ಮುಂಬರುವ 2024ರ ಲೋಕಸಭೆ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಮಧ್ಯೆ ತೀವ್ರ ಲಾಬಿ

2024ರ ಲೋಕಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ ಏಳು ತಿಂಗಳಷ್ಟೆ, ಈಗಾಗಲೇ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದೆ, ಕಳೆದ ಮೇ ತಿಂಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ನಂತರ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಲಾಬಿ ಜೋರಾಗಿದೆ. ಬೆಂಗಳೂರು ಕೇಂದ್ರ ಭಾಗದಿಂದ ಮಾಜಿ ಸಚಿವ ಎಚ್‌ಎಂ ರೇವಣ್ಣ ಹಾಗೂ ಮಹಮ್ಮದ್‌ ನಲಪಾಡ್‌ ತೀವ್ರ ಪೈಪೋಟಿ ನಡೆಸುತ್ತಿದ್ದರೆ, ಮಾಜಿ ಸಂಸದ ವಿಎಸ್‌ ಉಗ್ರಪ್ಪ ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಲಾಬಿ ನಡೆಸುತ್ತಿದ್ದಾರೆ.ಬೆಳಗಾವಿ ಕ್ಷೇತ್ರಕ್ಕೂ ಹೆಚ್ಚಿನ ಬೇಡಿಕೆ […]

Continue Reading

ರಾಹುಲ್ ಗಾಂಧಿ ಗುಜರಾತ್‌ನಿಂದ ಮೇಘಾಲಯಕ್ಕೆ ಮತ್ತೊಂದು ಜೋಡೋ ಯಾತ್ರೆಗೆ ಸಿದ್ದತೆ

ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವು ಗುಜರಾತ್‌ನಿಂದ ಪ್ರಾರಂಭವಾಗಿ ಈಶಾನ್ಯ ರಾಜ್ಯವಾದ ಮೇಘಾಲಯದವರೆಗೆ ವಿಸ್ತರಿಸಲಿದೆ. ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಈ ಹಿಂದೆ ಗುಜರಾತ್‌ನ ಪೋರಬಂದರ್‌ನಿಂದ ಅರುಣಾಚಲ ಪ್ರದೇಶದ ಪಾಸಿಘಾಟ್‌ವರೆಗೆ ‘ನವೆಂಬರ್‌ ಮೊದಲು’ ಪಾದಯಾತ್ರೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸುದ್ದಿಯನ್ನು ಖಚಿತಪಡಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ರಾಜ್ಯದೊಳಗಿನ ಪಕ್ಷದ ನಾಯಕರು ಪಾದಯಾತ್ರೆ ಯಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ನಾಯಕರು ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. […]

Continue Reading

ಡಾಕ್ಟರ್ ಗಳು ಔಷಧ ಹೆಸರುಗಳನ್ನು ಸ್ಪಷ್ಟವಾಗಿ ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು: ರಾಷ್ಟ್ರೀಯ ವೈದ್ಯಕೀಯ ಆಯೋಗ

ವೈದ್ಯರು ತಮ್ಮ ರೋಗಿಗಳಿಗೆ ಜನೆರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು ಎಂಬ ಸೂಚನೆಯನ್ನು ನೀಡಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಆ.2 ರಂದು ಹೊರಬಿದ್ದಿರುವ ‘ರೆಗ್ಯುಲೇಷನ್ಸ್ ರಿಲೇಟಿಂಗ್ ಟು ಪ್ರೊಫೆಷನಲ್ ಕಂಡಕ್ಟ್ ಆಫ್ ರಿಜಿಸ್ಟರ್ಡ್ ಮೆಡಿಕಲ್ ಪ್ರ್ಯಾಕ್ಟಿಷಿನರ್ಷ್’ ಪ್ರಕಾರ ವೈದ್ಯರು ಔಷಧದ ಹೆಸರುಗಳನ್ನು ಸ್ಪಷ್ಟವಾಗಿ ಮತ್ತು ಕ್ಯಾಪಿಟಲ್ ಲೆಟರ್ ನಲ್ಲೇ ಬರೆಯಬೇಕು. ತಪ್ಪು ತಿಳುವಳಿಕೆ ತಪ್ಪಿಸುವ ನಿಟ್ಟಿನಲ್ಲಿ […]

Continue Reading

ಮೋದಿ’ಗೆ ಮುಖಭಂಗ.!

