ಪ್ರೇಮ ವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯ: ಗ್ರಾಮ ಪಂಚಾಯತ್ ನಲ್ಲೊಂದು ಹೀಗೊಂದು ನಿರ್ಣಯ

ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲವ್ ಮ್ಯಾರೇಜ್ ಸಂಖ್ಯೆ ವಿಪರೀತ ಹೆಚ್ಚಾಗಿರುವುದರಿಂದ, ಪ್ರೇಮ ವಿವಾಹಕ್ಕೆ ಬ್ರೇಕ್ ಹಾಕಬೇಕು, ಪ್ರೇಮಿಗಳು ಹೆತ್ತವರ ಒಪ್ಪಿಗೆ ಪಡೆದೆ ವಿವಾಹವಾಗಬೇಕು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯ್ತಿ ಸದಸ್ಯರು ಸೇರಿ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ಕೈಗೊಂಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಇತ್ತಿಚಿನ ದಿನಗಳಲ್ಲಿ ಪ್ರೇಮ ವಿವಾಹಗಳ ಸಂಖ್ಯೆ ಹೆಚ್ಚುತ್ತಲೆ ಇದೆ. ಇದು […]

Continue Reading

ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ ಅಧ್ಯಕ್ಷರಿಂದ ಗ್ರೀನ್ ಸಿಗ್ನಲ್; ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದವರಿಗೆ ಮೊದಲ ಆದ್ಯತೆ

ನಿಗಮ ಮಂಡಳಿ ನೇಮಕಕ್ಕೆ ಎಐಸಿಸಿ ಅಧ್ಯಕ್ಷರಿಂದ ಗ್ರೀನ್ ಸಿಗ್ನಲ್. ಈ ತಿಂಗಳ ಅಂತ್ಯ ಅಥವಾ ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಸಕರು ಹಾಗೂ ಕಾರ್ಯಕರ್ತರಲ್ಲಿ ಯಾರನ್ನು ನಿಗಮ ಮಂಡಳಿಗೆ ನೇಮಕ ಮಾಡಬೇಕು ಎಂಬ ಗೊಂದಲ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಸೃಷ್ಟಿಯಾಗಿತ್ತು. ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದಕ್ಕೆ ಅಸ್ತು ಎಂದಿದ್ದಾರೆ. ಶಾಸಕರು, ಪರಿಷತ್ ಸದಸ್ಯರು ಹಾಗೂ ಕಾರ್ಯಕರ್ತರನ್ನೊಳಗೊಂಡ ಪಟ್ಟಿ ತಯಾರಿಸುವಂತೆ ಸೂಚಿಸಿದ್ದಾರೆ. […]

Continue Reading

ಲೋಕಸಭೆ ಚುನಾವಣೆ 2023: ಆಪರೇಷನ್ ಹಸ್ತ’ ಬಿಜೆಪಿ ನಾಯಕರಿಗೆ ತಲೆನೋವು.!

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ರಾಜ್ಯದಲ್ಲಿ ನಡೆಯುತ್ತಿರುವ ‘ಆಪರೇಷನ್ ಹಸ್ತ’ ಬಿಜೆಪಿ ನಾಯಕರಿಗೆ ತಲೆನೋವು ತಂದೊಡ್ಡಿದೆ. ಬಿಜೆಪಿಯ ಮಾಜಿ ಶಾಸಕರು, ಕಳೆದ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣಕ್ಕೆ ಪಕ್ಷ ತೊರೆದು ಅನ್ಯ ಪಕ್ಷಗಳಿಂದ ಕಣಕ್ಕಿಳಿದು ಸೋಲು ಕಂಡವರು ‘ಕೈ’ ಹಿಡಿಯಲು ಮುಂದಾಗಿದ್ದಾರೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ‘ಕೈ’ ಹಿಡಿದ ಬೆನ್ನಲ್ಲೆ, ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಕೂಡಾ ಕಾಂಗ್ರೆಸ್‌ ಸೇರಲು ಮುಹೂರ್ತ ನಿಗದಿಯಾಗಿದೆ. ಇದೇ 20ರಂದು ಅವರು ಕಾಂಗ್ರೆಸ್‌ ಸೇರಲಿದ್ದಾರೆ. ಬಿಜೆಪಿಯಿಂದ […]

