ಪತ್ನಿಯಂತೆ ತಾಯಿಯನ್ನೇಕೆ ಸಾಕಲಾಗಲ್ಲ?: ಹೈಕೋರ್ಟ್ ಖಡಕ್ ಪ್ರಶ್ನೆ

ನಾವು ರೊಟ್ಟಿಗಿಂತ ರಕ್ತ ದುಬಾರಿಯಾಗಿರುವ ಕಾಲದಲ್ಲಿ ಜೀವಿಸುತ್ತಿದ್ದೇವೆ. ದುಡಿಯಲು ಸಮರ್ಥನಾದ ವ್ಯಕ್ತಿ ತನ್ನ ಪತ್ನಿಯನ್ನು ನೋಡಿಕೊಳ್ಳಬಹುದಾದರೆ ಅವಲಂಬಿತ ತಾಯಿಯನ್ನೇಕೆ ನೋಡಿಕೊಳ್ಳಬಾರದು ಎಂದು ಪ್ರಶ್ನಿಸಿದ ಹೈಕೋರ್ಟ್, ವೃದ್ಧ ತಾಯಿಯ ಜೀವನ ನಿರ್ವಹಣೆಗಾಗಿ ಮಾಸಿಕ 10 ಸಾವಿರ ರೂಪಾಯಿ ಪಾವತಿಸುವಂತೆ ಆದೇಶ ನೀಡಿದೆ. 84 ವರ್ಷದ ವೃದ್ಧ ತಾಯಿಯ ಜೀವನ ನಿರ್ವಹಣೆಗೆ ಮಾಸಿಕ ಹಣ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಆಕೆಯ ಪುತ್ರರಿಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ 5 ಸಾವಿರ ರೂಪಾಯಿ ದಂಡ ವಿಧಿಸಿದೆ. […]

Continue Reading

ಅಗಸ್ಟ್ ಮೊದಲ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ಸಾಧ್ಯತೆ; ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಸಿಹಿ ಸುದ್ದಿ.

ಅಗಸ್ಟ್ ಮೊದಲ ವಾರದಲ್ಲಿ ನಿಗಮ ಮಂಡಳಿ ನೇಮಕಾತಿ ನಡೆಯುವ ಸಾಧ್ಯತೆ ಇದ್ದು, ನೇಮಕಾತಿ ಪ್ರಕ್ರಿಯೆ ಸುಳಿವು ಸಿಕ್ಕ ಬೆನ್ನಲ್ಲೇ ರಾಜ್ಯದಾದ್ಯಂತ ಆಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದಾರೆ.ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ನೇಮಕಾತಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಲು ಕಾಂಗ್ರೆಸ್ ಚಿಂತನೆ ನಡೆಸಿದ್ದು, 70 ರಷ್ಟು ಹುದ್ದೆಗಳನ್ನು ಕಾರ್ಯಕರ್ತರಿಗೆ, ಶೇಕಡಾ 30 ರಷ್ಟು ಹುದ್ದೆಗಳನ್ನು ಶಾಸಕರಿಗೆ ನೀಡಲಾಗುವುದು. ರಾಜ್ಯ ಸರಕಾರದ ವಿವಿಧ ಸಚಿವಾಲಯಗಳ ಅಡಿ 80 ರಿಂದ 90 ನಿಗಮ ಮಂಡಳಿಗಳಿದ್ದು, ಈ ಬಾರಿ ಎರಡೂವರೆ ವರ್ಷಕ್ಕೆ […]