ರಾಹುಲ್‌ಗಾಂಧಿ ಚುನಾವಣೆಗೆ ಸ್ವರ್ಧಿಸದಂತೆ ಮಾಡುವ ಯೋಜಿತ ಷಡ್ಯಂತ್ರದ ಭಾಗವಾಗಿತ್ತು. ​ಕರ್ನಾಟಕದ ಕೋಲಾರದಲ್ಲಿ 2019 ರ ಏಪ್ರಿಲ್ 13 ರಂದು ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್‌ಗಾಂಧಿಯವರು ‘ಎಲ್ಲ ಕಳ್ಳರು ಮೋದಿ ಎಂಬ ಉಪನಾಮವನ್ನು ಹೇಗೆ ಹೊಂದಿದ್ದಾರೆ’ ಎಂದು ಪ್ರಶ್ನಿಸಿದ್ದರು.ಈ ಸಂಬಂಧ ಗುಜರಾತಿನ ಮಾಜಿ ಸಚಿವ ಪೂರ್ಣಿಶ್ ಮೋದಿ ಎಂಬವರು ರಾಹುಲ್ ವಿರುದ್ಧ 2019 ರಲ್ಲಿ ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ​ಮೋದಿ ಉಪನಾಮ ಟೀಕೆ ಕುರಿತು ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ಸೂರತ್ ಮೆಜಿಸ್ಟ್ರೇಟ್ […]

Continue Reading

ದೇಶದಲ್ಲೇ ಮೊತ್ತ ಮೊದಲು ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಪಿಣರಾಯಿ ವಿಜಯನ್ ಸರಕಾರ

ಕೇಂದ್ರ ಸರ್ಕಾರದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಮಂಗಳವಾರ ಪಿಣರಾಯಿ ನೇತ್ರತ್ವದ ವಿಧಾನಸಭೆಯು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಯುಸಿಸಿ ವಿರುದ್ಧ ನಿರ್ಣಯ ಅಂಗೀಕರಿಸಿದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್.ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಮತ್ತು ಆತುರದಿಂದ ಯುಸಿಸಿ ಜಾರಿಗೆ ತರಲು ಹೊರಟಿದ್ದು, ಇದು ಸಂವಿಧಾನದ ಜಾತ್ಯತೀತತೆಯನ್ನು ಇಲ್ಲದಂತೆ ಮಾಡುತ್ತದೆ ಎಂದು ಹೇಳಿದ್ದಾರೆ.ವಿಧಾನ ಸಭೆಯ ಪ್ರಮುಖ ಒಕ್ಕೂಟವಾದ ಆಡಳಿತಾರೂಢ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ […]

Continue Reading

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಪ್ರಸ್ತಾವನೆಯೇ ಇಲ್ಲ: ಕೇಂದ್ರ ಸಚಿವ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಇಂದು ಸಂಸತ್ತಿನಲ್ಲಿ ಈ ಮಾಹಿತಿ ನೀಡಿದರು.ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಯಾವುದೇ ಉದ್ದೇಶವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಅವರು ಇಂದು ಸಂಸತ್ತಿನಲ್ಲಿ ಈ ಮಾಹಿತಿ ನೀಡಿದರು. ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಗುರುತಿಸುವ ಉದ್ದೇಶ […]

Continue Reading

ಮಣಿಪುರ: ಮೈತೇಯಿ ಮತ್ತು ಕುಕಿ ನಡುವಣ ಹಿಂಸಾಚಾರ; ಕುಕಿ ಪೀಪಲ್ಸ್‌ ಅಲೆಯನ್ಸ್‌ ಪಕ್ಷದ ಬೆಂಬಲ ವಾಪಸ್‌

