ಕಲ್ಲಡ್ಕ: ಜಿಲ್ಲಾಧಿಕಾರಿ ಬಂದು ಹತ್ತು ದಿನ ಕಳೆದರೂ, ಕಲ್ಲಡ್ಕ-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಯಾಗಿಲ್ಲ.!

ಬಡ ಕೃಷಿಕರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟ NHAI ಅಧಿಕಾರಿಗಳು. ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಅವ್ಯವಸ್ಥೆ ನೋಡಲು ಜಿಲ್ಲಾಧಿಕಾರಿ ಬಂದು ಹತ್ತು ದಿನ ಕಳೆದರೂ ಕಲ್ಲಡ್ಕ-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಯಾಗಿಲ್ಲ. ಬಡ ಕೃಷಿಕರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟ NHAI ಅಧಿಕಾರಿಗಳು. ಹೆದ್ದಾರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪರಿಸರದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ. ಪೆರ್ನೆ, ಬಿಳಿಯೂರು ಗ್ರಾಮಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯ ಬಡ ರೈತರು ಗೊತ್ತುಗುರಿಯಿಲ್ಲದ ಅವ್ಯವಸ್ಥೆಯ ಕಾಮಗಾರಿಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಎದುರಾಗಿದೆ. […]

Continue Reading

ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಅವರಿಗೆ ವರ್ಗಾವಣೆಯಾಗಿದ್ದು, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ರವಿಚಂದ್ರ ನಾಯಕ್ ಅವರು ಶಿವಮೊಗ್ಗ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಆಗಿಯೂ ಸೇವೆ ಸಲ್ಲಿಸಿದ್ದರು. ಇವರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸರಳತೆಗೆ […]

Continue Reading

ಬಲ್ಮಠ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿತ – ಮನಪಾ ಆಯುಕ್ತರ ಮೇಲೆ ಕ್ರಮಕ್ಕೆ ಒತ್ತಾಯ- ಡಿವೈಎಫ್ಐ

ಬಲ್ಮಠ ಕಟ್ಟಡ ಸಂಕೀರ್ಣದ ಕಾಮಗಾರಿ ವೇಳೆ ತಳಪಾಯದ ತಡೆಗೋಡೆ ಪಕ್ಕ ಕುಸಿದ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಉತ್ತರ ಪ್ರದೇಶದ ಕಾರ್ಮಿಕನ ಸಾವಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನೇರಹೊಣೆಯಾಗಲಿದ್ದಾರೆ. ಇಂತಹ ದುರ್ಘಟನೆ ಸಂಭವಿಸಿದ ನಂತರವಷ್ಟೇ ಕಾಮಗಾರಿಗಳ ನಿಲ್ಲಿಸಲು ಸೂಚನೇ ನೀಡುವುದು ಆಡಳಿತದ ಬೇಜವಾಬ್ದಾರಿಯ ಪರಮಾವಧಿ. ಪಾಲಿಕೆಯ ನಿಯಮಗಳನ್ನು ಮೀರಿ ನಡೆಯುವ ಕಾಮಗಾರಿಯನ್ನು ನಿಲ್ಲಿಸಲು ಕ್ರಮಕೈಗೊಳ್ಳದ ಮ.ನ.ಪಾ ಆಯುಕ್ತರ ವಿರುದ್ದ ಸರಕಾರ ಮತ್ತು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಪ್ರಾಣ ಕಳೆದುಕೊಂಡ ಕಾರ್ಮಿಕನಿಗೆ ಗರಿಷ್ಟ ಪ್ರಮಾಣದ ಆರ್ಥಿಕ ಪರಿಹಾರ ನೀಡಬೇಕೆಂದು ಡಿವೈಎಫ್ಐ […]

Continue Reading

ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ; ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣ : ಪರಿಹಾರಕ್ಕೆ ಕಟ್ಟಡ ಕಾರ್ಮಿಕರ ಸಂಘಟನೆ ಆಗ್ರಹ

ಮಂಗಳೂರು ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ನಿರತರಾದ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರು ಮಣ್ಣು .ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ನೇರ ಕಾರಣ. ಈ ದುರಂತದ ಹೊಣೆ ಹೊತ್ತು ಕಾರ್ಮಿಕರಿಗೆ ಸರಕಾರದ ವತಿಯಿಂದ ದೊರಕುವ ವಿಪತ್ತು ಪರಿಹಾರ ನಿಧಿ ಮಾತ್ರವಲ್ಲದೆ, ಸಾವು ಸಂಭವಿಸಿದ್ದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಕಂಪೆನಿ, ಗುತ್ತಿಗೆದಾರರ ಕಡೆಯಿಂದಲೂ ತಲಾ 50 ಲಕ್ಷ ರೂ.ಪರಿಹಾರ ಕೊಡಿಸಬೇಕೆಂದು CITUಗೆ […]

