ಕೊಲೆ ಪ್ರಕರಣದಲ್ಲಿ ಸದ್ಯ ಜೈಲಲ್ಲಿರುವ ಜ್ಯೋತಿಷಿ ಕಮಲಾಕರ ಭಟ್ಟನ ವಿರುದ್ಧ ಮತ್ತೊಂದು ಗಂಭೀರ ಆರೋಪ; ಗೋಶಾಲೆ ಹೆಸರಿನಲ್ಲಿ ಕೋಟಿ ಕೋಟಿ ಆಸ್ತಿ ಸಂಪಾದನೆ

ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರ ಸೇರಿದಂತೆ ಒಟ್ಟು ಎಂಟು ಆರೋಪಿಗಳು ವಸಂತ ನಾಯಕನ ಕೊಲೆ ಪ್ರಕರಣದಲ್ಲಿ ಸದ್ಯ ಕಂಬಿ ಎಣಿಸುತ್ತಿದ್ದಾರೆ. ಕಮಲಾಕರ ಭಟ್ಟ ಜ್ಯೋತಿಷಿ ವಿರುದ್ಧ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದೆ. ಗೋಶಾಲೆ ಹೆಸರಿನಲ್ಲಿ ಈತ ಕೋಟಿ ಕೋಟಿ ಆಸ್ತಿ ಸಂಪಾದಿಸಿದ್ದಾನೆ ಅನ್ನುವ ಆರೋಪ ಕೇಳಿ ಬಂದಿದೆ. ಗೋಶಾಲೆ ಹೆಸರಿನಲ್ಲಿ ಜ್ಯೋತಿಷಿ ಕಮಲಾಕಾರ್ ಭಟ್ ಕೋಟಿ ಕೋಟಿ ಆಸ್ತಿಗಳಿಕೆ ಮಾಡಿ ಶಿವಮೊಗ್ಗದ ಮುದುವಾಲ ಗ್ರಾಮದಲ್ಲಿ ಈ ಒಂದು ಜಮೀನು ಖರೀದಿಸಿದ್ದಾನೆ. ಮಠ ಹಾಗೂ ಗೋಶಾಲೆ […]

Continue Reading

ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನಸಾಮಾನ್ಯರ ಜೇಬಿಗೆ ಕತ್ತರಿ; ಎಪ್ರಿಲ್ ನಂತರ ರಾಜ್ಯದ ಜನತೆಗೆ ಕರೆಂಟ್ ಶಾಕ್.!

ರಾಜ್ಯದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೊಂದು ಶಾಕ್ ನೀಡಲು ರೆಡಿಯಾಗಿದೆ. ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲು ವಿದ್ಯುತ್ ಸರಬರಾಜು ಕಂಪನಿಗಳು ಸಜ್ಜಾಗಿವೆ. ಸದ್ಯದಲ್ಲೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಜನರಿಗೆ ಕರೆಂಟ್ ಶಾಕ್ ಹೊಡೆಯುವುದು ಖಚಿತ. ರಾಜ್ಯಕ್ಕೆ ವಿದ್ಯುತ್ ಪೂರೈಕೆ ಮಾಡುವ ಬಹುತೇಕ ಕಂಪನಿಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ. ಆದಾಯಕ್ಕಿಂತ ವೆಚ್ಚವೇ ಅಧಿಕವಾಗಿದ್ದು, ಕಂಪನಿಗಳು ನಷ್ಟದ ಹಳಿಯಲ್ಲಿವೆ. ಈ ನಷ್ಟವನ್ನು ಸರಿದೂಗಿಸಲು ಮತ್ತು ಕಂಪನಿಗಳ ನಿರ್ವಹಣೆಯನ್ನು ಸುಲಲಿತವಾಗಿ […]

Continue Reading

ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಅವರ ಖಾಸಗಿ ವೀಡಿಯೋ ಮಾಡಿ 50 ಲಕ್ಷಕ್ಕೆ ಬೇಡಿಕೆ; ಮೂವರು ಯೂಟ್ಯೂಬರ್‌ಗಳ ಬಂಧನ, ಸ್ವತ್ತು ವಶ

