ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ.!, ಸಂಪುಟ ಸರ್ಕಸ್ಸು ಹೇಗಿತ್ತು, ಡಿಕೆಶಿ ಲಕ್ಕು ಚೆನ್ನಾಗಿದೆ. ಬಿಜೆಪಿ ಭಿನ್ನರಿಗೆ ‘ಕಾಕ್ರೋಚ್’ ಅಡ್ಡಿ

✍️. ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ? ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ, ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ, ಮಂತ್ರಿ ಮಂಡಲದ ಪಟ್ಟಿ ಒಂದು ರೂಪ ತಳೆಯುವ ಹೊತ್ತಿಗೆ ರಾಹುಲ್ ಗಾಂಧಿ ಸುಸ್ತಾಗಿದ್ದಷ್ಟೇ ಅಲ್ಲ, ಚಿಂತೆಗೂ ಒಳಗಾಗಿದ್ದರಂತೆ. ಅವರ ಈ ಚಿಂತೆಗೆ ಮುಂದೇನು?ಎಂಬ ಪ್ರಶ್ನೆಯೇ ಕಾರಣ. ಯಾಕೆಂದರೆ ಈ ಬಾರಿ ಮಂತ್ರಿಗಿರಿ ಸಿಗದವರು […]

Continue Reading

ಕಾವೇರಿ ವಿವಾದ: ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿರುವ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು (ಆಗಸ್ಟ್ 2): ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ, ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾನೂನು ಮತ್ತು ರಾಜಕೀಯ ಕಾರ್ಯತಂತ್ರವನ್ನು ರೂಪಿಸಲು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವಿಷಯದಲ್ಲಿ ಕರ್ನಾಟಕದ ನಿಲುವಿನ ಕುರಿತು ಚರ್ಚಿಸಲು ನಡೆಯಲಿರುವ ಈ ಸಭೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ […]

Continue Reading

ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚು

ಅಸುರಕ್ಷಿತ ನಡೆನುಡಿಗೆ ಒಳಗಾಗಿ 22 ವರ್ಷ ಒಳಗಿನ ಯುವ ಜನತೆ ಎಚ್‌ಐವಿ ಬಲೆಗೆ ಬೀಳುತ್ತಿದ್ದಾರೆ ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿಯೊಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ರಾಜ್ಯದ ಯುವಜನತೆಯಲ್ಲಿ ಹೆಚ್‌ಐವಿ ಸೋಂಕು ದಿನೇ ದಿನೇ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ಆರಂಭಿಕ ಹಂತದಲ್ಲೇ ತಡೆಯಲು ರಾಜ್ಯ ಸರ್ಕಾರಿ ನಿರ್ಧಾರಿಸಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ […]

Continue Reading

ಗೃಹಜ್ಯೋತಿ ಯೋಜನೆ: ಜುಲೈ 31 ಅಂತಿಮ ಗಡುವಲ್ಲ; ಆಗಸ್ಟ್ 31 ವರೆಗೆ ಅವಕಾಶ

ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಪುನರ್ ಪರಿಶೀಲನೆ ಪ್ರಕ್ರಿಯೆ ರಾಜ್ಯಾದ್ಯಂತ ಚುರುಕಿನಿಂದ ಸಾಗಿದೆ. ಈ ನಡುವೆ, ಪರಿಶೀಲನೆಗೆ ಜುಲೈ 31 ಕೊನೆಯ ದಿನಾಂಕ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಆದರೆ, ಈ ವದಂತಿಗಳಿಗೆ ತೆರೆ ಎಳೆದಿರುವ ಬೆಸ್ಕಾಂ ಹಿರಿಯ ಅಧಿಕಾರಿಗಳು, ಜುಲೈ 31 ಅಂತಿಮ ಗಡುವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿ ಮನೆಗೆ ತೆರಳುತ್ತಿರುವ ಮೀಟರ್ ರೀಡರ್ ಹಾಗೂ ಲೈನ್ ಮ್ಯಾನ್‌ಗಳು ಪ್ರಸ್ತುತ ವಾಸವಿರುವವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಯೋಜನೆಯು ಅರ್ಹರಿಗೆ […]

