ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಆಶೋಕ ಆಯ್ಕೆ

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಆಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ ಆರು ತಿಂಗಳ ಬಳಿಕ ವಿರೋಧ ಪಕ್ಷದ ನಾಯಕನ್ನು ಬಿಜೆಪಿ ಆಯ್ಕೆ ಮಾಡಿದಂತಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆರ್‌. ಆಶೋಕ ಅವರ ಹೆಸರನ್ನು ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು. ಉಳಿದ ಶಾಸಕರು ಅನುಮೋದಿಸಿದರು.ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರತಿಕ್ರಿಯೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ […]

Continue Reading

HSRP ನಂಬರ್ ಪ್ಲೇಟ್ ಅಳವಡಿಸಲು ನೀಡಲಾಗಿರುವ ಅವಧಿಯನ್ನು ಫೆಬ್ರವರಿ 17-2024ರ ವರೆಗೆ ವಿಸ್ತರಣೆ

ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ನವೆಂಬರ್.17 ಡೆಡ್ ಲೈನ್ ನೀಡಲಾಗಿತ್ತು. ಈಗ ಈ ಅವಧಿಯನ್ನು ಫೆ.17, 2024ರವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಕೆಗೆ ಅವಧಿ ವಿಸ್ತರಿಸುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ. ಈ ಮನವಿಯ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವಂತ […]

Continue Reading

ವಾಹನಗಳ ನಂಬರ್ ಪ್ಲೇಟ್ ಬದಲಾವಣೆ (HSRP) ಗಡುವು ಇನ್ನು ಮೂರೇ ದಿನ

ರಾಜ್ಯದಲ್ಲಿ 2019 ರ ಏಪ್ರಿಲ್ 1 ಕ್ಕಿಂತಲೂ ಮೊದಲು ನೋಂದಣಿಯಾದ ವಾಹನಗಳಿಗೆ ‘ಅತಿ ಸುರಕ್ಷಿತ ನೋಂದಣಿ ಫಲಕ ( ಎಚ್ ಎಸ್ ಆರ್ ಪಿ) ಅಳವಡಿಕೆಗೆ ಸರ್ಕಾರ ವಿಧಿಸಿರುವ ನವೆಂಬರ್ 17 ರ ಗಡುವು ಸಮೀಪಿಸಿದ್ದು, ಇನ್ನು ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಆದರೆ, ರಾಜ್ಯದಲ್ಲಿ ಬಹುತೇಕ ಸವಾರರು ನಂಬರ್ ಪ್ಲೇಟ್ ಬದಲಾವಣೆಗೆ ಒಲವು ತೋರಿಲ್ಲ. ಸರಕಾರದ ಆದೇಶ ಪ್ರಶ್ನಿಸಿದ ಅರ್ಜಿ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇರುವುದರಿಂದ, ಈ ಗಡುವು ಅನ್ವಯವಾಗುತ್ತದೆಯೇ ಅಥವಾ ಇಲ್ಲವೇ ಎಂಬ […]

Continue Reading

ಜನನ-ಮರಣ ನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ; ತಿದ್ದುಪಡಿ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ದಾರ.

ರಾಜ್ಯದ ಜನತೆಗೆ ಕರ್ನಾಟಕ ಸರ್ಕಾರವು ಮತ್ತೊಂದು ಸಿಹಿಸುದ್ದಿ, ಇನ್ಮುಂದೆ ಜನನ, ಮರಣ ನೋಂದಣಿಗೆ ನ್ಯಾಯಾಲಯಕ್ಕೆ ಅಲೆಯಬೇಕಾಗಿಲ್ಲ. ಜನನ-ಮರಣ ನೋಂದಣಿ ತಿದ್ದುಪಡಿ ಅಧಿಕಾರವನ್ನು ತಾಲೂಕು ಮಟ್ಟದ ಉಪ ವಿಭಾಗಧಿಕಾರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಜನನ-ಮರಣ ನೋಂದಣಿಯಲ್ಲಿ ವಿಳಂಬ ನೋಂದಣಿ ಹಾಗೂ ತಿದ್ದುಪಡಿ ಅಧಿಕಾರವನ್ನು ಉಪ ವಿಭಾಗಧಿಕಾರಿಗೆ ನೀಡಲಾಗಿದೆ. ಜನನ, ಮರಣ ನೋಂದಣಿ ನಿಯಮಗಳು- 1999 ರ ನಿಯಮಗಳ ಪ್ರಕಾರ ವಿಳಂಬ ನೋಂದಣಿಗೆ ಸಾರ್ವಜನಿಕರು ಹಾಲಿ ಪಾವತಿಸುತ್ತಿರುವ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಜನನ, ಮರಣ ಘಟಿಸಿದ 21 ದಿನಗಳ ನಂತರ ಹಾಗೂ 30 […]

