ಬ್ಯಾಂಕ್‌ಗಳು ರೈತರಿಗೆ ಹೆಚ್ಚು ಬೆಳೆ ಸಾಲವನ್ನು ಮಂಜೂರು ಮಾಡಬೇಕು; ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್‌ ಮಹತ್ವದ ಸೂಚನೆ

ಬ್ಯಾಂಕ್‌ಗಳು ಎಲ್ಲಾ ಅರ್ಹ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಹೆಚ್ಚು ಬೆಳೆ ಸಾಲವನ್ನು ಮಂಜೂರು ಮಾಡಬೇಕು ಎಂದು ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಡಾ| ಶಾಲಿನಿ ರಜನೀಶ್‌ ಮಹತ್ವದ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿಯ (ಎಸ್‌ಎಲ್‌ಬಿಸಿ) 166ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರಿಗೆ ಹೆಚ್ಚು ಸಾಲ ನೀಡುವತ್ತ ಬ್ಯಾಂಕ್ಗಳು ಗಮನ ಹರಿಸುವಂತೆ ಸೂಚಿಸಿದರು. ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮಾ […]

Continue Reading

ದೋಸ್ತಿ ಪಕ್ಷ ಜೆಡಿಎಸ್ ನೊಂದಿಗೆ ಮುನಿಸುಕೊಂಡ ಪದಾಧಿಕಾರಿಗಳಿಗೆ ಗೇಟ್ ಪಾಸ್

ರೆಬೆಲ್ ಗಳೊಂದಿಗೆ ಮಾತುಕತೆಗೆ ಮುಂದಾದ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಗೆ ಸಂಘಟನಾತ್ಮಕವಾಗಿ ಸಣ್ಣ ಪ್ರಮಾಣದ ಸರ್ಜರಿ ಮಾಡಲು ಹೈಕಮಾಂಡ್ ಮುಂದಾಗಿದೆ. ರಾಜ್ಯ ಪದಾಧಿಕಾರಿಗಳಲ್ಲಿ ಕೆಲವರಿಗೆ ಕೊಕ್ ನೀಡಿ ಹೊಸ ಮುಖವನ್ನು ತರಲು ನಿರ್ಧರಿಸಿದೆ. ನಾನಾ ಕಾರಣಗಳಿಂದ ರಾಜ್ಯ ಬಿಜೆಪಿಯ ಸಂಘಟನೆ ದಡ ಹತ್ತುತ್ತಿಲ್ಲ. ಆಂತರಿಕ ಸಂಘರ್ಷ ಒಂದೆಡೆಯಾದರೆ, ಮಿತ್ರ ಪಕ್ಷ ಜೆಡಿಎಸ್ ನ ಮನಸ್ಥಿತಿಗೆ ಪೂರಕವಾಗಿಯೂ ಹೆಜ್ಜೆ ಇಡಬೇಕಾಗಿದೆ. ಈ ದೃಷ್ಟಿಯಿಂದ ಕೆಲ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎನ್ನಲಾಗುತ್ತಿದೆ. ಇಬ್ಬರು ಪ್ರಧಾನಕಾರ್ಯದರ್ಶಿಗಳಿಗೆ ಗೇಟ್ ಪಾಸ್ ರಾಜ್ಯ ಬಿಜೆಪಿಯ […]

Continue Reading

ಡೆಕಾಯ್ ಅಪರೇಷನ್ ಮೂಲಕ ಕಾರ್ಯಾಚರಣೆ; ನಾಗಮಂಗಲದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುವ ಜಾಲ ಪತ್ತೆ.

ಬೆಂಗಳೂರು, ತುಮಕೂರು, ಮಂಡ್ಯ, ಮೈಸೂರು ಕಡೆಗಳಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುವ ಜಾಲವನ್ನು ಕಳೆದ ಆರೇಳು ತಿಂಗಳ ಹಿಂದೆ ಬೇಧಿಸಲಾಗಿತ್ತು. ಇದೀಗ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುವ ಜಾಲ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿಂದ ಪ್ಲಾನ್ ಮಾಡಿ, ಭ್ರೂಣ ಪತ್ತೆ ಮಾಡಿಸಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ಮೂಲಕ ಭ್ರೂಣ ಪತ್ತೆ ಪ್ರಕರಣದ ಮೇಲೆ ದಾಳಿ ಮಾಡಿ, ಮಾಹಿತಿ ಸಿಕ್ಕ ಬೆನ್ನಲ್ಲೆ […]