Continue Reading

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: ರಾಜ್ಯದಲ್ಲಿ ಬರೋಬ್ಬರಿ 84 ಲಕ್ಷಕ್ಕೂ ಅಧಿಕ ದೋಷಪೂರಿತ ಮತದಾರರು ಪತ್ತೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಭರದಿಂದ ಸಾಗಿದ್ದು, ರಾಜ್ಯದಲ್ಲಿ ಬರೋಬ್ಬರಿ 84 ಲಕ್ಷಕ್ಕೂ ಅಧಿಕ ದೋಷಪೂರಿತ ಮತದಾರರು ಪತ್ತೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್, ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ, ಮೃತಪಟ್ಟ, ನಕಲಿ ಮತ್ತು ಇತರೆ ವರ್ಗಕ್ಕೆ ಸೇರಿದ ಒಟ್ಟು 84,31,612 ಮತದಾರರನ್ನು ಪತ್ತೆಹಚ್ಚಲಾಗಿದೆ ಎಂದು ಅಂಕಿ-ಅಂಶಗಳ ವಿವರ ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 5,54,32,314 ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸಲಾಗಿದ್ದು, ಈ ಪೈಕಿ 4,26,75,861 ಫಾರಂಗಳು ಯಶಸ್ವಿಯಾಗಿ ಡಿಜಿಟಲೀಕರಣಗೊಂಡಿವೆ. […]

Continue Reading

ಅಕ್ರಮ ಮರಳುಗಾರಿಕೆಯಲ್ಲಿ ಸಿಕ್ಕಿ ಬಿದ್ದರೆ ಗೂಂಡಾ ಕಾಯ್ದೆ ಫಿಕ್ಸ್; ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ

ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಸಚಿವರ ಸೂಚನೆಯ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಎಲ್ಲಾ ಪೊಲೀಸ್ ಉನ್ನತ ಅಧಿಕಾರಿಗಳಿಗೆ ಕಟ್ಟುವಿಟ್ಟಿನ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರವನ್ನು ನಾಶಪಡಿಸುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಖಜಾನೆಗೆ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮಗಳ ವಿರುದ್ಧ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಅನುಸರಿಸಲಾಗುತ್ತಿದ್ದು, ರಾಜ್ಯಾದ್ಯಂತ ಈ […]

Continue Reading

ಡಿಚ್ಚಿ ಹೊಡೆಯುತ್ತಿದೆ ರಾಹುಲ್ ಪಟ್ಟಿ?, ರೀಸರ್ಚ್ ಟೀಮಿನಿಂದ ಸಿಕ್ಕ ಫೀಡ್ ಬ್ಯಾಕ್; ಸೋನಿಯಾ ಸಿಗ್ನಲ್ ಏನು; ವಿಜಯೇಂದ್ರ ಟೀಮಿನ ಚಿಂತೆ

✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ವೆಬ್ ಎಕ್ಸ್ ಮೀಟಿಂಗು ನಡೆಸಿದ್ದಾರೆ. ಈ ಮೀಟಿಂಗಿನಲ್ಲಿ ಪಾಲ್ಗೊಂಡ ಎಲ್ಲ ರಾಜ್ಯಗಳ ಪಕ್ಷಾಧ್ಯಕ್ಷರು, ಪದಾಧಿಕಾರಿಗಳು ಮತ್ತಿತರ ಪ್ರಮುಖರ ಜತೆ ಚರ್ಚಿಸಿದ ಅವರು ಕಾಂಗ್ರೆಸ್ ವಿರುದ್ದ ಹೋರಾಡಲು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಬಿಜೆಪಿ ಸರ್ಕಾರದ ವಿರುದ್ದ ಹೋರಾಡುವ ಹೆಸರಿನಲ್ಲಿ ಸಂಸತ್ತಿಗೆ, ನಮ್ಮ ಪಕ್ಷದ ಕಚೇರಿಗೆ ಮುತ್ತಿಗೆ ಹಾಕುತ್ತಾರೆ. ಇಂತಹ ಸಂದರ್ಭದಲ್ಲಿ ನಾವೂ ಸುಮ್ಮನಿರಬಾರದು. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಕಚೇರಿಗಳಿಗೆ‌ ನಾವೂ ಮುತ್ತಿಗೆ […]

