ಗುಂಪು ಗಲಭೆಯಲ್ಲಿ ಹತ್ಯೆ, ಗಾಯಾಳು ಸಂತ್ರಸ್ತರಿಗೆ, ಪರಿಹಾರದ ಮೊತ್ತವನ್ನು ನಿಗದಿಪಡಿಸಿದ ರಾಜ್ಯ ಸರಕಾರ

ಗುಂಪು ಗಲಭೆಯಲ್ಲಿ ಹತ್ಯೆ, ಗಾಯಾಳು ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರಕಾರ, ಪರಿಹಾರದ ಮೊತ್ತವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಗುಂಪು ಗಲಭೆಯಲ್ಲಿ ಮೃತರ ಅವಲಂಬಿತರಿಗೆ ಕನಿಷ್ಠ 5 ಲಕ್ಷ ರೂಪಾಯಿ ಹಾಗೂ ಗರಿಷ್ಠ 10 ಲಕ್ಷ ರೂಪಾಯಿ ಪರಿಹಾರ ನಿಗದಿಗೊಳಿಸಲಾಗಿದೆ. ಜತೆಗೆ, ಗಲಭೆ ಬಾಧಿತರಿಗೆ ಆರು ವರ್ಗೀಕರಣದನ್ವಯ ಕನಿಷ್ಠ ಒಂದು ಲಕ್ಷ ರೂಪಾಯಿ ಗಳಿಗಿಂತ ಮೇಲ್ಪಟ್ಟು ಪರಿಹಾರ ನಿಗದಿ ಮಾಡಲಾಗಿದೆ. ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011 ರ ಅನ್ವಯವೇ ಗುಂಪು ಗಲಭೆ ಸಂತ್ರಸ್ತರಿಗೆ ಪರಿಹಾರ ಸೌಲಭ್ಯ […]

Continue Reading

ಹೈಕಮಾಂಡ್ ನೋಟಿಸ್ ಬಳಿಕ ಬಿ.ಕೆ.ಹರಿಪ್ರಸಾದ್ ಮೌನಕ್ಕೆ ಶರಣು,ಡಿ.ಕೆ.ಶಿ ನಿವಾಸದಲ್ಲಿ ಸಮಾಲೋಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ, ಸಂಚಲನ ಮೂಡಿಸಿದ್ದ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುರುವಾರ ತನ್ನ ನಿವಾಸದಲ್ಲಿ ಸಮಾಲೋಚನೆ ನಡೆಸಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರನ್ನು ತಮ್ಮ ಮನೆಗೆ ಕರೆಸಿಕೊಂಡ ಡಿ.ಕೆ ಶಿವಕುಮಾರ್ ಅವರು, ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ ಹಾಗೂ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮೂಲಗಳ ಪ್ರಕಾರ, ಹೈಕಮಾಂಡ್ ಕಳುಹಿಸಿರುವ ಸಂದೇಶವನ್ನು ಡಿ.ಕೆ.ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ […]

Continue Reading

ಜೆಡಿಎಸ್-ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ 3,000 ಕ್ಕೂ ಮಿಕ್ಕ ಜೆಡಿಎಸ್ ಕಾರ್ಯಕರ್ತರು ರಾಜೀನಾಮೆ ಸಿದ್ದತೆ.!

ಬುಧವಾರ ಸಂಜೆ ಎನ್‌ಆರ್‌ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿರುವ ಎನ್‌ಎಸ್‌ ಫಂಕ್ಷನ್‌ ಹಾಲ್‌ನಲ್ಲಿ ಸಭೆ ನಡೆದು ಆ ಬಳಿಕ ರಾಜೀನಾಮೆ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ನಾವು ಈ ರಾಜೀನಾಮೆ ಪ್ರಕ್ರಿಯೆಯನ್ನು ಮೈಸೂರಿನಿಂದ ಪ್ರಾರಂಭಿಸುತ್ತಿದ್ದೇವೆ ಎಂದು ಅಬ್ದುಲ್ ಖಾದರ್ ಶಾಹಿದ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮೈಸೂರಿನ 3,000 ಜೆಡಿಎಸ್ ಕಾರ್ಯಕರ್ತರು ಸೇರಿದಂತೆ ರಾಜ್ಯದಾದ್ಯಂತ 30 ಸಾವಿರಕ್ಕೂ ಹೆಚ್ಚು ಜೆಡಿಎಸ್ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಜೆಡಿಎಸ್ ಜಾತ್ಯತೀತ ಪಕ್ಷವಾಗಿದೆ. ನಮಗೆ ಮಾಜಿ ಪ್ರಧಾನಿ ಹೆಚ್ ಡಿ […]

Continue Reading

ಅಕ್ಟೋಬರ್ ಮೊದಲ ವಾರವೇ ರಾಜ್ಯ ಬಿಜೆಪಿಗೆ ಹೊಸ ಸಾರಥ್ಯ ಸಾಧ್ಯತೆ.