Continue Reading

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ರಾಜ್ಯ ಸರಕಾರ ಜುಲೈ 2 ರಂದು ಹಲವು ಪೊಲೀಸ್ ಅಧಿಕಾರಿಗಳನ್ನು(IPS) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. 2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Continue Reading

ಮಹಾಕಾಳಿಪಡ್ಪು ಅಂಡರ್ ಪಾಸ್ ಕಾಮಗಾರಿ ವಿಳಂಬ ; ಶಾಸಕ ವೇದವ್ಯಾಸ ಕಾಮತರಿಗೆ ಕಪ್ಪು ಬಾವುಟ ಪ್ರದರ್ಶನ – ಸುನೀಲ್ ಕುಮಾರ್ ಬಜಾಲ್ ಎಚ್ಚರಿಕೆ

ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಕೆಳಸೇತುವೆಯ ನಿಧಾನಗತಿಯ ಕಾಮಗಾರಿಯಿಂದ ಈ ರಸ್ತೆಯನ್ನು ಅವಲಂಭಿಸುವ ಜನ ಪರದಾಡುವುದು ಮಾತ್ರವಲ್ಲದೆ ನಗರದಲ್ಲಿ ವಾಹನ ದಟ್ಟನೆ ಹೆಚ್ಚಾಗಿ ಅಡಚಣೆಯುಂಟಾಗಿದೆ. ರೈಲ್ಚೇ ಕಾಮಗಾರಿಯ ಪರಿಶೀಲಿಸಬೇಕಾಗಿದ್ದ ಶಾಸಕ ವೇದವ್ಯಾಸ ಕಾಮತರ ಬೇಜವಾಬ್ದಾರಿಯಿಂದಾಗಿ ಒಂದು ಊರಿಗೆ ಸಂಪರ್ಕಿಸುವ ಮುಖ್ಯರಸ್ತೆಯೇ ಮುಚ್ವಿಹೋಗಿದೆ.ಇದಕ್ಕೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಆಡಳಿತದ ಮಂಗಳೂರು ಮಹಾನಗರ ಪಾಲಿಕೆ ನೇರ ಜವಾಬ್ದಾರಿಯಾಗಿದೆ. ರೈಲ್ವೇ ಕೆಳಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳದಿದ್ದಲ್ಲಿ ಶಾಸಕ ವೇದವ್ಯಾಸ ಕಾಮತರ ಕಚೇರಿಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಲಿದ್ದೇವೆ […]

Continue Reading

ನಾವೂರು-ಅತ್ಯಡ್ಕ-ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ,ಜನರ ಆಕ್ರೋಶ, ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್

ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ರಸ್ತೆಯಲ್ಲಿರುವ ಕೈಕಂಬ ಸೇತುವೆ ಹಲವಾರು ವರ್ಷಗಳಿಂದ ಶಿಥಿಲಗೊಂಡಿದ್ದು , ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೂ ಎಚ್ಚೆತ್ತ ನಾವೂರು ಗ್ರಾಮ ಪಂಚಾಯತ್ ಇದೀಗ ಈ ಸೇತುವೆಯಲ್ಲಿ ಘನ ವಾಹನ ಸಂಚಾರವನ್ನು ನಿಷೇಧಿಸಿ ಬೋರ್ಡ್ ಅವಳವಡಿಸಿದೆ. ಈ ಸೇತುವೆಯ ಎರಡೂ ಕಡೆಯ ತಡೆಗೋಡೆಗಳು 2019 ರ ಭೀಕರ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೊಚ್ಚಿ ಹೋಗಿತ್ತು. ಸೇತುವೆಯ ಅಡಿ ಭಾಗದಲ್ಲಿ ಕಾಂಕ್ರೀಟ್ ಕಿತ್ತು ಹೋಗಿ ಕಬ್ಬಿಣದ ಸರಳು ಕಾಣುತ್ತಿದೆ. ಇಲ್ಲಿ […]

Continue Reading

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮತ್ತೊಂದು ಟಿ.ಡಿ.ಆರ್ ಹಗರಣದ ವಾಸನೆ

