ಬಿಜೆಪಿ ಶಾಸಕ ಶರಣು ಸಲಗಾರ್ ಗೆ ಜಾಮೀನು ರಹಿತ ವಾರಂಟ್ ಜಾರಿ; ಬಂಧನ ಭೀತಿಯಿಂದ ಶಾಸಕ ಪರಾರಿ

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ನಿರಂತರವಾಗಿ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗಾರ್ ಎಂಬವರಿಗೆ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಾಮೀನು ರಹಿತ ವಾರಂಟ್ ಹೊರಬೀಳುತ್ತಿದ್ದಂತೆ ಬಿಜೆಪಿ ಶಾಸಕ ಶರಣು ಸಲಗಾರ್ ಬಂಧನದ ಭೀತಿಯಿಂದ ದಿಢೀರ್ ನಾಪತ್ತೆಯಾಗಿದ್ದು, ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಮುಸ್ಲಿಂ ಸಮುದಾಯದ ಮನೆಯೊಂದರಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಶರಣು ಸಲಗಾರ್ ಅಲ್ಲಿಗೆ ತೆರಳಿ ಗಲಾಟೆ ಎಬ್ಬಿಸಿದ್ದರು. ಅ ವೇಳೆ ಸ್ಥಳದಲ್ಲಿ […]

Continue Reading

‘ಒನ್ ಮ್ಯಾನ್ ಆರ್ಮಿ ‘ ಬಿಟ್ಟುಬಿಡಿ; ನಾಯಕರನ್ನು ಒಗ್ಗಟ್ಟಿನಿಂದ ಕರೆದುಕೊಂಡು ಹೋಗಿ: ಸಿಎಂ ಡಿಕೆಶಿ ಗೆ ಹೈಕಮಾಂಡ್ ಖಡಕ್ ಸೂಚನೆ

ಸಿದ್ದರಾಮಯ್ಯರ ಮನಸ್ಸು ಗೆಲ್ಲಿ, ಚುನಾವಣಾ ಪರ್ವ ಇರುವುದರಿಂದ ಎಚ್ಚರಿಕೆಯ ಹೆಜ್ಜೆ ಇಡಿ; ಹೈಕಮಾಂಡ್ ತಾಕೀತು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳದೆ ಸಾಮೂಹಿಕ ನಾಯಕತ್ವದಲ್ಲೇ ಮುನ್ನಡೆಯುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌‍ ಹೈಕಮಾಂಡ್‌ ಕಟ್ಟುನಿಟ್ಟಿನ ಆದೇಶ ನೀಡಿದೆ ಎನ್ನಲಾಗಿದೆ. ಕೆಲವು ವಿಚಾರಗಳಲ್ಲಿ ಡಿ.ಕೆ.ಶಿ ಮುನ್ನುಗ್ಗುವ ಪ್ರವೃತ್ತಿ ಹೊಂದಿದ್ದು, ಸರಿ ಎನಿಸಿದ ವಿಚಾರಗಳಲ್ಲಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ಸಹಜ ಪ್ರವೃತಿಯಾಗಿದೆ. ಹಲವಾರು ಸಂದರ್ಭಗಳಲ್ಲಿ ಕಾಂಗ್ರೆಸ್‌‍ ಅಧ್ಯಕ್ಷರಾಗಿ ಪ್ರಮುಖ ಹಾಗೂ ಪ್ರಭಾವಿಗಳನ್ನೇ ಸಂಘಟನೆ ಚಟುವಟಿಕೆಯಿಂದ ಹೊರ ಹಾಕಿದ ಉದಾಹರಣೆಗಳಿವೆ. […]

Continue Reading

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬಿಗ್ ಸರ್ಜರಿಗೆ ತಯಾರಿ, ಆಯಕಟ್ಟಿನ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ಧತೆ

ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಲು ಡಿಕೆ ಚಿಂತನೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಸಿಎಂ ಡಿ.ಕೆ. ಶಿವಕುಮಾರ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಮಟ್ಟದ ಬದಲಾವಣೆ ತರಲು ಸಜ್ಜಾಗಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಗೃಹ ಇಲಾಖೆಗೆ ಮೇಜರ್ ಸರ್ಜರಿ ನಡೆಸಲು ಸಿಎಂ ತೀರ್ಮಾನಿಸಿದ್ದು, ಆಯಾಕಟ್ಟಿನ ಹುದ್ದೆಗಳಲ್ಲಿರುವ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ಧತೆ ನಡೆದಿದೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಮುಖ್ಯವಾಗಿ ಪೊಲೀಸ್ […]

Continue Reading

ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿಯ ಅಪಹರಿಸಿ, ಮೂರು ಕೋಟಿ ಬೇಡಿಕೆ.

ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿಯವರನ್ನು ಅಪಹರಿಸಿ ಮೂರು ಕೋಟಿ ಹಣಕ್ಕೆ ಬೇಡಿಕೆ ಇಟ್ಟು, ಕೊನೆಗೆ ಎರಡು ಕೋಟಿಗೆ ಡೀಲ್ ಮಾಡಿಕೊಂಡಿರುವ ಅಪಹರಣಕಾರರು ಅವರನ್ನು ಬಿಟ್ಟು ಕಳುಹಿಸಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ. ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಹಿಂಬಾಲಿಸಿ ಸಮೀಪ ಬೈಕ್‌ನಲ್ಲಿ ಬಂದ ಇಬ್ಬರು ಅವರನ್ನು ಅಡ್ಡಗಟ್ಟಿದ್ದಾರೆ. ನಿಮಗೆ ಗಿಫ್ಟ್ ಬಂದಿದೆ ಎಂದು ಹೇಳಿ ಕಾಟನ್ ಬಾಕ್ಸ್ ತೋರಿಸಿದ್ದಾರೆ. ಕಾರಿನ ಡೋರ್ […]

Continue Reading

ಘನತಾಜ್ಯ ನಿರ್ವಹಣೆ: ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ರೂಪಿಸುವಂತೆ ಡಾ. ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಮನವಿ

ಘನತಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ರೂಪಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ವಿಧಾನ ಸೌಧದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ಕೊಂಡೊಯ್ಯಬೇಕು. ಈಗಾಗಲೇ ಸುಮಾರು 4,000 ಗ್ರಾ. ಪಂಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ‘ಸ್ವಚ್ಛತಾ ವಾಹಿನಿ’ಗಳನ್ನಾಗಿ ಯಶಸ್ವಿಯಾಗಿ ನಿಯೋಜಿಸಲಾಗಿದೆ. ಇದನ್ನು ರಾಜ್ಯದ ಎಲ್ಲ 6,000 ಗ್ರಾಪಂಗಳಿಗೂ […]

Continue Reading

ಸಿದ್ದು ವಿದಾಯದ ಅಂತಿಮ ಕ್ಷಣಗಳು; ರಾಜ್ಯಸಭೆ ಸೀಟಿಗೆ ಪೈಪೋಟಿ

ಜಾರಕಿಹೊಳಿ ಪಟ್ಟು ಏನು.?; ಬಿಜೆಪಿಯಲ್ಲಿ ಎಮ್ಮೆಲ್ಸಿ ದಂಗಲ್ ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ರಾಹುಲ್ ಗಾಂಧಿ ಅವರ ಆಹ್ವಾನದ ಮೇರೆಗೆ ದಿಲ್ಲಿಗೆ ಹೊರಟ ಸಿಎಂ ಸಿದ್ದರಾಮಯ್ಯನವರಿಗೆ ಎರಡು ವಿಷಯಗಳು ಪಕ್ಕಾ ಆಗಿದ್ದವು. ಮೊದಲ ವಿಷಯ, ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಕೇಳಲಿದ್ದಾರೆ ಎಂಬುದು. ಎರಡನೆಯ ವಿಷಯ, ತಮ್ಮ ಸುತ್ತ ನಿಂತು ಆರ್ಭಟಿಸುತ್ತಿದ್ದ ಬಹುತೇಕ ಬೆಂಬಲಿಗರು ಅದಾಗಲೇ ಡಿ.ಕೆ. ಶಿವಕುಮಾರ್ ಅವರ ಕ್ಯಾಂಪಿಗೆ ಸೇರಿಕೊಂಡಿದ್ದಾರೆ ಎಂಬುದು.ಹೀಗಾಗಿ ಮೇ ಇಪ್ಪತ್ತಾರರ ಮಂಗಳವಾರ ದಿಲ್ಲಿಗೆ ಹೋದ ಸಿದ್ದರಾಮಯ್ಯ ಅವರು ರಾಹುಲ್ […]

Continue Reading

ರಾಜ್ಯದಲ್ಲಿ ಡಿಕೆಶಿ ಪರ್ವ; ಜಿಲ್ಲೆಯಲ್ಲಿ ಇನಾಯತ್ ಆಲಿ ಪರ್ವ; ನಂಬಿಕಸ್ಥ ಬಂಟನಿಗೆ ‘ಪವರ್’ ನಿರೀಕ್ಷೆ.!

ಕೊನೆಗೂ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಪಕ್ಷ ನಿಷ್ಠೆ ಡಿಕೆ ಶಿವಕುಮಾರ್ ಅವರನ್ನು ಕೈ ಹಿಡಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಲು ದಿನ ಮುಹೂರ್ತ ಆಗಿದೆ. ರಾಜಕಾರಣದಲ್ಲಿ ಕನಕಪುರದ ಬಂಡೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ಚೈತನ್ಯ ತುಂಬಿ ಸೋಲುವ ಹಾದಿಯಲ್ಲಿದ್ದ ಪಕ್ಷವನ್ನು ಫೀನಿಕ್ಸ್ ನಂತೆ ಎದ್ದೇಳುವಂತೆ ಮಾಡಿದ ಸಮರ್ಥ ಸೇನಾನಿ ಆಗಿದ್ದಾರೆ ಡಿಕೆ ಶಿವಕುಮಾರ್. ಡಿಕೆಶಿ ಗೆ ಜಿಲ್ಲೆಯಲ್ಲಿ ಹಲವಾರು ಆಪ್ತರು ಇರಬಹುದು. ಆದರೆ ಅದರಲ್ಲಿ ಡಿಕೆಶಿ ಪಾಳೆಯದಲ್ಲಿ ನಂಬಿಕಸ್ಥ ಬಂಟನಾಗಿ ಗುರುತಿಸಿಕೊಂಡವರು ಇನಾಯತ್ ಆಲಿ. ತನ್ನ […]