ಬಿ.ವೈ. ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರ ಪಟ್ಟಕ್ಕೆ ಚಿಂತನೆ.! ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಐದು ತಿಂಗಳು ಕಳೆದು ಗ್ಯಾರಂಟಿ ಯೋಜನೆಗಳು ಒಂದೊಂದಾಗಿ ಜಾರಿಮಾಡಿ, ಕಾಂಗ್ರೆಸ್‌ ಪಕ್ಷದ ನಾಯಕರು ಲೋಕಸಭೆ ಚುನಾವಣೆಗೆ ಚಾಲನೆಯನ್ನೂ ಕೊಟ್ಟಿದ್ದಾರೆ. ಆದರೆ ಬಿಜೆಪಿ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಯ್ಕೆ ಮಾಡಲು ಸಾದ್ಯವಾಗಿಲ್ಲ. ಅಲ್ಲದೆ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವ ಸಾಹಸಕ್ಕೂ ಕೈ ಹಾಕಿಲ್ಲ. ಇದೀಗ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಬಿಜೆಪಿ ಘಟಕಕ್ಕೆ ವಾರದಲ್ಲಿಯೇ ಹೊಸ ಅಧ್ಯಕ್ಷರ […]

Continue Reading

ಪತ್ರಕರ್ತರಿಗೆ ಭರ್ಜರಿ ಡಾಭಾ ಮೀಲ್ಸ್: ‘ಮಹಾ’ ಬಿಜೆಪಿ ಅಧ್ಯಕ್ಷ ಯಡವಟ್ಟು

“ಋಣಾತ್ಮಕ ಪ್ರಚಾರ ತಡೆಯಲು ಪತ್ರಕರ್ತರು, ಮಾಧ್ಯಮ ಮಿತ್ರರನ್ನು ಢಾಭಾಗಳಿಗೆ ಕರೆದುಕೊಂಡು ಹೋಗಿ ಚೆನ್ನಾಗಿ ನೋಡಿಕೊಳ್ಳಿ” ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಭಾವಾಂಕುಲೆ ಅವರ ಧ್ವನಿ ಎಂದು ಹೇಳಲಾದ ಆಡಿಯೋ ವೈರಲ್ ಆಗಿದ್ದು, “ಚುನಾವಣೆ ಸಂದರ್ಭದಲ್ಲಿ ಋಣಾತ್ಮಕ ಪ್ರಚಾರದಿಂದ ಪಾರಾಗಲು ಪತ್ರಕರ್ತರು, ಮಾಧ್ಯಮ ಮಿತ್ರರಿಗೆ ಒಳ್ಳೆಯ ಊಟೋಪಚಾರ ಮಾಡುವ ಮೂಲಕ ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮತಗಟ್ಟೆಗಳ […]

Continue Reading

ಲಿಂಗ ಬದಲಾವಣೆಗೆ ಅನುಮತಿ ನೀಡುವಂತೆ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳಿಂದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ

ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್ ಇಲಾಖೆಯನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. ಗೋರಖ್‌ಪುರ ಮತ್ತು ಗೊಂಡಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಮಹಿಳಾ ಪೊಲೀಸ್ ಪೇದೆಗಳು ಇಂತಹದೊಂದು ಮನವಿ ಮಾಡಿದ್ದು, ಈ ಇಬ್ಬರು ಕಾನ್ಸ್‌ಟೇಬಲ್‌ಗಳಿಗೆ ತಮ್ಮ ಲಿಂಗ ಬದಲಾಯಿಸಿಕೊಳ್ಳಲು ಅನುಮತಿ ನೀಡುವುದು ಹೇಗೆ ಎಂಬುದು ಪೊಲೀಸ್​ ಅಧಿಕಾರಿಗಳ ಮಧ್ಯೆ ತಲೆನೋವು ತಂದಿಟ್ಟಿದೆ. ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಲಿಂಗ […]

Continue Reading

ಇಂದಿನಿಂದ ಸೆ.30 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ

ಸಾರ್ವಜನಿಕರ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಾಧಿಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್ 23 ರಿಂದ ಸೆಪ್ಟೆಂಬರ್ 30 ರವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಕಾರ್ಯ ನಿರ್ವಹಿಸಲಿವೆ. ಅಕ್ಟೋಬರ್ 1 ರಿಂದ ಮಾರ್ಗಸೂಚಿ ದರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಸ್ತಿ ನೋಂದಣಿಗಾಗಿ ನಾಗರೀಕರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಮುಗಿ ಬೀಳುತ್ತಿದ್ದಾರೆ. ಪರಿಣಾಮ ಕಾವೇರಿ-2 ತಂತ್ರಾಂಶದಲ್ಲಿ ದೋಷ ಕಾಣಿಸಿಕೊಂಡು ಗುರುವಾರದಂದು ನೋಂದಣಿ ಪ್ರಕ್ರಿಯೆ ವಿಳಂಬವಾಗಿತ್ತು. ಸರ್ವರ್ ಸಮಸ್ಯೆಯಿಂದಾಗಿ ಹೆಚ್ಚಿನ ದಸ್ತಾವೇಜುಗಳ ನೋಂದಣಿ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ […]