‘ಭೂ’ದಂಧೆಕೋರರು, ರಿಯಲ್ ಎಸ್ಟೇಟ್, ಬಿಲ್ಡರ್ ಲಾಬಿಗಳು, ಭ್ರಷ್ಟ ರಾಜಕಾರಣಿಗಳು, ಆಧಿಕಾರಿಗಳ ಪಾಲಿಗೆ ಸಮೃದ್ದ ಹುಲ್ಲುಗಾವಲಾಗಿ ಮಾರ್ಪಟ್ಟಿದೆ: ಮುನೀರ್ ಕಾಟಿಪಳ್ಳ ಮಂಗಳೂರು ನಗರದಲ್ಲಿ ಖಾಸಗಿ ಜಮೀನು ಸ್ವಾಧೀನಕ್ಕೆ ಪ್ರತಿಯಾಗಿ ನಗರಪಾಲಿಕೆ ಟಿ‌.ಡಿ.ಆರ್ ನೀಡುವುದು ದೊಡ್ಡ ದಂಧೆಯಾಗಿ ಬದಲಾಗಿದೆ. ರಸ್ತೆ ಅಗಲೀಕರಣ, ತುರ್ತು ಅಗತ್ಯದ ಜಮೀನುಗಳ ಸ್ವಾಧೀನಕ್ಕೆ ಹಣದ ಬದಲಿಗೆ ನಗರ ಪಾಲಿಕೆಗಳು ಟಿ.ಡಿ.ಆರ್ ನೀಡುವುದು ಸರಕಾರದ ಒಂದು ಪ್ರಾಯೋಗಿಕ ಕ್ರಮ. ಮಂಗಳೂರಿನಲ್ಲಿ ಅದು ಭೂ ದಂಧೆಕೋರರು, ರಿಯಲ್ ಎಸ್ಟೇಟ್, ಬಿಲ್ಡರ್ ಲಾಬಿಗಳು, ಭ್ರಷ್ಟ ರಾಜಕಾರಣಿಗಳು, ಆಧಿಕಾರಿಗಳ ಪಾಲಿಗೆ ಸಮೃದ್ದ […]

Continue Reading

ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗೀ ವಾಹನಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ನೇತ್ರತ್ವದಲ್ಲಿ ನಗರದ ಕ್ಲಾಕ್ ಟವರ್‌ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಶಾಲಾ ಮಕ್ಕಳ ವಾಹನ ಚಾಲಕರು ಆಕ್ರೋಶಭರಿತವಾಗಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಬಿಳಿ ಬಣ್ಣದ ಖಾಸಗೀ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿರುವ […]

Continue Reading

ಪಾವೂರು: ಅಕ್ರಮ ಮರಳು ದಂಧೆಕೋರರ ಜೊತೆ ಶಾಮೀಲಾಗಿ ಸುಳ್ಳು ವರದಿ ನೀಡಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ: ಮುನೀರ್ ಕಾಟಿಪಳ್ಳ

‘ಹಿರಿಯ ಭೂ ವಿಜ್ಞಾನಿ ಹಾಗೂ ಅವರ ತಾಂತ್ರಿಕ ಅಧಿಕಾರಿಗಳ ತಂಡ’ ಪರಿಶೀಲನೆ ನಡೆಸಿದಾಗ, “30 ಎಕರೆ ಇರಬೇಕಾದ ದ್ಚೀಪ 98 ಎಕರೆ ಆಗಿದೆ” ಎಂದು ವರದಿ ಪಾವೂರು, ಉಳಿಯ ದ್ವೀಪದಲ್ಲಿ ಮರಳು ಮಾಫಿಯಾದ ಅಟ್ಟಹಾಸ ಬರಿಗಣ್ಣಿಗೆ ಕಾಣುತ್ತಿದ್ದರೂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ “ಪರಿಶೀಲನೆ” ಯಲ್ಲಿ ಸಾಮಾನ್ಯ ಮರಳುಗಾರಿಕೆ ನಡೆದಿರುವ ಕುರುಹುಗಳೂ ಕಂಡು ಬಂದಿಲ್ಲವಂತೆ. ಸ್ಥಳೀಯ ಮಾಧ್ಯಮಗಳು ಸ್ಥಳಕ್ಕೆ ಹೋಗಿ ಖುದ್ದು ಚಿತ್ರೀಕರಿಸಿ ಪ್ರಸಾರ ಮಾಡಿದ “ವೀಡಿಯೋ ದೃಶ್ಯಗಳು ಹಳೆಯವು” ಎಂದು ಇಲಾಖೆಯ ತನಿಖೆಯಿಂದ ಗೊತ್ತಾಗಿದೆಯಂತೆ. […]

Continue Reading