ಭಾರತಕ್ಕೆ ಕಾಲಿಟ್ಟ ಹಕ್ಕಿ ಜ್ವರ, 2019 ರ ಬಳಿಕ ವಿಶ್ವದಲ್ಲಿ ಕಾಣಿಸಿಕೊಂಡ ಎರಡನೇ ಪ್ರಕರಣ

ಪಶ್ಚಿಮ ಬಂಗಾಳದಲ್ಲಿ 4 ವರ್ಷದ ಮಗುವಿನಲ್ಲಿ ಎಚ್ 9ನ್2 (ಹಕ್ಕಿ ಜ್ವರ) ಕಾಣಿಸಿಕೊಂಡಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂ ಎಚ್ ಒ) ದೃಢೀಕರಿಸಿ ಎಚ್ಚರಿಕೆಯ ಸಂದೇಶ ರವಾನಿಸಿದೆ. ಹಕ್ಕಿ ಜ್ವರ ಪೀಡಿತ ಮಗುವಿನ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಭಾರಿ ಜ್ವರದ ಲಕ್ಷಣಗಳು ಕೂಡ ಇದೆ. 2019 ರ ಬಳಿಕ ವಿಶ್ವದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರದ ಮಾನವ ಸೋಂಕಿನ ಎರಡನೇ ಪ್ರಕರಣ ಇದಾಗಿದೆ ಎಂದು ಡಬ್ಲ್ಯೂ ಎಚ್ ಒ ಹೇಳಿದೆ.

Continue Reading

ನ್ಯಾಯವಾದಿಗಳನ್ನು ಮುಟ್ಟಿದರೆ ಹುಷಾರ್.! ಜೈಲು ಶಿಕ್ಷೆ, ದಂಡ ಗ್ಯಾರಂಟಿ.

ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ ಜಾರಿ ವಕೀಲರ ಬಹುದಿನಗಳ ಬೇಡಿಕೆ ಕೊನೆಗೂ ಈಡೇರಿದ್ದು, ವಕೀಲರ ರಕ್ಷಣೆಗೆ ಸಂಬಂಧಿಸಿದ “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023′ ಜಾರಿಗೆ ಬಂದಿದೆ. ಈ ಸಂಬಂಧ ರಾಜ್ಯ ಸರಕಾರ ಜೂನ್‌ 10ರಂದು ಗೆಜೆಟ್‌ ಅಧಿಸೂಚನೆ ಪ್ರಕಟಿಸಿದ್ದು, ಆ ದಿನದಿಂದಲೇ ಕಾಯ್ದೆ ಜಾರಿಗೆ ಬರಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಅದರಂತೆ, ಇನ್ನು ಮುಂದೆ ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅವರ ಮೇಲೆ ಹಲ್ಲೆ ನಡೆಸುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು […]

Continue Reading

300 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಗಾಗಿ ಸ್ವಂತ ಮಾವನನ್ನೇ ಕೊಲ್ಲಲು ಸುಫಾರಿ ನೀಡಿದ ಕಿಲ್ಲರ್ ಸೊಸೆ

ಪಟ್ಟಣ ಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಅರ್ಚನಾ ಮನೀಷ್ ಪುಟ್ಟೇವಾರ್ ಬಂಧನ ಮಧ್ಯ ಪ್ರದೇಶದ ನಾಗಪುರದಲ್ಲಿ 82 ವರ್ಷದ ವ್ಯಕ್ತಿಯೊಬ್ಬರು ಹಿಟ್ ಅಂಡ್ ರನ್‌ನಲ್ಲಿ ಸಾವನ್ನಪ್ಪಿದ ಪ್ರಕರಣ ನಡೆದಿದೆ. 300 ಕೋಟಿ ರೂ. ಮೌಲ್ಯದ ಕುಟುಂಬದ ಆಸ್ತಿಗಾಗಿ ಸ್ವಂತ ಸೊಸೆಯೇ ರೂಪಿಸಿದ್ದ ಭೀಕರ ಕೊಲೆ ಸಂಚು ಬಯಲಾಗಿದೆ. ನಾಗಪುರ ಪಟ್ಟಣ ಯೋಜನಾ ವಿಭಾಗದ ಸಹಾಯಕ ನಿರ್ದೇಶಕಿ ಆಗಿರುವ ಅರ್ಚನಾ ಮನೀಷ್ ಪುಟ್ಟೇವಾರ್ ಅವರನ್ನು ಅವರ ಮಾವ ಪುರುಷೋತ್ತಮ ಪುಟ್ಟೇವಾರ್ ಕೊಲೆಯಾದ ಹದಿನೈದು ದಿನಗಳ ನಂತರ ಪೋಲೀಸರು ಬಂಧಿಸಿದ್ದಾರೆ. […]

