ಬೆಳ್ತಂಗಡಿ:ಕುತ್ಲೂರು-ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು.

ಕುತ್ಲೂರು: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರ ಬುಧವಾರ ಕುಸಿದಿದೆ. ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ […]

Continue Reading

ಕಾಂಗ್ರೆಸ್​ ಸರ್ಕಾರದಲ್ಲಿ ಭುಗಿಲೆದ್ದ ಅಸಮಾಧಾನ, ಒಮ್ಮತವಿಲ್ಲದ ಶಾಸಕರು-ಮಂತ್ರಿಗಳು, ಜುಲಾಯಿ 27ಕ್ಕೆ ಸಿಎಲ್‌ಪಿ ಸಭೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳು ಕಳೆದಿದೆ,ಈ ನಡುವೆ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ.ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ​ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ. ಸಚಿವರು ದುರ್ನಡತೆ ತೋರುತ್ತಿದ್ದು, ಬುದ್ದಿ ಹೇಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ದೂರು ನೀಡಿದ್ದಾರೆ. ಅಲ್ಲದೆ, ಕೂಡಲೇ ಶಾಸಕಾಂಗ ಸಭೆ ಕರೆಯುವಂತೆಯೂ ಆಗ್ರಹಿಸಿದ್ದಾರೆ. ಕಳೆದ ಶಾಸಕಾಂಗ ಸಭೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಸಚಿವರು ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಶಾಸಕಾಂಗ ಸಭೆಯಲ್ಲೇ ಬೇಸರ ಹೊರಹಾಕಿದ್ದ ಶಾಸಕರು,ಇದೀಗ ಸಚಿವರ ವರ್ತನೆ ಬದಲಾಗದ ಹಿನ್ನೆಲೆಯಲ್ಲಿ […]

Continue Reading

ಮಂಡ್ಯ: ಜೆಡಿಎಸ್ ಭದ್ರಕೋಟೆಯನ್ನೇ ದೂಳಿಪಟ ಮಾಡಿ, ಮನ್ಮುಲ್ ಅಧ್ಯಕ್ಷ ಪಟ್ಟಕ್ಕೇರಿದ ಕಾಂಗ್ರೆಸ್

ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟವನ್ನು ತನ್ನ ತೆಕ್ಕೆಗೆ ಕಾಂಗ್ರೆಸ್ ತೆಗೆದುಕೊಂಡಿದ್ದು, ಕುತೂಹಲ ಮೂಡಿಸಿದ್ದ ಮಂಡ್ಯ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ.ಇಂದು ನಡೆದ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬೋರೇಗೌಡ ಅವರು ಗೆಲುವು ಸಾಧಿಸಿದ್ದು, ಓರ್ವ ಬಿಜೆಪಿ ಬೆಂಬಲಿತನ ನೆರವಿನಿಂದ ಅಧಿಕಾರ ಹಿಡಿವಲ್ಲಿ ಯಶಸ್ವಿಯಾಗಿದೆ. ಮಂಡ್ಯದಲ್ಲಿ ಜೆಡಿಎಸ್ ಅಧಿಕಾರ ಕಳೆದುಕೊಂಡಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಮನ್ ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಗೆಲ್ಲಲು 9 ಮತಗಳು ಬೇಕಿತ್ತು. ಕಾಂಗ್ರೆಸ್, ತನ್ನ ಪಕ್ಷದ ನಿರ್ದೇಶಕರು, ಓರ್ವ ನಾಮ ನಿರ್ದೇಶಕ […]

Continue Reading

ರಾಜ್ಯದಲ್ಲಿ ಮೂರು ಬಾರಿ ಯಶಸ್ವಿಯಾಗಿರುವ ಬಿಜೆಪಿ ನಾಲ್ಕನೇ ಬಾರಿಗೆ ಆಪರೇಷನ್ ಕಮಲಕ್ಕೆ ಕೈ ಹಾಕಿದೆ

ಕಾಂಗ್ರೆಸ್ ಸರ್ಕಾರದ ಪತನದ ಮೂಹೂರ್ತ.! ಅತೃಪ್ತ ಆತ್ಮಗಳ ಹುಡುಕಾಟದಲ್ಲಿ ಬಿಜೆಪಿ ಬಿಜೆಪಿಗೆ ರಾಜ್ಯ ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾದ ಕ್ಷಣದಿಂದ ಕಾಂಗ್ರೆಸ್ ಸರ್ಕಾರದ ಪತನದ ಮುಹೂರ್ತ ಆರಂಭವಾಗಲಿದೆ ಎಂಬ ವದಂತಿಗಳು ವ್ಯಾಪಕವಾಗಿ ಕೇಳಿ ಬರುತ್ತಿದೆ. ಕಾಂಗ್ರೆಸ್‍ನಲ್ಲಿರುವ ಕೆಲವು ಅಸಮಧಾನಿತ ನಾಯಕರ ಜೊತೆ ಬಿಜೆಪಿಯ 2ನೇ ಹಂತದ ನಾಯಕರು ನಿರಂತರ ಮಾತುಕತೆ ನಡೆಸಿದ್ದು, ನಿಮ್ಮ ರಾಜಕೀಯ ನಿರ್ಧಾರಗಳು ಉಜ್ವಲ ಭವಿಷ್ಯಕ್ಕೆ ನಾಂದಿಯಾಗಲಿವೆ ಎಂಬ ಸೂಚ್ಯವಾಗಿ ಹೇಳುತ್ತಿದ್ದಾರೆ ಎನ್ನಲಾಗಿದೆ. ತಮ್ಮೊಂದಿಗೆ (ಬಿಜೆಪಿ) ನಿರಂತರವಾಗಿ ಸಂಪರ್ಕದಲ್ಲಿರಿ ಎಂದು ಹೇಳುವ […]

