ರಾಜ್ಯಾದ್ಯಂತ ಏಕರೂಪದ ರಿಯಾಯಿತಿ. ಅನಧಿಕೃತ ವಸತಿ ಕಟ್ಟಡಗಳಿಗೆ ಪಂಚಾಯತ್ ವ್ಯಾಪ್ತಿಯಲ್ಲೂ ‘ಓಸಿ’ ನಿಯಮದಿಂದ ವಿನಾಯಿತಿ; ಸಚಿವ ಸಂಪುಟ ತೀರ್ಮಾನ

ನಗರ ಪ್ರದೇಶಗಳ ಮಾದರಿಯಲ್ಲಿಯೇ ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಅನಧಿಕೃತ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ‘ಸ್ವಾಧೀನಾನುಭವ ಪ್ರಮಾಣಪತ್ರ’ (OC) ನಿಯಮದಿಂದ ವಿನಾಯಿತಿ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇದರಿಂದ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1200 ಚದರ ಅಡಿ (30×40 ಅಡಿ) ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ […]

Continue Reading

ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 2026ರ ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತ್, ತಾಲೂಕು ಪಂಚಾಯಿತ್ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ ತಿಂಗಳಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆದಿರಲಿಲ್ಲ. […]

Continue Reading

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ, ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್: ಸಾರಿಗೆ ಸಚಿವರು

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್​​ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್​ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್​ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ […]

Continue Reading

ಬೆಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ, 4.20 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ರಾಜಾರೋಷವಾಗಿ ಮಾದಕ ದ್ರವ್ಯಗಳನ್ನು ಮಾರಾಟ ಮಾಡಲಾಗುತ್ತಿದೆ. ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳನ್ನೇ ಟಾರ್ಗೆಟ್‌ ಮಾಡಿ, ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಖದೀಮರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ನೈಜರಿಯಾ ಮೂಲದ ಒಬಿಜೆಸಿ ಚಿಗೋಜೈ ದಾವಿ, ಸನಿ ಸಾದಿಕ್, ಬೆಂಗಳೂರಿನ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದೆ. ಬಂಧಿತರಿಂದ ಆರೋಪಿಗಳಿಂದ ಬರೋಬ್ಬರಿ 4.20 ಕೋಟಿ ರೂ. ಮೌಲ್ಯದ ಡ್ರಗ್ಸ್ ಪೊಲೀಸರಿಂದ ಜಪ್ತಿ ಮಾಡಲಾಗಿದೆ. ಆರೋಪಿಗಳು ಬಾಗಲೂರು, ಅಶೋಕ್ ನಗರ ಠಾಣಾ ವ್ಯಾಪ್ತಿಯಲ್ಲಿ […]

Continue Reading

ಸುಳ್ಳು ಜಾತಿ ಪ್ರಮಾಣಪತ್ರ, ಶಾಸಕ ಕೊತ್ತೂರು ಮಂಜುನಾಥ್‌ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರದಲ್ಲಿ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಆಯ್ಕೆಯಾಗಿದ್ದಾರೆಂಬ ಆರೋಪದ ಕುರಿತು ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೋಲಾರದ ಹಾಲಿ ಶಾಸಕ ಕೊತ್ತೂರು ಮಂಜುನಾಥ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ಮಂಜುನಾಥ್‌ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸಂಜಯ್‌ ಕುಮಾರ್‌ ಮತ್ತು ಅಲೋಕ್‌ ಅರಾಧೆ ಅವರಿದ್ದ ವಿಭಾಗೀಯಪೀಠ ಶುಕ್ರವಾರ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಹೈಕೋರ್ಟ್‌ ಆದೇಶದಂತೆ ಎಫ್‌ಐಆರ್‌ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು […]