Continue Reading

ಜನನ, ಮರಣ ಪ್ರಮಾಣ ಪತ್ರ ಗ್ರಾಮ ಪಂಚಾಯತಿನಲ್ಲೇ ಪಡೆಯಲು ಆದೇಶ

ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಜನನ ಮತ್ತು ಮರಣ ನೊಂದಣಿ ಪ್ರಮಾಣ ಪತ್ರಗಳನ್ನು ಪಡೆಯಲು ಅನುಕೂಲ ಕಲ್ಪಿಸಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸುತ್ತೋಲೆ ಹೊರಡಿಸಿದೆ. ಗ್ರಾಮ ಪಂಚಾಯಿತಿ ಕಚೇರಿಗಳಲ್ಲೇ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆಯಬಹುದು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿ ಒಂದೂವರೆ ವರ್ಷ ಕಳೆದಿದೆ. ಆದರೆ ಇನ್ನೂ ಗ್ರಾ.ಪಂ ಗಳಲ್ಲಿ ಈ ಪ್ರಮಾಣ ಪತ್ರಗಳ ವಿತರಣೆ ಆರಂಭವಾಗಿಲ್ಲ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿ ಬಲಪಡಿಸಲು ಹಾಗೂ ಘಟಿಸುವ ಶೇ.100 […]

Continue Reading

ರಾಜ್ಯದ ಎಲ್ಲ ಎಸ್ಪಿ ಹಾಗೂ ಕಮಿಷನರ್‌ಗಳಿಗೆ ಖಡಕ್ ಸೂಚನೆ ನೀಡಿದ ಎಡಿಜಿಪಿ ಆರ್.ಹಿತೇಂದ್ರ

5 ವರ್ಷ ಸೇವೆ ಮೀರಿದ ಎಎಸ್‌ಐ, ಹೆಡ್‌ ಕಾನ್‌ಸ್ಟೆಬಲ್, ಕಾನ್‌ಸ್ಟೆಬಲ್‌ಗಳ ವರ್ಗಾವಣೆ ಮಾಡಬೇಕು ರೌಡಿಗಳು ಪದೇ ಪದೇ ಅಪರಾಧ ಎಸಗಿದರೆ,ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕ್ರಮ ಕೈಗೊಳ್ಳಬೇಕು.ಯಾರಾದರೂ ಪದೇ ಪದೇ ಅಪರಾಧ ಎಸಗಿ ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡಿದರೆ, ಅಂಥವರ ಹೆಸರನ್ನು ರೌಡಿ ಪಟ್ಟಿಗೆ ಸೇರಿಸಲು ಪ್ರಕ್ರಿಯೆ ಆರಂಭಿಸಬೇಕು ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್‌. ಹಿತೇಂದ್ರ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೆಲದಿನಗಳಿಂದ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದ್ದು, ಪೊಲೀಸರ ಕಾರ್ಯವೈಖರಿ […]

Continue Reading

ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಮಾಡಲು ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ರಾಜ್ಯ ಸರಕಾರದ ಅನ್ನ ಭಾಗ್ಯಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದ.ಕ. ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋ.ರೂ. ಬಿಡುಗಡೆಯಾಗಿದೆ. ಹಣ ಜಮೆ ಕುರಿತ ಮಾಹಿತಿಗೆ ಲಿಂಕ್ https://ahara.kar.nic.in/status2/status-of-dbt.aspx ಪರಿಶೀಲಿಸಬಹುದು. ಜಿಲ್ಲೆಯ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಜುಲೈ […]

Continue Reading

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ: ಸತ್ಯಶೋಧನೆಗೆ ಮುಂದಾಗಿರುವ ಬಿಜೆಪಿ ಟೀಮ್ ಗೆ ಆಘಾತ.! ಬಿಜೆಪಿ ಸದಸ್ಯನ ತಮ್ಮನೇ ಆರೋಪಿ

