ರಾಜ್ಯದ ಅಭಿವೃದ್ದಿಗೆ 30 ಜಿಲ್ಲೆಗಳ ತಾಲೂಕುಗಳಿಗೆ ತಾಲೂಕು ಉಸ್ತುವಾರಿಗಳನ್ನು ನೇಮಕ ಮಾಡಿದ ಸರಕಾರ

ರಾಜ್ಯ ಸರ್ಕಾರದ ಕಾರ್ಯಕ್ರಮಗಳು, ಅಭಿವೃದ್ಧಿ ಕಾರ್ಯಗಳ ತ್ವರಿತ ಪ್ರಗತಿಗಾಗಿ 30 ಜಿಲ್ಲೆಗಳ ತಾಲೂಕುಗಳಿಗೆ ತಾಲೂಕು ಉಸ್ತುವಾರಿಯನ್ನು ನೇಮಕ ಮಾಡಿ ಆದೇಶಿಸಿದೆ.ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಕರ್ನಾಟಕ ಆಡಳಿತ ಸೇವೆಯ ( KAS) ಅಧಿಕಾರಿಗಳನ್ನು ತಾಲೂಕು ಉಸ್ತುವಾರಿ ಅಧಿಕಾರಿಗಳನ್ನಾಗಿ ತಕ್ಷಣದಿಂದ […]

Continue Reading

ಕೊಪ್ಪಳ: ಐದು ವರ್ಷದಲ್ಲಿ 219 ಅಪ್ರಾಪ್ತ ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಬೆಳಕಿಗೆ

ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು ಪ್ರಕಾರ ವಿವಾಹಕ್ಕೆ ಮಹಿಳೆಯರಿಗೆ 18 ವರ್ಷ ತುಂಬಿರಬೇಕು. ಈ ಮಧ್ಯೆ, ಮಹಿಳೆಯರ ವಿವಾಹದ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಈಗಾಗಲೇ ಅಸ್ತು ಎಂದಿದೆ. ಇಷ್ಟಾದರೂ, ಸರ್ಕಾರದ ಜಾಗೃತಿ ಕಾರ್ಯದ ಹೊರತಾಗಿಯೂ ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಮಾತ್ರ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚುತ್ತಲೇ ಇದೆ. […]

Continue Reading

ಎಂಟು ವರ್ಷ ಪ್ರಾಯದ ಮಗಳನ್ನು ಬೇಟಿಯಾಗಲು ಕಸ ಎತ್ತುವವರ ರೀತಿ ಅಪಾರ್ಟ್‌ಮೆಂಟ್‌ಗೆ ನುಗ್ಗಿದ ತಂದೆ; ವಿಚ್ಚೇದಿತ ಪತ್ನಿ ದೂರು: ಅಪರಾಧದಿಂದ ಮುಕ್ತಗೊಳಿಸಿದ ಹೈಕೋರ್ಟ್

ಬೆಂಗಳೂರು: ಕಸ ಎತ್ತುವವರ ರೀತಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ತಮ್ಮ ಮಗಳನ್ನು ಭೇಟಿಯಾಗಲು ವಿನೂತನ ಐಡಿಯಾ ಬಳಸಿದ್ದ 36 ವರ್ಷದ ವ್ಯಕ್ತಿಯನ್ನು ಕರ್ನಾಟಕ ಹೈಕೋರ್ಟ್ ಅಪರಾಧದಿಂದ ಮುಕ್ತಗೊಳಿಸಿದೆ. 39 ವರ್ಷದ ವಿಚ್ಛೇದಿತ ಪತ್ನಿ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿದ ಪತಿಯ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪುರಸ್ಕರಿಸಿದರು. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13 (ಬಿ) ಅಡಿಯಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ನವದೆಹಲಿಯ ಕೌಟುಂಬಿಕ ನ್ಯಾಯಾಲದಲ್ಲಿ ಈ ದಂಪತಿ ವಿಚ್ಛೇದನ ಪಡೆದಿದ್ದರು. ಪತಿಗೆ ಪ್ರತಿ […]

Continue Reading

ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟ, ಉಪ-ನಾಯಕನಾಗಿ ಸುನಿಲ್ ಕುಮಾರ್ ನೇಮಕ

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಹಲವಾರು ಮಂದಿ ಪೈಪೋಟಿ ನೀಡಿದರೂ ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ. ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ […]

