ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಶೇರ್; ಶರಣ್ ಪಂಪ್‌ವೆಲ್ ಕದ್ರಿ ಪೊಲೀಸರು ವಶಕ್ಕೆ

ಇತ್ತೀಚೆಗೆ ಆರ್‌ಎಸ್‌ಎಸ್‌ ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಎಂಬವರನ್ನು ಇಂದು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಹಾಕಿದ್ದ ಆಕ್ಷೇಪಾರ್ಹ ಕಮೆಂಟ್ ಅನ್ನು ಶೇರ್ ಮಾಡಿದ ಕಾರಣಕ್ಕೆ ವಿಎಚ್‌ಪಿ ಮುಖಂಡ ಶರಣ್ ಶರಣ್ ಪಂಪ್‌ವೆಲ್‌ರನ್ನು ವಿಚಾರಣೆಗೆ ಪೊಲೀಸ್ ಠಾಣೆಗೆ ಕರೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆಸಲಾಗಿದ್ದು, […]

Continue Reading

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ಪಿಎಫ್ಐ ಮಾಜಿ ಸದಸ್ಯ ಸೇರಿದಂತೆ 11 ಮಂದಿಯ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರಿನ ಬಜ್ಜೆಯ ಕಿನ್ನಿಪದವು ಬಳಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿಯ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಸಂಘಟನೆಯಲ್ಲಿ ರೌಡಿ ಸುಹಾಸ್ ಸಕ್ರಿಯನಾಗಿದ್ದ. ಈತನ ಚಟುವಟಿಕೆಗೆ ಕಡಿವಾಣ ಹಾಕಲು ಆರೋಪಿಗಳು ಸಂಚು ರೂಪಿಸಿ ಸುಹಾಸ್ ಶೆಟ್ಟಿಯನ್ನು ಮೇ. ಒಂದರಂದು ಆತನ ಮೇಲೆ ಭೀಕರವಾಗಿ ಹಲ್ಲೆ […]

Continue Reading

ವಿದೇಶಕ್ಕೆ ತೆರಳಲು ವೀಸಾ ಕೊಡಿಸುವುದಾಗಿ ನಂಬಿಸಿ, ಹಲವಾರು ಮಂದಿಗೆ ಕೊಟ್ಯಾಂತರ ರೂ. ವಂಚನೆ. ಆರೋಪಿಗಳ ಬಂಧನ

ಕಾವೂರು: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ನಂಬಿಸಿ ಹಲವಾರು ಮಂದಿಯಿಂದ ಹಣ ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಪಡೆದುಕೊಂಡು ವಂಚಿಸಿತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. […]

Continue Reading

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ

ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಹಾಗೂ ಬಳಕೆಗೆ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿಯನ್ನು ನೀಡಲಾಯಿತು. ಉಡುಪಿ ಜಿಲ್ಲಾದಂತ್ಯ ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆಯಿಂದಾಗಿ ಎಷ್ಟೋ ಯುವಕರು ದಾರಿ ತಪ್ಪಿ ಅವರ ಕುಟುಂಬಗಳು ಬೀದಿಗೆ ಬಂದಿದೆ. ಕೆಲವು ಜಾಗಗಳಲ್ಲಿ ಮಾದಕ ವಸ್ತುಗಳು ಅಂಗಡಿಗಳಲ್ಲಿ ಚಾಕಲೇಟ್ ದೊರೆಯುವಷ್ಟು ಸಲೀಸಾಗಿ ದೊರೆಯುತ್ತಿರುವುದು ದುರಾದೃಷ್ಟಕರ, ಇದಕ್ಕೆ ಬಲಿಯಾಗಿರುವ ಮಕ್ಕಳ ತಂದೆ-ತಾಯಿಯರ ರೋದನೆ ಕೆಳತೀರದ್ದು. ಇತ್ತೀಚೆಗೆ ಹನಿಟ್ರ್ಯಾಪ್‌ನಂತಹ […]

Continue Reading

ರಾಜ್ಯ ಮಟ್ಟದ ಪಿಯು ಟೇಕ್ವಾಂಡೋ ಚಾಂಪಿಯನ್‌ಶಿಪ್‌; ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಂಚಿನ ಪದಕ

ದಕ್ಷಿಣ ಕನ್ನಡ ಜಿಲ್ಲಾ ಟೇಕ್ವಾಂಡೋ ತಂಡವು 2025-26ರ ರಾಜ್ಯ ಮಟ್ಟದ ಪ್ರಿ-ಯೂನಿವರ್ಸಿಟಿ ಟೇಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಮನ್ನಣೆ ಗಳಿಸಿತು, ಎರಡು ಕಂಚಿನ ಪದಕಗಳನ್ನು ಗಳಿಸಿತು. ಈ ಚಾಂಪಿಯನ್‌ಶಿಪ್ ಚಿಕ್ಕಬಳ್ಳಾಪುರದ ಅಗಲಗುರ್ಕಿಯ ಜ್ಞಾನಗಂಗೋತ್ರಿ ಕ್ಯಾಂಪಸ್‌ನಲ್ಲಿರುವ ಬಿಜಿಎಸ್ ರೂರಲ್ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ಕರ್ನಾಟಕದಾದ್ಯಂತ ಪಿಯು ಕಾಲೇಜು ಕ್ರೀಡಾಪಟುಗಳು ಭಾಗವಹಿಸಿದ್ದರು. ಬಾಲಕರ ಸ್ಪರ್ಧೆಯಲ್ಲಿ, ತುಂಬೆಯ ಬಿಎ ಪಿಯು ಕಾಲೇಜಿನ ಮೊಹಮ್ಮದ್ ಅಯಾನ್, ಶಿಸ್ತಿನ ಕೌಶಲ್ಯ ಮತ್ತು ಬಲವಾದ ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸುವ ಮೂಲಕ 75 ಕೆಜಿ ವಯಸ್ಸಿನೊಳಗಿನ ವಿಭಾಗದಲ್ಲಿ ಕಂಚಿನ ಪದಕವನ್ನು […]