ಮಹಿಳಾ ಅಧಿಕಾರಿಯೊಬ್ಬರ ಮನೆಯಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಅವರ ಖಾಸಗಿ ಆಗುಹೋಗುಗಳ ವೀಡಿಯೋ ಮಾಡಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಯೂಟ್ಯೂಬರ್‌ಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಗೋಕಾಕ್‌ನ ಅಬ್ದುಲ್‌ ರಷೀದ್ ನಜರ್ ಮಕಾನದಾರ, ಸಮೀರ್ ನಿಸಾರ್‌ಅಹಮದ್ ಶೇಖ್, ಮೊಹಮ್ಮದ್ ದಿಲಾವರ ನಜೀರ್‌ಅಹಮದ್ ಬಾಳೇಕಿಂದ್ರಿ ಬಂಧಿತರು. ಆರೋಪಿಗಳಿಂದ ವೀಡಿಯೋ, ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳು, ಲ್ಯಾಪ್‌ಟಾಪ್, ಪೆನ್‌ಡ್ರೈವ್, ಮೊಬೈಲ್‌, ಚಿಪ್‌ಗಳು, ಸಿಮ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರ ತಂಡದಲ್ಲಿ ಯಾರ್ಯರು ಇದ್ದಾರೆ, ಇವರಿಗೆ ಸಹಾಯ ನೀಡಿದವರು, ಇವರಿಗೆ ಸಹಕಾರ ನೀಡಿದವರು […]

Continue Reading

ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಏಪ್ರಿಲ್, ಮೇನಲ್ಲಿ ಚುನಾವಣೆ ಸಾಧ್ಯತೆ

ರಾಜ್ಯದಲ್ಲಿ ಗ್ರಾಮಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲೇ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ. ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ  2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ […]

Continue Reading

ಸ್ಪೀಕರ್ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ; “ಇದು ಕಲಾಪ ನಡೆಸುವ ರೀತಿನಾ? ಗಲಾಟೆ ಮಾಡುವವರನ್ನು ಎತ್ತಿ ಹೊರಗೆ ಹಾಕಿಸಿ

ಸ್ಪೀಕರ್ ಖಾದರ್ ಅವರ ಕಾರ್ಯವೈಖರಿಗೆ ಸಿಎಂ ಸಿದ್ದರಾಮಯ್ಯ ಗರಂ ಆದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ಅಬಕಾರಿ ಕಿಕ್ ಬ್ಯಾಕ್ ಪ್ರಕರಣದ ಚರ್ಚೆ ಹಾಗೂ ಮನರೇಗ ಸಂಬಂಧ ನಿರ್ಣಯ ಮಂಡನೆ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಡ್ಡಿಪಡಿಸಿದ ಬಗ್ಗೆ ಸ್ಪೀಕರ್ ಖಾದರ್ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ತಾಳಿರುವುದನ್ನು ಕಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪೀಕರ್ ವಿರುದ್ಧವೇ ಕೆಂಡಾಮಂಡಲರಾದರು. ಇತ್ತೀಚೆಗೆ ಕಲಾಪದಲ್ಲಿ ದುರ್ವತನೆ ತೋರಿದ ಬಿಜೆಪಿ ಹಾಗೂ ಜೆಡಿಎಸ್ ನ ಹದಿನಾರರಷ್ಟು ಸದಸ್ಯರನ್ನು ಸ್ಪೀಕರ್ ಖಾದರ್ ಶಿಸ್ತು ಕ್ರಮ ಕೈಗೊಂಡಿದ್ದರು. […]

Continue Reading

ಜಾತಕದ ನೆಪ; ಎಸ್‌ಸಿ ಸಮುದಾಯದ ಯುವತಿಗೆ ದೇವಸ್ಥಾನದ ಅರ್ಚಕನಿಂದ ಲೈಂಗಿಕ ದೌರ್ಜನ್ಯ, ಪ್ರಕರಣ ದಾಖಲು

