ಅಂತಿಮಗೊಳ್ಳದ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ

ಕಾಂಗ್ರೆಸ್‌ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿಯಲ್ಲಿ ಹಿರಿಯ ನೇತಾರರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರಗಳಿಗೆ 3ನೇ ಪಟ್ಟಿಯಲ್ಲಿ ಟಿಕೆಟ್‌ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್‌ನ ಮೂರನೇ ಮತ್ತು ಅಂತಿಮ ಪಟ್ಟಿ ಸಿದ್ಧಗೊಳಿಸಲು ರವಿವಾರ ಇಡೀ ದಿನ ಸಕ್ರಿಯವಾಗಿತ್ತು. ಎರಡನೇ ಪಟ್ಟಿಯ […]

Continue Reading

ಬಿಜೆಪಿ ಅಭ್ಯರ್ಥಿಗಳ ಮುಗಿಯದ ಗೊಂದಲ, ಬಗೆಹರಿಯದ ಟಿಕೆಟ್‌ ಹಂಚಿಕೆಯ ಕಗ್ಗಂಟು

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಗೃಹ ಸಚಿವರು ಪಕ್ಷದ ರಾಜ್ಯ ನಾಯಕರೊಂದಿಗೆ ಶನಿವಾರ ಇಡೀ ದಿನ ಸಮಾಲೋಚನೆ ನಡೆಸಿದರು. ಆದರೂ, ಪಕ್ಷದ ಟಿಕೆಟ್‌ ಹಂಚಿಕೆಯ ಕಗ್ಗಂಟು ಬಗೆಹರಿದಿಲ್ಲ. ರಾಜ್ಯ ಸಮಿತಿಯು ಅಕಾಂಕ್ಷಿ ಅಭ್ಯರ್ಥಿಗಳಿರುವ 2–3 ಹೆಸರುಗಳನ್ನು ಶಿಫಾರಸು ಮಾಡಿದೆ. ಪ್ರತಿ ಕ್ಷೇತ್ರಕ್ಕೆ ಒಬ್ಬ ಆಕಾಂಕ್ಷಿಯ ಹೆಸರು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಶನಿವಾರ ನಡೆಸಲಾಗಿದೆ.ಭಾನುವಾರ ಈ ಸಭೆ ಮುಂದುವರಿಯುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಮಂಡಳಿಯ […]

Continue Reading

ಎಪ್ರಿಲ್ 13 ರ ಒಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌.?

ಬಹುನಿರೀಕ್ಷಿತ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಎಪ್ರಿಲ್ 10 ಹಾಗೂ 13ಕ್ಕೆ ಎರಡು ಕಂತಿನಲ್ಲಿ ಪ್ರಕಟಗೊಳ್ಳುವುದು ಈಗ ಬಹುತೇಕ ಅಧಿಕೃತಗೊಂಡಿದೆ.ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಹಾಲಿ ಶಾಸಕರೂ ಸೇರಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳನ್ನು ಹೊಂದಿರುವ ಸಂಭಾವ್ಯರ ಪಟ್ಟಿಯೊಂದಿಗೆ ಬಿಜೆಪಿ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಬುಧವಾರ ತಡರಾತ್ರಿಯೇ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಬಿಜೆಪಿಯ ಹಿರಿಯ ನಾಯಕರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ದಿಲ್ಲಿಗೆ […]

Continue Reading

ಸಿದ್ದರಾಮಯ್ಯ ಬಣದ ಮೇಲುಗೈ,ಡಿಕೆಶಿ ಆಪ್ತರಿಗೆ ಕೈಕೊಟ್ಟ ಹೈಕಮಾಂಡ್‌

ಇಂದು ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಬಹುತೇಕ ಆಪ್ತರಿಗೆ ಟಿಕೆಟ್‌ ಸಿಕ್ಕಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದಿಂದ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ.ಕಿಮ್ಮನೆ ರತ್ನಾಕರ್‌ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.ಅವರು ಸಿದ್ದರಾಮಯ್ಯನವರ ಆಪ್ತರೂ. ಸಿದ್ದರಾಮಯ್ಯರವರ ಶಿಷ್ಯರಾಗಿರುವ ಇಕ್ಬಾಲ್ ಅನ್ಸಾರಿ ಅವರಿಗೆ ಗಂಗಾವತಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಧಾರವಾಡದಿಂದ ವಿನಯ್ ಕುಲಕರ್ಣಿ ಕಣಕ್ಕಿಳಿದಿದ್ದಾರೆ. ಅವರನ್ನು ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾವಿ ಕ್ಷೇತ್ರದಿಂದಲೂ ಕಣಕ್ಕಿಳಿಸುವ ಯೋಚನೆಯಲ್ಲಿ ಕಾಂಗ್ರೆಸ್ […]

