ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಕಳವುಗೈದ ಸೊತ್ತು ವಶ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಎಂಬಲ್ಲಿ, ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ. 71/2026 ಕಲಂ: 303(2) ಬಿ ಎನ್‌ ಎಸ್‌ -2023 ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು ಆರೋಪಿಗಳಾದ ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ ಹಾಗೂ ಮಂಗಳೂರು ಸುರತ್ಕಲ್‌ ನಿವಾಸಿ ಕಿಶಾನ್‌ ಎಂಬವರುಗಳನ್ನು ಬಂಧಿಸಿ, ಆರೋಪಿಗಳು ಕಳವುಗೈದಿರುವ ಒಟ್ಟು ರೂ 2,50,000. ರೂ. ಮೌಲ್ಯದ 21 ಗ್ರಾಂ ಚಿನ್ನಾಭರಣ ಮತ್ತು ಆರು ನೂರು ರೂಪಾಯಿ ನಗದನ್ನು […]

Continue Reading

ಬೆಳ್ತಂಗಡಿ: ಯುವಕನ ಹತ್ಯೆ ಪ್ರಕರಣ: ಮೂವರು ಅಂದರ್

ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ನಡೆದಿದ್ದ ಹತ್ಯೆ ಪ್ರಕರಣವನ್ನು ಕೊನೆಗೂ ಬೆಳ್ತಂಗಡಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಯುವಕನನ್ನು ಬಂಟ್ವಾಳ ಗ್ರಾಮದ ಪೆರ್ನೆ ನಿವಾಸಿ ಯತೀಶ್ ಗೌಡ ಎಂದು ಗುರುತಿಸಲಾಗಿದೆ. ಜೂನ್ 1 ರಂದು ಗುರುವಾಯನಕೆರೆ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಮೃತನ ಸಹೋದರ ನಿತಿನ್ ಅವರು, ಮೃತ ವ್ಯಕ್ತಿಯು ತನ್ನ ಸಹೋದರ […]

Continue Reading

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದ್ವೇಷ ಪೂರಿತ ಅವಹೇಳನ ಪ್ರಕರಣ; ಮಹಿಳೆ ವಿರುದ್ಧ ಎಫ್ ಐ ಆರ್

ಮಂಗಳೂರಿನ ಸ್ಟೇಟ್‌ಬ್ಯಾಂಕ್ ಸಮೀಪ ನಡೆದಿದ್ದ ಬೀದಿ ಬದಿ ವ್ಯಾಪಾರಿಯ ಮೇಲಿನ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಸಂಬಂಧ ಇದೀಗ ಮಹಿಳೆಯೊಬ್ಬರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮ, ಭಾಷೆ ಹಾಗೂ ಇತರ ಗುರುತುಗಳ ಆಧಾರದ ಮೇಲೆ ದ್ವೇಷ ಮತ್ತು ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಮಾತುಕತೆ ನಡೆಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಗರದ ಸ್ಟೇಟ್‌ಬ್ಯಾಂಕ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಬೀದಿ ಬದಿ […]

Continue Reading

ಅಪಘಾತ ತಡೆಗಟ್ಟಲು ಮಂಗಳೂರು ಪೊಲೀಸರಿಂದ ವಿಶೇಷ ಕಾರ್ಯಾಚರಣೆ

ಬಿಕರ್ನಕಟ್ಟೆ-ಸಾಣೂರು 169 ರಾಷ್ಟ್ರೀಯ ಹೆದ್ದಾರಿಗೆ ಹೆಚ್ಚುವರಿ ಹೈವೇ ಪೆಟ್ರೋಲ್ ವಾಹನದ ನಿಯೋಜನೆ. ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಕಳೆದ ಒಂದು ವಾರದ ಅವಧಿಯಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವವರು ಮತ್ತು ವಿರುದ್ದ ದಿಕ್ಕಿನಲ್ಲಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಅಪಘಾತಗಳಲ್ಲಿ ತಲೆಗೆ ಗಂಭೀರ ಗಾಯಗಳಾಗಿ ಸಾವನ್ನಪ್ಪುವ ಹಾಗೂ ಗಂಭೀರವಾಗಿ ಗಾಯಗೊಳ್ಳುವ ಪ್ರಕರಣಗಳು ಹೆಚ್ಚುತ್ತಿರುವುದಾಗಿದೆ. ಇದೇ […]

Continue Reading

MDMA ಸಾಗಾಟ ಪ್ರಕರಣ. ಇಬ್ಬರು ಆರೋಪಿಗಳ ಸಹಿತ ಮಾದಕವಸ್ತು ಪೊಲೀಸರ ವಶ

ವೇಣೂರು: ನಿಷೇಧಿತ MDMA ಮಾದಕವಸ್ತು ಸಾಗಾಟದ ಬಗ್ಗೆ ಮಾಹಿತಿ ಬಂದ ಮೇರೆಗೆ, ವೇಣೂರು ಪೊಲೀಸ್ ಠಾಣಾ ಉಪ-ನಿರೀಕ್ಷಕರು ಪೊಲೀಸ್ ಸಿಬ್ಬಂದಿಗಳೊಂದಿಗೆ ಗುರುವಾಯನಕೆರೆ- ಮೂಡಬಿದ್ರೆ ರಸ್ತೆಯ, ಕಂಬಳದಡ್ಡ ಎಂಬಲ್ಲಿ KA-13 P-2905 ನೋಂದಣಿಯ ಕಾರಿನಲ್ಲಿ ಆರೋಪಿತರಾದ ಮಂಗಳೂರು ಮಿಜಾರು ನಿವಾಸಿ ಮಹಮ್ಮದ್ ತಹ್ನವೀರ್ ಹಾಗೂ ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ ಎಂಬವರುಗಳು ಅಕ್ರಮವಾಗಿ ಸುಮಾರು 3.92ಗ್ರಾಂ ತೂಕದ MDMA ಎಂಬ ಮಾದಕವಸ್ತು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ, ಮಾಲು ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ. ಮಾದಕವಸ್ತು ಹಾಗೂ ಕೃತ್ಯಕ್ಕೆ […]

Continue Reading

ಹಲವು ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ.

ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ. ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದೆ. ಆರೋಪಿತನು ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನಿಗೆ ವಾರೆಂಟ್ ಜಾರಿಗೊಳಿಸಿತ್ತು. ಈತನ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 136/2018, ಅ.ಕ್ರ.ಸಂ: 119/2024, ಅ.ಕ್ರ.ಸಂ: 130/2024, ಅ.ಕ್ರ.ಸಂ: 119/2024 […]

Continue Reading

ಮಂಗಳೂರು: ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಆರೋಪಿಗಳ ಬಂಧನ.

ಕೇರಳಕ್ಕೆ ಪರಾರಿಯಾಗಿದ್ದ ಆರೋಪಿ ಸಚಿನ್ ಮತ್ತು ಚಂದನ್, ಕಾಂಞಗಾಡ್ ನಲ್ಲಿ ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು ದಿನಾಂಕ 24-05-2026 ರಂದು ಬೆಳಗಿನ ಜಾವ 02:10 ವೇಳೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣ ಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರ್ ನಲ್ಲಿ ಬಂದ ಇಬ್ಬರು ಆರೋಪಿಗಳು ಏಕಾಏಕಿಯಾಗಿ ಸಿಮೆಂಟ್ ಶೀಟಿನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದು, ಹಲ್ಲೆ ನಡೆಸಿ ಸ್ಥಳದಿಂದ […]

Continue Reading

ಮುಲ್ಕಿ: ಮುಲ್ಕಿ ಪೊಲೀಸರ ಕಾರ್ಯಾಚರಣೆ: ಬೈಕ್ ಕಳ್ಳತನ ಆರೋಪಿಗಳ ಬಂಧನ; ಬೈಕ್‌, ಎರಡು ಮೊಬೈಲ್ ಪೋನ್ ವಶ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ಜಂಕ್ಷನ್ ಬಳಿ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ ಹೋಂಡಾ ಯುನಿಕಾರ್ನ್ (ಕೆಎ 20 ಇಬಿ 6383) ಬೈಕ್ ಅನ್ನು ಕಳ್ಳತನ ಮಾಡಿದ ಆರೋಪಿಗಳಾದ ಮೊಹಮ್ಮದ್ ರಾಝಿಕ್, ಮುಕ್ಕ ಸುರತ್ಕಲ್. ಮತ್ತು ಉಬೈದತ್ ಹೈದರ್, ಅಂಗರಗುಂಡಿ ಬೈಕಂಪಾಡಿ ಎಂಬವರನ್ನು ಮುಲ್ಕಿ ಪೊಲೀಸರು ಬಂಧಿಸಿ, ಆರೋಪಿಗಳಿಂದ ಸುಮಾರು 20 ಸಾವಿರ ರೂ. ಮೌಲ್ಯದ ಕಳವಾದ ಹೋಂಡಾ ಯುನಿಕಾರ್ನ್ ಬೈಕ್ ಹಾಗೂ ಸುಮಾರು 18 ಸಾವಿರ ರೂ. ಮೌಲ್ಯದ ಮೊಬೈಲ್ ಪೋನಗಳನ್ನು ವಶಪಡಿಸಿಕೊಂಡು, ಪ್ರಕರಣ […]

Continue Reading

ದೇರಳಕಟ್ಟೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕೊಳಚೆ ನೀರು ಶೇಖರಣೆ; ವಿಪರೀತ ದುರ್ವಾಸನೆ ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಒತ್ತಾಯ

ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಯ ಜಂಕ್ಷನ್ ನಲ್ಲಿ ಕಳೆದ ಹಲವಾರು ತಿಂಗಳಿನಿಂದ ಕೊಳಚೆ ನೀರು ಶೇಖರಣೆಗೊಂಡಿದ್ದು ಇದರಿಂದ ವಿಪರೀತ ದುರ್ವಾಸನೆ ಪರಿಸರದಾದ್ಯಂತ ಬೀರುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸ್‌ವಾದಿ) ಉಳ್ಳಾಲ ವಲಯ ಸಮಿತಿಯು ಇಂದು(26-05-2026) ಉಳ್ಳಾಲ ತಾಲೂಕು ತಹಶೀಲ್ದಾರ್, ಕೋಟೆಕಾರ್ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಬೆಳ್ಮ ಗ್ರಾಮ ಪಂಚಾಯತ್ ನ‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಮನವಿಯನ್ನು […]

Continue Reading

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ರೌಡಿಶೀಟರ್ ಟೊಪ್ಪಿ ನೌಫಾಲ್ ಸಹೋದರನ ಬಂಧನ.

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿ ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು, ಎಂಬಾತನನ್ನು ದಿನಾಂಕ 25-05-2026 ರಂದು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ. ತೊಕ್ಕೊಟ್ಟು ಪ್ಲೈಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೆಡವಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು […]

Continue Reading