Continue Reading

ಕೋಳಿ ಸಾಕಾಣಿಕೆ ವಾಣಿಜ್ಯ ಚಟುವಟಿಕೆ ಅಲ್ಲ; ತೆರಿಗೆ ವಿಧಿಸುವ ಅಧಿಕಾರ ಗ್ರಾಪಂಗೆ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಕೃಷಿ ಭೂಮಿಯಲ್ಲಿ ಕೋಳಿ ಸಾಕಾಣಿಕೆ ಮಾಡುವುದು ವಾಣಿಜ್ಯ ಚಟುವಟಿಕೆ ಅಲ್ಲ; ಅದು ಕೃಷಿ ಚಟುವಟಿಕೆಯಾಗಿದ್ದು, ಹೀಗಾಗಿ ಗ್ರಾಮ ಪಂಚಾಯತ್ ವಾಣಿಜ್ಯ ಕಟ್ಟಡವೆಂದು ತೆರಿಗೆ ವಿಧಿಸುವಂತಿಲ್ಲ, ಕೋಳಿ ಸಾಕಾಣಿಕೆಗಾಗಿ ಕೃಷಿ ಭೂಮಿ ಪರಿವರ್ತನೆ ಅಗತ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಅಭಿಪ್ರಾಯಪಟ್ಟಿದೆ. ತನ್ನ ಕೋಳಿ ಸಾಕಾಣಿಕೆ ಕೇಂದ್ರಕ್ಕೆ ತೆರಿಗೆ ವಿಧಿಸಿದ್ದ ಗ್ರಾಮ ಪಂಚಾಯತ್ ಕ್ರಮ ಪ್ರಶ್ನಿಸಿ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಕೆ.ನರಸಿಂಹಮೂರ್ತಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ […]

Continue Reading

ರಾಜ್ಯದ ಸಂಸದರು ಪ್ರಧಾನಿ ಮೋದಿ ಮುಂದೆ ಬಾಯಿ ಬಿಡಲು ಹೆದರುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ಕಾವೇರಿ ನೀರು ನಿರ್ವಹಣೆ ವಿಷಯದಲ್ಲಿ ರಾಜ್ಯದ ಸಂಸದರು ಪ್ರಧಾನಿ ಮುಂದೆ ಬಾಯಿ ಬಿಡಲು ಹೆದರುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಂಸದರ ಬಗ್ಗೆ ಬಹಿರಂಗವಾಗಿ ಟೀಕೆ ಮಾಡಬಾರದು. ಇದರಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ಬಿಜೆಪಿಯವರು ಮನವಿ ಮಾಡಿಕೊಂಡಿದ್ದಾರೆ. ಹೊರಗೆ ಬಂದು ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿಯವರನ್ನು ಟೀಕೆ ಮಾಡುತ್ತಾರೆ. ಪ್ರಧಾನಿಯವರ ಬಳಿ ಮಾತನಾಡಲು ಅವರಿಗೆ ಧೈರ್ಯವಿಲ್ಲ. ಕನಿಷ್ಠ ನಮಗೆ ಪ್ರಧಾನಿ ಭೇಟಿಯಾದರೂ […]

Continue Reading

ಖಾಸಗಿ ಶಾಲೆಗಳ ಮಾನ್ಯತೆಗೆ ನಿಗದಿಪಡಿಸಿದ್ದ ಮಾನದಂಡಗಳಿಗೆ ಬಿಗ್ ರಿಲೀಫ್.! ಮುಚ್ಚಳಿಕೆ ಪತ್ರ ಬರೆಸಿಕೊಂಡು ಈ ವರ್ಷದ ಮಟ್ಟಿಗೆ ಮಾನ್ಯತೆ

ಶಿಕ್ಷಣ ಇಲಾಖೆಯಿಂದ ಖಾಸಗಿ ಶಾಲೆಗಳಿಗೆ ಮಾನ್ಯತೆ ನೀಡಲು ನಿಗದಿಪಡಿಸಿದ್ದ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆ, ಭೂ ಪರಿವರ್ತನೆ ಮತ್ತಿತರ ಕಠಿಣ ಮಾನದಂಡಗಳನ್ನು ತಾತ್ಕಾಲಿಕವಾಗಿ ಕೈಬಿಡಿಲಾಗಿದೆ. ಈ ಬಗ್ಗೆ ಮುಚ್ಚಳಿಕೆ ಪತ್ರ ಬರೆಸಿಕೊಂಡು ಈ ವರ್ಷದ ಮಟ್ಟಿಗೆ ಮಾನ್ಯತೆ ನವೀಕರಿಸೋದಕ್ಕೆ ಅನುಮತಿಸಿದೆ. ಈ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳ ಬಹುದಿನಗಳ ಬೇಡಿಕೆಗೆ ಸದ್ಯದ ಮಟ್ಟಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ […]

Continue Reading