ಪತ್ನಿಯಂತೆ ತಾಯಿಯನ್ನೇಕೆ ಸಾಕಲಾಗಲ್ಲ?: ಹೈಕೋರ್ಟ್ ಖಡಕ್ ಪ್ರಶ್ನೆ
ನಾವು ರೊಟ್ಟಿಗಿಂತ ರಕ್ತ ದುಬಾರಿಯಾಗಿರುವ ಕಾಲದಲ್ಲಿ ಜೀವಿಸುತ್ತಿದ್ದೇವೆ. ದುಡಿಯಲು ಸಮರ್ಥನಾದ ವ್ಯಕ್ತಿ ತನ್ನ ಪತ್ನಿಯನ್ನು ನೋಡಿಕೊಳ್ಳಬಹುದಾದರೆ ಅವಲಂಬಿತ ತಾಯಿಯನ್ನೇಕೆ ನೋಡಿಕೊಳ್ಳಬಾರದು ಎಂದು ಪ್ರಶ್ನಿಸಿದ ಹೈಕೋರ್ಟ್, ವೃದ್ಧ ತಾಯಿಯ ಜೀವನ ನಿರ್ವಹಣೆಗಾಗಿ ಮಾಸಿಕ 10 ಸಾವಿರ ರೂಪಾಯಿ ಪಾವತಿಸುವಂತೆ ಆದೇಶ ನೀಡಿದೆ. 84 ವರ್ಷದ ವೃದ್ಧ ತಾಯಿಯ ಜೀವನ ನಿರ್ವಹಣೆಗೆ ಮಾಸಿಕ ಹಣ ನೀಡುವಂತೆ ಮೈಸೂರು ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಆಕೆಯ ಪುತ್ರರಿಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ 5 ಸಾವಿರ ರೂಪಾಯಿ ದಂಡ ವಿಧಿಸಿದೆ. […]
Continue Reading