ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ, ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯ, ತೆರೆಮರೆಯಲ್ಲಿ ಲಾಬಿ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯರಾಗಿದ್ದು, ತೆರೆಮರೆಯಲ್ಲಿ ಲಾಬಿ ಚಟುವಟಿಕೆಗಳು ಗರಿಗೆದರಿವೆ. ಒಂದು ಕಡೆ ಹಾಲಿ ಸಚಿವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವ ತವಕವಾದರೆ, ಮತ್ತೊಂದೆಡೆ ಸಚಿವ ಸ್ಥಾನ ವಂಚಿತ ಶಾಸಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆಯ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ್ದರು. ಇದುವರೆಗೂ ಸೈಲೆಂಟ್ ಆಗಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಈ ಹೇಳಿಕೆ […]

Continue Reading

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಯಶಸ್ವಿನಿ ಕಾರ್ಡ್ ದಾರರು ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ

ಕರ್ನಾಟಕದ ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABARK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳು […]

Continue Reading

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಅವರನ್ನು ಸಿನಿಮೀಯ ರೀತಿಯಲ್ಲಿ ಕಾರು ಡಿಕ್ಕಿ ಹೊಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಗಂಗಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆ ಬಳಿ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಈ […]

Continue Reading

ಸಿಸಿ, ಒಸಿ ಇಲ್ಲದ ಕಟ್ಟಡ ಮಾಲಕರು ಕತ್ತಲಲ್ಲಿ.! ಸುಪ್ರೀಂಕೋರ್ಟ್‌ನ ಆದೇಶವು ಸರ್ಕಾರದ ಕೈಕಟ್ಟಿ ಹಾಕಿದೆ

ಸ್ವಾಧೀನಾನುಭವ ಪತ್ರ ಮತ್ತು ಕಟ್ಟಡ ಪ್ರಾರಂಭಿಕ ಪ್ರಮಾಣಪತ್ರ ಇಲ್ಲದೆ 1,200 ಚದರ ಅಡಿ ಮತ್ತು ಅದಕ್ಕಿಂತ ಮೇಲ್ಪಟ್ಟು ನಿರ್ಮಿಸಿರುವ 4.30 ಲಕ್ಷಕ್ಕೂ ಹೆಚ್ಚಿನ ಮನೆ ಮಾಲೀಕರು ವಿದ್ಯುತ್ ಸೌಲಭ್ಯ ಸಿಗದೆ ಕತ್ತಲಲ್ಲೇ ಬದುಕು ಸವೆಸುವ ಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ, ನೀರಿನ ಸೌಲಭ್ಯವೂ ಇಲ್ಲದೆ ಪರದಾಡುವಂತಹ ಪರಿಸ್ಥಿತಿ ತಲೆದೋರಿದೆ. ಈ ನಡುವೆ, ಸರ್ಕಾರವು ಕಾನೂನು ಕಟ್ಟಳೆ ಮೀರದೆ ಸಿಸಿ, ಒಸಿ ಇಲ್ಲದ ಮನೆಗಳಿಗೆ ಯಾವ ರೀತಿಯಲ್ಲಿ ಮೂಲಸೌಲಭ್ಯ ಕಲ್ಪಿಸಬೇಕೆಂಬ ಇಕ್ಕಟ್ಟಿಗೆ ಸಿಲುಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಅಧಿಕಾರಿಗಳ […]

Continue Reading

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾವು ಹಿನ್ನೆಲೆ; ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್, ಎಲ್ಲಾ ಬ್ರ್ಯಾಂಡ್ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಸಂಗ್ರಹ

ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾವು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಎಲ್ಲಾ ಬ್ರ್ಯಾಂಡ್ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಸಂಗ್ರಹಕ್ಕೆ ಮುಂದಾಗಿದೆ. ಔಷಧ ನಿಯಂತ್ರಣ ಹಾಗೂ ಸರಬರಾಜು ಇಲಾಖೆ ಕಾಫ್ ಸಿರಪ್ ಗಳ ಟೆಸ್ಟ್ ಮಾಡಲು ಮುಂದಾಗಿದ್ದು, ರಾಜ್ಯದ ಎಲ್ಲೆಡೆ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಪಡೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಕೆಮ್ಮಿನ ಸಿರಪ್‌ಗಳಿಂದಾಗಿ ಹೊರ ರಾಜ್ಯಗಳ 12 ಮಕ್ಕಳು ಸಾವನ್ನಪ್ಪಿದ ನಂತರ, ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ರಾಜ್ಯ […]

Continue Reading

ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವರ್ಷಾರಂಭದ ಬಳಿಕ ಚುನಾವಣೆ ಯೋಗ.!