Continue Reading

ಕುಟುಂಬವೊಂದು ಆತ್ಮಹತ್ಯೆಯ ಸುಳಿಗೆ ಸಿಲುಕಿ ನಾಮಾವಶೇಷ ಆದ ಹೃದಯ ವಿದ್ರಾವಕ ಘಟನೆ

ಕುಟುಂಬವೊಂದು ಆತ್ಮಹತ್ಯೆಯ ಸುಳಿಗೆ ಸಿಲುಕಿ ನಾಮಾವಶೇಷ ಆದ ಹೃದಯ ವಿದ್ರಾವಕ ಘಟನೆ ಇದು. ಅಪ್ಪ, ಅಮ್ಮ, ಪುತ್ರ ಹಾಗೂ ಪುತ್ರನ ಮೊದಲನೇ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದು, ಇಡೀ ಕುಟುಂಬದ ಮಾನಸಿಕ ಸ್ಥಿತಿ ಈಗ ಚರ್ಚೆಗೆ ಕಾರಣವಾಗಿದೆ. ಶಿವಮೊಗ್ಗದ ವಿನೋಬನಗರದ ಅಶ್ವಥನಗರದಲ್ಲಿ ವಾಸವಿದ್ದ ಮನೆಯಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ತಾಯಿ ಹಾಗೂ ಮಗ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಶಿವಮೊಗ್ಗದ ಹೊಮ್ಮರಡಿ ಖಾಸಗಿ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಜಯಶ್ರೀ ಹಾಗೂ ಅವರ ಪುತ್ರ ಆಕಾಶ್ ಆತ್ಮಹತ್ಯೆಗೆ ಶರಣಾದವರು. […]

Continue Reading

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಇನ್ನು ಮುಂದೆ ಪಿಎಫ್, ಇಎಸ್ ಐ ಸೌಲಭ್ಯ ನೀಡಲಿದೆ.

ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಇನ್ನು ಮುಂದೆ ಪಿಎಫ್, ಇಎಸ್ ಐ ಸೌಲಭ್ಯ ನೀಡಲಿದೆ. ಗ್ರಾಮ ಪಂಚಾಯ್ತಿ ನೌಕರರ ಬಹು ದಿನಗಳ ಬೇಡಿಕೆಯಾದ ಭವಿಷ್ಯ ನಿಧಿ (EPF) ಮತ್ತು ಆರೋಗ್ಯ ವಿಮೆ ಯೋಜನೆ (ESI) ಸೌಲಭ್ಯ ಕಲ್ಪಿಸಲು ಜಿಲ್ಲಾ ಪಂಚಾಯಿತಿಗಳು ಮುಂದಾಗಿದ್ದು, ಇದೀಗ ರಾಜ್ಯದ ಬೆಂಗಳೂರು ಗ್ರಾಮಾಂತರ, ಮಂಗಳೂರು, ಧಾರವಾಡ, ಉಡುಪಿ ಜಿಲ್ಲಾ ಪಂಚಾಯತಿಗಳು ಗ್ರಾಮಪಂಚಾಯಿತಿ ನೌಕರರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಉಳಿದ ಜಿಪಂಗಳಲ್ಲೂ ಶೀಘ್ರವೇ ಜಾರಿಯಾಗಲಿದೆ ಎನ್ನಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು […]

Continue Reading

ರಾಜ್ಯ ಬಿಜೆಪಿಯ ಅತೃಪ್ತ ಆತ್ಮಗಳು ದೆಹಲಿಯಲ್ಲಿ ತಂತ್ರಗಾರಿಕೆ. ರಾಜ್ಯದಿಂದ ರಾಷ್ಟ್ರ ರಾಜಧಾನಿಗೆ ತಲುಪಿರುವ ಭಿನ್ನಮತದ ದಳ್ಳುರಿ