Continue Reading

ಜನನ-ಮರಣ ನೋಂದಣಿಗೆ ಆಧಾರ್ ಕಾರ್ಡ್ ಕಡ್ಡಾಯವಲ್ಲ

ಜನನ ಮರಣ ನೋಂದಣಿಯಲ್ಲಿ ಯಾವುದೇ ವಿಳಂಬ ಹಾಗೂ ಸಾಮಾನ್ಯ ಜನರು ತೊಂದರೆಗಳಿಗೆ ಒಳಗಾಗಬಾರದು. ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿಯಾಗುವ ಮರಣ ಘಟನೆಗಳಿಗೆ ಮರಣ ಕಾರಣಗಳನ್ನು ಸರಿಯಾಗಿ ನಮೂದಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ನೋಂದಣಿ ಜಿಲ್ಲಾಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಕ್ಷನ್ 18 ರ ಪ್ರಕಾರ ಜಿಲ್ಲೆಯ ಎಲ್ಲ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇಕಡ 100 ರಷ್ಟು […]

Continue Reading

ಸ್ಮಶಾನದಲ್ಲಿ ಲಂಚ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ

ಶಿವಮೊಗ್ಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ. ಸ್ಮಶಾನದಲ್ಲಿ 15 ಸಾವಿರ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು. ದೂರಿನನ್ವಯ ಲೋಕಾಯುಕ್ತ ಡಿವೈಎಸ್​ಪಿ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಸ್ಮಶಾನದ ಕಾಮಗಾರಿ ಪರಿಶೀಲಿಸಿ ರಿಪೋರ್ಟ್ […]

Continue Reading

ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕ್ರಮಕೈಗೊಳ್ಳಿ : ಸಚಿವ ಡಾ. ಸುಧಾಕರ್ ಸೂಚನೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೂಚಿಸಿದ್ದಾರೆ. ದಿನಾಂಕ: 12.10.2023 ರಂದು ಪತ್ರ ಬರೆದಿರುವ ಸಚಿವರು ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 1242 ಸಹಾಯಕ ಪ್ರಾಧ್ಯಾಪಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿತ್ತು. ಅದರಂತೆ 2021ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ […]

Continue Reading

ಬಸ್ ಸೆಲ್ಟರ್ ಕಳವಾಗಿಲ್ಲ, ತೆರವುಗೊಳಿಸಲಾಗಿದೆ: ಬೆಂಗಳೂರು ಕಮೀಷನರ್

ಇತ್ತೀಚೆಗೆ ಕನ್ನಿಂಗ್‌ ಹ್ಯಾಮ್‌ ರಸ್ತೆಯಲ್ಲಿನ ಬಸ್‌ ನಿಲ್ದಾಣದಲ್ಲಿ ಕಬ್ಬಿಣ ರಾಡ್‌ ಗಳಿಂದ ನಿರ್ಮಿಸಿದ್ದ ಶೆಲ್ಟರ್‌ ಕಳವು ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ತನಿಖೆ ನಡೆಸಿದ ಪೊಲೀಸರು ಅಸಲಿ ರಹಸ್ಯ ಬಯಲಿಗೆಳೆದಿದ್ದಾರೆ. ಅಸಲಿಗೆ ಬಸ್‌ ನಿಲ್ದಾಣವನ್ನು ಯಾರು ಕಳವು ಮಾಡಿಲ್ಲ. ಕಳಪೆ ಕಾಮಗಾರಿ ಆರೋಪದ ಮೇಲೆ ಬಿಬಿಎಂಪಿ ಅಧಿಕಾರಿಗಳೇ ಬಸ್‌ ನಿಲ್ದಾಣವನ್ನು ತೆರವುಗೊಳಿಸಿದ್ದಾರೆ ಎಂಬುದು ಹೈಗ್ರೌಂಡ್ಸ್‌ ಠಾಣೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸೈನ್‌ಪೋಸ್ಟ್‌ ಎಂಬ ಖಾಸಗಿ ಸಂಸ್ಥೆ ಬಿಬಿಎಂಪಿ ಅನುಮತಿ ಪಡೆದು ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿರುವ ಕಾಫಿ ಡೇ […]

Continue Reading

ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಲಿದೆಯೇ.?

