ಸಂಡೂರಿನ 550 ಎಕ್ರೆ ಗಣಿ ಭೂಮಿ ಪ್ರಕರಣ; ಎಚ್‌.ಡಿ ಕುಮಾರಸ್ವಾಮಿ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್‌) ಮಂಜೂರಾತಿ ಕೋರಿ ಲೋಕಾಯುಕ್ತ 2023ರಲ್ಲಿ ರಾಜ್ಯಪಾಲರಿಗೆ ಪತ್ರ

ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 550 ಎಕರೆ ಗಣಿ ಭೂಮಿಯನ್ನು ಕಾನೂನುಬಾಹಿರವಾಗಿ ವಿನೋದ್‌ ಗೋಯಲ್‌ ಎಂಬವರಿಗೆ ಮಂಜೂರು ಮಾಡಲು ಸಹಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಬೃಹತ್‌ ಉದ್ದಿಮೆ ಮತ್ತು ಉಕ್ಕು ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಅಭಿಯೋಜನಾ (ಪ್ರಾಸಿಕ್ಯೂಷನ್‌) ಮಂಜೂರಾತಿ ಕೋರಿ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದಾರೆ. 2006ರಲ್ಲಿ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್‌ […]

Continue Reading

ಸುಲಿಗೆ, ಭ್ರಷ್ಟಾಚಾರ ವಿರೋಧಿಸಿ ಮುಷ್ಕರಕ್ಕೆ ಮುಂದಾದ ಖಾಸಗಿ ಶಾಲೆಗಳು; ಸರಕಾರಕ್ಕೆ 15 ದಿನಗಳ ಗಡುವು

ಶಾಲಾ ಶಿಕ್ಷಣ ಇಲಾಖೆಯ ಭ್ರಷ್ಟಾಚಾರ ಹಾಗೂ ಖಾಸಗಿ ಶಾಲೆಗಳ ಮೇಲಾಗುತ್ತಿರುವ ಅನ್ಯಾಯ ವಿರೋಧಿಸಿ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ (ರುಪ್ಸಾ) ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವುದಾಗಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ. ತಮ್ಮ ವಿವಿಧ ಬೇಡಿಕೆಗಳನ್ನು ಸರಕಾರ 15 ದಿನಗಳಲ್ಲಿ ಈಡೇರಿಸಬೇಕು. ಇಲ್ಲವಾದರೆ ಅಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟಿಸುವುದಾಗಿ ರುಪ್ಸಾ ಅಧ್ಯಕ್ಷ ಲೇಪಾಕ್ಷಿ ಹಾಲನೂರು ತಿಳಿಸಿದ್ದಾರೆ. ಶಾಲೆಗಳ ನವೀಕರಣಕ್ಕೆ ಇಲಾಖೆ 64 ಅಂಶಗಳನ್ನು ನಿಗಡಿಪಡಿಸಿ ದಾಖಲೆ ಪಡೆಯುತ್ತಿದೆ. […]

Continue Reading

ದರೋಡೆ ಪ್ರಕರಣ: ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಿದ ಸೋಮವಾರಪೇಟೆ ಪೊಲೀಸರು

ವಿಟ್ಲ: ಕೊಡಗು ಜಿಲ್ಲೆಯ ಸೋಮವಾರಪೇಟೆ ವ್ಯಾಪ್ತಿಯ ಕಿಬ್ಬೆಟ್ಟ ಗ್ರಾಮದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಏಳು ಆರೋಪಿಗಳನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕುದುಮಾರು ಗ್ರಾಮದ ಕೆ.ರೋಷನ್(32), ಕನ್ಯಾನ ನಿವಾಸಿ ಸತೀಶ್ ರೈ(54), ವಿಟ್ಲ ಪಡ್ನೂರು ಗ್ರಾಮದ ಕೆ.ಗಣೇಶ(28), ವೀರಕಂಬ ಗ್ರಾಮದ ಕುಸುಮಾಧರ(39), ವಿರಾಜಪೇಟೆ ಶಿವಕೇರಿಯ ಸೂರ್ಯಪ್ರಸಾದ್ ಬಿ.ಎ(43), ಸೋಮವಾರಪೇಟೆ ವೆಂಕಟೇಶ್ವರ ಬ್ಲಾಕ್ ನಿವಾಸಿ ವಿನೋದ್ ಕುಮಾರ್ ಹೆಚ್.ಪಿ(36) ಹಾಗೂ ಕುಶಾಲನಗರ ತಾಲ್ಲೂಕು ಹೆಬ್ಬಾಲೆ ಗ್ರಾಮದ […]