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆಗೆ ಮುಂದಾಗಿರುವ ಬಿಜೆಪಿ ಟೀಮ್ ಗೆ ಆರಂಭದಲ್ಲೇ ಆಘಾತವಾಗಿದೆ. ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣ ಸಂಬಂಧ,ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.ಒಂದನೇ ಆರೋಪಿ ಮಣಿಕಂಠ ಹಾಗೂ ಎರಡನೇ ಆರೋಪಿ ಸಂದೇಶ್ ನನ್ನು ಬಂಧಿಸಲಾಗಿತ್ತು. ಆದರೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರನ್ನು ಅನಿಲ್, ಶಂಕರ್ @ ತುಪ್ಪ, ಮಂಜು ಹಾಗೂ ಹ್ಯಾರಿಸ್ ಎಂದು ಗುರುತಿಸಲಾಗಿದೆ. ಈ ಮೂಲಕ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್ ನಲ್ಲಿ ಬಂಧಿತ […]

Continue Reading

ಜೈನಮುನಿಯನ್ನೇ ಹತ್ಯೆಗೈದ ಖತರ್ನಾಕ್ ಪಾಪಿಗಳು; ಕೊಟ್ಟ ಹಣ ಮರಳಿ ಕೇಳಿದ್ದಕ್ಕೆ ಮನಿಗಳನ್ನೇ ಮುಗಿಸಿ ಬಿಟ್ಟರು.!

ಚಿಕ್ಕೊಡಿಯ ಹಿರೇಕೋಡಿ ಆಶ್ರಮದ ಜೈನಮುನಿ ಕಾಮಕುಮಾರ ನಂದಿಮಹಾರಾಜರ ಸ್ವಾಮೀಜಿಗೆ ಕರೆಂಟ್ ಶಾಕ್ ನೀಡಿ ಟಾರ್ಚರ್ ನೀಡಿ, ನಂತರ ದೇಹವನ್ನು ತುಂಡು ತುಂಡಾಗಿ ಭೀಕರವಾಗಿ ಕತ್ತರಿಸಿ ಕೊಲೆ ಮಾಡಲಾಗಿದೆ.ಜುಲೈ 5ರಂದು ನಾಪತ್ತೆಯಾಗಿದ್ದ ಸ್ವಾಮೀಜಿ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಪೊಲೀಸರು ಬೆನ್ನಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದರು. ಆಗ ಪ್ರಕರಣದ ಭಯಾನಕತೆ ಹೊರಬಿದ್ದಿದೆ. ಕೊಳವೆ ಬಾವಿಯಲ್ಲಿ ಶವ ಎಸೆದಿರುವುದಾಗಿ ಆರೋಪಿ ನಾರಾಯಣ ಮಾಳಿ, ಹುಸೇನ್ ಒಪ್ಪಿಕೊಂಡಿದ್ದರು.ಹೀಗಾಗಿ ಕೊಳವೆ ಬಾವಿಯಲ್ಲಿ ಶೋಧ […]

Continue Reading

ಬೆಂಗಳೂರಿನಲ್ಲಿ ಕಲಿಯುತ್ತಿರುವ, ಉಧ್ಯೋಗ ಮಾಡುತ್ತಿರುವ ಯುವತಿಯರಿಗೆ ಉಚಿತ ಹಾಸ್ಟೇಲ್ ಸೌಲಭ್ಯ ನೀಡುತ್ತಿರುವ ಹಮೀದ್ ಷಾ ಕಾಂಪ್ಲೆಕ್ಸ್