Continue Reading

ಡೆತ್ ನೋಟ್ ನಲ್ಲಿ ಹೆಸರಿದ್ದ ತಕ್ಷಣ ಅಪರಾಧಿ ಎಂಬ ತೀರ್ಮಾನಕ್ಕೆ ಬರಲಾಗದು: ಹೈಕೋರ್ಟ್ ಕಲಬುರ್ಗಿ ಪೀಠ

ಡೆತ್ ನೋಟ್‌ನಲ್ಲಿ ವ್ಯಕ್ತಿಯ ಹೆಸರಿದ್ದಾಕ್ಷಣ ಆತ ಅಪರಾಧಿಯೆಂಬ ತೀರ್ಮಾನಕ್ಕೆ ಒಮ್ಮೆಲೇ ಬರಲಾಗದು. ನಿಜವಾಗಿಯೂ ಆತ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆಯೇ ಇಲ್ಲವೇ ಎಂಬ ಬಗ್ಗೆ ಪೂರ್ಣವಾದ ತನಿಖೆ ಅತ್ಯಗತ್ಯ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಿಕ್ಷಕ ಬಸವರಾಜ್‌ ಆತ್ಮಹತ್ಯೆ ಪ್ರಕರಣದಲ್ಲಿಆರೋಪ ಎದುರಿಸುತ್ತಿದ್ದ ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಹನುಮಂತರಾಯಪ್ಪ ಸಲ್ಲಿಸಿದ್ದ ಅರ್ಜಿ ಪರಿಶೀಲಿಸಿದ ನ್ಯಾ. ವೆಂಕಟೇಶ್‌ ಟಿ.ನಾಯಕ್‌ ಅವರಿದ್ದ ಏಕಸದಸ್ಯಪೀಠ, ಈ ಆದೇಶ ನೀಡಿದೆ. ಆತ್ಮಹತ್ಯೆ ಪ್ರಕರಣಗಳಲ್ಲಿಸಿಗುವ ಸೂಸೈಡ್‌ ನೋಟ್‌ಗಳಲ್ಲಿ ಕೆಲವು ಸಲ ವ್ಯಕ್ತಿಯ ಹೆಸರು ಉಲ್ಲೇಖವಾಗಿರುತ್ತದೆ. […]

Continue Reading

ಕಟ್ಟಡ ಪೂರ್ಣಗೊಂಡ ಬಳಿಕ ಸ್ವಾಧೀನಾನುಭವ ಪತ್ರ ವಿತರಣೆ ನಂತರವೇ ತೆರಿಗೆ ವಿಧಿಸಬಹುದೇ ಹೊರತು ಮುಂಚಿತವಾಗಿ ಅಲ್ಲ: ಹೈಕೋರ್ಟ್

ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಿದ ನಂತರ ಕಟ್ಟಡಕ್ಕೆ ಸ್ವಾಧೀನಾನುಭವ ಪತ್ರ (ಒಸಿ) ನೀಡಿದ ನಂತರವಷ್ಟೇ ಆ ಕಟ್ಟಡಕ್ಕೆ ತೆರಿಗೆ ವಿಧಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಆದೇಶಿಸಿದೆ. ಸ್ವಾಧೀನಾನುಭವ ಪತ್ರ ನೀಡುವ ಮುನ್ನವೇ ಹಿಂದಿನ ದಿನಾಂಕದಿಂದ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೀಡಿದ್ದ ನೋಟಿಸನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಮೆ॥ ಬಿ ಎಂ ಹ್ಯಾಬಿಟೇಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಬಿಬಿಎಂಪಿ 2018ರ ಫೆಬ್ರವರಿ 15ರಂದು ನೀಡಿದ್ದ ನೋಟಿಸನ್ನು […]

Continue Reading

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತ್ ಚುನಾವಣೆಗೆ ಒಂದು ತಿಂಗಳ ಕಾಲಾವಕಾಶ

ಎಡ್ವೊಕೇಟ್ ಜನರಲ್ ಅವರ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಲಾಗಿದೆ: ಹೈಕೋರ್ಟ್ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಅಡ್ವೊಕೇಟ್‌ ಜನರಲ್‌ ಅವರ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಅರ್ಜಿ ಇತ್ಯರ್ಥಪಡಿಸಿದೆ. ರಾಜ್ಯ ಸರ್ಕಾರದ ಹೇಳಿಕೆಯ ಆಧಾರದಲ್ಲಿ ಮುಂದಿನ ಒಂದು ತಿಂಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತ್ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ […]