Continue Reading

‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆ ಮಹಿಳೆಯರಿಂದ ಯಾವುದೇ ರೀತಿಯ ಶುಲ್ಕ ಪಡೆಯುವ ಹಾಗಿಲ್ಲ

‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಹಣ ಪಡೆದ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದು ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ನಡೆದಿದೆ. ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸುವ ವೇಳೆ ಮಹಿಳೆಯರಿಂದ ಯಾವುದೇ ರೀತಿಯ ಶುಲ್ಕ ಪಡೆಯುವ ಹಾಗಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಆದರೆ ಗ್ರಾಮ ಒನ್ ಸಿಬ್ಬಂದಿ ದಾನಯ್ಯ ಮಹಿಳೆಯರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರು ಬಂದಿತ್ತು. ಈ ಹಿನ್ನೆಲೆ ಅಧಿಕಾರಿಗಳು ಸಿಬ್ಬಂದಿಯ […]

Continue Reading

ಅಪಘಾತ ಪ್ರಕರಣವೊಂದರ ಆರೋಪಿ ಬಸ್ ಚಾಲಕ ದೋಷಮುಕ್ತ; ವಾದ ಮಂಡಿಸಿದ ನ್ಯಾಯವಾದಿ ಮಹೇಶ್ ಕಜೆ

2015ರ ಇಸವಿಯಲ್ಲಿ ಉದನೆ ಪೇಟೆ ಎಂಬಲ್ಲಿ ಗುಂಡ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಎಸ್‌ಆರ್‌ಟಿಸಿ ಬಸ್, ಧರ್ಮಸ್ಥಳ ಕಡೆಯಿಂದ ಸುಬ್ರಮಣ್ಯ ಕಡೆಗೆ ಬರುತ್ತಿದ್ದ ಒಮ್ನಿ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀವ್ರ ತರವಾದ ಗಾಯ ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.ಇತರ ಪ್ರಯಾಣಿಕರಿಗೂ ಗಂಭೀರ ಗಾಯವಾಗಿದ್ದು.ಘಟನೆಗೆ ಚಾಲಕನ ಅತೀಯಾದ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಸರಕಾರಿ ಬಸ್ ಚಾಲಕ ಯಲ್ಲಪ್ಪ ದಳವಾಯಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ […]

Continue Reading

ಗೃಹಲಕ್ಷ್ಮೀ ಯೋಜನೆ: ನಿಗದಿತ ದಿನಾಂಕದಂದು ಮಾತ್ರ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಣಿ; ಒಂದು ಕೇಂದ್ರದಲ್ಲಿ ದಿನ 60 ಅರ್ಜಿ ಮಾತ್ರ ಸ್ವೀಕಾರ

ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿಯಾಗ ಬಯಸುವ ಪಡಿತರ ಚೀಟಿ ಹೊಂದಿದ ಕುಟುಂಬದ ಯಜಮಾನಿ ಮಹಿಳೆಯರು ತಮ್ಮ ನೋಂದಾಯಿತ ದೂರವಾಣಿ ಸಂಖ್ಯೆಗೆ ಕಳುಹಿಸಲಾಗುವ ಎಸ್.ಎಂ.ಎಸ್.ನಲ್ಲಿ ತಿಳಿಸಿದ ದಿನಾಂಕದಂದು ಮಾತ್ರ ನಿಗದಿತ ನೋಂದಣಿ ಕೇಂದ್ರಕ್ಕೆ ತೆರಳಿ ನೋಂದಣಿ ಮಾಡಿಸಬಹುದು। ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಮುಖ್ಯಮಂತ್ರಿಗಳು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದ್ದಾರೆ. ಉಪ ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಯೋಜನೆಗೆ ಸಂಬಂಧಿಸಿದಂತೆ ಹಲವು ಮಾರ್ಗದರ್ಶನಗಳನ್ನು ನೀಡಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ […]

Continue Reading

ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023; ಭೂ ಪರಿವರ್ತನೆ ವಿಧೇಯಕ’ ಅಂಗೀಕಾರ

ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023’ ಕ್ಕೆ ಒಪ್ಪಿಗೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕ ಪರ್ಯಾಲೋಚನೆ ಮಂಡಿಸಲಾಗಿದೆ. ಸಚಿವ ಕೃಷ್ಣ ಭೈರೇಗೌಡ, ರಾಜ್ಯ ಸರ್ಕಾರದ ಮಾಸ್ಟರ್ ಪ್ಲ್ಯಾನ್ ಅಸ್ತಿತ್ವದಲ್ಲಿರುವ ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಭೂ ಬಳಕೆ ಪರಿವರ್ತನೆ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಮಹತ್ವದ ಅಂಶವುಳ್ಳ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ-2023’ ಮಂಡಿಸಿದ್ದಾರೆ. ರಾಜ್ಯ ಸರ್ಕಾರವು ಮಾಸ್ಟರ್ ಪ್ಲ್ಯಾನ್ ನಲ್ಲಿ ಯಾವ್ಯಾವ ಭೂಮಿ ಕೈಗಾರಿಕೆಗೆ, ಶಾಲೆ, ಉದ್ದಿಮೆ, ವಸತಿ ಹೀಗೆ ಯಾವ್ಯಾವ ಬಳಕೆಗೆ ಬಳಸಬೇಕು ಎಂಬುದನ್ನು […]

Continue Reading

ಹೊಣೆ ಹೆಚ್ಚಿಸಿದ ಮೋಟಾರು ವಾಹನ ತಿದ್ದುಪಡಿ ನಿಯಮ-2023; ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯವಾದಿ ಕೆ ಎಸ್ ಎನ್ ಅಡಿಗ

ಹಿಟ್ ಆಂಡ್ ರನ್ ಕೇಸಲ್ಲಿ ಮೃತ,ಗಾಯಗೊಂಡವರಿಗೆ ವಿಮಾ ಮೊತ್ತವನ್ನು ಹೆಚ್ಚಿಸಿದೆ.ಆಸ್ಪತ್ರೆಗೆ ದಾಖಲಿಸಿದವರ ಮೇಲೆ ಪ್ರಕರಣ ದಾಖಲಿಸುವಂತಿಲ್ಲ.ಒಂದು ತಾಸಿನೊಳಗೆ ಆಸ್ಪತ್ರೆಗೆ ದಾಖಲಿಸಿದರೆ ಸರಕಾರವೆ ವೆಚ್ಚ ಭರಿಸಬೇಕೆಂದು ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದವರಿಗೆ ಬಿರುದು ನೀಡುವಂತೆ ತಿಳಿಸಿದೆ.ಅಲ್ಲದೆ ವಿಮಾ ಕಂಪನಿಯು ಪರಿಹಾರ ಮೊತ್ತವನ್ನು ಶ್ರೀಘ್ರ ನೀಡುವಂತೆ ತಿಳಿಸಿದೆ ‘ಮೋಟಾರ್ ವಾಹನಗಳ ತಿದ್ದುಪಡಿ ನಿಯಮ-2022’ ವಿಮಾ ಕಂಪನಿ, ಚಾಲಕರು ಮತ್ತು ಸಮಾಜದ ಹೊಣೆಯನ್ನು ಹೆಚ್ಚಿಸಿದೆ ಎಂದು ಹಿರಿಯ ನ್ಯಾಯವಾದಿ ಕೆ ಎಸ್ ಎನ್ ಅಭಿಪ್ರಾಯಪಟ್ಟಿದ್ದಾರೆ.ಮಂಗಳೂರು ನಗರ ಸಂಚಾರ ಪೊಲೀಸ್, ಜಿಲ್ಲಾ ಕಾನೂನು […]

Continue Reading

ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಪ್ರಶಾಂತ್ ಕೆ.ಎನ್ ಆತ್ಮಹತ್ಯೆ

ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಹೆಚ್ ಸಿ.ಪ್ರಶಾಂತ ಕೆ ಎನ್ ರವರು 1997 ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡವರು.ಈ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ಯಲ್ಲಿ ಕರ್ತವ್ಯ ನಿರ್ವಹಿಸಿ ಈಗ ಕಾಕ ೯ಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿದ್ದವರು ಸುಮಾರು 15 ವರ್ಷಗಳಿಂದ ಸಕ್ಕರೆ ಖಾಯಿಲೆ ಯಿಂದ ಬಳಲಿಕೊಂಡಿದ್ದವರು. ದಿನಾಂಕ. 9/7/2023 ರಿಂದ ಆಕಸ್ಮಿಕ ರಜೆಯಲ್ಲಿದ್ದವರು ದಿನಾಂಕ. 15/07/2023 ರಂದು ರಾತ್ರಿ ಮನೆಯಲ್ಕಿ ಊಟ ಮಾಡಿಕೊಂಡ ಬಳಿಕ ಮಲಗಿದ್ದವರು ರಾತ್ರಿ […]

Continue Reading