ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ; ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಈಚೆಗೆ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. 2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ […]
Continue Reading