Continue Reading

ರಾಜಾಂಗಣದಲ್ಲಿ ಯಕ್ಷ ಪಂಚಮಿ ಸಮಾರೋಪ : ಕಲಾವಿದ ಅಜ್ರಿ ಗೋಪಾಲ ಗಾಣಿಗರಿಗೆ ತಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ಯಕ್ಷ ಪ್ರಶಸ್ತಿ ಪ್ರದಾನ

ಯಕ್ಷಗಾನಕ್ಕೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ ಅಭಿನಂದನೀಯ : ಪರ್ಯಾಯ ಪುತ್ತಿಗೆ ಶ್ರೀ ಉಡುಪಿ : ಯಕ್ಷಗಾನ ಕಲೆಗೆ ಉಡುಪಿಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂದಿನ ಪ್ರಶಸ್ತಿ ಪ್ರಧಾನ ಯಕ್ಷ ಕಲೆಗೆ ವಿಶೇಷ ಉತ್ತೇಜನ ಕೊಟ್ಟ ಹಾಗೆ. ತಲ್ಲೂರು ಶಿವರಾಮ ಶೆಟ್ಟಿ ಎಂದರೆ ಯಕ್ಷಗಾನ ಎಂಬುವುದೇ ಅಲ್ಲಿ ಪ್ರಸಿದ್ದಿಯಾಗಿದೆ. ಯಕ್ಷಗಾನ ಕಲೆಗೆ ಅವರು ನೀಡುತ್ತಿರುವ ಉತ್ತೇಜನ ಪ್ರೋತ್ಸಾಹ ಹೀಗೆ ಮುಂದುವರೆಯಲಿ. ನಮ್ಮ ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಚಿರಸ್ಥಾಯಿಯಾಗಲಿ ಎಂದು ಪರ್ಯಾಯ ಪುತ್ತಿಗೆ […]

Continue Reading

ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ದ ಪ್ರಕರಣ ದಾಖಲು.

ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿರುವುದಾಗಿದೆ ಎಂದು ದೂರುದಾರರಾದ ಪುತ್ತೂರು ತಾಲೂಕು ಈಶ್ವರಿ ಪದ್ಮುಂಜ ಎಂಬವರು ದೂರು ನೀಡಿರುತ್ತಾರೆ. ಅವರ ದೂರಿನ್ವಯ ದಿನಾಂಕ: 25-10-2025 ರಂದು […]

Continue Reading

ಕೋಮು ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರು ದಾಖಲು

ಪುತ್ತೂರು: ದೀಪಾವಳಿ ಸಂಭ್ರಮ ಸಾರ್ವಜನಿಕ ಸಮಾರಂಭವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪಾವಳಿ ಸಂಭ್ರಮ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅವಮಾನಿಸಿ, ಗರ್ಭಿಣಿ ಮಹಿಳೆಯರನ್ನು ನಿಂದನೆ ಮಾಡಿ, ಅವರ ಘನತೆಗೆ ಧಕ್ಕೆ ತರುವಂತೆ, ಗರ್ಭಿಣಿಯರ ವಿರುದ್ದ ಹಿಂಸೆಗೆ ಪ್ರೇರೆಪಿಸುವಂತೆ, ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತಿ, ದ್ವೇಷ […]

Continue Reading

ಸುರತ್ಕಲ್: ಕಾನಾ ಬಳಿ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣ ಬೇಧಿಸಿದ ಸುರತ್ಕಲ್‌ ಪೊಲೀಸರು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲೀಸರು ದಸ್ತಗಿರಿ ಮಾಡಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ಫಿಯಾಗಿರುತ್ತಾರೆ. 23-10-2025 ರಂದು ರಾತ್ರಿ ಸುಮಾರು 10:30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು […]

Continue Reading

ಸ್ನೇಹಪರ ವ್ಯಕ್ತಿತ್ವದ ಮಂಗಳೂರು ತಾ.ಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಮುಹಮ್ಮದ್ ಸಿರಾಜು ಉಳಾಯಿಬೆಟ್ಟು ವಿಧಿವಶ

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಸಿರಾಜ್ ಉಳಾಯಿಬೆಟ್ಟು ಅಲ್ಪಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಸಿರಾಜುದ್ದೀನ್ ‘ಸಿರಾಜ್ ಮೋನು’ ಎಂದೇ ಜನಪ್ರಿಯರಾಗಿದ್ದರು. ಪ್ರಸ್ತುತ ಗುರುಪುರ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಮಾವಿನ ವ್ಯಾಪಾರ ನಡೆಸುತ್ತಿದ್ದ ಸಿರಾಜುದ್ದೀನ್ ಎಲ್ಲರೊಂದಿಗೆ ಅತ್ಯಂತ ಆಪ್ತತೆಯಿಂದ ಬೆರೆಯುತ್ತಿದ್ದರು. ರಾಜಕಾರಣದ ಬಗ್ಗೆ ಹೆಚ್ಚು […]

Continue Reading