Continue Reading

ದುಡಿಯುವ ತಾಕತ್ತು ಇದ್ದರೆ, ಕೆಲಸ ಇಲ್ಲದಿದ್ದರೂ ಜೀವನಾಂಶ ನೀಡಲೇಬೇಕು

ಉದ್ಯೋಗ ಕಳೆದುಕೊಂಡಿದ್ದೇನೆಂಬ ಕಾರಣಕ್ಕೆ ಪತಿಯು ಪತ್ನಿಗೆ ಜೀವನಾಂಶ ನೀಡದಿರಲು ಕಾರಣವಿಲ್ಲ ಎಂದು ಹೇಳಿರುವ ಹೈಕೋರ್ಟ್ ‘ದುಡಿಯಲು ಶಕ್ತಿ ಇರುವ ಪತಿ ಜೀವನಾಂಶ ನೀಡಲೇಬೇಕಾಗುತ್ತದೆ’ ಎಂದು ಆದೇಶ ನೀಡಿದೆ. ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಜಾಗೊಳಿಸಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ “ಅರ್ಜಿದಾರರ ವಕೀಲರು ಪತಿ ಉದ್ಯೋಗ ಕಳೆದುಕೊಂಡಿದ್ದಾನೆ. ಹಾಗಾಗಿ ಅವರಿಗೆ ಜೀವನಾಂಶ ನೀಡುವಂತೆ ಹೊರಡಿಸಿರುವ ಆದೇಶ ರದ್ದುಗೊಳಿಸಬೇಕೆಂದು ಕೋರಿದ್ದಾರೆ. ಆದರೆ ಪತಿಗೆ […]

Continue Reading

ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ನಾನೂ ಆಕಾಂಕ್ಷಿ: ಅಶ್ವತ್ಥ ನಾರಾಯಣ

ಬಿಜೆಪಿ ಹೈಕಮಾಂಡ್‌ ಕೊನೆಗೂ ಬಿ ಎಸ್ ವೈ ಪುತ್ರ ವಿಜಯೇಂದ್ರಗೆ ಪಕ್ಷದ ರಾಜ್ಯ ಘಟಕದ ಸಾರಥ್ಯ ವಹಿಸಿದೆ. ಇದರಿಂದ ರಾಜ್ಯಾಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದ ಸಿ.ಟಿ ರವಿ, ವಿ.ಸೋಮಣ್ಣ, ಅರವಿಂದ್ ಬೆಲ್ಲದ್‌ ಸೇರಿದಂತೆ ಕೆಲ ನಾಯಕರಿಗೆ ನಿರಾಸೆಯಾಗಿದೆ. ಈ ನಡುವೆ ಬಾಕಿ ಉಳಿದಿರುವ ವಿಪಕ್ಷ ನಾಯಕನ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ. ಎಂಬ ಕುತೂಹಲದೊಂದಿಗೆ ಅಕಾಂಕ್ಷಿಗಳು ಬಹಳ ಮಂದಿ ನಾಯಕರು ಕ್ಯೂನಲ್ಲಿದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಷಯದಲ್ಲಿ ಮಾತನಾಡಿದ ಶಾಸಕ ಅಶ್ವತ್ಥ ನಾರಾಯಣ, ರಾಜ್ಯಾಧ್ಯಕ್ಷರ ನೇಮಕ ಆಗಿದೆ. ಸೂಕ್ತವಾದ ವ್ಯಕ್ತಿಯನ್ನು […]

Continue Reading

ರಘುಪತಿ ಭಟ್‌ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ; ಆರೋಪಿ ಅತುಲ್ ರಾವ್ ಗೆ ಜೈಲು ಶಿಕ್ಷೆ

ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಉಡುಪಿಯ ಜಿಲ್ಲಾ ಸಿಜೆಎಂ ನ್ಯಾಯಾಲಯ ಶುಕ್ರವಾರ ಮಹತ್ವದ ಆದೇಶ ನೀಡಿದೆ. 2008ರ ಜೂ.10ರಂದು ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಉಡುಪಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ದೆಹಲಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದರು. ಈ ಸಂಬಂಧ ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ […]