ಮಣಿಪುರದ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಕುಕಿ ಪೀಪಲ್ಸ್‌ ಅಲೆಯನ್ಸ್‌ (ಕೆಪಿಎ) ಪಕ್ಷವು ವಾಪಸ್‌ ಪಡೆದಿದೆ.ಪಕ್ಷದ ಅಧ್ಯಕ್ಷ ಟಾಂಗ್ಮಾಂಗ್ ಹಾಕಿಪ್ ಅವರು, ಈ ಕುರಿತು ರಾಜ್ಯಪಾಲೆ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿರುವ ಪತ್ರದಲ್ಲಿ ಎನ್‌ಡಿಎ ಮೈತ್ರಿಕೂಟ ತೊರೆದಿರುವ ಬಗ್ಗೆ ತಿಳಿಸಿದ್ದಾರೆ. ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವಣ ಹಿಂಸಾಚಾರದಿಂದ ಕಣಿವೆ ರಾಜ್ಯ ಹೊತ್ತಿ ಉರಿಯುತ್ತಿದೆ. ಸಂಘರ್ಷ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದು ಪಕ್ಷ ಆರೋಪಿಸಿದೆ. ಮಣಿಪುರದ ವಿಧಾನಸಭೆಯಲ್ಲಿ ಒಟ್ಟು […]

Continue Reading

ಗುಜರಾತ್ ಬಿಜೆಪಿಗೆ ಭಾರಿ ಮುಖಭಂಗ; ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ವಘೇಲಾ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಪ್ರದೀಪ್ ಸಿಂಗ್ ವಘೇಲಾ ಅವರನ್ನು 2016ರ ಆಗಸ್ಟ್ 10ರಂದು ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗಲೇ ಈ ಘೋಷಣೆ ಹೊರಬಿದ್ದಿದೆ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಗುಜರಾತ್ ಬಿಜೆಪಿ ಇತ್ತೀಚೆಗೆ ‘ಮಹಾ ಜನಸಂಪರ್ಕ ಅಭಿಯಾನ’ […]

Continue Reading

ಮೋದಿಯ ಗುಜರಾತಿನಲ್ಲಿ ದಲಿತ ವ್ಯಕ್ತಿಯ ಅಂತಿಮ ಸಂಸ್ಕಾರಕ್ಕೆ ಮೇಲ್ಜಾತಿಯವರಿಂದ ಅಡ್ಡಿ

ದಲಿತ ವ್ಯಕ್ತಿಯ ಅಂತಿಮ ಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ 13 ಜನರನ್ನು ಬಂಧಿಸಿರುವ ಘಟನೆ ಗುಜರಾತ್ ನ ವಡೋದರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬುಧವಾರದಂದು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆದರೆ ಭಾರೀ ಮಳೆಯಿಂದಾಗಿ ಮೃತನ ಸಮುದಾಯದ ಚಿತಾಗಾರವು ಜಲಾವೃತಗೊಂಡಿದ್ದರಿಂದ ಕುಟುಂಬವು ಅಂತಿಮ ಸಂಸ್ಕಾರಕ್ಕಾಗಿ ಪದ್ರಾ ತಾಲೂಕಿನ ಗಮೆಥಾ ಗ್ರಾಮದ ಸಾಮಾನ್ಯ ಸ್ಮಶಾನಕ್ಕೆ ಶವವನ್ನು ಕೊಂಡೊಯ್ದಿತ್ತು. ಆಗ ಕೆಲವು ಗ್ರಾಮಸ್ಥರು ಅಲ್ಲಿಗೆ ಆಗಮಿಸಿ ಈ ಕ್ರಮವನ್ನು ವಿರೋಧಿಸಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು […]

Continue Reading

ದೇಶದಲ್ಲಿಯೇ ಅತೀ ಹೆಚ್ಚು ಲಾಕಪ್ ಡೆತ್ ಗಳು ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಸಂಭವಿಸಿದೆ

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 81 ಲಾಕಪ್ ಡೆತ್ ಗಳು ವರದಿಯಾಗಿದ್ದು,  ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕಸ್ಟಡಿ ಸಾವುಗಳು ಸಂಭವಿಸಿವೆ. ಗುಜರಾತ್ ನಂತರ ಮಹಾರಾಷ್ಟ್ರದಲ್ಲಿ ಲಾಕಪ್ ಡೆತ್ ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ 80 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಏಪ್ರಿಲ್ ಒಂದು 2018 ರಿಂದ ಮಾರ್ಚ್ […]

Continue Reading