ಬೊಮ್ಮಾಯಿ, ನಿರಾಣಿ ರೇಸಿನಲ್ಲಿ ಕಾಣಿಸಿಕೊಂಡರು; ಅಮಿತ್ ಷಾ ಅವರಿಗೆ ಕಿರಿಕಿರಿ

ಯಡಿಯೂರಪ್ಪ ಹೊಸ ಅಸ್ತ್ರ.? ಸಿದ್ಧುಗೆ ದಿಲ್ಲಿ ಟಾನಿಕ್ ✍️. ಆರ್.ಟಿ. ವಿಠ್ಠಲಮೂರ್ತಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಇದ್ದಕ್ಕಿದ್ದಂತೆ ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿಯವರ ಹೆಸರುಗಳು ಕಾಣಿಸಿಕೊಂಡಿವೆ. ಮೊನ್ನೆ ಮೊನ್ನೆಯ ತನಕ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಅಲುಗಾಡಿಸುವುದು ಕಷ್ಟ ಎಂಬ ಮಾತಿತ್ತಾದರೂ ಇದೀಗ ಇದ್ದಕ್ಕಿದ್ದಂತೆ ಆಟ ಬದಲಾಗುವ ಸೂಚನೆಗಳು ಕಾಣಿಸಿಕೊಂಡಿವೆ.ಬಿಜೆಪಿಯ ಮೂಲಗಳ ಪ್ರಕಾರ, ವಿಜಯೇಂದ್ರ ಅವರನ್ನೇ ಪಕ್ಷಾಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಯಡಿಯೂರಪ್ಪ ಅವರಿಗೆ ಭರವಸೆ ನೀಡಿದ್ದರು. […]

Continue Reading

ಮತ್ತೆ ಭೀಮಾ ತೀರದಲ್ಲಿ ಮಚ್ಚಿನ ಸದ್ದು; ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಬಾಗಪ್ಪ ಹರಿಜನ ಭೀಕರ ಹತ್ಯೆ

ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ. ವಿಜಯಪುರದ ಮದಿನಾ […]

Continue Reading

ಸಚಿವ ಮಾಂಕಾಳ ವೈದ್ಯ ಗುಂಡೇಟು ಹೇಳಿಕೆ: ಪಿಯುಸಿಎಲ್ ಕರ್ನಾಟಕ ಖಂಡನೆ.

ಬೆಂಗಳೂರು: ಇತ್ತೀಚೆಗೆ ಘಟಣೆಯೊಂದಕ್ಕೆ ಸಂಬಂಧಿಸಿ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವ ಮಾಂಕಾಳ ವೈದ್ಯ ಅವರು ಗೋಹತ್ಯೆಗಾರರನ್ನು ಗುಂಡಿಟ್ಟು ಕೊಳ್ಳಬೇಕು ಎಂಬಿತ್ಯಾದಿಯಾಗಿ ಸಂಭೋಧಿಸಿರುವ ಹೇಳಿಕೆಗೆ ಕರ್ನಾಟಕ ಪೀಪಲ್ಸ್ ಯುನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಘಟನೆಯು ಖಂಡನೆ ವ್ಯಕ್ತ ಪಡಿಸಿದೆ. ಮಾಂಕಾಳ ವೈದ್ಯ ಅವರು ತನ್ನ ಸಾಂವಿಧಾನಿಕ ಭದ್ಧತೆನ್ನು ಮುರಿದಿದ್ದು, ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ತಾನು ಓರ್ವ ಜನಪ್ರತಿನಿಧಿ ಎಂಬುದನ್ನು ಮರೆತು ಸ್ವ ಇಚ್ಛೆ ಹೇಳಿಕೆ ನೀಡಿರುವುದು ಖಂಡನೀಯ ಎಂದು ಪಿಯುಸಿಎಲ್ ಹೇಳಿದೆ. ಮಾಂಕಾಳ ರವರ […]