Continue Reading

40 ರಿಂದ 45 ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ ಇಂದು 11:00 ಗಂಟೆಗೆ ರಿಲೀಸ್

ಪಕ್ಷದ ವರಿಷ್ಠ ರಾಹುಲ್‌ ಗರಂ, ಗುರುವಾರ ಮಧ್ಯಾಹ್ನ 2.30 ವೇಳೆಗೆ ಮತ್ತೆ ಸಮಿತಿ ಸಭೆ ಕಾಂಗ್ರೆಸ್‌ ಪಕ್ಷದ ಪಾಲಿಗೆ ತಲೆನೋವಾಗಿರುವ ಮುಂಬರುವ ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಕಸರತ್ತು ಅಂತಿಮ ಹಂತಕ್ಕೆ ಬಂದಿದ್ದು,ಗುರುವಾರ ಬೆಳಗ್ಗೆ 11 ಗಂಟೆಗೆ ಸುಮಾರು 40ರಿಂದ 45 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ.ಬುಧವಾರ ಇಡೀ ದಿನದ ಕಸರತ್ತಿನ ನಂತರ ಸುಮಾರು 40ರಿಂದ 45 ಕ್ಷೇತ್ರಗಳಿಗೆ ಒಂಟಿ ಹೆಸರು ಅಂತಿಮಗೊಳಿಸಲಾಯಿತು. ಅಂತಿಮ ಗೊಳಿಸಲಾದ ಪಟ್ಟಿಯನ್ನು ತಡರಾತ್ರಿಯೇ ಬಿಡುಗಡೆ ಮಾಡಲು ಸಕಲ ಸಿದ್ಧತೆ […]

Continue Reading

ದೆಹಲಿ:ಇಂದು 100 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ ಹಂತಕ್ಕೆ.!

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಾಕಿ ಉಳಿಸಿಕೊಂಡಿರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯ ಸಭೆಯು ದಿಲ್ಲಿಯಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನಡೆಯಲಿದೆ.ಸಭೆ ಹಿನ್ನೆಲೆಯಲ್ಲಿ ಸೋಮ ವಾರವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್‌ ಅವರು ದಿಲ್ಲಿ ತಲುಪಿದ್ದು ಟಿಕೆಟ್‌ ಆಕಾಂಕ್ಷಿಗಳ ದಂಡೇ ದಿಲ್ಲಿಗೆ ದೌಡಾಯಿಸಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌ ಈಗ ಬಾಕಿ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ […]

Continue Reading

ವಿಧಾನ ಸಭಾ ಚುನಾವಣಾ ಎಪೆಕ್ಟ್; ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ವಿಳಂಬ

ರಾಜ್ಯ ವಿಧಾನಸಭೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ಚುನಾವಣಾ ಕೆಲಸ ನಿರ್ವಹಿಸುವುದರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಕೊಂಚ ವಿಳಂಬವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕ್ರಮ ಕೈಗೊಂಡಿದೆ. ಅಂದಾಜು 23 ಸಾವಿರ ಮೌಲ್ಯಮಾಪಕರಿಗೆ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗಲು ಆದೇಶ ನೀಡಲಾಗಿದೆ. ಏಪ್ರಿಲ್ 5 ರಿಂದ ಆರಂಭವಾಗಲಿರುವ ಮೌಲ್ಯ ಮಾಪನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಶೇಕಡಾ 30 ರಷ್ಟು ಮೌಲ್ಯಮಾಪಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವುದರಿಂದ […]

Continue Reading

ಹಳ್ಳಿ ಅಭಿಪ್ರಾಯಕ್ಕೆ ಮನ್ನಣೆ, ಸುಮಾರು 200 ಜನರಿಂದ ಅಭಿಪ್ರಾಯ ಸಂಗ್ರಹ,ಎಪ್ರಿಲ್ 6 ಅಥವಾ 7ಕ್ಕೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ.

ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಕರ್ತರಿಂದ ಅಭಿಪ್ರಾಯ ಪಡೆಯುವ ವಿನೂತನ ಪ್ರಯತ್ನವನ್ನು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಜಾರಿಗೆ ತಂದಿದ್ದು, ಎಲ್ಲ ಜಿಲ್ಲೆಗಳಲ್ಲೂ ಶುಕ್ರವಾರ ಈ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಸಲಾಗಿದೆ.ರಾಜ್ಯದ 224 ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಬಿಜೆಪಿ ಈ ಪ್ರಕ್ರಿಯೆ ನಡೆಸಿದ್ದು ಪ್ರತಿ ಕ್ಷೇತ್ರದಿಂದ ಸುಮಾರು 200 ಜನರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇದರ ಆಧಾರದ ಮೇಲೆ ಟಿಕೆಟ್‌ ಹಂಚಿಕೆ ಪ್ರಕ್ರಿಯೆಯನ್ನು ದಿಲ್ಲಿಯಲ್ಲಿ ನಡೆಯುವ ಸಂಸದೀಯ ಮಂಡಳಿ ಸಭೆಯಲ್ಲಿ ನಡೆಸಲಿದ್ದು, […]

Continue Reading

ಕಾಂಗ್ರೇಸ್ ಪಕ್ಷದ 2ನೇ ಪಟ್ಟಿ ದೆಹಲಿಗೆ ರೆಡಿ; ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳ ಬಗ್ಗೆ ಕೇಂದ್ರ ಸಮಿತಿಯದ್ದೇ ಅಂತಿಮ ತೀರ್ಮಾನ

*ಮಂಗಳೂರು ಉತ್ತರ- ಮೊಯ್ದಿನ್ ಬಾವಾ / ಇನಾಯತ್ ಅಲಿ. ಮಂಗಳೂರು ದಕ್ಷಿಣ- ಪದ್ಮರಾಜ್ / ಜೆಆರ್ ಲೋಬೋ * ಕಾಂಗ್ರೆಸ್ ಪಕ್ಷದ 2ನೇ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಅದೇ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಲು ತೀರ್ಮಾನಿಸಲಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿಯು ಈ ಪಟ್ಟಿಯನ್ನು ಪರಾಮರ್ಶಿಸಿ ಅಂತಿಮ ಪಟ್ಟಿಯೊಂದನ್ನು ಬಿಡುಗಡೆ ಮಾಡುತ್ತದೆ. ಇತ್ತೀಚೆಗೆ, ಕಾಂಗ್ರೆಸ್ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಇದೀಗ 100 ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳನ್ನು ಸಿದ್ಧಪಡಿಸಿದೆ ಎಂದು ಹೇಳಲಾಗಿದೆ. ಕೋಲಾರದಿಂದ ಸಿದ್ದರಾಮಯ್ಯನವರ […]

Continue Reading

ಪ್ರೋ ನರೇಂದ್ರ ನಾಯಕರ ಅಂಗರಕ್ಷಕ ರದ್ದು, ಅನಾಹುತಗಳಿಗೆ ಪೊಲೀಸ್ ಇಲಾಖೆ, ಸರಕಾರ ನೇರ ಹೊಣೆ- ಡಿವೈಎಫ್ಐ

ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕರು ಬಲಪಂಥೀಯ ಉಗ್ರಗಾಮಿಗಳ ದಾಳಿಗೊಳಗಾಗುವ ಹಿಟ್ ಲೀಸ್ಟ್ ನಲ್ಲಿ ಇರುವ ಸಲುವಾಗಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ಏಕಾಏಕಿ ರದ್ದುಗೊಳಿಸಿರೋದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಅವರ ಜೀವಕ್ಕೆ ತೊಂದರೆಯಾಗುವಂತಹ ಅನಾಹುತಗಳಿಗೆ ಪೊಲೀಸ್ ಇಲಾಖೆ, ಸರಕಾರವೇ ನೇರ ಹೊಣೆ ಎಂದು ಆರೋಪಿಸಿದೆ. ಖ್ಯಾತ ವಿಚಾರವಾದಿ ಪ್ರೋ […]

Continue Reading