ಸಿದ್ದರಾಮಯ್ಯ ಕುಟುಂಬಕ್ಕೆ ‘ಮೂಡಾ’ ಉರುಳು.? ಮುಖ್ಯ ಕಾರ್ಯದರ್ಶಿಗೆ ‘ಸಿಟಿಜನ್ ರೈಟ್ಸ್’ ದೂರು

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣಅವರು ರಾಜ್ಯ ಸರ್ಕಾರದ […]

Continue Reading

ಕಾಂಗ್ರೆಸ್ ನಲ್ಲಿ ನಾಯಕತ್ವದ ಬದಲಾವಣೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಬಿಜೆಪಿಯಲ್ಲೂ ವಿಪಕ್ಷ ನಾಯಕನ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು.!

ಡಿ.ಕೆ. ಶಿವಕುಮಾರ್‌ ಅವರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಳ್ಳಬೇಕೆಂಬ ಕಾರಣಕ್ಕೆ ಸಮುದಾಯವಾರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಕೂಗು ಎಬ್ಬಿಸಲಾಗಿದೆ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಬಲವಾಗುತ್ತಿದೆ.‘ಒಬ್ಬರಿಗೆ ಒಂದೇ ಹುದ್ದೆ’ ಎಂಬುದು ಕಾಂಗ್ರೆಸ್‌ ನೀತಿ. ಆದರೆ, ರಾಜ್ಯದಲ್ಲಿ ಪಕ್ಷದ ಹೊಣೆಗಾರಿಕೆ ಹೊತ್ತಿರುವವರೇ ಈ ನೀತಿಯನ್ನು ಒಡೆದು ಆಳುತ್ತಿದ್ದಾರೆ. ಇದು ಸರಿಯಲ್ಲ. ಹೀಗಾಗಿ, ಡಿ.ಕೆ. ಶಿವಕುಮಾರ್‌ ಅವರು ಉಪ ಮುಖ್ಯಮಂತ್ರಿ ಹುದ್ದೆ ಇಲ್ಲವೇ ಪಕ್ಷದ ಅಧ್ಯಕ್ಷರ ಹುದ್ದೆ ಯಾವುದಾದರು ಒಂದರಲ್ಲಿ ಮಾತ್ರ ಮುಂದುವರಿಯಬೇಕು ಎನ್ನುವುದು ಸಿದ್ದರಾಮಯ್ಯ ಆಪ್ತ ಬಣದ ಸಚಿವರು, […]

Continue Reading

ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ

ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಈ ವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಈಗ ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಲಾಗಿದೆ. ಶೇ.85% ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ದೈನಂದಿನ ಸ್ವಚ್ಛತಾ ಕೆಲಸಗಳಿಗೆ ಸಮಸ್ಯೆಯಾಗದಂತೆ ವಾರಕ್ಕೆ ಒಂದು ದಿನ ರಜೆಯನ್ನು ನೀಡಲಾಗಿದೆ. ಒಂದು ವಾರದ ಒಂದು […]

Continue Reading

ವಿದ್ಯುತ್ ತಂತಿಗೆ ಅಡ್ಡಿ ನೆಪದಲ್ಲಿ ತೆರವುಗೊಳಿಸಿದ ಮರಗಳ ಅಕ್ರಮ ಸಾಗಾಟ ಮಾಡಿದ ಕನ್ಯಾನ ವಲಯ ಅರಣ್ಯಾಧಿಕಾರಿ.