Continue Reading

ಕೊರೊನಾ ರೂಪಾಂತರಿ ಎಫೆಕ್ಟ್: ರಾಜ್ಯದಲ್ಲಿ ಕ್ರಿಸ್ ಮಸ್, ಹೊಸವರ್ಷ ಸಂಭ್ರಮಾಚರಣಕ್ಕೆ ಬ್ರೇಕ್.? ನಾಳೆ ತಾಂತ್ರಿಕ ಸಲಹಾ ಸಮಿತಿ ಸಭೆ

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ರೂಪಾಂತರಿ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕೆಲವೊಂದು ನಿರ್ಬಂಧ ಹೇರಲಾಗುತ್ತಿದೆ ಅನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ನಡೆಯಲಿರುವ ತಾಂತ್ರಿಕ ಸಲಹಾ ಸಮಿತಿ ಸಭೆ ಭಾರೀ ಮಹತ್ವ ಪಡೆದಿದ್ದು, ಕ್ರಿಸ್ ಮಸ್, ಹೊಸ ವರ್ಷ ಸಂಭ್ರಮಾಚರಣೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಶಿಫಾರಸು […]

Continue Reading

ಸಂಚಾರಿ ಪೊಲೀಸರಿಗೆ ದಂಡ ಮೊತ್ತವನ್ನು ಸಂಗ್ರಹಿಸಲು ಅವಕಾಶವಿಲ್ಲ

ದಂಡದ ಮೊತ್ತವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಮಾತ್ರ ಅಧಿಕಾರವಿದೆ: ಹೈಕೋರ್ಟ್ ಸಂಚಾರಿ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿತನಿಂದ ದಂಡದ ಮೊತ್ತವನ್ನು ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೆ.ಆರ್.ಪೇಟೆ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜುರವರು ಸಲ್ಲಿಸಿದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿಗಳು ಈ ಆದೇಶ ಹೊರಡಿಸಿದ್ದಾರೆ. ಹೆಲೈಟ್ ಧರಿಸದೇ ಇರುವುದಕ್ಕೆ […]

Continue Reading

ಕೇಂದ್ರ ಸರಕಾರ ವಿದ್ಯಾರ್ಥಿಗಳಿಗೆ 12 ಅಂಕಿಗಳ ಅಪಾರ್ ಕಾರ್ಡ್ ಗುರುತಿನ ಚೀಟಿ ಯೋಜನೆ ಶೀಘ್ರದಲ್ಲೇ ಜಾರಿ ತರಲಿದೆ

ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಹೊಸ ಗುರುತಿನ ಚೀಟಿ ಅಪಾರ್ ಕಾರ್ಡ್ ಜಾರಿ ಮಾಡುತ್ತಿದ್ದು, ಇದು ದೇಶದ ವಿದ್ಯಾರ್ಥಿಗಳ ಸಮೂಹದ ಗುರುತಾಗುತ್ತದೆ. ದೇಶದ ವಿದ್ಯಾರ್ಥಿಗಳಿಗೆ ಒಂದೇ ಪಠ್ಯಕ್ರಮ, ಒಂದು ದೇಶ, ಒಂದು ಗುರುತಿನ ಚೀಟಿ ಯೋಜನೆ ಶೀಘ್ರದಲ್ಲೇ ಆರಂಭವಾಗಲಿದೆ. ಆಧಾರ್ ಕಾರ್ಡ್ ಜೊತೆಗೆ ಈ ಕಾರ್ಡ್ ವಿದ್ಯಾರ್ಥಿಗಳಿಗೆ ಮುಖ್ಯವಾಗಿದೆ. ಈ ಕಾರ್ಡ್ ಒಂದು ದೇಶ, ಒಂದು ವಿದ್ಯಾರ್ಥಿ ಪರಿಕಲ್ಪನೆಯನ್ನು ಆಧರಿಸಿದೆ. ಭವಿಷ್ಯದಲ್ಲಿ ಈ ಕಾರ್ಡ್ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿದೆ. ಅಪರ್ ಕಾರ್ಡ್ ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಪರಿಕಲ್ಪನೆಯ […]

Continue Reading