Continue Reading

ಮಂಗಳದ ಪ್ರಸಿದ್ಧ ನಾಟಿ ವೈದ್ಯ, ಜನಪದ ವೈದ್ಯರತ್ನ, ಎಂ. ಬಿ ಶಿವಣ್ಣಗೌಡ ಗುರುವಾರದಂದು ವಿಧಿವಶರಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಮಂಗಳ ಗ್ರಾಮದ ಪ್ರಸಿದ್ಧ ನಾಟಿ ವೈದ್ಯ ಎಂ.ಬಿ ಶಿವಣ್ಣಗೌಡ ನಿಧನರಾಗಿದ್ದಾರೆ. ಜನಪದ ವೈದ್ಯರತ್ನ, ನಾಟಿ ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಎಂ.ಬಿ.ಶಿವಣ್ಣಗೌಡ ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಣ್ಣಗೌಡ ಗುರುವಾರ ಮುಂಜಾನೆ 4.45ಕ್ಕೆ ದೈವಾಧೀನರಾಗಿದ್ದಾರೆ. ಕಳೆದ ನಾಲ್ಕೈದು ದಶಕಗಳಿಂದ ಪಾರಂಪರಿಕ ನಾಟಿ ವೈದ್ಯ ವೃತ್ತಿಯಲ್ಲಿ ಯಾವುದೇ ಪ್ರಚಾರವಿಲ್ಲದೇ ಯಶಸ್ಸು ಕಂಡಿದ್ದರು. ಜನಪದ ವೈದ್ಯರತ್ನ ಎಂದೇ ಖ್ಯಾತಿ,ದೇಶ, ವಿದೇಶಗಳಿಂದ ಔಷಧಿಗಾಗಿ ಜನ ಇವರ […]

Continue Reading

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ CRF ದೂರು.. ರಾಜೀವ್ ಗಾಂಧಿ ವಿವಿ ಚುನಾವಣಾ ಅಕ್ರಮ ಬಗ್ಗೆ ಸಿಬಿಐ ತನಿಖೆಗೆ ಆಗ್ರಹಿಸಿ CRF ದೂರು. ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ CRF ದೂರು.. ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ […]

Continue Reading

ಕರ್ನಾಟಕದಲ್ಲಿ ದ್ವೇಷ ಭಾಷಣಕ್ಕೆ ಬೀಳುತ್ತಾ ಬ್ರೇಕ್.? ಹೊಸ ಕಾನೂನು ತರಲು ಸರಕಾರದಿಂದ ಸಿದ್ದತೆ.

ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡಿದರೆ ಜೈಲು ಶಿಕ್ಷೆ ಗ್ಯಾರಂಟಿ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದು ಬಿಲ್ ಕರಡಿನಲ್ಲಿದ್ದು, ವಿಧಾನಸಭೆಯಲ್ಲಿ ಮಂಡನೆಯಾಗಿ […]

Continue Reading

ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಆಲೋಚಿಸಿ. ‘ಒನ್ ಮಿನಿಟ್ ಅಪಾಲಜಿ’ ಕೃತಿ ಇದೆ ಅದನ್ನು ಓದಿ; ನ್ಯಾಯಾಧೀಶರ ಸಲಹೆ.

ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಕಾನೂನು ಹೋರಾಟದಲ್ಲಿರುವ ಐಎಎಸ್- ಐಪಿಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ.ರೂಪಾ ಮೌದ್ಗೀಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಹಾಗೂ ‘ಒನ್ ಮಿನಿಟ್ ಅಪಾಲಜಿ’ ಎಂಬ ಇಂಗ್ಲಿಷ್ ಕೃತಿಯನ್ನು ಓದುವಂತೆ ಇಬ್ಬರಿಗೂ ನಗರದ 5ನೇ ಎಸಿಎಂಎಂ ನ್ಯಾಯಾಲಯ ಸಲಹೆ ನೀಡಿದೆ. ರೂಪಾ ಅವರು 2023ರ ಫೆ.18 ಮತ್ತು 19ರಂದು ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯ ಪೋಸ್ಟ್ ಪ್ರಕಟಿಸಿ ತೇಜೋವಧೆ ಮಾಡಿದ್ದಾರೆ. ಅವರಿಂದ ಒಂದು ಕೋಟಿ ರುಾಪಾಯಿ […]

Continue Reading

ಬಿಜೆಪಿಯ ಬಣ ಗುದ್ದಾಟ ತಾರ್ಕಿಕ ಅಂತ್ಯಕ್ಕೆ.! ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ; ಯತ್ನಾಳ್‌ ಎಚ್ಚರಿಕೆ

