ಅಳದಂಗಡಿ ಪಿಲ್ಯ ಗ್ರಾಮದ ಬರಾಯಕೆರೆ ಅಕ್ರಮ ಗಣಿಗಾರಿಕೆ: ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ ದೂರು

ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಜಂಟಿ ಬೇಟಿ; ಸ್ಥಳ ಪರಿಶೀಲನೆ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಸೋಮವಾರ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು […]

Continue Reading

ಕಾಂತರಾಜ್, ಜಯಪ್ರಕಾಶ್ ಹೆಗ್ಡೆ ಹಾಗೂ ಮಧುಸೂದನ್ ನಾಯಕ್ ವರದಿಗಳ ಜಾರಿಗೆ ದ.ಕ ಅಹಿಂದ ನಾಯಕರ ಆಗ್ರಹ.

ಕರ್ನಾಟಕ ರಾಜ್ಯಾದ್ಯಂತ ಅಹಿಂದ ಚಳುವಳಿಯ ಭಾಗವಾಗಿ, ಪ್ರತಿ ಜಿಲ್ಲೆಯಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಹೋರಾಟವನ್ನು ಬಲಪಡಿಸಲಾಗುತ್ತಿದೆ. ಇದರ ಭಾಗವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿ, ಕಾಂತರಾಜ್ ವರದಿ, ಜಯಪ್ರಕಾಶ್ ಹೆಗ್ಡೆ ವರದಿ ಹಾಗೂ ಮಧುಸೂದನ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಕೂಡಲೇ ಬಹಿರಂಗಪಡಿಸಿ, ಜಾರಿಗೊಳಿಸಬೇಕೆಂದು ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಯಿತು. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸಲು ಈ ವರದಿಗಳು […]

Continue Reading

ಬೆಳ್ತಂಗಡಿ: ಕಪ್ಪು ಕಲ್ಲು ಗಣಿಗಾರಿಕೆಯಿಂದ ಸ್ಥಳೀಯ ನಿವಾಸಿಗಳ ಮನೆ ಬಿರುಕು, ಆತಂಕದಲ್ಲಿ ಪರಿಸರವಾಸಿಗಳು

ಬರಾಯನಕೆರೆ ಸಂರಕ್ಷಣಾ ಸಮಿತಿಯಿಂದ ಡಿ.ಸಿ ಗೆ ದೂರು; ಸ್ಥಳಕ್ಕೆ ಅಧಿಕಾರಿಗಳ ದೌಡು, ಪರಿಶೀಲನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅಧಿಕಾರಿಗಳ ದಂಡು ಸಾಲು ಸಾಲಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಶನಿವಾರ ಬೆಳ್ತಂಗಡಿ ಪೋಲಿಸ್ ಉಪ ವಿಭಾಗದ ಉಪಾಧೀಕ್ಷಕಿ ರೋಹಿಣಿ ಸಿ.ಕೆ ಸ್ಥಳಕ್ಕೆ […]

Continue Reading

ಕುಂದಾಪುರ ಪತ್ರಕರ್ತ ವಿರುದ್ಧ ಹಲ್ಲೆ ನಡೆಸಿದ ಭ್ರಷ್ಟಾಚಾರಿ ವೈದ್ಯ ಅಮಾನತು ಅಲ್ಲ ವಜಾಗೊಳ್ಳಲಿ; ಹೆಚ್ಚಿದ ಆಗ್ರಹ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ಭೃಷ್ಟಾಚಾರವನ್ನು ಬಯಲಿಗೆಳೆದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿಯವರ ಮೇಲೆ ವೈದ್ಯ , ಭೃಷ್ಟಾಚಾರಿ ಡಾ. ಮಹೇಂದ್ರ ಶೆಟ್ಟಿ ಬೀದಿರೌಡಿಗಳಂತೆ ಸಾರ್ವಜನಿಕವಾಗಿ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯವಾಗಿದ್ದು , ಇದು ಪ್ರಜಾಪ್ರಭುತ್ವದ ಮೇಲಿನ ಹಲ್ಲೆಗೆ ಸಮವಾಗಿದೆ. ಕುಂದಾಪುರ ಸರ್ಕಾರಿ ಆಸ್ಪತ್ರೆಯ ಅಕ್ರಮ , ಭೃಷ್ಟಾಚಾರದ ವಿರುದ್ಧ ಜನಸಾಮಾನ್ಯರ ಧ್ವನಿಯಾಗಿ ಶ್ರೀಕಾಂತ್ ಹೆಮ್ಮಾಡಿ ಪತ್ರಿಕೆಯಲ್ಲಿ ವರದಿಯನ್ನು ಪ್ರಕಟಿಸಿದ್ದರು. ಇದನ್ನು ನೆಪವಾಗಿಟ್ಟುಕೊಂಡು ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಡಾ. ಮಹೇಂದ್ರ ಶೆಟ್ಟಿ ಪತ್ರಕರ್ತ ಹೆಮ್ಮಾಡಿರವರ ಮೇಲೆ ಮೃಗೀಯವಾಗಿ ಹಲ್ಲೆ ಮಾಡಿರುವುದು […]