ರಾಜ್ಯಾಧ್ಯಕ್ಷರ ಪದಚ್ಯುತಿಗೆ ಪಟ್ಟು, ಅತೃಪ್ತ ನಾಯಕರ ದಂಡು ದೆಹಲಿಯಲ್ಲಿ ಸಮರಕ್ಕೆ ಸಜ್ಜು. ರಾಜ್ಯ ಬಿಜೆಪಿಯಲ್ಲಿ ಕಳೆದ ಕೆಲವು ದಿನಗಳಿಂದ ಮೌನವಾಗಿದ್ದ ನಾಯಕತ್ವದ ವಿಷಯ ಇದೀಗ ಸ್ಫೋಟಗೊಂಡಿದೆ. ರಾಜ್ಯದಿಂದ ರಾಷ್ಟ್ರ ರಾಜಧಾನಿಗೆ ತಲುಪಿರುವ ಭಿನ್ನಮತದ ದಳ್ಳುರಿ, ರಾಜ್ಯಾಧ್ಯಕ್ಷರ ಪದಚ್ಯುತಿಗೆ ಪಟ್ಟು ಹಿಡಿದಿರುವ ಅತೃಪ್ತ ನಾಯಕರ ದಂಡು, ದೆಹಲಿಯಲ್ಲಿ ಸಮರಕ್ಕೆ ಸಜ್ಜಾಗಿದೆ. ಸಂಸತ್ ಅಧಿವೇಶನದ ನೆಪದಲ್ಲಿ ದೆಹಲಿಗೆ ದೌಡಾಯಿಸಿರುವ ರಾಜ್ಯ ಬಿಜೆಪಿಯ ಪ್ರಭಾವಿ ಬಂಡಾಯ ನಾಯಕರು, ದೆಹಲಿಯಲ್ಲಿರುವ ಕರ್ನಾಟಕ ಭವನವನ್ನೇ ತಮ್ಮ ತಂತ್ರಗಾರಿಕೆಯ ಕೇಂದ್ರವನ್ನಾಗಿ ಮಾಡಿಕೊಂಡಿದ್ದಾರೆ. ಸಾಹುಕಾರ್ ರಮೇಶ್ ಜಾರಕಿಹೊಳಿ […]

Continue Reading

ನಕಲಿ ದಾಖಲೆಗಳ ಸೃಷ್ಟಿಸಿ, ಸರ್ಕಾರಿ ಜಮೀನು ಕಬಳಿಸಲು ಸಹಕರಿಸಿದ ಆರೋಪದ 16 ಮಂದಿ ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲು

ನಕಲಿ ದಾಖಲೆಗಳ ಸೃಷ್ಟಿ ಮಾಡುವ ಮೂಲಕ ಸರ್ಕಾರಿ ಜಮೀನು ಕಬಳಿಸಲು ಸಹಕರಿಸಿದ ಆರೋಪದ ಮೇಲೆ ಆನೇಕಲ್ ತಾಲೂಕಿನ ಭೂ ದಾಖಲೆಗಳ ವಿಭಾಗದ 16 ಮಂದಿ ಸರ್ಕಾರಿ ನೌಕರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಉಪ ತಹಸೀಲ್ದಾರ್, ಮೂರು ಮಂದಿ ಶಿರಸ್ತೇದಾರರು, ಮೂರು ಮಂದಿ ಪ್ರಥಮ ದರ್ಜೆ ಸಹಾಯಕರು, ಇಬ್ಬರು ದ್ವಿತೀಯ ದರ್ಜೆ ಸಹಾಯಕರು, ಏಳು ಮಂದಿ ಡಿ. ದರ್ಜೆ ನೌಕರರು, ಒಟ್ಟು 16 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂಲ ಮಂಜೂರಾತಿ ಕಡತ, ದರಖಾಸ್ತು ವಹಿ, ಸಾಗುವಳಿ ಚೀಟಿ, […]

Continue Reading

ಕರ್ನಾಟಕದ 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ:ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಕರ್ನಾಟಕದ 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಜತೆಗೆ ಬೆಳಗಾವಿಯ ಒಂದು ಪುರಸಭೆಯನ್ನು ನಗರ ಸಭೆಯನ್ನಾಗಿಯೂ ಉನ್ನತೀಕರಿಸಲು ಒಪ್ಪಿಗೆ ನೀಡಲಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆಸ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಆ ಪೈಕಿ ಸ್ಥಳೀಯ ಸಂಸ್ಥೆಗಳ ಉನ್ನತೀಕರಣವು ಒಂದಾಗಿದೆ. ಹಲವು ವರ್ಷಗಳಿಂದ ಇದ್ದ ಮೇಲ್ದರ್ಜೆಗೇರಿಸುವ ಬೇಡಿಕೆಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ. ಮೇಲ್ದರ್ಜೆಗೆರಿದ ಗ್ರಾಮ ಪಂಚಾಯತಿಗಳು. ಬೀದರ್ ಜಿಲ್ಲೆಯ ಕಮಠಾಣಾ, […]

Continue Reading