ನಕಲಿ ಜಾತಿ ಪ್ರಮಾಣಪತ್ರ: ಗ್ರಾ. ಪಂ. ಮಾಜಿ ಅಧ್ಯಕ್ಷೆಗೆ ಏಳು ವರ್ಷ ಜೈಲು ಶಿಕ್ಷೆ

ಸುಳ್ಳು ದಾಖಲೆ ಸೃಷ್ಟಿ ಮಾಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತ್‌ ಸದಸ್ಯೆಯಾಗಿ ಬಳಿಕ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದ ಮಹಿಳೆಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಶಿಗ್ಗಾಂವಿ ಪೊಲೀಸರು ದಾಖಲಿಸಿದ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ ಏಳು ವರ್ಷಗಳ ಜೈಲು ಶಿಕ್ಷೆ ಜೊತೆಗೆ 19 ಸಾವಿರ ರೂ. ದಂಡ ವಿಧಿಸಿದೆ. ಶಿಗ್ಗಾಂವಿ ತಾಲೂಕಿನ ವನಹಳ್ಳಿ ಗ್ರಾಮದ ಲಕ್ಷ್ಮೀ […]

Continue Reading

ಬಾಲ್ಯವಿವಾಹ ನಿಷೇಧ ಜಾರಿ ಇದ್ದರೂ ರಾಜ್ಯದಲ್ಲಿ 3.5 ವರ್ಷದಲ್ಲಿ 45,567 ಬಾಲ ತಾಯಂದಿರ ಸಂಖ್ಯೆ ಹೆಚ್ಚಳವಾಗಿದೆ

ಬಾಲ್ಯವಿವಾಹ ನಿಷೇಧ ಜಾರಿಯಲ್ಲಿದ್ದರೂ,ರಾಜ್ಯದಲ್ಲಿ ಮೂರುವರೆ ವರ್ಷದಲ್ಲಿ 45,567 ಬಾಲ ತಾಯಂದಿರ ಸಂಖ್ಯೆ ಹೆಚ್ಚಳವಾಗಿದೆ.ಕೋವಿಡ್ ನಂತರದ ವರ್ಷ 2022 ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರಕರಣಗಳು ನಡೆದಿವೆ. ಇನ್ನು ಬೆಂಗಳೂರು ನಗರದಲ್ಲೇ 6,207 ಬಾಲ ತಾಯಂದಿರ ಸಂಖ್ಯೆ ದಾಖಲಾಗಿದೆ. 30 ಜಿಲ್ಲೆಗಳ ಪೈಕಿ ಬೆಂಗಳೂರಿನಲ್ಲೇ ಹೆಚ್ಚು ಪ್ರಕರಣ ಇವೆ. ಬೆಂಗಳೂರು ನಗರದಲ್ಲಿ 2020 ರಲ್ಲಿ 1,794 ಬಾಲ ತಾಯಂದಿರ ಸಂಖ್ಯೆ ದಾಖಲಾಗಿತ್ತು. ಇನ್ನು 2022 ರಲ್ಲಿ 2,137 ಬಾಲ ತಾಯಂದಿರ ಸಂಖ್ಯೆ ಹೆಚ್ಚಾಗಿದೆ. ಕಲಬುರಗಿ, […]

Continue Reading

ಅಲ್ಪಸಂಖ್ಯಾತ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ;ನಕಲಿ ದಾಖಲೆ ಸೃಷ್ಠಿಸಿ ಕೋಟಿ,ಕೋಟಿ ಲೂಟಿ.! ಸಿಬಿಐ ವರದಿಯಲ್ಲಿ ಬಹಿರಂಗ

ಅಲ್ಪಸಂಖ್ಯಾತರ ಶಿಷ್ಯವೇತನ ಕಾರ್ಯಕ್ರಮದಲ್ಲಿ ಕಳೆದ 5 ವರ್ಷದಲ್ಲಿ 144.5 ಕೋಟಿ ರೂ. ದುರ್ಬಳಕೆ ಆಗಿದ್ದು, ನಕಲಿ ದಾಖಲೆಗಳ ಮೂಲಕ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಸಿಬಿಐ ವರದಿಯಲ್ಲಿ ಬಹಿರಂಗವಾಗಿದೆ. ಸಿಬಿಐ ತನಿಖೆಯಲ್ಲಿ ಅಲ್ಪ ಸಂಖ್ಯಾತ ಕಾರ್ಯಕ್ರಮಗಳಲ್ಲಿ ಶೇ.53ರಷ್ಟು ಭ್ರಷ್ಟಾಚಾರ ನಡೆದಿದ್ದು, ಸುಮಾರು 830 ಸಂಸ್ಥೆಗಳಿಂದ ನಕಲಿ ದಾಖಲೆ ಮೂಲಕ ಅರ್ಹರಿಗೆ ಶಿಷ್ಯವೇತನ ನೀಡದೇ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಅಲ್ಪಸಂಖ್ಯಾತರ ವ್ಯವಹಾರಗಳ ಅಧಿಕಾರಿಗಳು ನೀಡಿದ ದೂರಿನ ಅನ್ವಯ ನಡೆದ ಸಿಬಿಐ 34 ರಾಜ್ಯಗಳ 100 ಜಿಲ್ಲೆಗಳಲ್ಲಿ […]

Continue Reading

ಒಮ್ಮೆ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ.