Continue Reading

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ: ವಿಚಾರಣಾ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ

ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರದ ಸದ್ದು ಈ ಹಿಂದೆ ಕೇಳಿಬಂದಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಆದರೀಗ ವಿಚಾರಣ ನ್ಯಾಯಾಲಯ ತೀರ್ಪು ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ ರಾವ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಮತ್ತೋರ್ವ ಆರೋಪಿ ಅಶೋಕ್ ಕುಮಾರ್ ಅವರು ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ತೀರ್ಪು ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರು ಆರೋಪಿಯಾಗಿರುವ […]

Continue Reading

ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ, ಪಾದಯಾತ್ರೆಯಲ್ಲಿ ಬಿರುಕು.!

ಬಿಜೆಪಿ – ಜೆಡಿಎಸ್ ನಾಯಕರ ವಿರುದ್ಧ ಯೋಗೇಶ್ವರ್ ಬಂಡಾಯದ ಸಮರ; ಸಮಾವೇಶಕ್ಕೆ ಸಿದ್ದತೆ, ನಮ್ಮ ಶಾಸಕ – ನಮ್ಮ ಆಯ್ಕೆ. ಕರಪತ್ರ ಹಂಚಿಕೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪರಸ್ಪರ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿದ ಪರಿಣಾಮ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದಾರೆ. ಆದರೆ ಇದೀಗ ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಒಂದೊಂದೆೇ ಸಂಗತಿಗಳು ಹೊರಬೀಳುತ್ತಿದೆ. ಕಳೆದ ವಾರವಷ್ಟೇ ಎಚ್‌ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಘಟಿಸಿರುವ ಪಾದಯಾತ್ರೆ […]

Continue Reading

ರಾತ್ರೋರಾತ್ರಿ ಕುಸಿದ ಬ್ರಿಡ್ಜ್, ಲಾರಿ ನದಿಪಾಲು; ಚಾಲಕ ಪವಾಡಸದೃಶ ಪಾರು

ಕರ್ನಾಟಕದಲ್ಲಿ ತಪ್ಪಿತು ಮತ್ತೊಂದು ದುರಂತ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಕುಸಿದಿದೆ. 60 ವರ್ಷ ಹಳೆಯದಾದ ಸೇತುವೆ ಇದಾಗಿತ್ತು. ಭಾರೀ ಮಳೆಗೆ ರಾತ್ರಿ 1 ಗಂಟೆ ಸುಮಾರಿಗೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರ ನಡುವಿನ ಸಂಪರ್ಕ ಸೇತುವೆ ಇದಾಗಿತ್ತು. ಸೇತುವೆಯ ಒಂದು ಭಾಗ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ಲಾರಿ ಚಾಲನೆ […]

Continue Reading

ಒಂಟಿ ಮಹಿಳೆಗೆ ಮೆಣಸಿನ ಪುಡಿ ಎರಚಿ, ಲಕ್ಷಾಂತರ ರೂಪಾಯಿ ದರೋಡೆ ಪ್ರಕರಣ

ಕಾರು ಸಹಿತ ಜಲೀಲ್ ಕರೋಪಾಡಿ ಹತ್ಯೆಯ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಸೋಮವಾರಪೇಟೆ ಪೊಲೀಸರು. ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ವಾರದ ಹಿಂದಷ್ಟೇ ನಡೆದ ಒಂಟಿ ಮಹಿಳೆಯ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲ ಸಮೀಪದ ಕರೋಪಾಡಿ ಗ್ರಾಮ ಪಂ.ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ ಆರೋಪಿಗಳ ಸಹಿತ ನಾಲ್ವರನ್ನು ಕೊಡಗು ಪೊಲೀಸ್ ತಂಡ ವಶಕ್ಕೆ ಪಡೆದಿದ್ದಾರೆ. ಕರೋಪಾಡಿ ಜಲೀಲ್ ಹತ್ಯೆ ಪ್ರಕರಣದ ರೋಷನ್, ಪಿಲಿಂಗುರಿ ಸತೀಶ್ ಶೆಟ್ಟಿ, ಬಾಳೆ ಗಣೇಶ್ ಮತ್ತು ವೀರಕಂಭದ ಕುಸಮಾಕರನನ್ನು […]

Continue Reading

ಸಿಎಂ ವಿರುದ್ಧ ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರು ಸಂವಿಧಾನವನ್ನು ‘ಪಿಕ್ & ಚೂಸ್ & ಯೂಸ್’ ಎಂಬಂತೆ ಬಳಸಬಹುದೇ ?