Continue Reading

ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ದರೆ, ಎರಡನೇ ಮದುವೆ ಊರ್ಜಿತವಲ್ಲ: ಹೈಕೋರ್ಟ್

ಮುಸ್ಲಿಂ ವೈಯಕ್ತಿಕ ಕಾನೂನು ಆ ಸಮುದಾಯದ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ವಿವಾಹ ಮಾಡಿಕೊಳ್ಳಲು ಅವಕಾಶ ನೀಡುತ್ತದೆ. ಮುಸ್ಲಿಂ ವ್ಯಕ್ತಿಯ ಎರಡನೇ ಪತ್ನಿ ಬಳ್ಳಾರಿಯ ಮೀನಾಕುಮಾರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಧಾರವಾಡ ಪೀಠದ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಏಕಸದಸ್ಯ ಪೀಠ ಮುಸ್ಲಿಮರ ಮದುವೆ ಸಂಬಂಧ ಈ ಆದೇಶ ನೀಡಿದೆ. ಹೈಕೋರ್ಟ್​ನಲ್ಲಿ ನಡೆದ ಅರ್ಜಿ ವಿಚಾರಣೆ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ‘ಮುಸ್ಲಿಂ ವೈಯಕ್ತಿಕ ಕಾನೂನು ಪುರುಷರು ಬಹು ವಿವಾಹ ಮಾಡಿಕೊಳ್ಳಲು ಅವಕಾಶ ನೀಡಿದೆ, ಆದರೂ ವೈಯಕ್ತಿಕ […]

Continue Reading

ನಕಲಿ ಪಿಎಚ್ ಡಿ ಪ್ರಮಾಣ ಪತ್ರ ಪ್ರಕರಣ: 249 ಅತಿಥಿ ಉಪನ್ಯಾಸಕರು ಸೇವೆಯಿಂದ ವಜಾ; ಕಪ್ಪು ಪಟ್ಟಿಗೆ ಸೇರಿಸುವಂತೆ ಸರಕಾರದ ಆದೇಶ

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಮತ್ತು ಅಮಾನ್ಯ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡಿದ್ದ ಬೃಹತ್ ಹಗರಣವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ 249 ಅಭ್ಯರ್ಥಿಗಳ ಪಿಎಚ್‌ಡಿ ಪ್ರಮಾಣಪತ್ರಗಳು ನಕಲಿ ಅಥವಾ ಅಮಾನ್ಯ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ, ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. 2025-26ನೇ ಶೈಕ್ಷಣಿಕ ವರ್ಷದ ನೇಮಕಾತಿ ವೇಳೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 10 ಸಾವಿರ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ನೇಮಕ ಮಾಡಲಾಗಿತ್ತು. […]

Continue Reading

ಜಿಬಿಎ ಅಧಿಕಾರಿಗಳಿಗೆ ಹಲ್ಲೆ, ಜೀವ ಬೆದರಿಕೆ ಪ್ರಕರಣ: ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆಗೆ ಚಿಂತನೆ

ಜಿಬಿಎ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಈತನ ವಿರುದ್ದ ಈಗಾಗಲೇ ಹಲವಾರು ಠಾಣೆಗಳಲ್ಲಿ 19ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಹಫ್ತಾ ವಸೂಲಿ ಸೇರಿದಂತೆ ಹಲವು ಅಪರಾಧಿ ಚಟುವಟಿಕೆಗಳು ಭಾಗಿಯಾಗಿ, ಮಿತಿಮೀರಿರುವ ಹಿನ್ನೆಲೆಯಲ್ಲಿ ಕಠಿಣ ಕಾನೂನಿನಡಿ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಅಧಿಕಾರಿಗಳ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ 12 ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ […]

Continue Reading