ಜಿ.ಪಂ, ತಾ.ಪಂಗಳಿಗೆ ಜನಪ್ರತಿನಿಧಿಗಳೇ ಇಲ್ಲದೆ ಕಳೆದ ಒಂದು ಅವಧಿ ರಾಜ್ಯದ ಬಹುತೇಕ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ವರ್ಷಾರಂಭದ ಬಳಿಕ ಚುನಾವಣೆ ಯೋಗ ಕೂಡಿಬರುವ ಭರವಸೆ ಮೂಡಿದೆ. ಮುಂದಿನ ವರ್ಷ ಸ್ಥಳೀಯ ಚುನಾವಣೆ ಹಬ್ಬದ ನಿರೀಕ್ಷೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳು, 185 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಸರಣಿಯಾಗಿ ಚುನಾವಣೆ ಪರ್ವ ಆರಂಭವಾಗುವ ಸಾಧ್ಯತೆಗಳು ದಟ್ಟವಾಗಿವೆ. ಸಕಾಲಕ್ಕೆ ಚುನಾವಣೆ ನಡೆಸಬೇಕಾದ ಸಂವಿಧಾನಿಕ ಹೊಣೆಗಾರಿಕೆ ನಡುವೆಯೂ ನಾನಾ ನೆಪ, […]

Continue Reading

ನಕಲಿ ವೈದ್ಯನ ಯಡವಟ್ಟು, ಹೈ ಡೋಸ್ ಇಂಜೆಕ್ಷನ್ ನೀಡಿದ ಪರಿಣಾಮ ಎಂಟು ವರ್ಷದ ಬಾಲಕಿ ಸಾವು, ವೈದ್ಯ ನಾಪತ್ತೆ.

ನಕಲಿ ವೈದ್ಯರ ದಂಧೆ ಮತ್ತು ಅವರ ಅವೈಜ್ಞಾನಿಕ ಚಿಕಿತ್ಸೆಗಳು ಗ್ರಾಮೀಣ ಪ್ರದೇಶದ ಅಮಾಯಕ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವುದಕ್ಕೆ ಮತ್ತೊಂದು ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ. ಮಾಲೂರಿನಲ್ಲಿರುವ ನಕಲಿ ಕ್ಲಿನಿಕ್‌ನ ವೈದ್ಯನ ಯಡವಟ್ಟಿನಿಂದಾಗಿ 8 ವರ್ಷದ ಬಾಲಕಿ ತೀವ್ರವಾಗಿ ನರಳಾಡಿ ಮೃತಪಟ್ಟಿದ್ದಾಳೆ. ಈ ಘಟನೆ ಸಂಬಂಧ ಆಕ್ರೋಶಗೊಂಡಿರುವ ಪೋಷಕರು ನಕಲಿ ವೈದ್ಯನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಲೂರು ತಾಲೂಕಿನ ದೊಡ್ಡ ಇಗಲೂರು ಗ್ರಾಮದ ನಿವಾಸಿಗಳಾದ ತಾನವಿ (8) ಎಂಬ ಬಾಲಕಿಯೇ ದುರ್ಘಟನೆಯಲ್ಲಿ ಮೃತಪಟ್ಟ […]

Continue Reading

ಅಪ್ರಾಪ್ತೆಯೊಂದಿಗಿನ ಲೈಂಗಿಕ ಸುಖಕ್ಕೆ ಲಕ್ಷ, ಲಕ್ಷ ಡಿಮ್ಯಾಂಡ್. ಪೊಲೀಸರ ಗುಪ್ತ ಕಾರ್ಯಾಚರಣೆ, ವೇಶ್ಯಾವಾಟಿಕೆಗೆ ತಳ್ಳುವ ಗ್ಯಾಂಗ್ ಅಂದರ್

ರಾಜ್ಯವೇ ಬೆಚ್ಚಿ ಬೀಳಿಸುವ ಹೀನಾತಿ ಕೃತ್ಯ. ಅಪ್ರಾಪ್ತೆಯೊಂದಿಗಿನ ಲೈಂಗಿಕ ಸುಖಕ್ಕೆ ಇಪ್ಪತ್ತು ಲಕ್ಷಕ್ಕೆ ಡಿಮ್ಯಾಂಡ್. ಇಡೀ ಪ್ರಕರಣವನ್ನು ಬೇಧಿಸುವಲ್ಲಿ ಮೈಸೂರಿನ ವಿಜಯನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು ಗುಪ್ತ ಕಾರ್ಯಾಚರಣೆ ನಡೆಸಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದಂತ ಪಿಂಪ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮಹಿಳೆ ಮತ್ತು ಪುರುಷರೊಬ್ಬರನ್ನು ಘಟನೆ ಸಂಬಂಧ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ಶೋಭಾ, ತುಳಸಿಕುಮಾರ್ ಎಂಬವರನ್ನು ಬಂಧಿಸಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಆಧರಿಸಿ ಮೈಸೂರಿನ ವಿಜಯನಗರ ಠಾಣೆಯ […]

Continue Reading

ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ, ಸಿದ್ದು ಸಂಪುಟಕ್ಕೆ ಇವರೆಲ್ಲ ಸೇರಲಿದ್ದಾರೆ.