✍️. ನವೀನ್‌ ಸೂರಿಂಜೆ, ಹಿರಿಯ ಪತ್ರಕರ್ತರು ರಾಜ್ಯಪಾಲರು ಒಕ್ಕೂಟ ಸರ್ಕಾರದ ಒಪ್ಪಂದಗಳು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಸಂವಿಧಾನದ ‘ಆಯ್ದ’ ಆರ್ಟಿಕಲ್ ಗಳನ್ನು ಬಳಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಗೆ ಕ್ರಮ ಕೈಗೊಳ್ಳುವುದು ಅಸಾಂವಿಧಾನಿಕವಾಗಿದೆ. ಇದು ಕೇವಲ ಕಾನೂನು/ಸಂವಿಧಾನದ ಜೊತೆಗೆ ರಾಜ್ಯಪಾಲರ ಸಂಘರ್ಷವಾಗಿರದೇ ರಾಜ್ಯಗಳ ಅಸ್ಮಿತೆಯ ಮೇಲೆ ನಡೆಸುವ ಸಂಘರ್ಷ ಎಂದು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕಿದೆ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ರಫೇಲ್ ಯುದ್ಧ ವಿಮಾನ ಖರೀದಿ ಹಗರಣ ಆರೋಪ ಕೇಳಿ ಬಂದಿತ್ತು. ಪ್ರತಿಪಕ್ಷ ಕಾಂಗ್ರೆಸ್ ಮತ್ತಿತರ ಪಕ್ಷಗಳು, […]

Continue Reading

2 ನೇ ತರಗತಿ ಮದರಸಾ ವಿದ್ಯಾರ್ಥಿಯನ್ನು ಇರಿದು ಕೊಂದ 12 ವರ್ಷದ ವಿದ್ಯಾರ್ಥಿ

ಕ್ರೈಂ ವಿಚಾರದಲ್ಲಿ ಕುಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ ಬೆಚ್ಚಿಬೀಳಿಸುವ ವರದಿಯೊಂದು ಹೊರಬಿದ್ದಿದೆ. ಬಲರಾಂಪುರ ಜಿಲ್ಲೆಯ ತುಳಸಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮದರಸದಲ್ಲಿ 2 ನೇ ತರಗತಿ ಕಲಿಯುತ್ತಿದ್ದ ವಿದ್ಯಾರ್ಥಿಯನ್ನು ಅದೇ ಮದರಸದಲ್ಲಿ ಕಲಿಯುತ್ತಿರುವ 12 ವರ್ಷ ಪ್ರಾಯದ ವಿದ್ಯಾರ್ಥಿ ಇರಿದು ಕೊಂದಿದ್ದಾನೆ. ಬಲರಾಂಪುರ ಜಿಲ್ಲೆಯಿಂದ 30 ಕಿಲೋಮೀಟರ್ ದೂರದಲ್ಲಿರುವ ತುಳಸಿಪುರ ಇಟ್ವಾ ರಸ್ತೆಯ ಜಾಮಿಯಾ ನೈಮಿಯಾನ್ ಇರ್ವಿಯಲ್ಲಿ ಘಟನೆ ನಡೆದಿದೆ. ಜಾಮಿಯಾ ನಿಮಿಯಾ ಅರೇಬಿಕ್ ಕಾಲೇಜು 2 ನೇ ತರಗತಿ ವಿದ್ಯಾರ್ಥಿ ಆಯಾನ್ ಹತ್ಯೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿ […]

Continue Reading

ಪಾದಯಾತ್ರೆಯಲ್ಲಿ ಬಿಜೆಪಿಯ ಹಲವು ನಾಯಕರು ಎರಡನೇ ದಿನವೇ ನಾಪತ್ತೆ.!

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಮಾತ್ರ ಹೈಲೇಟ್ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನಡೆಯಿಂದ ಕುಗ್ಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾದರೆ, ಎರಡೂ ಪಕ್ಷಗಳ ಮುಖಂಡರಲ್ಲಿ ಒಳಗೊಳಗೇ ಕಚ್ಚಾಟ ಶುರುವಾಗಿದೆ. ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯವಿದೆ. ಈ ಭಾಗದಲ್ಲಿ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದ್ದರಿಂದ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಕುಮಾರಸ್ವಾಮಿ ಪಾದಯಾತ್ರೆ ಉದ್ಘಾಟನೆಯಲ್ಲಿ ಕಾಣಿಸಿಕೊಂಡರೂ ನಂತರ ಪಾದಯಾತ್ರೆಯಲ್ಲಿ […]

Continue Reading