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಲಿದೆಯೇ? ಎಂಬ ಪ್ರಶ್ನೆ ಮೂಡಿದೆ.! ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಯುದ್ಧ ಜಾಗತಿಕ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಇದನ್ನು ಗಮನಿಸಿದರೆ ಕೋಡಿಮಠದ ಶ್ರೀಗಳ ಭವಿಷ್ಯ ನಿಜವಾಗುವುದೇ.? ಎಂಬ ಆನುಮಾನ ಮೂಡಿದೆ. ಭೂಪಟದಿಂದಲೇ ಒಂದು ದೇಶ ಕಣ್ಮರೆಯಾಗಲಿದೆ. ಭೂಕಂಪ, ಯುದ್ಧ, ಬಾಂಬ್ ದಾಳಿಗಳು ಹೆಚ್ಚಾಗಲಿವೆ ಎಂದು ಸರಿ-ಸುಮಾರು ಎರಡು ತಿಂಗಳ ಹಿಂದೆ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು. ಜನರು ತಮ್ಮ ಮೇಲಿನ ನಿಯಂತ್ರಣವನ್ನು […]

Continue Reading

ಶೀಘ್ರವೇ ನಿಗಮ ಮಂಡಳಿ ಭರ್ತಿ; 50-50 ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಪ್ರಸ್ತಾವನೆ

ದೆಹಲಿಯಲ್ಲಿ ನಡೆದ ಕಾಂಗ್ರೆಸ್‍ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದು, ಶೇ. 50-50 ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ 70 ಕ್ಕೂ ಹೆಚ್ಚು ನಿಗಮಗಳಿಗೆ ಏಕಕಾಲಕ್ಕೆ ತಲಾ 30 ತಿಂಗಳ ಅವಧಿಯಂತೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ನೇಮಿಸಲು ಚಿಂತನೆ ನಡೆದಿದೆ. ಇದನ್ನು ಮೂರು ಭಾಗಗಳಾಗಿ ವಿಂಗಡಿಸಿ 24 ತಿಂಗಳುಗಳಿಗೆ ಸೀಮಿತಗೊಳಿಸಿದರೆ ಇನ್ನಷ್ಟು ಮಂದಿಗೆ ಅಧಿಕಾರ ಹಂಚಿಕೆ ಮಾಡಬಹುದು. […]

Continue Reading

ಗರ್ಭಿಣಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ, 11 ಲಕ್ಷ ರೂಪಾಯಿ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಕರ್ತವ್ಯ ಲೋಪ ಹಾಗೂ ವೈದ್ಯಕೀಯ ನಿರ್ಲಕ್ಷ್ಯ ತೋರಿದ ವೈದ್ಯರೊಬ್ಬರಿಗೆ ಜಿಲ್ಲಾ ಗ್ರಾಹಕ ನ್ಯಾಯಾಲಯವು ಬರೋಬ್ಬರಿ 11 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಕಲೇಶಪುರದ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಪುರುಷೋತ್ತಮ್ ಅವರು ದಂಡಕ್ಕೆ ಒಳಗಾದ ವೈದ್ಯರಾಗಿದ್ದಾರೆ. ಸಕಲೇಶಪುರದ ಆನೇಮಹಲ್ನ ಮೋಹನ್ ಕುಮಾರ್ ಎಂಬವರು ತಮ್ಮ ಪತ್ನಿ ಆಶಾರವನ್ನು ಹೆರಿಗೆ ಪೂರ್ವ ತಪಾಸಣೆಗಾಗಿ ಸಕಲೇಶಪುರದ ಕ್ರಾಫರ್ಡ್‌ ಆಸ್ಪತ್ರೆಗೆ ಕರೆತಂದಿದ್ದರು. ಆಶಾ ಅವರನ್ನು ಡಾ. ಪುರುಷೋತ್ತಮ ಅವರು ಸ್ಕ್ಯಾನ್ ಮಾಡಿ ವರದಿ ಪರೀಕ್ಷಿಸಿ ಮಗು ಹೊಟ್ಟೆಯಲ್ಲೇ ಮೃತಪಟ್ಟಿರುವುದಾಗಿ […]

Continue Reading