧ ಬೆಳೆಸಿದ ಮೇಲೆ ಕೊಠಡಿಯಲ್ಲಿ ಕರೆಂಟ್‌ ಆನ್‌ ಮಾಡಿದ್ದು, ಈ ವೇಳೆ ಮಹಿಳೆಗೆ ತಾನು ಮಾಡಿರುವ ತಪ್ಪು ಅರಿವಿಗೆ ಬಂದಿದೆ. ಕೂಡಲೇ ಆಕೆ ಆರೋಪಿ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಿಸಿ ಜೈಲಿಗಟ್ಟಿದ್ದಾಳೆ. ಮುಂಬೈನ ಪೊವಾಯಿ ಎಂಬಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೊವಾಯಿಯಲ್ಲಿ ಮಹಿಳೆ ಮನೆಯಲ್ಲಿ ತನ್ನ ಗಂಡನಿಗಾಗಿ […]

Continue Reading