Continue Reading

ಮೂಡಬಿದಿರೆ: ಸಿಂಗಂ ಸಂದೇಶ್ ಅವರಿಗೆ ಮುಖ್ಯಮಂತ್ರಿ ಪದಕ ಗೌರವ

ಮೂಡಬಿದಿರೆಯ ಸಿಂಗಂ ಎಂದೇ ಪ್ರಖ್ಯಾತಿ ಪಡೆದಿರುವ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಕರ್ತವ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂಬ ಖ್ಯಾತಿಗೆ ಪಾತ್ರರಾಗಿದ್ದು, ಡೇರಿಂಗ್ ಇಮೇಜಿನಿಂದ ಸಾರ್ವಜನಿಕ ವಲಯದಲ್ಲಿ ಅಪಾರ ಪ್ರಸಿದ್ಧಿ ಪಡೆದಿದ್ದಾರೆ. ಇವರ ಸೇವೆ ಗುರುತಿಸಿ ಕರ್ನಾಟಕ ಸರಕಾರ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು, ಈ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ […]

Continue Reading

ಬೆಂಗಳೂರಿನ ಕಲಾವಿಧರ ಸಂಘದ ನಾಗಸಾನ್ನಿಧ್ಯವಿಲ್ಲದ ಹಾಲ್ ನಲ್ಲಿ ನಾಗದರ್ಶನ ನೀಡಿದ್ದು ಕರಾವಳಿಯ ನಾಗಾರಾಧನೆಗೆ ಮಾಡಿದ ಅವಮಾನವಲ್ಲವೇ.?

ನಾಗಪಾತ್ರಿ ಮತ್ತು ಅದನ್ನು ಮಾಡಿಸಿದ ಜೋತಿಷಿ ಕ್ಷಮೆ ಕೇಳಬೇಕಲ್ಲವೇ.? ✍️. ನವೀನ್ ಸೂರಿಂಜೆ, ಪತ್ರಕರ್ತರು ‘ನೀವು ಯಾವ ಕೇಸ್ ?’ ಎಂದು ನಾನಿದ್ದ ಜೈಲಿನ ವಾರ್ಡ್ ನಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರನ್ನು ಕೇಳಿದ್ದೆ, ಆತ ‘ನಾಗಪಾತ್ರಿ ರಾಬರಿ ಕೇಸ್’ ಎಂದಿದ್ದ !. ಇದೊಂದು ಅಪರೂಪದ ಕೇಸ್ ಎಂದುಕೊಂಡು ಆತನ ಎದುರು ಚಕ್ಕಳಮಕ್ಕಳ ಹಾಕಿ ದರೋಡೆ ಕತೆ ಕೇಳಲು ಕೂತಿದ್ದೆ. – ನವೀನ್ ಸೂರಿಂಜೆ ಕರಾವಳಿಯಲ್ಲಿ ಬೆರಳೆಣಿಕೆಯ ನಾಗಪಾತ್ರಿ ಬ್ರಾಹ್ಮಣ ಕುಟುಂಬಗಳಿವೆ. ಒಬ್ಬರು ನಾಗಪಾತ್ರಿಯಾದರೆ ಇನ್ನೊಬ್ಬರು ವೈದ್ಯರಾಗಿ ಕಾರ್ಯನಿರ್ವಹಿಸುತ್ತಾರೆ. ಈಗ […]

Continue Reading

ಮಂಗಳೂರು ಕಮೀಷನರ್ ಆಗಿದ್ದ ಚಂದ್ರಶೇಖರ್​ ಎಂ. ಐಪಿಎಸ್ (ಎಡಿಜಿಪಿ, ಐಎಸ್​ಡಿ, ಬೆಂಗಳೂರು) ರವರಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ

ಪೊಲೀಸ್​ ಇಲಾಖೆಯಲ್ಲಿ ಉತ್ತಮ ಸೇವೆಗೈದ ಪೊಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯೋತ್ಸವದ ನಿಮಿತ್ತ ಪ್ರತಿವರ್ಷ ನೀಡಲಾಗುವ ವಿವಿಧ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 1,037 ಸೇವಾ ಪದಕವನ್ನು ಕೇಂದ್ರ ಮತ್ತು ರಾಜ್ಯ ಪೊಲೀಸ್​ ಸಿಬ್ಬಂದಿಗೆ ಘೋಷಣೆ ಮಾಡಲಾಗಿದ್ದು, ಇದರಲ್ಲಿ 208 ಪೊಲೀಸ್​ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದರೆ.ಕರ್ನಾಟಕದ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಐಪಿಎಸ್​ […]

Continue Reading

ಯುವ ವಕೀಲನ ಸಾವು ಅಪಘಾತದಿಂದ ಆದ ಸಾವಲ್ಲ; ಹಳೆಯ ಧ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಪ್ಲಾನಿಂಗ್ ಮರ್ಡರ್

