ಕ್ರಿಮಿನಲ್ಸ್ ಗಳೊಂದಿಗಿನ ಪೊಲೀಸರ ಸಹವಾಸ, ಒಡನಾಟ ಇಲಾಖೆಗೆ ಕಪ್ಪು ಚುಕ್ಕೆ: ಪೊಲೀಸ್ ಕಮೀಷನರ್ ದಯಾನಂದ್

ಕ್ರಿಮಿನಲ್ಸ್ ಗಳೊಂದಿಗೆ ಶಾಮೀಲು ಹಾಗೂ ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಪ್ರವೃತ್ತಿ ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತರುತ್ತಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಗರ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ನಡೆದ ಹೊಸ ವರ್ಷದ ಮೊದಲ ಕವಾಯತಿನಲ್ಲಿ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಅವರು ಅಧಿಕಾರಿ-ಸಿಬ್ಬಂದಿಗೆ ಸಂದೇಶ ನೀಡಿದರು. ಬೆಂಗಳೂರು ನಗರ ಪೊಲೀಸ್ ಘಟಕವು 60 ವಸಂತಗಳನ್ನು ತುಂಬಿ 61ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಹೆಮ್ಮೆ ಸಂಗತಿಯಾಗಿದೆ. ಕಳೆದ […]

Continue Reading

ಶಾಲಾ ಮಕ್ಕಳನ್ನು ಕರೆತರುವ ವಾಹನಗಳ ಚಾಲಕರಿಗೆ, ಸಹಾಯಕರಿಗೆ ಪೊಲೀಸ್ ಇಲಾಖೆಯಿಂದ ಸನ್ನಡತೆಯ ಪ್ರಮಾಣಪತ್ರ ಖಡ್ಡಾಯ: ಶಿಕ್ಷಣ ಇಲಾಖೆ

ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ. ಶಾಲಾ ವಾಹನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಪೊಲೀಸರಿಂದ ಪಡೆದ ಪ್ರಮಾಣಪತ್ರಗಳನ್ನು ಪಡೆಯುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಎರಡು ವರ್ಷಗಳಿಗೊಮ್ಮೆ ಈ ಪ್ರಮಾಣಪತ್ರಗಳನ್ನು ನವೀಕರಿಸಬೇಕು. […]

Continue Reading

ಶ್ರೀರಂಗಪಟ್ಟಣದ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಗೆ ನೀಡಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ವಾದಿಸಿದರು

✍️. ನವೀನ್ ಸೂರಿಂಜೆ ಇಂದು ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ನ್ಯಾಯಾಲಯ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದರು‌. “ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ […]

Continue Reading

ನವಜಾತ ಶಿಶು ಮಾರಾಟ ಪ್ರಕರಣ; ಐದು ಮಂದಿಯ ಬಂಧನ

ನವಜಾತ ಶಿಶು ಮಾರಾಟ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಹರಗರವಳ್ಳಿಯ ಗಿರಿಜಾ, ಹಿರಿಯೂರಿನ ಆಶಾ ಕಾರ್ಯಕರ್ತೆ ಸುಮಿತ್ರಾ, ಹೊಸಳ್ಳಿಯ ಸುಬ್ರಮಣಿ, ಶ್ರೀಕಾಂತ್ ಹಾಗೂ ಚಿಕ್ಕಮಗಳೂರು ಮೂಲದ ಉಷಾ ಬಂಧಿತ ಆರೋಪಿಗಳು. ಜ. 2 ರಂದು ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಕಾಂತರಾಜು, ಜಿಲ್ಲಾ ಅಂಗನವಾಡಿ ಮೇಲ್ವಿಚಾರಕಿ ಉಮಾಶ್ರೀ ಹಾಗೂ ಸಕಲೇಶಪುರ ಸಿಡಿಪಿಒ ಶಶಿಕಲಾ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಹೊಸಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಗು ಮಾರಾಟ […]

Continue Reading

ರಾಮಭಕ್ತ, ಕರಸೇವಕ ಎಂದು ನಕಲಿ ವೇಷ.! ಶ್ರೀಕಾಂತ್ ಆಲಿಯಾಸ್ ಕಾಂತ್ಯಾ ವಿರುದ್ಧ ಬರೋಬ್ಬರಿ 16 ಕ್ರಿಮಿನಲ್ ಪ್ರಕರಣ