Continue Reading

ಟೋಲ್ ಪ್ಲಾಜಾದಲ್ಲಿ ಟೋಲ್ ಪಾವತಿಸದೆ ಪ್ರಯಾಣಿಸಲು ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (GNSS) ರಚಿಸಲು ಸರ್ಕಾರ ನಿರ್ಧರಿಸಿದೆ

ಹೆದ್ದಾರಿಗಳಲ್ಲಿ ಕಡಿಮೆ ದೂರಕ್ಕೂ ಹೆಚ್ಚಿನ ಶುಲ್ಕ ವಿಧಿಸುವ ಬಗ್ಗೆ ಪ್ರಯಾಣಿಕರ ಟೀಕೆಗಳು ಹೆಚ್ಚಾಗಿವೆ. ಇದರಿಂದಾಗಿ ವಾಹನಗಳು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಟೋಲ್ ಸಂಗ್ರಹದ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ. ಪ್ರಸ್ತುತ ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಹೊಸ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂಗಾಗಿ (GNSS) ಸಂಪೂರ್ಣ ಚೌಕಟ್ಟನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಟೋಲ್ ಪ್ಲಾಜಾದಲ್ಲಿ ಟೋಲ್ ಪಾವತಿಸದೆ ಪರ್ಯಾಯ ತಂತ್ರಜ್ಞಾನದೊಂದಿಗೆ ಪ್ರಯಾಣಿಸಿದ ದೂರಕ್ಕೆ ಅನುಗುಣವಾಗಿ ಹಣ ಸಂಗ್ರಹಿಸಲು ಚಿಂತನೆ ನಡೆಸಿದೆ. ಭಾರತದಾದ್ಯಂತ ಟೋಲ್ […]

Continue Reading

ಚುನಾವಣಾ ಪ್ರಚಾರದ ವೇಳೆ ಜನರು ಪರಸ್ಪರ ನಿಂದನೆ, ತಂತ್ರಜ್ಞಾನ ದುರ್ಬಳಕೆ, ಸುಳ್ಳು ಸುದ್ದಿ ಹರಡುವ ರೀತಿ ಸರಿಯಲ್ಲ. ಚುನಾವಣಾ ಉನ್ಮಾದವನ್ನು ತೊಡೆದುಹಾಕಬೇಕು: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ರವರು ಮಣಿಪುರ ಸಂಘರ್ಷವನ್ನು ಆದ್ಯತೆಯ ಮೇಲೆ ಪರಿಹರಿಸಬೇಕು ಎಂದು ಹೇಳಿದ್ದಾರೆ.ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಗವತ್ ರವರು ಮಣಿಪುರ ಶಾಂತಿಗಾಗಿ ಕಾಯುತ್ತಾ ಒಂದು ವರ್ಷವಾಗಿದೆ, ಕಳೆದ 10 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿತ್ತು, ಆದರೆ ಇದ್ದಕ್ಕಿದ್ದಂತೆ ರಾಜ್ಯದಲ್ಲಿ ಮತ್ತೆ ಬಂದೂಕು ಸಂಸ್ಕೃತಿ ಹೆಚ್ಚಾಗಿದೆ, ಇದು ಮುಖ್ಯವಾಗಿದ್ದು ಆದ್ಯತೆಯ ಮೇಲೆ ಇಲ್ಲಿನ ಸಂಘರ್ಷವನ್ನು ಪರಿಹರಿಸಿ ಎಂದು ಆಗ್ರಹಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯ ನಂತರದ ತಮ್ಮ ಮೊದಲ ಹೇಳಿಕೆಯಲ್ಲಿ, […]

Continue Reading

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ, ಅವರು “ಗಂಭೀರ ಮತ್ತು ಅತೀ ಗಂಭೀರ” ಆರೋಪಗಳನ್ನು ಎದುರಿಸುತ್ತಿದ್ದಾರೆ ಮತ್ತು ಅವರು ಪ್ರಭಾವ ಬೀರಬಹುದು ಎಂಬ ಆತಂಕವಿದೆ ಎಂದು ಹೇಳಿದ್ದಾರೆ. ಕಳೆದ ಶುಕ್ರವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲ್ಪಟ್ಟ ಕುಮಾರ್, ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಮಲಿವಾಲ್ […]

