ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು
ಬಂಟ್ವಾಳದಲ್ಲಿ ಕಳೆದ ವರ್ಷದ ಮೇ ತಿಂಗಳಲ್ಲಿ ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ (ಕೋಕಾ) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ಬಂಧಿತರಾಗಿದ್ದ ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. […]
Continue Reading