ಶ್ರೀಕಾಂತ್ ಪೂಜಾರಿ ವಿರುದ್ಧ 1991ರಿಂದ ಇಲ್ಲಿಯವರೆಗೆ ಅಂದರೆ31 ವರ್ಷಗಳಲ್ಲಿ 16 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುತ್ತದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ. ಶ್ರೀಕಾಂತ್ ಯಾರು, ಆತನ ಹಿನ್ನೆಲೆಯೇನು.?ಶ್ರೀಕಾಂತ್ ಪೂಜಾರಿ ತನ್ನನ್ನು ತಾನು ಹಿಂದೂ ಕಾರ್ಯಕರ್ತ ಎಂದು ಗುರುತಿಸಿಕೊಂಡಿದ್ದಾನೆ. ಹಲವಾರು ಗಲಭೆಕೋರ ಗುಂಪುಗಳಲ್ಲಿ ಗುರುತಿಸಿಕೊಂಡಿರುವ ಈತನ ಮೇಲೆ 1992ರಿಂದ ಇಲ್ಲಿಯವರೆಗೆ ಬರೋಬ್ಬರಿ 16 ಪ್ರಕರಣಗಳು ದಾಖಲಾಗಿವೆ. 1991ರಲ್ಲಿ ಇಡೀ ದೇಶದಲ್ಲಿ ಬಾಬ್ರಿ ಮಸೀದಿ ಧ್ವಂಸದ […]

Continue Reading

ಪ್ರಭಾಕರ್ ಭಟ್ ಕೇಸ್ ಗೆ ಮರುಜೀವ; ದೂರುದಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಅರ್ಜಿ.!

ಶ್ರೀರಂಗಪಟ್ಟಣದಲ್ಲಿ ಮಹಿಳಾ ವಿರೋಧಿ ದ್ವೇಷ ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಪ್ರಕರಣಕ್ಕೆ ಮರುಜೀವ ಬಂದಿದೆ. “ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬರು ಗಂಡಂದಿರು” ಎಂದು ಭಾಷಣ ಮಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಮುಂದುವರೆದು ಹಿಂದೂ ಮುಸ್ಲಿಂ ಧರ್ಮಗಳನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದರು. ಈ ಬಗ್ಗೆ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಭಟ್ ಬಂಧನಕ್ಕೆ ಒತ್ತಡಗಳು ಹೆಚ್ಚುತ್ತಿದ್ದಾಗಲೇ ಶ್ರೀರಂಗಪಟ್ಟಣ ನ್ಯಾಯಾಲಯ ಭಟ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಇಂದು ಶ್ರೀರಂಗಪಟ್ಟಣ […]

Continue Reading

ಮಹಿಳಾ ಸಚಿವೆಯ ಜಿಲ್ಲೆಯಲ್ಲೇ ಮಹಿಳೆಯ ಅರೆಬೆತ್ತಲೆ.! ಇಪ್ಪತ್ತು ಮಂದಿಯಿಂದ ದುಷ್ಕೃತ್ಯ

ನಾಗರಿಕ ಸಮಾಜ ತಲೆ ತಗ್ಗಿಸಿದ ಹೊಸ ವಂಟಮುರಿ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಸ್ತಿ ವ್ಯಾಜ್ಯ ಮತ್ತು ಇತರ ಕಾರಣಕ್ಕಾಗಿ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಮಹಿಳೆಯೊಬ್ಬರನ್ನು ಅರೆ ಬೆತ್ತಲೆಗೊಳಿಸಿ, ಎಳೆದಾಡಿ ಹಲ್ಲೆ ಮಾಡಲಾಗಿದೆ. ಗ್ರಾ.ಪಂ ಕಚೇರಿಯಲ್ಲೇ ಈ ಘಟನೆ ನಡೆದಿದ್ದರೂ ಯಾರೂ ತಡೆಯಲು ಮುಂದಾಗಿಲ್ಲ ಎನ್ನಲಾಗಿದೆ. ಡಿಸೆಂಬರ್ 30 ರಂದೇ ನಡೆದಿರುವ ಈ ಪ್ರಕರಣ ಸಂಬಂಧ ಸಂತ್ರಸ್ತೆ 20 ಜನರ […]