ಯುದ್ಧದ ಭೀತಿಯಿದೆ.ಭೂಕಂಪ, ಸುನಾಮಿಯಿಂದ ಸಾವು- ನೋವು ಸಂಭವಿಸಲಿವೆ.ವಿಷಾನಿಲ ಬೀಸುವ ಪ್ರಸಂಗವಿದೆ. ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಒಮ್ಮೆ ಮಹಿಳೆಯರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಯೋಗ ಬರಲಿದೆ. ಅವರಿಗೂ ಅವಕಾಶ ಸಿಗಲಿ’ ಎಂದು ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಹೇಳಿದರು.ಈ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಆಗುವ ಯೋಗ ಇದೆಯೇ?’ ಎಂಬ ಸುದ್ದಿಗಾರರ ಪ್ರಶ್ನೆಗೆ,ಹೀಗೆ ಪ್ರತಿಕ್ರಿಯಿಸಿದರು. ಶ್ರಾವಣ ಮಾಸದ ಮಧ್ಯದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಭೀತಿಯಿದೆ. ಭೂಕಂಪ, ಸುನಾಮಿಯಿಂದ ಹೆಚ್ಚಿನ ಜನರ ಸಾವು-ನೋವು ಸಂಭವಿಸಲಿವೆ.ವಿಷಾನಿಲ ಬೀಸುವ ಪ್ರಸಂಗವಿದೆ. ಅದು […]

Continue Reading

ಆಢಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹೊಸ ಪ್ರಯೋಗ; ಪ್ರತಿ ತಾಲೂಕಿಗೊಬ್ಬರು KAS ಶ್ರೇಣಿಯ ಅಧಿಕಾರಿ ಉಸ್ತುವಾರಿ

ರಾಜ್ಯಾಧ್ಯಂತ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕ ರೀತಿಯಲ್ಲಿ ಅನುಷ್ಠಾನ, ಜನಪರ ಯೋಜನೆಗಳ ಜಾರಿ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆ ಎಎಸ್ ಅಧಿಕಾರಿಗಳೆಲ್ಲರೂ ರಾಜ್ಯದವರೇ ಆಗಿರುತ್ತಾರೆ. ರಾಜ್ಯದ ಅಭಿವೃದ್ಧಿಗೆ ಅವರಿಗೆ ವಿಶೇಷ ಆಸಕ್ತಿ ಇರುತ್ತದೆ. ಇಂತಹ ಅಧಿಕಾರಿಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಚಿಂತನೆಯನ್ನುನಡೆಸಿದ್ದಾರೆ. ಈಗಾಗಲೇ ಪ್ರತಿ ಜಿಲ್ಲೆಗೆ ಓರ್ವ ಐಎಎಸ್ ಅಧಿಕಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ. ಅವರು ಸರ್ಕಾರ ಕೊಟ್ಟ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಪ್ರಕೃತಿ ವಿಕೋಪದಂತ ಸಂದರ್ಭದಲ್ಲಿ ಅನೇಕರು ಜಿಲ್ಲೆಗೆ ಭೇಟಿ […]

Continue Reading

ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನಕ್ಕೆ ಯಡಿಯೂರಪ್ಪ ಎಂಟ್ರಿ.. ಬಾಂಬೆ ಬಾಯ್ಸ್ ಕಟ್ಟಿ ಹಾಕ್ತಾರಾ ಯಡ್ಡಿ..?

ಬಿಜೆಪಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪಕ್ಷದಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಶುಕ್ರವಾರದಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಡೆಸಿದ ಬೆಂಗಳೂರು ಶಾಸಕರ ಸಭೆಯಲ್ಲಿ ಅಸಹನೆ ಸ್ಪೋಟವಾಗಿದೆ.ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ವಲಸೆ ಬಂದಿದ್ದ ಶಾಸಕರಲ್ಲಿ ಕೆಲವರಿಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ ಹಾಗೂ ಮುಜುಗರ ಶಮನ ಮಾಡುವ ಸಲುವಾಗಿ ಬಿಎಸ್ ವೈ ಸಭೆ ಕರೆದಿದ್ದರು. ಟಿಕೆಟ್ ಹಂಚಿಕೆಯಿಂದ ಆರಂಭವಾದ ಅವ್ಯವಸ್ಥೆ ಇದೀಗ ವಿಪಕ್ಷ ನಾಯಕನ ಆಯ್ಕೆಗೂ ತಡೆಯಾಗಿ ಒಟ್ಟಾರೆ ರಾಜ್ಯ ಬಿಜೆಪಿಗೆ ದಿಕ್ಕಿಲ್ಲದ ಸ್ಥಿತಿ ನಿರ್ಮಾಣವಾಗಲು ದೆಹಲಿ ನಾಯಕರೊಬ್ಬರು ಕಾರಣವೆಂದು […]