Continue Reading

‘ಕರ್ನಾಟಕ ಅಸೋಷಿಯೇಷನ್ ಆಫ್ ಸ್ಮಾಲ್ ಅಂಡ್ ಮೀಡಿಯಂ ನ್ಯೂಸ್ ಪೇಪರ್ಸ್’ (KASMN) ಅಸ್ತಿತ್ವಕ್ಕೆ

ರಾಜ್ಯಾಧ್ಯಕ್ಷರಾಗಿ ಷಡಾಕ್ಷರಪ್ಪ ಜಿ.ಆರ್., ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಹೆಬ್ಬಾರ್ ಆಯ್ಕೆ ಬೆಂಗಳೂರು: ರಾಜ್ಯದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರು ಮತ್ತು ಪ್ರಕಾಶಕರನ್ನು ಒಳಗೊಂಡ ‘ಕರ್ನಾಟಕ ಅಸೋಷಿಯೇಷನ್ ಆಫ್ ಸ್ಮಾಲ್ ಅಂಡ್ ಮೀಡಿಯಂ ನ್ಯೂಸ್ ಪೇಪರ್ಸ್’ (KASMN) (ಕರ್ನಾಟಕ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಘ) ಅಸ್ತಿತ್ವಕ್ಕೆ ಬಂದಿದ್ದು, ಸಂಘದ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಸುದ್ದಿಸಾರ ದಿನಪತ್ರಿಕೆಯ ಪ್ರಕಾಶಕ ಷಡಾಕ್ಷರಪ್ಪ ಜಿ.ಆರ್. ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರು ಜಯನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಹೊನ್ನಾವರದ (ಉತ್ತರ ಕನ್ನಡ ಜಿಲ್ಲೆ) […]

Continue Reading

ಜಾತಿ ಗಣತಿಯ ಅಂತಿಮ ವರದಿ; ಅತೀ ದೊಡ್ಡ ಸಮುದಾಯವಾಗಿ ಮುಸ್ಲಿಮರು, ಸರ್ಕಾರಕ್ಕೆ ಅಗ್ನಿಪರೀಕ್ಷೆ

ಸಿದ್ದರಾಮಯ್ಯನವರ ಕೈ ಸೇರಿದ, ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ವರದಿ ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ಸಾಮರ್ಥ್ಯವಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂದನ ನಾಯ್ಕ ಅವರು ಸಲ್ಲಿಸಿರುವ ಈ ವರದಿಯು ರಾಜ್ಯದ ಸಮುದಾಯಗಳ ಬಲಾಬಲದ ನೈಜ ಚಿತ್ರಣವನ್ನು ಬಿಚ್ಚಿಟ್ಟಿದ್ದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಮುಸ್ಲಿಂ ಸಮುದಾಯವು ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯ ಶೇಕಡಾ 14 ರಷ್ಟು ಅಂದರೆ ಬರೋಬ್ಬರಿ 80.14 ಲಕ್ಷ […]

Continue Reading

ರಾಜ್ಯದ ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್; ಜೂನ್ 5ರ ಶುಕ್ರವಾರದಂದು ಪ್ರಮಾಣ ವಚನ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಸಂಪೂರ್ಣ ನಿಶ್ಚಿತವಾಗಿದೆ. ಇದೀಗ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ ಹಾಗೂ ಮುಹೂರ್ತ ನಿಗದಿಯಾಗಿದ್ದು, ಜೂನ್ 5 ರಂದು ಶಕ್ತಿ ಪ್ರದರ್ಶನದೊಂದಿಗೆ ಡಿಕೆಶಿ ಪಟ್ಟಾಭಿಷೇಕ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಮೇ ಕೊನೆಯ ವಾರದ ಸೋಮವಾರ ಅಥವಾ ಬುಧವಾರದಂದೇ ಪ್ರಮಾಣ ವಚನ ನಡೆಯಲಿದೆ ಎಂಬ ದಟ್ಟ ವದಂತಿಗಳಿದ್ದವು. ಆದರೆ, ತಮ್ಮ ಪರಮಾಪ್ತ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಮುಂದಿನ ಜೂನ್ 5ರ ಶುಕ್ರವಾರದಂದು ಪ್ರಮಾಣ ವಚನ ಸ್ವೀಕರಿಸಲು […]

Continue Reading