Continue Reading

ಬಾಳೆಹಣ್ಣಿಗೆ ಕೃತಕ ಬಣ್ಣ ಬಳಸಿ ಮಾರಾಟದ ಬೃಹತ್ ಜಾಲ; ಅಧಿಕಾರಿಗಳಿಂದ ಮಹತ್ವದ ಕಾರ್ಯಾಚರಣೆ, ಮಂಗಳೂರಿಗೂ ಲಿಂಕ್!

ಉಡುಪಿ ಜಿಲ್ಲೆಯ ಅಲೆವೂರು ಗ್ರಾಮದ ಬಾಳೆಹಣ್ಣು ದಾಸ್ತಾನು ಕೇಂದ್ರಕ್ಕೆ ಧಿಡೀರ್ ದಾಳಿ ನಡೆಸಿದ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್ ಆರ್ ಹಾಗೂ ಆರೋಗ್ಯಾಧಿಕಾರಿಗಳು ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಸುತ್ತಿದ್ದ ಹಲವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಗಸ್ಟ್ 20 ರಂದು ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿ ಬಾಳೆ ಹಣ್ಣು ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳಿಗೆ ದಾಳಿ ನಡೆಸಿದ ಅಧಿಕಾರಿಗಳು, ನಕಲಿ ಬಣ್ಣ ಹಚ್ಚಿದ್ದ ಸುಮಾರು 5 ಸಾವಿರ ಕೆ.ಜಿ ಬಾಳೆಕಾಯಿಗಳನ್ನು ಸೀಝ್ ಮಾಡಲಾಗಿದೆ. […]

Continue Reading

ಮಾದಕ ದ್ರವ್ಯ ಜಾಲದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು

ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ ಆಯುರ್ವೇದ ಥೆರಪಿಸ್ಟ್ ಸಹಿತ ಮೂವರು ಅಂದರ್ ಮಂಗಳೂರು ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ನಿರಂತರವಾಗಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ಜೈಲಿಗೆ ಅಟ್ಟುತ್ತಿದ್ದಾರೆ. ಅಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ ವೆಲ್ ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ […]

Continue Reading

ಕರಾವಳಿಯಲ್ಲಿ ‘ಬಡ್ಡಿ’ ಮಕ್ಕಳದ್ದೇ ಗೂಂಡಾ ದರ್ಬಾರ್..!

ರಕ್ತಬೀಜಾಸುರರ ಅಟ್ಟಹಾಸಕ್ಕೆ ಬಡ, ಮಧ್ಯಮ ಕುಟುಂಬಗಳೇ ಬರ್ಬಾದ್ “ಸಾಲ ಮಾಡಿಯಾದರೂ ತುಪ್ಪ ತಿನ್ನು” ಇದು ಹಳೆಯ ಗಾದೆ ಮಾತು. ಆದರೆ ಬಡ, ಮಧ್ಯಮ ವರ್ಗದ ಕುಟುಂಬದ ಸ್ಥಿತಿಗತಿ ಇದಕ್ಕಿಂತ ಭಿನ್ನ. ದುಡಿಮೆಯ ಹಣ ಕುಟುಂಬ ಸಾಕುವುದೇ ಕಷ್ಟವಾಗುತ್ತದೆ. ಇಂದಿನ ಮಿತಿಮೀರಿದ ದರ ಏರಿಕೆ ನಡುವೆ ಕುಟುಂಬದ ಬೇಕು ಬೇಡವನ್ನು ಪೂರೈಸುವುದು ಯಜಮಾನನಿಗೆ ದೊಡ್ಡ ಸವಾಲು. ಇದರ ನಡುವೆ ಸ್ಕೂಲ್ ಫೀಸ್, ಅನಾರೋಗ್ಯ ಸಂಭವಿಸಿದರೆ ಆಸ್ಪತ್ರೆಗೆ ಹಾಕುವ ಕಾಸು ಹೀಗೆ ಒಂದಲ್ಲ ಒಂದು ರೀತಿಯಲ್ಲಿ ಇಂತಹ ಕುಟುಂಬದ ಸ್ಥಿತಿ […]