ಬಿಜೆಪಿಯ ಬಣ ಗುದ್ದಾಟ ತಾರ್ಕಿಕ ಅಂತ್ಯಕ್ಕೆ ತಲುಪಿದ್ದು, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ ಎಂದು ಭಿನ್ನರ ಬಣದ ಹೀರೋ, ಬಸನಗೌಡ ಪಾಟೀಲ್‌ ಯತ್ನಾಳ್‌ ವರಿಷ್ಠರಿಗೆ ಎಚ್ಚರಿಕೆ ನೀಡಿದ್ದಾರೆ. ಹೈಕಮಾಂಡ್ ನಮ್ಮ ತಂಡದ ಭೇಟಿಗೆ ಸಮಯಾವಕಾಶ ನೀಡಿದ್ದಾರೆ. ನಮ್ಮ ತಂಡದ ಇತರರೆಲ್ಲರೂ ಒಬ್ಬೊಬ್ಬ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ತಂಡದಿಂದ ಅಭ್ಯರ್ಥಿ ಯಾರು ಆಗಬೇಕು ಎಂಬುದನ್ನು ಸಮಾಲೋಚಿಸಲಾಗುತ್ತಿದೆ. ವರಿಷ್ಠರು ಇಂತಹ ವರ್ಗದವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಎಂದರೆ ಅಂತಹ ವರ್ಗದವರನ್ನೇ […]

Continue Reading

ಅಮಿತ್ ಷಾ ಆಟ ಬಲ್ಲವರಾರು.?ಯತ್ನಾಳ್ ಬಣಕ್ಕೂ ಹಲ್ವಾ.

ಪರ್ಯಾಯಕ್ಕೆ ಖರ್ಗೆ ರೆಡಿ.? ಖರ್ಗೆಯ ಕೊರಗು ಯಾತಕ್ಕೆ.! ಫೋರ್ ಮ್ಯಾನ್ ಆರ್ಮಿಯ ಅಜೆಂಡಾ ಏನು.? ✍️. ಆರ್.ಟಿ.ವಿಠ್ಠಲಮೂರ್ತಿ ವಿಧಾನಸೌಧದ ಮೂರನೇ ಅಂತಸ್ತಿನಲ್ಲಿರುವ ಗೃಹ ಸಚಿವ ಡಾ. ಪರಮೇಶ್ವರ್ ಅವರ ಕೊಠಡಿಯಲ್ಲಿ ಮೊನ್ನೆ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ಮಾತನಾಡಿದ ಸಚಿವರ ಪಡೆ ಒಂದು ನಿರ್ಣಾಯಕ ಹೆಜ್ಜೆ ಇಡಲು ತೀರ್ಮಾನಿಸಿದೆ. ಮುಂದಿನ ದಿನಗಳಲ್ಲಿ ಉದ್ಭವವಾಗುವ ರಾಜಕೀಯ ಸನ್ನಿವೇಶವನ್ನು ಎದುರಿಸಲು ನಾವು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಬೇಕು ಎಂಬುದು ಈ ತೀರ್ಮಾನ. ಅರ್ಥಾತ್, ಮುಂದಿನ ಕೆಲವೇ ದಿನಗಳಲ್ಲಿ ಅಹಿಂದ […]

Continue Reading

ಹತ್ತು ಲಕ್ಷ ರೂಪಾಯಿಗೆ ಗಂಡನ ಕಿಡ್ನಿ ಮಾರಿಸಿ, ಪ್ರಿಯಕರನ ಜೊತೆ ಪರಾರಿಯಾದ ಚಾಲಾಕಿ ಮಹಿಳೆ.!

ಮಗಳ ವಿದ್ಯಾಭ್ಯಾಸಕ್ಕೆ ಹಣ ಸಾಕಾಗುತ್ತಿಲ್ಲ… ನಿನ್ನ ಕಿಡ್ನಿ ಮಾರು ಎಂದು ಒತ್ತಾಯಿಸುತ್ತಿದ್ದ ಮಹಿಳೆಯೊಬ್ಬಳು ಕಿಡ್ನಿ ಮಾರಿದ ಹಣ ಕೈಗೆ ಬರುತ್ತಲೇ ತನ್ನ ಪ್ರಿಯಕರನ ಜೊತೆ ರಾತ್ರೋರಾತ್ರಿ ಪರಾರಿಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಾನ್‌ಕ್ರಿಲ್‌ನಲ್ಲಿ ಈ ಘಟನೆ ನಡೆದಿದ್ದು, ಬರೋಬ್ಬರಿ 10 ಲಕ್ಷ ರೂಪಾಯಿಗೆ ಕಿಡ್ನಿ ಮಾರಿದ ಪತಿ ಈಗ ತನ್ನ ಪತ್ನಿಯ ಕುಕೃತ್ಯದ ವಿರುದ್ಧ ಮನನೊಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಸಂತ್ರಸ್ತ ವ್ಯಕ್ತಿ ವೃತ್ತಿಯಲ್ಲಿ ಪೈಂಟರ್ ಆಗಿ ಕೆಲಸ […]

Continue Reading