ಅಕ್ರಮದ ವಿರುದ್ಧ ಮಾಹಿತಿ ನೀಡಿದರೂ ಎಚ್ಚೆತ್ತುಕೊಳ್ಳದ ಹಿರಿಯ ಅಧಿಕಾರಿಗಳು. ಬಂಟ್ವಾಳ: ಕೇರಳ ಗಡಿಭಾಗದ ಕರೋಪಾಡಿ ಗ್ರಾಮದ ಆನೆಕಲ್ಲು ಮದರಮೂಲೆ ರಸ್ತೆ ಬದಿಯಲ್ಲಿದ್ದ ಮರಗಳನ್ನು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಕಾರಣಕ್ಕಾಗಿ ಸ್ಥಳೀಯರು ಅರಣ್ಯಾಧಿಕಾರಿಯ ನೇತೃತ್ವದಲ್ಲಿ ತೆರವುಗೊಳಿಸಿದ್ದರು. ತೆರವುಗೊಳಿಸಿದ ಮರಗಳನ್ನು ಕನ್ಯಾನ ವಲಯ ಅರಣ್ಯ ಕಛೇರಿಯ ಆವರಣದಲ್ಲಿ ಶೇಖರಿಸಬೇಕಾಗಿತ್ತು. ಆದರೆ ಇಲ್ಲಿನ ಫಾರೆಸ್ಟರ್ ಬೆಲೆಬಾಳುವ ಅಕೇಶಿಯಾ ಮರಗಳ ದಿಮ್ಮಿಗಳನ್ನು ಪಿಕಪ್ ವಾಹನದಲ್ಲಿ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಿರುವ ಬಗ್ಗೆ ಸ್ಥಳೀಯರು ಪುತ್ತೂರು ಎಸಿಎಫ್ ಮತ್ತು ರೇಂಜರ್ ಅವರಿಗೆ ಮಾಹಿತಿ ನೀಡಿದರು. […]

Continue Reading

ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಶಾಲೆಯ ಶಿಕ್ಷಕನೊಬ್ಬನಿಂದ ಲೈಂಗಿಕ ಕಿರುಕುಳ; ಕೇಸು ದಾಖಲು

ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಕಮಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಬಂಧನ ಮಾಡಲಾಗಿದೆ. ಮಾಧವ್ ಲಾಂಚಕರ್ ಎಂಬುವನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ.ಬಾಲಕಿಯ ದೂರಿನ ಮೇರೆಗೆ ಶಿಕ್ಷಕನ ವಿರುದ್ಧ ಪೋಕ್ಸೋ ಮತ್ತು ಐಪಿಸಿ 354(a) ಪ್ರಕಾರ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಹೇಯ ಕೃತ್ಯ ಎಸಗಿದ ಶಿಕ್ಷಕನ ಜತೆಗೆ ಇದಕ್ಕೆ ಸಹಕರಿಸಿದ ಓರ್ವ ಶಿಕ್ಷಕಿಯನ್ನು […]

Continue Reading

ಮರ್ಯಾದೆ ಇಲ್ಲ ಅಂದ ಮೇಲೆ ಅಂತಹ ಕಡೆ ನಾವ್ಯಾಕೆ ಇರಬೇಕು. ರಾಜಿನಾಮೆಗೆ ಮುಂದಾದ ಶಾಸಕ ವಿನಯ್ ಕುಲಕರ್ಣಿ.!

ನಮಗೆ ಮರ್ಯಾದೆ ಇಲ್ಲ ಅಂದ ಮೇಲೆ ಅಂತಹ ಕಡೆ ನಾವ್ಯಾಕೆ ಇರಬೇಕು ಎಂದು ಶಾಸಕ ವಿನಯ್ ಕುಲಕರ್ಣಿಯವರು ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ಅವರು ರಾಜೀನಾಮೆ ನೀಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಸಚಿವರಾದ ನಂತರದಲ್ಲಿ ಬೈರತಿ ಸುರೇಶ್ ಅವರು ಎಲ್ಲದರಲ್ಲಿಯೂ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ. ಈ ಸಂಬಂಧ ಈ ಹಿಂದೆಯೂ ಹೈಕಮಾಂಡ್ ಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ನಗರಾಭಿವೃದ್ದಿ ಇಲಾಖೆಯ ವ್ಯಾಪ್ತಿಗೆ ಬರುವ ನೀರು […]

Continue Reading

ಗ್ರಾಮಪಂಚಾಯತಿನಲ್ಲಿಯೇ ಇಂದಿನಿಂದ ಜನನ, ಮರಣ ನೋಂದಣಿ

ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮಪಂಚಾಯತಿಯಲ್ಲೇ ಆರಂಭಿಸುವ ಪ್ರಕ್ರಿಯೆ ಇಂದಿನಿಂದ (ಜುಲೈ 1) ಜಾರಿಗೆ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು ಜುಲೈ 1 ರಿಂದ ಆ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಜನನ/ಮರಣ ಉಪನೋಂದಣಾಧಿಕಾರಿಗಳು, ಗ್ರಾಮ ಪಂಚಾಯಿತಿ ಡೇಟಾ ಎಂಟ್ರಿ ಆಪರೇಟರ್ ಗಳಿಗೆ […]