ಬಿಜೆಪಿ-ಆರೆಸ್ಸೆಸ್ ನಲ್ಲಿ ಹೊಸ ಕೂಗು ✍️. ಅರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ.ದಿಲ್ಲಿಯಿಂದ ಬರುತ್ತಿರುವ ವರ್ತಮಾನಗಳ ಪ್ರಕಾರ ಸಂಪುಟದಲ್ಲಿರುವ ಹದಿನೈದಕ್ಕೂ ಹೆಚ್ಚು ಮಂತ್ರಿಗಳು ಪಕ್ಷದ ಕೆಲಸಕ್ಕೆ ನಿಯೋಜಿತರಾಗಿ,ಅಷ್ಟೇ ಮಂದಿ ಶಾಸಕರು ಮಂತ್ರಿಗಳಾಗಲಿದ್ದಾರೆ.ಅಂದ ಹಾಗೆ ಇದುವರೆಗೆ ಮಂತ್ರಿ ಮಂಡಲ ಪುನರ್ರಚನೆಯ ವಿಷಯವನ್ನು ಅಧಿಕಾರ ಹಂಚಿಕೆಗೆ ತಳುಕು ಹಾಕಲಾಗುತ್ತಿತ್ತು. ಅರ್ಥಾತ್, ಎರಡೂವರೆ ವರ್ಷ ಕಳೆದ ನಂತರ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ.ಅವರ ಜಾಗಕ್ಕೆ ಬೇರೆಯವರು ಬಂದ ಕಾಲಕ್ಕೆ ಸಂಪುಟ ಪುನರ್ರಚನೆ ಕಾರ್ಯ ನಡೆಯಲಿದೆ ಎಂಬ‌ ಮಾತು […]

Continue Reading

‘ಮಾರ್ವಾಡಿ’ ಗೂಂಡಾಗಿರಿ.!

ಸ್ಥಳೀಯ ನಾಗರೀಕರ ಮೇಲೆಯೇ ರೋಷಾ ವೇಷ, ಗೂಂಡಾಗಿರಿ ತೋರ್ಪಡಿಸುವ ಮಾರ್ವಾಡಿಗಳ ದಬ್ಬಾಳಿಕೆಗೆ ಮುಕ್ತಿ ಯಾವಾಗ.? ಇಲ್ಲಿನ ನೆಲ, ಜಲ ಉಪಯೋಗಿಸಿ ಇಲ್ಲಿಯೇ ವ್ಯವಹಾರ ಮಾಡಿ ಇಲ್ಲಿನ ನಾಗರಿಕರ ಮೇಲೆ ದಬ್ಬಾಳಿಕೆ ನಡೆಸುತ್ತಾ ಗೂಂಡಾಗಿರಿ ಪ್ರದರ್ಶಿಸುವ ಮಾರ್ವಾಡಿಗಳ ಆಟಾಟೋಪ ಜಾಸ್ತಿಯಾಗಿದೆ. ಗುಜರಾತ್, ಉತ್ತರ ಭಾರತ ಮೊದಲಾದ ಕಡೆಯಿಂದ ವ್ಯವಹಾರಕ್ಕೆ ಬಂದು ಇಲ್ಲಿಯೇ ಸೆಟ್ಲ್ ಆಗಿ ಸ್ಥಳೀಯ ನಾಗರೀಕರ ಮೇಲೆಯೇ ರೋಷಾ ವೇಷ ತೋರ್ಪಡಿಸುವ ಮಾರ್ವಾಡಿಗಳ ದಬ್ಬಾಳಿಕೆಗೆ ಮುಕ್ತಿ ಯಾವಾಗ.? ಬೆಂಗಳೂರು, ಮಂಗಳೂರು ನಂತಹ ಮಹಾನಗರಗಳಲ್ಲಿ ವ್ಯಾಪಾರದಲ್ಲಿ ಮಾರ್ವಾಡಿಗಳದ್ದೇ ರಾಜ […]

Continue Reading