ಆ.8 ರಂದು ವಿಜಯಪುರದಲ್ಲಿ ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ ಸಾವಲ್ಲ, ಹಳೆಯ ಧ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಪ್ಲಾನಿಂಗ್ ಮರ್ಡರ್ ಎಂಬುದು ಪೊಲೀಸರ ತನಿಖೆಯಲ್ಲಿ ಸಾಬೀತಾಗಿದೆ. ಇದಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುತ್ತಾರೆ. ತಲೆ ಮರೆಸಿಕೊಂಡಿರುವ ಇತರರ ಬಂಧನಕ್ಕೆ ತಂಡ ರಚಿಸಿ ತನಿಖೆ ನಡೆಸುತ್ತಿದ್ದಾರೆ. ವಿಜಯಪುರ ನಗರದಲ್ಲಿ ಆ.8 ರಂದು ಸಂಜೆ 5-30 ರ ಸುಮಾರಿಗೆ ನಡೆದಿದ್ದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿ ಸಿಲುಕಿ ಸುಮಾರು ಎರಡೂವರೆ ಕಿ.ಮೀ. ದೂರಕ್ಕೆ ಎಳೆದೊಯ್ದ ಘಟನೆಯಲ್ಲಿ ನಗರದ […]

Continue Reading

ಪಾದಯಾತ್ರೆ ಫ್ಲಾಪ್ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ; ವಿಜಯೇಂದ್ರ ವಿರುದ್ಧ ಗುಡುಗು.. ರೆಸಾರ್ಟ್ ನಲ್ಲಿ ರಹಸ್ಯ ಮೀಟಿಂಗ್.!

ಬಿ.ಕೆ, ಡಿ.ಕೆ ಜೊತೆಯಾಗಿ ನಿಂತು ಕಾಂಗ್ರೆಸ್ ಒಗ್ಗಟ್ಟಿನ ಪ್ರದರ್ಶನ ತೋರಿಸುತ್ತಿದ್ದರೆ, ಇತ್ತ ಬಿಜೆಪಿ ಪಕ್ಷದಲ್ಲೇ ಬಂಡಾಯದ ಕಾವು ಏರುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುತ್ತಾ ಮುಡಾ ಹಗರಣ ಸುತ್ತುತ್ತಿದ್ದಂತೆ ಉತ್ಸುಕಗೊಂಡಿದ್ದ ಬಿಜೆಪಿ ನಾಯಕರು ಕಾಂಗ್ರೆಸ್ ಸರಕಾರವನ್ನು ಉರುಳಿಸುವ ಉದ್ದೇಶದಿಂದ ಒಂಭತ್ತು ದಿನಗಳ ಕಾಲ ಮೈಸೂರಿನಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದರು. ಬಿಜೆಪಿ ನಾಯಕರು ಅಂದುಕೊಂಡಂತೆ ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಾಣಲು ವಿಫಲವಾಯಿತು. ಬಿಜೆಪಿ ನಡೆಸಿದ ಪಾದಯಾತ್ರೆಯಲ್ಲಿ ಮಿತ್ರಪಕ್ಷವಾದ ಜೆಡಿಎಸ್-ಬಿಜೆಪಿ ನಡುವಿನ ಹುಳುಕುಗಳು ಬಹಿರಂಗಗೊಂಡವು. ಇತ್ತ ಬಿಜೆಪಿಯ ಕೆಲವು ನಾಯಕರು ಪಾದಯಾತ್ರೆಯ ಕಡೆ […]

Continue Reading

ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್

ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್‌ ಕುಮಾರ್‌ ರವರ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಮಮತಾ ಸಿಂಗ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ತನಿಖೆಗೆ ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹಾಗೂ ಅದನ್ನು ರದ್ದುಪಡಿಸುವಂತೆ ಕೋರಿ ಅಲೋಕ್ ಕುಮಾರ್ ರವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಗರದ 39 ನೇ ಎಸಿಎಂಎಂ ಕೋರ್ಟ್‌ ಅರ್ಜಿದಾರರ ವಿರುದ್ಧ ನಡೆಸುತ್ತಿದ್ದ ವಿಚಾರಣಾ […]

Continue Reading

ಭೂ ಸ್ವಾಧೀನದ ಹೆಸರಲ್ಲಿ ನೂರಾರು ಕೋಟಿ ರೂಪಾಯಿಗಳ ಅಕ್ರಮ ವರ್ಗಾವಣೆ ಆರೋಪ; ಇಡಿ ಅಧಿಕಾರಿಗಳಿಂದ ದಾಳಿ

ಭೂ ಸ್ವಾಧೀನದ ಹೆಸರಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಅಧಿಕಾರಿಗಳು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ನವಲೂರು ಬಳಿ ಇರುವ KIADB (ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ) ಕಚೇರಿ ಹಾಗೂ ಬೆಂಗಳೂರು ಕಚೇರಿ ಮೇಲೆ ಇಂದು ED (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ರೇಡ್​ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ನಡೆದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು, KIADB ಖಾತೆಯಿಂದ […]

Continue Reading