Continue Reading

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರ ಹಾಗೂ ಗ್ರಾ.ಪಂ. ಕಚೇರಿಗಳಿಗೆ ಭೇಟಿ ನೀಡಬೇಕು: ಪ್ರಿಯಾಂಕ್ ಖರ್ಗೆ

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಜಿಲ್ಲೆಗಳಲ್ಲಿ ಆಗಿರುವ ಪ್ರಗತಿ ಪರಿಶೀಲಿಸಿ ಸೂಚನೆ, ಸಲಹೆಗಳನ್ನು ನೀಡಿದರು,. ಗ್ರಾಮೀಣ ಭಾಗದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಮಹತ್ತರ ಪಾತ್ರವಹಿಸಿರುವ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಯೋಜನೆಗಳ ಆಶಯ ಹಾಗೂ ಅವುಗಳ […]

Continue Reading

ಡಿಪ್ಲೋಮಾ ಪಡೆದವರನ್ನು ಡಾಕ್ಟರ್ ಎನ್ನಲಾಗದು; ಪರವಾನಗಿ ನೀಡದ ಸರಕಾರ ಕ್ರಮ ಸಮರ್ಥಿಸಿದ ಹೈಕೋರ್ಟ್

ಬೆಂಗಳೂರು: ಅರ್ಹತೆ ಇಲ್ಲದಿದ್ದರೂ ವೈದ್ಯರು ಎಂದು ಹೇಳಿಕೊಂಡು ಹಲವು ವರ್ಷಗಳಿಂದ ಗ್ರಾಮೀಣ ಭಾಗಗಳ ಜನರನ್ನು ವಂಚಿಸುತ್ತಿರುವವರಿಗೆ ಕಡಿವಾಣ ಹಾಕಬೇಕಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ಯಾರಾ ಮೆಡಿಕಲ್ ಕೋರ್ಸ್ ಮಾಡಿಕೊಂಡು ಖಾಸಗಿಯಾಗಿ ವೈದ್ಯ ಸೇವೆ ಮಾಡುತ್ತಿದ್ದ ಅರ್ಜಿದಾರರಿಗೆ ಅದನ್ನು ಮುಂದುವರಿಸಲು ಪರವಾನಗಿ ನೀಡದ ಸರಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಕ್ಲಿನಿಕ್ ನಡೆಸಲು ಹೈಕೋರ್ಟ್ ಅನುಮತಿ ನಿರಾಕರಿಸಿದ್ದ ಜಿಲ್ಲಾ ಸಕ್ಷಮ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್ ನ ಅಣ್ಣಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ […]

Continue Reading

ಅಪ್ರಾಪ್ತ ಮಗಳ ಎದುರೇ ತಾಯಿ ಮತ್ತು ಕೆಎಎಸ್ ಅಧಿಕಾರಿಯ ಅನೈತಿಕ ಸಂಬಂಧ; ಪ್ರಶ್ನಿಸಿದ ಮಗಳಿಗೆ ಚಿತ್ರಹಿಂಸೆ, ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯ ಹಾಸ್ಟೆಲ್‌ನಲ್ಲಿ ವಾರ್ಡನ್ ಮಹಿಳೆಯೊಬ್ಬಳು ಕೆಎಎಸ್ ಅಧಿಕಾರಿಯಾಗಿರುವ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಇದನ್ನು ನೋಡಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ ಆಕೆಯ 9 ವರ್ಷದ ಮಗಳು ಅಲ್ಲಿನ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ಪ್ರಕರಣ ಬೈಲಹೊಂಗಲದಲ್ಲಿ ನಡೆದಿದ್ದರಿಂದ ನಗರದ ಪೋಕ್ಸೊ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣವನ್ನು ಬೈಲಹೊಂಗಲ ಠಾಣೆಗೆ ವರ್ಗಾಯಿಸಲಾಗಿದೆ. 9 ವರ್ಷದ ಬಾಲಕಿ ನೀಡಿದ ದೂರಿನ ಅನ್ವಯ ಆಕೆಯ ತಾಯಿ ಹಾಗೂ ಕೆಎಎಸ್ ಅಧಿಕಾರಿ ರಾಮನಗೌಡ ಕನ್ನೊಳ್ಳಿ ಎಂಬುವವರ […]

Continue Reading