Continue Reading

ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರ ಪೈಕಿ 251 ಮಂದಿ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಾಗಿವೆ

ಇವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದರು ಸೇರಿದ್ದಾರೆ ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರ ಪೈಕಿ 251 ಮಂದಿ ವಿರುದ್ದ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದರು ಸೇರಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ. 2019 ರಲ್ಲಿ 233 (43%), 2014 ರಲ್ಲಿ 185 (34%), 2009 ರಲ್ಲಿ 162 (30%) ಮತ್ತು 2004 ರಲ್ಲಿ 125 (23%) ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಈ ಬಾರಿಯ ಚುನಾವಣೆಯಲ್ಲಿ […]

Continue Reading

ಷೇರು ಮಾರುಕಟ್ಟೆಯಿಂದ ಒಂದೇ ದಿನ 30 ಲಕ್ಷ ಕೋಟಿ ರೂಪಾಯಿ ಹಗರಣ; ರಾಹುಲ್ ಗಾಂಧಿ ಗಂಭೀರ ಆರೋಪ

ಬಿಜೆಪಿಯವರು ಯಾವ ಆಧಾರದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಗೆ ಸಲಹೆ ನೀಡಿದರು.? ಷೇರು ಮಾರುಕಟ್ಟೆಯಿಂದ ಒಂದೇ ದಿನ 30 ಲಕ್ಷ ಕೋಟಿ ರೂಪಾಯಿ ಹಗರಣವಾಗಿದ್ದು, ಇದರಿಂದ ಸಾಮಾನ್ಯ ಜನರು ಬಹುದೊಡ್ಡ ನಷ್ಟ ಅನುಭವಿಸಿದ್ದಾರೆ ಎಂದು ನೂತನ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿಯವರು ಸ್ಟಾಕ್ ಮಾರ್ಕೆಟ್ […]

Continue Reading

ಸ್ಪೀಕರ್ ಹುದ್ದೆಯೂ ಸೇರಿದಂತೆ ಮಹತ್ವದ 5 ಸಂಪುಟ ಖಾತೆಗಳಿಗಾಗಿ ಬೇಡಿಕೆ ಇಟ್ಟ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶ: ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿರುವ ಟಿಡಿಪಿ ಇದಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಸ್ಪೀಕರ್ ಹುದ್ದೆಯೂ ಸೇರಿದಂತೆ ಮಹತ್ವದ 5 ಸಂಪುಟ ಖಾತೆಗಳಿಗಾಗಿ ಬೇಡಿಕೆ ಇರಿಸುವ ಬಹುತೇಕ ಸಾಧ್ಯತೆಗಳಿವೆ. 16 ಸಂಸದರನ್ನು ಹೊಂದಿರುವ ಟಿಡಿಪಿ ಎನ್‌ಡಿಎಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಮೂರನೇ ಅವಧಿಯ ಮೋದಿ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಲು ದೃಢವಾದ ನಿಲುವನ್ನು ತೆಗೆದುಕೊಂಡಿರುವ ನಾಯ್ಡು, […]

Continue Reading

ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ಆದೇಶ

ಖಾಸಗಿ ವ್ಯಕ್ತಿಗಳ ವಿರುದ್ಧ ಅನ್ಯಕಾರಣಗಳಿಗಾಗಿ ಕಾನೂನುಬಾಹಿರ ಕ್ರಮಕ್ಕೆ ಸಂಬಂಧಿಸಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಎಂ ಕೆ ತಮ್ಮಯ್ಯ, ಇನ್ಸ್‌ಪೆಕ್ಟರ್ ಎಸ್‌ಆರ್ ವೀರೇಂದ್ರ ಪ್ರಸಾದ್, ಡಿವೈಎಸ್‌ಪಿ ಪ್ರಕಾಶ್ ರೆಡ್ಡಿ, ಇನ್‌ಸ್ಪೆಕ್ಟರ್ ಮಂಜುನಾಥ್ ಹೂಗಾರ್, ಡಿವೈಎಸ್‌ಪಿಗಳಾದ ವಿಜಯ್ ಹಡಗಲಿ ಮತ್ತು ಉಮಾ ಪ್ರಶಾಂತ್, ಎಡಿಜಿಪಿ ಸೀಮಂತಕುಮಾರ್ ಸಿಂಗ್. ಆ ಸಮಯದಲ್ಲಿ ಅವರು ಭ್ರಷ್ಟಾಚಾರ […]

Continue Reading