ಮಂಗಳೂರು: ನಾಳೆ ಗುರುವಾರ ಕೊರಗರ ಆಕ್ರೋಶ ರಾಲಿಯಲ್ಲಿ ನವೀನ್ ಸೂರಿಂಜೆ ಬರೆದಿರುವ ‘ಕೊರಗರು-ತುಳುನಾಡಿನ ಮಾತೃಸಮುದಾಯ’ ಪುಸ್ತಕ ಬಿಡುಗಡೆ
ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗಾಗಿ ಜನವರಿ 23 ಗುರುವಾರದಂದು ನಡೆಯುತ್ತಿರುವ ಐತಿಹಾಸಿಕ ‘ಆದಿವಾಸಿ ಆಕ್ರೋಶ ರ್ಯಾಲಿ’ಯಲ್ಲಿ ಪತ್ರಕರ್ತ, ಬರಹಗಾರ ನವೀನ್ ಸೂರಿಂಜೆ ಬರೆದಿರುವ ‘ಕೊರಗರು-ತುಳುನಾಡಿನ ಮಾತೃಸಮುದಾಯ’ ಪುಸ್ತಕ ಬಿಡುಗಡೆ ನಡೆಯಲಿದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಕಟನೆ ತಿಳಿಸಿದೆ. ಕರಾವಳಿಯ ಮೂಲನಿವಾಸಿ ಕೊರಗ ಸಮುದಾಯ ಇಂದು ಅಳಿವಿನಂಚಿನಲ್ಲಿದೆ. ಸಾಂಸ್ಕೃತಿಕವಾಗಿ, ಐತಿಹ್ಯವಾಗಿ ಈ ಕೊರಗ ಸಮುದಾಯ ಕರಾವಳಿಯನ್ನು ಒಂದು ಕಾಲದಲ್ಲಿ ಆಳ್ವಿಕೆ ಮಾಡಿತ್ತು. ಆದರೆ ಕಾನೂನಾತ್ಮಕವಾಗಿ ತುಂಡು ಭೂಮಿಯನ್ನೂ ಹೊಂದಿಲ್ಲ. ಜಾತ್ರೆ, ನೇಮ, ಕೋಲ, ಕಂಬಳ, […]
Continue Reading