Continue Reading

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ : ಯಕ್ಷಗಾನ ರಂಗಕ್ಕೆ ಗಡಿನಾಡು ಕನ್ನಡಿಗರ ಕೊಡುಗೆ ಅಪಾರ: ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ: ಯಕ್ಷಗಾನಕ್ಕೆ ಮೂಲ ಪುರುಷ ಎಂದೇ ಖ್ಯಾತರಾದ ಕವಿ ಪ್ರಾರ್ಥಿಸುಬ್ಬ ಅವರ ತವರೂರಾದ ಗಡಿನಾಡಿನ ಶ್ರೇಷ್ಠ ಯಕ್ಷಗಾನ ಕಲಾವಿದರು, ಸಂಸ್ಥೆಗಳು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕಾಸರಗೋಡಿನ ಮಂಜೇಶ್ವರ ಕಡಂಬಾರು ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಹಾಗೂ ದೇವಳದ ಸಹಕಾರದಲ್ಲಿ ಯಕ್ಷ ಬಳಗ ಹೊಸಂಗಡಿ ಮಂಜೇಶ್ವರ ತಂಡದಿಂದ ಹಮ್ಮಿಕೊಂಡ […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳ ಬಂಧನ

ಕೈಕಂಬ: ಮೂಡಬಿದ್ರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ಗುರುಪುರ- ಕೈಕಂಬ ಪೊಳಲಿ ದ್ವಾರದ ರಸ್ತೆಯ ಬಳಿ ದಿನಾಂಕ: 15-08-2026 ರಂದು 1.214 ಗ್ರಾಂ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬೆಂಜನಪದವು, ಕಲ್ಲಿಗೆ ಎಂಬಲ್ಲಿಯ ನಿವಾಸಿಗಳಾದ ರಕ್ಷಿತ್ ಹಾಗೂ ಅಕ್ಷಯ್ ಬಿ. ಎಂಬವರನ್ನು ಬಜಪೆ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಎಚ್.ಎನ್ ನೇತ್ರತ್ವದ ಪೊಲೀಸರ ತಂಡ ದಾಳಿ ನಡೆಸಿ, ವಶಕ್ಕೆ ಪಡೆದು ಆರೋಪಿಗಳಿಂದ ಸುಮಾರು 65 ಸಾವಿರ ರೂಪಾಯಿ ಮೌಲ್ಯದ 1.214 ಕೆ.ಜಿ ತೂಕದ ಮಾದಕ […]

Continue Reading

ವಿಟ್ಲ: ಉಮೇಶ್ ಶೆಟ್ಟಿ ಎಂಬಾತನಿಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ; ವಿಟ್ಲ ಪೊಲೀಸರ ಕಾರ್ಯಾಚರಣೆ, ಆರೋಪಿಯ ಬಂಧನ, ಪೋಕ್ಸೋ ಪ್ರಕರಣ ದಾಖಲು

ವಿಟ್ಲ ಪಡ್ನೂರು ಗ್ರಾಮದ ಕಾಪುಮಜಲು ಕೋಡಿ ನಿವಾಸಿ ಉಮೇಶ್ ಶೆಟ್ಟಿ ಎಂಬಾತ ಬಸ್ಸಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಉಮೇಶ್ ಶೆಟ್ಟಿ ಎಂಬಾತ ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದು, ಇದೀಗ ಕೃಷಿ ಕೆಲಸ ಕಾರ್ಯ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ವಿವಾಹಿತನಾದ ಈತ ಎರಡು ಮಕ್ಕಳ ತಂದೆಯಾಗಿದ್ದು, ಬಸ್ಸಿನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ […]

Continue Reading