ಮದುವೆ ಜಾತಕ ತೋರಿಸುವ ನೆಪದಲ್ಲಿ ಎಸ್‌ಸಿ ಸಮುದಾಯದ ಯುವತಿಗೆ ದೇವಾಲಯದ ಅರ್ಚಕನಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಮೂಡಿಗೆರೆ ಪರಿಸರದಲ್ಲಿ ಬೆಳಕಿಗೆ ಬಂದಿದೆ.ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. 23 ವರ್ಷದ ಎಸ್‌ಸಿ ಸಮುದಾಯದ ಯುವತಿ ನೀಡಿರುವ ದೂರಿನಂತೆ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 2025ರ ನವೆಂಬರ್ 23ರಿಂದ 2026ರ ಫೆಬ್ರವರಿ […]

Continue Reading

ಮಕ್ಕಳ ಮೇಲೆ ‘ಸಾಮಾಜಿಕ ಮಾಧ್ಯಮ’ ಅಡ್ಡಪರಿಣಾಮ; ಜಾಗೃತಿಗಾಗಿ ಪಠ್ಯಕ್ರಮ ಆರಂಭಿಸಿ.. ಸರ್ಕಾರಕ್ಕೆ ವಕೀಲ ಮನೋರಾಜ್ ಪ್ರಸ್ತಾವನೆ

ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ ಜಾಗೃತಿ ಶಿಕ್ಷಣವೇ ಮಕ್ಕಳಿಗೆ ಪೂರಕ; ‘ಸೋಶಿಯಲ್ ಮೀಡಿಯಾ’ ಬಗ್ಗೆ ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಕಾಂಗ್ರೆಸ್ ಕಾನೂನು ಘಟಕ ಸಲಹೆ ‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ […]

Continue Reading

ರಾಜಕೀಯ ಪಕ್ಷದ ಪ್ರಭಾವಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ; ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖೆ ಅಗತ್ಯವಿದೆ: ಹೈಕೋರ್ಟ್

ರಾಜ್ಯದ ಎಲ್ಲಾ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್‌) ದಾಖಲಿಸಿಕೊಂಡಿದೆ. ಅಲ್ಲದೇ, ಇದೊಂದು ಗಂಭೀರ ವಿಚಾರವಾಗಿರುವುದರಿಂದ ನ್ಯಾಯಾಲಯದ ನಿಗಾದಲ್ಲಿ ಕೇಂದ್ರೀಯ ಸಂಸ್ಥೆ ಅಥವಾ ವಿಶೇಷ ತನಿಖಾ ಸಂಸ್ಥೆಯಿಂದ ತನಿಖೆ (ಎಸ್‌ಐಟಿ) ನಡೆಸಬೇಕಾದ ಅಗತ್ಯವಿದೆ’ ಎಂದೂ ಹೇಳಿದೆ. ಮರಳು ಮಾಫಿಯಾಗಳಿಂದ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕ್ರಮ […]

Continue Reading

ಸ್ಥಳೀಯ ಸಂಸ್ಥೆಗಳ ಚುನಾವಣೆ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು

ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ‌ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ. ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ […]

Continue Reading

ಶೀಘ್ರವೇ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ; ಪೂರ್ವ ಸಿದ್ಧತೆಗೆ ಸರ್ಕಾರ ಸೂಚನೆ, ಜಿಲ್ಲಾಧಿಕಾರಿಗಳಿಗೆ ಪತ್ರ

ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸರ್ಕಾರ ಸೂಚಿಸಿದೆ. ಆ ಮೂಲಕ ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆಯ ಸುಳಿವು ಹೊರಬಿದ್ದಿದೆ. ಈ ಕುರಿತಂತೆ ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಅದರಲ್ಲಿ 2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಅವಧಿಯು 2026 ರ ಜನವರಿ-ಫೆಬ್ರವರಿಯಲ್ಲಿ ಪೂರ್ಣಗೊಳ್ಳಲು ಪ್ರಾರಂಭವಾಗಿದ್ದು, ಸದರಿ ಅವಧಿಯು ಮುಕ್ತಾಯಗೊಳ್ಳುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು […]

Continue Reading