Continue Reading

ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರವರ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ; ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರವರ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದ್ದು, ಹುದ್ದೆಯಿಂದ ತೆರವುಗೊಳಿಸಿ ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ಕೂಡ ಆರಂಭವಾಗಿದೆ ಎನ್ನಲಾಗಿದೆ.ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಲ್ಲಿ ವಿಫಲರಾಗಿರುವ ಅಶೋಕ್‌ ಬದಲಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಛಾಟಿ ಬೀಸುವ ಯುವ ನಾಯಕನನ್ನು ನೇಮಿಸುವ ಬಗ್ಗೆ ಚಿಂತನೆ ನಡೆದಿದೆ. ಆರ್. ಅಶೋಕ್‌ ಅವರ ಸ್ಥಾನಕ್ಕೆ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ಕುಮಾರ್‌ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ […]

Continue Reading

ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಪಾಳಯದ ಹಲವು ಸಚಿವರು ಭರ್ಜರಿ ಪ್ಲಾನ್.!

ಡಿಕೆಶಿ ಮಾಸ್ ಲೀಡರ್ ಅಲ್ಲ, ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೈಬಿಡಬೇಕು; ಸಿದ್ದು ಬೆಂಬಲಿಗರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲು ಕಾರಣವಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಪಾಳಯದ ಹಲವು ಸಚಿವರು ಭರ್ಜರಿ ಪ್ಲಾನ್ ಮಾಡುತ್ತಿದ್ದಾರೆ. ಸದ್ಯ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಹವಣಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶವನ್ನು ಮುಂದಿಟ್ಟುಕೊಂಡು ಡಿ ಕೆ ಶಿವಕುಮಾರ್ ರವರನ್ನು ಹಣಿಯಲು ಸಿದ್ದು ಬೆಂಬಲಿಗರು ಹುನ್ನಾರ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಡಿಕೆಸಿ ಮಾಸ್ […]

Continue Reading

“KMFನಲ್ಲಿರುವ ಬಿಜೆಪಿ ನಿರ್ದೇಶಕರ ಬೆಂಬಲದಿಂದಲೇ ಹಾಲಿನ ದರ ಏರಿಕೆ, ಮೊದಲು ಅವರ ರಾಜೀನಾಮೆ ಕೇಳಿ”; ಪ್ರತಿಪಕ್ಷಗಳಿಗೆ ರಮೇಶ್ ಬಾಬು ಟಾಂಗ್..

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ತಾರಕಕ್ಕೇರಿದೆ. ಗ್ಯಾರೆಂಟಿ ಯೋಜನೆ ಹಿನ್ನೆಲೆಯಲ್ಲಿ ಆದಾಯ ಕ್ರೋಡೀಕರಣಕ್ಕೆ ಹರಸಾಹಸಪಡುತ್ತಿರುವ ಕಾಂಗ್ರೆಸ್ ಸರ್ಕಾರ ಪೆಟ್ರೋಲ್-ಡೀಸೆಲ್ ದರ ಏರಿಕೆ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಅದೇ ಹೊತ್ತಿಗೆ ಸರ್ಕಾರಿ ಸ್ವಾಮ್ಯದ KMF ಕೂಡಾ ಹಾಲಿನ ದರ ಏರಿಕೆ ಮಾಡಿ ವಿವಾದಕ್ಕೆ ಗುರಿಯಾಗಿದೆ. ಪೆಟ್ರೋಲ್ ದರ ಏರಿಕೆ ಖಂಡಿಸಿ ಪ್ರತಿಪಕ್ಷಗಳು ಹೋರಾಟದ ಅಖಾಡದಲ್ಲಿರುವಾಗಲೇ ಹಾಲಿನ ದರ ಏರಿಕೆಯಾಗಿದ್ದು ಸರ್ಕಾರದ ಕ್ರಮವನ್ನು ಬಿಜೆಪಿ ನಾಯಕರು […]

Continue Reading