Continue Reading

ಗೆಳೆಯನ ಅಪ್ರಾಪ್ತ ಮಗಳನ್ನೇ ಅಪಹರಿಸಿ ಅತ್ಯಾಚಾರಗೈದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

2021ರಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೊಕ್ಸೊ ನ್ಯಾಯಾಲಯ) 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆರೋಪಿ ಗಂಗಾಧರ ಶರಣಬಸಪ್ಪ ನೀಲಹಳ್ಳಿ 2021ರ ಸೆಪ್ಟಂಬರ್ 24ರಂದು ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಲಬುರಗಿಯ ರಾಮಮಂದಿರದ ಬಳಿ ಅಪಹರಿಸಿ, ಕೋಲಾರ ಜಿಲ್ಲೆಯ ಕರಿನಾಯಕನಹಳ್ಳಿಗೆ ಕರೆದೊಯ್ದಿದ್ದ. ತಾನು ತಂಗಿದ್ದ ಬಾಡಿಗೆ ಮನೆಗೆ ಕರೆದೊಯ್ದು 2021ರ ಸೆಪ್ಟೆಂಬರ್ 25ರಿಂದ ನವೆಂಬರ್ 25ರವರೆಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ […]

Continue Reading

ಬಿಎಸ್ ವೈ ಪುತ್ರ ರಾಜ್ಯ ಬಿಜೆಪಿಯ ನೂತನ ಸಾರಥಿ

ರಾಜ್ಯ ಬಿಜೆಪಿಗೆ ನೂತನ ಸಾರಥಿ ಕೊನೆಗೂ ಸಿಕ್ಕಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ನೇಮಕವಾಗಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಬಿಜೆಪಿಯಲ್ಲಿ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಅಧಿಪತ್ಯ ಸಾಧಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಸದ್ಯ ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸಿತ್ತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗುವುದು ಬಹುತೇಕ ಪಕ್ಕಾ ಎಂದೂ […]

Continue Reading

ಬುಡಕಟ್ಟು ಜನಾಂಗದ 20 ವರ್ಷ ಯುವತಿಯೊಬ್ಬಳ ಮೇಲೆ ನಡೆದ ಗ್ಯಾಂಗ್‌ ರೇಪ್‌; 13 ಮಂದಿಗೆ 20 ವರ್ಷಗಳ ಸೆರೆವಾಸದ ಶಿಕ್ಷೆ

ಬೀರ್‌ಭುಮ್ ಜಿಲ್ಲೆಯ ಲಾಭಪುರ ಗ್ರಾಮದಲ್ಲಿ ಬುಡಕಟ್ಟು ಯುವತಿಯೊಬ್ಬಳ ಮೇಲೆ ಅಮಾನುಷವಾಗಿ ನಡೆದ ಗ್ಯಾಂಗ್‌ ರೇಪ್‌ಗೆ ಸಂಬಂಧಿಸಿದಂತೆ ಪಶ್ಚಿಮಬಂಗಾಳದ ನ್ಯಾಯಾಲಯ 13 ಮಂದಿಗೆ 20 ವರ್ಷಗಳ ಸೆರೆವಾಸದ ಶಿಕ್ಷೆಯನ್ನು ವಿಧಿಸಿದೆ. ಅನ್ಯ ಕೋಮಿನ ಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಯುವತಿಗೆ ಸಾಮೂಹಿಕ ಅತ್ಯಾಚಾರದ ಶಿಕ್ಷೆ ನೀಡಬೇಕೆಂದು ಗ್ರಾಮದ ಹಿರಿಯರು ಆದೇಶ ನೀಡಿದ್ದರು. ಕಳೆದ ಜನವರಿ 21ರಂದು 20 ವರ್ಷ ವಯಸ್ಸಿನ ಯುವತಿಯನ್ನು ಮತ್ತು ಅವಳ ಜೊತೆಯಿದ್ದ ಪುರುಷನನ್ನು ಮರಕ್ಕೆ ಕಟ್ಟಿಹಾಕಿ ಅನೈತಿಕ ಸಂಬಂಧ ಹೊಂದಿದ್ದಕ್ಕಾಗಿ ತಲಾ 25,000 […]

Continue Reading