ಹಾಸ್ಟೇಲ್ ಸೌಲಭ್ಯಕ್ಕೆ ಕಮ್ಯೂನಿಟಿ ಸೆಂಟರನ್ನು ಸಂಪರ್ಕಿಸಲು ಜನಾಬ್ ಜಿ.ಎ ಬಾವಾ ವಿನಂತಿ ಬೆಂಗಳೂರಿನಲ್ಲಿ ರಾಜ್ಯ ಹಾಗೂ ಹೊರ ರಾಜ್ಯದ ಮುಸ್ಲಿಂ ಮಹಿಳೆಯರ ಅನುಕೂಲಕ್ಕಾಗಿ ಹಮೀದ್ ಷಾ ಕಾಂಪ್ಲೆಕ್ಸ್ ಟ್ರಸ್ಟ್ ನಿರ್ಮಿಸಿದ ಭವ್ಯ ಸೌಲಭ್ಯಪೂರ್ಣ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ವಸತಿ ಸೌಲಭ್ಯ ನೀಡಲಾಗುತ್ತಿದೆ. ಸುಸಜ್ಜಿತವಾಗಿ ನಿರ್ಮಿಸಿರುವ, ಸುರಕ್ಷೆಗೆ ಪ್ರಮುಖ ಆಧ್ಯತೆ ನೀಡಿರುವ ಈ ಇಸ್ಲಾಮಿಕ್ ವಾತಾವರಣದ ಹಾಸ್ಟೇಲ್ ನಲ್ಲಿ ಅತ್ಯುತ್ತಮ ಆಹಾರ ಒದಗಿಸಲಾಗುತ್ತಿದೆ. ಬೆಂಗಳೂರೆಂಬ ಮಾಯಾನಗರಿಯಲ್ಲಿ ಮುಸ್ಲಿಂ ಯುವತಿಯರಿಗೆ ಅತ್ಯುತ್ತಮ ಆಶ್ರಯ ತಾಣವಾಗಿರುವ ಹಮೀದ್ ಷಾ ಹಾಸ್ಟೇಲ್ […]

Continue Reading

ಗ್ರಾ.ಪಂ. ಸದಸ್ಯರು ಮೂರು ತಿಂಗಳೊಳಗೆ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ: ಹೈಕೋರ್ಟ್ ಮಹತ್ವದ ತೀರ್ಪು

ಗ್ರಾಮ ಪಂಚಾಯತ್ ಸದಸ್ಯರ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳ ಒಳಗಾಗಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವೆಂದು ತಿಳಿಸಲಾಗಿದ್ದು, ಒಂದೊಮ್ಮೆ ಇದಕ್ಕೆ ವಿಫಲವಾದರೆ ಶೋಕಾಸ್ ನೋಟಿಸ್ ನೀಡದೆಯೂ ಸದಸ್ಯತ್ವದಿಂದ ಅನರ್ಹಗೊಳಿಸಬಹುದು ಎಂದು ಅಭಿಪ್ರಾಯ ಪಟ್ಟಿದೆ. ನಿಗದಿತ ಅವಧಿ ಒಳಗೆ ಆಸ್ತಿ ವಿವರ ಸಲ್ಲಿಸದ ಕಾರಣಕ್ಕೆ ಕಲಬುರಗಿ ಜಿಲ್ಲೆ ಅಳಂದ ತಾಲೂಕಿನ ಮೊಘಾ ಗ್ರಾಮ ಪಂಚಾಯಿತಿ ಸದಸ್ಯೆ ಲಲಿತಾಬಾಯಿ ಪಾಟೀಲ್ ಅವರನ್ನು ರಾಜ್ಯ ಚುನಾವಣಾ ಆಯೋಗ ಸದಸ್ಯತ್ವದಿಂದ […]

Continue Reading

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ 512 ಅಪಘಾತ,123 ಜನರ ಸಾವು, 585 ಜನರಿಗೆ ಗಂಭೀರ ಗಾಯ.

ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ವೇಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.ವಿಧಾನಪರಿಷತ್ತಿನಲ್ಲಿ ಎಂಎಲ್ ಸಿ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಕ್ಸ್‌ಪ್ರೆಸ್‌ ವೇ ನಲ್ಲಿನ ಅಪಘಾತಗಳು ಹೆಚ್ಚಾಗುತ್ತಿವೆ, ಟೋಲ್​​ಗೆ ಜನರ ಗಲಾಟೆಯಾಗುತ್ತಿದೆ, ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಲ್ಲುತ್ತಿದೆ ಎಂದಿದ್ದಾರೆ ಈ ಸಂಬಂಧ ಈಗಾಗಲೇ […]

Continue Reading