Continue Reading

ಬಿಜೆಪಿ ಸರಕಾರದ 40% ಲಂಚ ಪ್ರಕರಣ: ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್ ‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸರಕಾರ ಆದೇ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕಾಮಗಾರಿಗಳ ಟೆಂಡರ್‌,ಮತ್ತಿತರ ವಿಷಯಗಳಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ್ದ ಆರೋಪದ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.ಈ ಸಮಿತಿಯು ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ, ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಅದಕ್ಕೆ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ 30 ದಿನಗಳ ಒಳಗೆ ಸಲ್ಲಿಸಬೇಕು ಎಂದೂ […]

Continue Reading

ರಾಜ್ಯದಾದ್ಯಂತ ಡೆಂಗ್ಯೂ ಆರ್ಭಟ..!

ಕರಾವಳಿ ಭಾಗದಲ್ಲಿ 236 ಪ್ರಕರಣಗಳು ಪತ್ತೆ ಮಳೆ ಮತ್ತು ತಾಪಮಾನದ ಕುಸಿತವು ನಗರದಲ್ಲಿ ಆರೋಗ್ಯದ ಕಾಳಜಿಗೆ ಕಾರಣವಾಗುತ್ತಿದೆ. ರಾಜ್ಯದಾದ್ಯಂತ ಸಾಂಕ್ರಾಮಿಕ ರೋಗಗಳು, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ. 2022ಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಶೇ.22ರಷ್ಟು ಏರಿಕೆಗಳು ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ ಜನವರಿಯಿಂದ ಆಗಸ್ಟ್ ವರೆಗೆ 4,507 ಡೆಂಗ್ಯು ಪ್ರಕರಣಗಳು ಪತ್ತೆಯಾಗಿದ್ದವು. ಆದರೆ, ಈ ವರ್ಷ ಆಗಸ್ಟ್ 11 ರವರೆಗೆ, 5,526 ಡೆಂಗ್ಯೂ […]

Continue Reading

ನಿವೃತ್ತ ಅಧಿಕಾರಿಗೆ ಹನಿಟ್ರ್ಯಾಪ್ ಮಾಡಿ 82 ಲಕ್ಷ ರೂಪಾಯಿ ಸುಲಿಗೆ ಮಾಡಿದ ಅಕ್ಕ, ತಂಗಿ

ನಿವೃತ್ತ ಅಧಿಕಾರಿಗೆ ಹನಿಟ್ರ್ಯಾಪ್ ಮಾಡಿ 82 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಅಕ್ಕ, ತಂಗಿ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಅಣ್ಣಮ್ಮ (40), ಸ್ನೇಹಾ (25) ಮತ್ತು ಆಕೆಯ ಪತಿ ಲೋಕೇಶ್ (30) ಬಂಧಿತ ಆರೋಪಿಗಳಾಗಿದ್ದಾರೆ. ಸ್ನೇಹಿತರ ಮೂಲಕ ನಿವೃತ್ತ ಅಧಿಕಾರಿಗೆ ಅಣ್ಣಮ್ಮ ಪರಿಚಯವಾಗಿತ್ತು. ಆಕೆಯ ಪುತ್ರನಿಗೆ ಕ್ಯಾನ್ಸರ್ ಇದ್ದ ಕಾರಣ ಮಾಹಿತಿ ತಿಳಿದ ಅಧಿಕಾರಿ 5000 ರೂಪಾಯಿ ನೆರವು ನೀಡಿದ್ದರು. ಹೋಟೆಲ್ ಗೆ ಅಧಿಕಾರಿಯನ್ನು ಕರೆಸಿಕೊಂಡಿದ್ದ ಅಣ್ಣಮ್ಮ ಸಲುಗೆಯಿಂದ ದೃಶ್ಯದ […]

Continue Reading

ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರಿ ಬದಲಾವಣೆ, ಬಿಜೆಪಿಯ ಐವರು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ

ರಾಜ್ಯ ರಾಜಕೀಯದಲ್ಲಿ ಶೀಘ್ರವೇ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಬಾಂಬೆ ಬಾಯ್ಸ್ ಶಾಸಕರಲ್ಲಿ ಕೆಲವರು ಕಾಂಗ್ರೆಸ್ ಗೆ ಮರಳುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಒಬ್ಬ ಶಾಸಕರು ಪಕ್ಷಾಂತರ ಮಾಡಲಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ನಾಲ್ಕರಿಂದ ಐದು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಹಾಲಿ ಶಾಸಕರಲ್ಲಿ ಕೆಲವರು ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಕಾಂಗ್ರೆಸ್ ಆಪರೇಷನ್ ಹಸ್ತ ಕಾರ್ಯತಂತ್ರ ರೂಪಿಸಿದೆ. ಲೋಕಸಭೆ ಚುನಾವಣೆಯಲ್ಲಿ […]

Continue Reading